ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

ಬೆಂಗಳೂರು:  ಡಿ.ಕೆ. ಶಿವಕುಮಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಇದರೊಂದಿಗೆ, ರಾಜ್ಯದ ಗಮನ ಈಗ ಅವರ ಮೊದಲ ಸಚಿವ ಸಂಪುಟದ ರಚನೆಯತ್ತ ನೆಟ್ಟಿದೆ. ಶಿವಕುಮಾರ ಸಂಪುಟ ಸೇರಲಿರುವ ನಾಯಕರ ಕುರಿತಾಗಿದ್ದ ಕುತೂಹಲಕ್ಕೆ ಸದ್ಯ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸೇರಿದಂತೆ ಒಟ್ಟು 14 ನಾಯಕರು ಇಂದು, ಬುಧವಾರ (ಜೈನ್‌ ೩) ಪ್ರಮಾಣ ವಚನ … Continued

ಸಿಎಂ ಆಗಿ ಡಿಕೆಶಿ ಪ್ರಮಾಣ ವಚನಕ್ಕೂ ಮುನ್ನ ಹೈಕಮಾಂಡ್ ಮಾಸ್ಟರ್ ಸ್ಟ್ರೋಕ್ : ಸಿದ್ದರಾಮಯ್ಯಗೆ ಮಹತ್ವದ ಸ್ಥಾನ ನೀಡಿದ ಕಾಂಗ್ರೆಸ್

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಪ್ರಮುಖ ರಾಜಕೀಯ ಸ್ಥಿತ್ಯಂತರ ನಡೆಯುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಾಂಸ್ಥಿಕ ನಿರ್ಧಾರವೊಂದನ್ನು ಕೈಗೊಂಡಿದೆ. ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಡಿ.ಕೆ. ಶಿವಕುಮಾರ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನವೇ, ರಾಜ್ಯದ ಹಿರಿಯ ನಾಯಕ ಹಾಗೂ ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಸಿದ್ದರಾಮಯ್ಯ ಅವರನ್ನು ಪಕ್ಷದ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆಯಾದ … Continued

ಫೋರ್ಬ್ಸ್ ‘ಏಷ್ಯಾ ಅಂಡರ್ 30’ ಪಟ್ಟಿಯಲ್ಲಿ ಸ್ಥಾನ ಪಡೆದ ಬೆಂಗಳೂರಿನ 17 ವರ್ಷದ ಹುಡುಗಿ

ಬೆಂಗಳೂರು: ಬೆಂಗಳೂರಿನ 17 ವರ್ಷದ ವಿದ್ಯಾರ್ಥಿನಿ ದಿವಾ ಉತ್ಕರ್ಷ ಅವರು ಪ್ರತಿಷ್ಠಿತ ಫೋರ್ಬ್ಸ್ ಏಷ್ಯಾ ಅಂಡರ್ 30’ (2025) ಪಟ್ಟಿಯ ‘ಸಾಮಾಜಿಕ ಪ್ರಭಾವ’ (Social Impact) ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ.  ಟೈಪ್-1 ಮಧುಮೇಹದಿಂದ (Type 1 Diabetes) ಬಳಲುತ್ತಿರುವ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ನೆರವಾಗಲು ಅವರು ನಡೆಸುತ್ತಿರುವ ಅಪ್ರತಿಮ ಸೇವೆಗಾಗಿ ಈ ಜಾಗತಿಕ ಮನ್ನಣೆ … Continued

ಮಗ ಉದಯನಿಧಿ ಸನಾತನ ಧರ್ಮ ವಿರೋಧಿ ಹೇಳಿಕೆ ಬೆನ್ನಲ್ಲೇ ಕರ್ನಾಟಕದ ದೇಗುಲಗಳಿಗೆ ಭೇಟಿ ನೀಡಿದ ತಾಯಿ ದುರ್ಗಾ ಸ್ಟಾಲಿನ್…

ಮೈಸೂರು/ಮಂಡ್ಯ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಮೈಸೂರಿನ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅವರು ಮಂಡ್ಯ ಜಿಲ್ಲೆಯ ಪ್ರಸಿದ್ಧ ನಿಮಿಷಾಂಬಾ ದೇಗುಲಕ್ಕೂ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ. ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿದ ದುರ್ಗಾ ಸ್ಟಾಲಿನ್ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೆಲವು ದಿನ ಗುಡುಗು ಸಹಿತ ಗಾಳಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆಗಮನದ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ರಾಜ್ಯದ ಹಲವು ಭಾಗಗಳಿಗೆ ಹವಾಮಾನ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಹವಾಮಾನ … Continued

