ಕರ್ನಾಟಕದ ಪಶ್ಚಿಮ ಘಟ್ಟದ ಮಂಜಿನ ಮಧ್ಯೆ ಕಿತ್ತಳೆ ಹಾವಿನಂತೆ ಸಾಗಿದ ʼವಂದೇ ಭಾರತʼ ರೈಲು ; ಅದ್ಭುತ ವಿಡಿಯೊಕ್ಕೆ ಭಾರೀ ಮೆಚ್ಚುಗೆ

ಬೆಂಗಳೂರು : ಪಶ್ಚಿಮ ಘಟ್ಟದ ದಟ್ಟ ಹಸಿರು ಕಾಡುಗಳು, ಎತ್ತರದ ಪರ್ವತಗಳು ಹಾಗೂ ಮಳೆಗಾಲದ ಮಂಜಿನ ಹೊದಿಕೆಯ ನಡುವೆ ಕಿತ್ತಳೆ-ಬಿಳಿ ಬಣ್ಣದ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸಾಗುತ್ತಿರುವ ಮನಮೋಹಕ ವೈಮಾನಿಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿವೆ. ಎಫ್‌ಪಿವಿ (FPV) ಕ್ರಿಯೇಟರ್‌ @hemisphere.fpv ಸೆರೆಹಿಡಿದ ಈ ಸಿನೆಮಾಟಿಕ್ ಡ್ರೋನ್ ವಿಡಿಯೊವನ್ನು ಕೇಂದ್ರ ರೈಲ್ವೆ … Continued

ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿಡಿಯೊಕ್ಕೆ ಪಾಕಿಸ್ತಾನ ಪರ ಹಾಡು ಬಳಕೆ; ಎಫ್‌ಐಆರ್‌ ದಾಖಲು

ಚಿಕ್ಕಮಗಳೂರು: ಈದ್ ಮಿಲಾದ್ ಹಬ್ಬದ ಅಂಗವಾಗಿ ಚಿಕ್ಕಮಗಳೂರು ನಗರದ ಟಿಪ್ಪು ನಗರದಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ 40 ಅಡಿ ಎತ್ತರದ ಕಟೌಟ್‌ ಸಂಬಂಧ ಹೊಸ ವಿವಾದವೊಂದು ಭುಗಿಲೆದ್ದಿದೆ. ಕಟೌಟ್‌ ಒಳಗೊಂಡ ವಿಡಿಯೋಗೆ ದೇಶವಿರೋಧಿ ಹಾಗೂ ಹಿಂಸಾಚಾರ ಪ್ರಚೋದಿಸುವ ಹಾಡನ್ನು ಹಿನ್ನೆಲೆಯಾಗಿ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಈ ಪ್ರಕರಣಕ್ಕೆ … Continued

ಎಸ್‌ಐಆರ್‌ : ಕರ್ನಾಟಕದ ಕರಡು ಮತದಾರರ ಪಟ್ಟಿ ಪ್ರಕಟ ; 1.07 ಕೋಟಿ ಹೆಸರು ಪಟ್ಟಿಯಿಂದ ಹೊರಗೆ, ಬೆಂಗಳೂರಲ್ಲೇ ಹೆಚ್ಚು

ಬೆಂಗಳೂರು : ವಿಶೇಷ ಸಮಗ್ರಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾವಣಾ ಆಯೋಗವು ಕರ್ನಾಟಕದ ಕರಡು ಮತದಾರರ ಪಟ್ಟಿಯನ್ನು ಭಾನುವಾರ ಪ್ರಕಟಿಸಿದ್ದು, ಜೂನ್ 16ರ ವೇಳೆಗೆ ರಾಜ್ಯದಲ್ಲಿ ದಾಖಲಾಗಿದ್ದ 5.54 ಕೋಟಿ ಮತದಾರರ ಪೈಕಿ 4.46 ಕೋಟಿ ಮತದಾರರ ಹೆಸರುಗಳು ಕರಡು ಪಟ್ಟಿಯಲ್ಲಿ ಸೇರಿವೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) … Continued

ಬ್ರಹ್ಮಾವರ : ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ !

ಉಡುಪಿ :  ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟರು ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. … Continued

ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಉಡುಪಿ : ಉದ್ಯಮಿ ಹಾಗೂ ಕಾಂಗ್ರೆಸ್‌ ನಾಯಕ ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಮುಂಬೈನ ಅನುಜ ಪಾಟೀಲ(35) ಪೊಲೀಸರು ಬಂಧಿಸಿದ್ದು, ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಪೊಲೀಸರು ಅನುಜ ಪಾಟೀಲ್‌ನನ್ನು ಬಂಧಿಸಿ ಹೆಬ್ರಿಗೆ ಕರೆದೊಯ್ಯುತ್ತಿದ್ದ … Continued

ದೊಡ್ಡಬಳ್ಳಾಪುರ : ಇನ್‌ಸ್ಟಾಗ್ರಾಂನಲ್ಲಿ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಸಂಪರ್ಕ; ವ್ಯಕ್ತಿಯ ಬಂಧನ

ಬೆಂಗಳೂರು : ಬೆಂಗಳೂರು ಉತ್ತರ ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಪರ್ಕ ಹೊಂದಿರುವ ಗ್ಯಾಂಗ್‌ಸ್ಟರ್‌ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 28 ವರ್ಷದ ಏರ್‌ ಕಂಡೀಷನರ್‌ ಮೆಕ್ಯಾನಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇಸ್ಲಾಂಪುರ ನಿವಾಸಿ ಎಸ್. ಸಯ್ಯದ್ ಅಬುಬಕರ್ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಆತ ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ಗಳು ಹಾಗೂ … Continued

ಮಂಡ್ಯ : ವೃದ್ಧ ಭಿಕ್ಷುಕಿ ನಿಧನ: ಮೃತಳ ಮನೆಯಲ್ಲಿ ಮೂಟೆಗಳಲ್ಲಿ ತುಂಬಿದ್ದ ಕಂತೆ ಕಂತೆ ಹಣ ಪತ್ತೆ…!

ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಅವರ ಮನೆಯನ್ನು ಶೋಧಿಸಿದಾಗ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕ ನಗದು ಹಣ ಪತ್ತೆಯಾದ ಘಟನೆ  ಮಂಡ್ಯದ ಗುತ್ತಲು ಬಡಾವಣೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದೆ.  ಮಂಡ್ಯ ನಗರದ ಗುತ್ತಲು ಬಡಾವಣೆಯ ನಿವಾಸಿಯಾಗಿದ್ದ ನೂರ್ (ಹೆಸರು) ಎಂಬ … Continued

ಕರ್ನಾಟಕದಲ್ಲಿ 4 ಸಾವಿರ ದಾಟಿದ H1N1 ಸೋಂಕು

ಬೆಂಗಳೂರು : ಕರ್ನಾಟಕದಲ್ಲಿ ಎಚ್‌1ಎನ್‌1 (H1N1)ಸೋಂಕಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 4,000ರ ಗಡಿ ದಾಟಿದೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪರಿಸ್ಥಿತಿಯ ಸಮಗ್ರ ಪರಿಶೀಲನೆಗೆ ಮುಂದಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಸೂಚನೆ ನೀಡಿದೆ. ಹವಾಮಾನ ಬದಲಾವಣೆ ಹಾಗೂ ನಿರಂತರ ಮಳೆಯ ಹಿನ್ನೆಲೆಯಲ್ಲಿ ವೈರಲ್ ಸೋಂಕುಗಳು ವೇಗವಾಗಿ … Continued

ಕೊಡಗು; ಕಾಡಾನೆ ದಾಳಿಗೆ ಬೆಂಗಳೂರು ಪ್ರವಾಸಿಗ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ಮೃತಪಟ್ಟಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಯಿಂದ ಮೃತಪಟ್ಟವರನ್ನು ಸ್ಥಳೀಯ ಹೋಂ ಸ್ಟೇಗೆ ಆಗಮಿಸಿದ್ದ ಸುಮಾರು 40 ವರ್ಷದ ಮುರಳಿಕೃಷ್ಣ ಎಂಬ ಪ್ರವಾಸಿಗ ಎಂದು ಗುರುತಿಸಲಾಗಿದೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ದಿನಗಳ ಕಾಲ ಗುಡುಗು – ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಂಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವೇಳೆ ಗಾಳಿಯ ವೇಗ ಪ್ರತಿ ಗಂಟೆಗೆ 40 – 50 ಕಿ.ಮೀ. ವರೆಗೆ ಇರಬಹುದು. ಕೆಲವು ಕಡೆ 60 ಕಿ.ಮೀ.ವರೆಗೆ ಗಾಳಿ ಬೀಸುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ, … Continued