ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆ ಇರಲಿಲ್ಲ ಹಾಗೂ ಒಣ ಹವೆ ಇತ್ತು. ಆದರೆ, ಭಾನುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, … Continued

ದಸರಾ ಗಿಫ್ಟ್ : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. ಯುಜಿಸಿ/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ … Continued

ರೈತರ ಜಮೀನಿಗೆ ತೆರಳುವ ದಾರಿಗೆ ಅನ್ಯ ಭೂಮಾಲೀಕರು ಅಡ್ಡಿಪಡಿಸುವಂತಿಲ್ಲ : ಸರ್ಕಾರದಿಂದ ಸುತ್ತೋಲೆ

ಬೆಂಗಳೂರು: ರೈತರ ಜಮೀನಿಗೆ ತೆರಳುವ ದಾರಿಗೆ ಅನ್ಯಭೂಮಾಲೀಕರು ಇನ್ನುಮುಂದೆ ಅಡ್ಡಿಪಡಿಸುವಂತಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಸುತ್ತೋಲೆಯನ್ನು ಹೊರಡಿಸಿದ್ದು, ರೈತರು ಖಾಸಗಿ ಜಮೀನುಗಳಲ್ಲಿ ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಕಾಲುದಾರಿ, ಬಂಡಿದಾರಿ ಅಥವಾ ಓಡಾಟ ಸೌಲಭ್ಯ ನೀಡಲು ಸರ್ಕಾರ ಸೂಚನೆ ನೀಡಿದೆ. ರಾಜ್ಯಾದ್ಯಂತ ರೈತರಿಂದ ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ … Continued

ಫ್ಲ್ಯಾಟ್‌ ಬೇರೊಬ್ಬರಿಗೆ ಮಾರಾಟ: ದೂರುದಾರರಿಗೆ ಬಡ್ಡಿ ಸಮೇತ ₹17 ಲಕ್ಷ ಪಾವತಿಸಲು ಡಿಕೆ ಸಹೋದರರಿಗೆ ಆದೇಶ

ಬೆಂಗಳೂರು : ಗ್ರಾಹಕರೊಬ್ಬರು ₹30 ಲಕ್ಷ ಮುಂಗಡ ಹಣ ನೀಡಿ ಕಾಯ್ದಿರಿಸಿದ್ದ ಫ್ಲ್ಯಾಟ್‌ ಅನ್ನು ನಿಗದಿತ ಸಮಯದಲ್ಲಿ ಪೂರ್ಣ ಹಣ ಪಾವತಿ ಮಾಡದೆ ವಿಳಂಬ ಮಾಡಿದ್ದಾರೆ ಎಂಬ ಕಾರಣ ನೀಡಿ ₹17 ಲಕ್ಷ ಕಡಿತ ಮಾಡಿ ಬಾಕಿ ಹಣ ಪಾವತಿಸಿದ್ದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಮತ್ತು ಅವರ ಸಹೋದರ, ಸಹೋದರಿಗೆ ವಾರ್ಷಿಕ ಶೇ. 10ರ … Continued

ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರೊ. ಭಗವಾನ್ ವಿರುದ್ಧ ಎಫ್​ಐಆರ್​ ದಾಖಲು

ಮೈಸೂರು: ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರೊ. ಕೆ.ಎಸ್​. ಭಗವಾನ್ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಗಂಗಾಧರ ಅವರು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾದ ಮೈಸೂರಿನ ಗಂಗಾಧರ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ. ಪ್ರೊ. … Continued

ಸಾರಿಗೆ ನಿಗಮಗಳಿಗೆ 5675 ಬಸ್‌ ಖರೀದಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಶಕ್ತಿ ಯೋಜನೆಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ ಗಳ ಖರೀದಿಗೆ 500 ಕೋಟಿ ರೂ. ತೆಗೆದಿರಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು … Continued

ರಾಜ್ಯೋತ್ಸವದಂದು ಕನ್ನಡದ 5 ಗೀತೆಗಳ ಗಾಯನ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು ಈ ನವೆಂಬರ್‌ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಐದು ಕನ್ನಡಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, … Continued

ಮೈಸೂರಿನಲ್ಲಿಯೂ ಮೆಟ್ರೋ ರೈಲುಗಳು ಓಡಾಡಲಿವೆ : ಪಿಎಂ ಮೋದಿ

ನವದೆಹಲಿ : ಬೆಂಗಳೂರಿನಲ್ಲಿ ಮೆಟ್ರೋ ರೈಲುಗಳ ಸಂಚಾರ ನಡೆಸುತ್ತಿವೆ. ಅದರಂತೆ ಮೈಸೂರಿನಲ್ಲಿಯೂ ಮೆಟ್ರೋ ರೈಲುಗಳು ಸಂಚರಿಸುವ ದಿನಗಳೂ ದೂರವಿಲ್ಲ. ಇದಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೈಸೂರು ಜನರಿಗೆ ಸಂತಸದ ಸುದ್ದಿ ತಿಳಿಸಿದ್ದಾರೆ. ಶುಕ್ರವಾರ ದೆಹಲಿಯಿಂದ ವರ್ಚುವಲ್ ಮೂಲಕ ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಂಗೇರಿ-ಚಲ್ಲಘಟ್ಟ ಮತ್ತು … Continued

ಪ್ಯಾಲೆಸ್ತೀನ್ ವಿರೋಧಿ ಟ್ವೀಟ್ : ಬಹ್ರೇನ್‌ನಲ್ಲಿ ಕರ್ನಾಟಕ ಮೂಲದ ವೈದ್ಯನ ಬಂಧನ, ಕೆಲಸದಿಂದ ವಜಾ

ಪ್ಯಾಲೆಸ್ತೀನ್ ಅನ್ನು ಟೀಕಿಸುವ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿಬಹ್ರೇನ್‌ನ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ 50 ವರ್ಷ ವಯಸ್ಸಿನ ವೈದ್ಯರನ್ನು ಅಕ್ಟೋಬರ್ 19 ರಂದು ಗುರುವಾರ ಬಂಧಿಸಲಾಗಿದೆ. ರಾಯಲ್ ಬಹ್ರೇನ್ ಆಸ್ಪತ್ರೆಯಲ್ಲಿ ಆಂತರಿಕ ವೈದ್ಯಕೀಯದಲ್ಲಿ ಪರಿಣತಿ ಪಡೆದ ಡಾ. ಸುನಿಲ ಜೆ ರಾವ್ ಅವರನ್ನು ಬಂಧಿಸುವ ಮೊದಲು ತಕ್ಷಣವೇ ವೈದ್ಯರನ್ನು ಆಸ್ಪತ್ರೆಯಿಂದ ವಜಾಗೊಳಿಸಲಾಯಿತು. ಡಾ. … Continued

ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ ; ಸಿಐಡಿ ತನಿಖೆಗೆ ಆದೇಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಶಿವಕುಮಾರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ತುಮಕೂರಿನಲ್ಲಿ ಈ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ಭಾಗಿಯಾಗಿದ್ದಾರೆ. ಯಾರೆ ಕೈವಾಡವಿದೆ ಎಂಬುದು ತನಿಖೆ ನಂತರ … Continued