ಡಿಕೆಶಿ ಪ್ರಮಾಣವಚನಕ್ಕೂ ಮುನ್ನ ಜಮೀರ್ ಅಹ್ಮದ್ ಆಡಿಯೋ ವೈರಲ್‌ ; ಕಾಂಗ್ರೆಸ್ಸಿನಲ್ಲಿ ತಲ್ಲಣ ; ಅದು ನಕಲಿ ಎಂದ ಜಮೀರ್‌

ಬೆಂಗಳೂರು: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭರ್ಜರಿ ತಯಾರಿ ನಡೆಯುತ್ತಿರುವ ಬೆನ್ನಲ್ಲೇ,  ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪಿತ ಆಡಿಯೋ ಕ್ಲಿಪ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತೀವ್ರ ರಾಜಕೀಯ ಸಂಚಲನ ಮೂಡಿಸಿದೆ. … Continued

ವಿಡಿಯೋ | ಬೆಂಗಳೂರು : ರಾಜ್ಯಪಾಲರ ಸಂಚಾರಕ್ಕಾಗಿ ಸಂಚಾರ ಸ್ಥಗಿತ ; ಗರ್ಭಿಣಿ ಪತ್ನಿ ಚಿಕಿತ್ಸೆಗಾಗಿ ರಸ್ತೆ ಮಧ್ಯೆ ಕುಳಿತು ಪ್ರತಿಭಟಿಸಿದ ಪತಿ !

ಬೆಂಗಳೂರು: ನಗರದ ಸಂಚಾರ ದಟ್ಟಣೆಯ ನಡುವೆ ವಿಐಪಿ (VIP) ಸಂಸ್ಕೃತಿಯ ಅತಿರೇಕ ಮತ್ತೊಮ್ಮೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯಪಾಲರ ಬೆಂಗಾವಲು ಪಡೆಯ (ಕಾನ್ವಾಯ್) ಸುಗಮ ಸಂಚಾರಕ್ಕಾಗಿ ಪೊಲೀಸರು ಬರೋಬ್ಬರಿ 30 ನಿಮಿಷಗಳ ಕಾಲ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ, ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದ ಗರ್ಭಿಣಿ ಪತ್ನಿಯ ತುರ್ತು ವೈದ್ಯಕೀಯ ತಪಾಸಣೆಗಾಗಿ ಆಕೆಯ ಪತಿ … Continued

ಉತ್ತರ ಕನ್ನಡ : ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ

ಕಾರವಾರ : ಉತ್ತರ ಕನ್ನ ಜಿಲ್ಲೆಯ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾದ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 7 ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಮುಳುಗಡೆಯಾದ ಬೋಟ್ ‘ಶ್ರೀ ನವರತ್ನ’ ಅಂಕೋಲಾ ತಾಲೂನಿ ಬೆಳಂಬಾರದಿಂದ ಮೀನುಗಾರಿಕೆಗೆ ತೆರಳಿತ್ತು. ಇದು ಹಿಂತಿರುಗಿ ಬರುವಾಗ ಹೊನ್ನಾವರ ಹಾಗೂ ಕುಮಟಾ ವ್ಯಾಪ್ತಿಯ ಆಳ ಸಮುದ್ರದಲ್ಲಿ ಮುಳುಗಲು ಪ್ರಾರಂಭಿಸಿದೆ. … Continued

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿಷೇಧ

ಕಾರವಾರ: ನೈಋತ್ಯ ಮಾನ್ಸೂನ್‌ ಹಂಗಾಮಿನ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲಾದ್ಯಂತ 2026ರ ಜೂನ್ 1 ರಿಂದ ಆಗಸ್ಟ್ 31ರ ವರೆಗೆ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳು ಹಾಗೂ ನೀರು ಆಧರಿತ ಮನರಂಜನಾ ಚಟುವಟಿಕೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷ್ಮೀಪ್ರಿಯಾ ಕೆ. ಆದೇಶ ಹೊರಡಿಸಿದ್ದಾರೆ. ಮಳೆಗಾಲದ … Continued

ಧಾರವಾಡ; ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಧಾರವಾಡ : ಕೆರೆಗೆ ಈಜಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಿಂಗನಳ್ಳಿ ಗ್ರಾಮದ ಸಮೀಪದ ಕರೆಮ್ಮನ ಕೆರೆಯಲ್ಲಿ ಶನಿವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅನ್ವರ್ ಇಬ್ರಾಹಿಂ ವಟ್ನಾಳ (13), ಸುಭಾನಿ ಇಸಾಕ್ ಬಾಗಜಿಕೊಪ್ಪ (12) ಹಾಗೂ ಮೆಹಬೂಬ್ ಸುಭಾನಿ ದಾದಾಪೀರ್ ವಡ್ನಾಳ (15) … Continued