1ನೇ ತರಗತಿ ಪ್ರವೇಶಕ್ಕೆ 6 ವರ್ಷ ಆಗಿರಬೇಕು : ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು 2022ರ ಜುಲೈ 26ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ನಾಲ್ಕು ವರ್ಷದ ಪುತ್ರಿ … Continued

ಸಿದ್ದಾಪುರ :ಖ್ಯಾತ ಯಕ್ಷಗಾನ ಭಾಗವತ ಕೆ.ಪಿ.ಹೆಗಡೆಗೆ ʼಅನಂತಶ್ರೀʼ ಪ್ರಶಸ್ತಿ

ಸಿದ್ದಾಪುರ : ಪ್ರಸಿದ್ಧ ಯಕ್ಷಗಾನ ಗುರು, ಹೆಸರಾಂತ ಭಾಗವತರಾದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಗೋಳಗೋಡಿನ ಕೆ.ಪಿ.ಹೆಗಡೆ ಅವರಿಗೆ ಯಕ್ಷಗಾನದ ಖ್ಯಾತ ಕಲಾವಿದರಾಗಿದ್ದ ಕೊಳಗಿ ಅನಂತ ಹೆಗಡೆ ಅವರ ಹೆಸರಿನಲ್ಲಿ‌ ನೀಡಲಾಗುವ ‘ಅನಂತಶ್ರೀ’ ಪ್ರಶಸ್ತಿ ಪ್ರಕಟಿಸಲಾಗಿದೆ. ಈ ವಿಷಯ ತಿಳಿಸಿದ ಶ್ರೀ ಅನಂತ‌ ಯಕ್ಷ ಕಲಾ ಪ್ರತಿಷ್ಠಾನದ ಅಧ್ಯಕ್ಷ ವಿ.ಎಂ.ಭಟ್ಟ ಸಿದ್ದಾಪುರ ಅವರು, ಕಳೆದ … Continued

ಗುಂಡ್ಲುಪೇಟೆ : ಹೃದಯಾಘಾತದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ಚಾಮರಾಜನಗರ: ಹದಿನೈದು ವರ್ಷದ ಎಸ್ಸೆಸ್ಸೆಲ್ಸಿ  ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತವಾಗಿ ಅಸುನೀಗಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಕಾನ್ವೆಂಟ್‌ನಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿನಿ ಫೆಲಿಶಾ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಈಕೆ ಇಲ್ಲಿನ ಕ್ರೈಸ್ತ ಮಿಷನರಿ ಹಾಸ್ಟೆಲ್​ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು. ವಿದ್ಯಾರ್ಥಿನಿ … Continued

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ನಿಧನ

ಮಂಗಳೂರು : ಕರ್ಣಾಟಕ ಬ್ಯಾಂಕ್‌ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪೊಳಲಿ ಜಯರಾಮ ಭಟ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇಂದು ಬುಧವಾರ ಮುಂಬೈನಿಂದ ವಿಮಾನದಲ್ಲಿ ಬಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಸಂದರ್ಭದಲ್ಲಿ ಅವರು ಹಠಾತ್‌ ಹೃದಯಾಘಾತಕ್ಕೆ ಒಳಗಾದರು.. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ … Continued

ಹಾಸನ: ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಪ್ತನ ಬರ್ಬರ ಹತ್ಯೆ

ಹಾಸನ : ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರ ಆಪ್ತ ಹಾಗೂ ಗ್ರಾನೈಟ್‌ ಉದ್ಯಮಿಯನ್ನು ಹಾಸನದಲ್ಲಿ ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಕೃಷ್ಣೇ ಗೌಡ (53) ಎಂಬವರನ್ನು ಹಾಸನ ನಗರದ ಹೊರವಲಯದ ಕೈಗಾರಿಕೆ ಪ್ರದೇಶದಲ್ಲಿ ದುಷ್ಕರ್ಮಿಗಳು ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೃಷ್ಣೇಗೌಡರನ್ನು ಅವರ ಗ್ರ್ಯಾನೈಟ್ ಕಾರ್ಖಾನೆಯ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. … Continued

ಹುಬ್ಬಳ್ಳಿ-ಧಾರವಾಡದ ಮಹಾನಗರದ ಪೊಲೀಸ್ ಆಯುಕ್ತರಾಗಿ ರೇಣುಕಾ ಸುಕುಮಾರ ನೇಮಕ

ಹುಬ್ಬಳ್ಳಿ: : ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಮೊದಲ ಮಹಿಳಾ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ರೇಣುಕಾ ಕೆ ಸುಕುಮಾರ (IPS Renuka Sukumar) ಅವರನ್ನು ರಾಜ್ಯ ಸರ್ಕಾರ ಬುಧವಾರ ನೇಮಕ ಮಾಡಿದೆ. ಆಗಸ್ಟ್ 9 ರಂದು ಹೊರಡಿಸಿದ ವರ್ಗಾವಣೆ ಆದೇಶದಲ್ಲಿ ಐ ಸಂತೋಷ ಬಾಬು ಬದಲಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ರೇಣುಕಾ ಅವರನ್ನು ನೇಮಿಸಿ ಸರ್ಕಾರ … Continued

ಸೈಬರ್​ ವಂಚಕರು ಕಳುಹಿಸಿದ ಲಿಂಕ್​ ಕ್ಲಿಕ್​ ಮಾಡಿ ಹಣ ಕಳಕೊಂಡ ವಿವಿ ಕುಲಪತಿ

ಹಾವೇರಿ : ಶಿಗ್ಗಾವಿ ತಾಲೂಕಿನ ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ ಅವರಿಗೆ ಸೈಬರ್ ವಂಚಕರು 60 ಸಾವಿರ ರೂ. ಪಂಗನಾಮ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ಕುರಿತು ಅವರೇ ಶಿಗ್ಗಾವಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಧ್ಯಾಹ್ನದ ಸಮಯದಲ್ಲಿ ಧಾರವಾಡ ಎಸ್‌ಬಿಐ ಬ್ಯಾಂಕ್‌ನ ನವೀಕುಮಾರ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ನನಗೆ ಫೋನ್ ಮಾಡಿದ್ದ. … Continued

ಇಂದು ಸ್ಪಂದನಾ ಅಂತ್ಯಕ್ರಿಯೆ : ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು : ಬ್ಯಾಂಕಾಕ್‌ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರ ಬುಧವಾರ ಅಪರಾಹ್ನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ನಡೆಯಲಿದೆ. ಮಂಗಳವಾರ ಮಧ್ಯರಾತ್ರಿ ಸ್ಪಂದನಾ ಅವರ ಪಾರ್ಥಿವ ಶರೀರ ಥೈಲ್ಯಾಂಡ್‌ನಿಂದ ಆಗಮಿಸಿದ್ದು, ಇಂದು ಬೆಳಿಗ್ಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಬಿ.ಕೆ. ಶಿವರಾಮ ಮನೆಯಲ್ಲಿ ಅಂತಿಮ ದರ್ಶನಕ್ಕೆ … Continued

ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧ: ಉಲ್ಲಂಘಿಸಿದವರಿಗೆ 50,000 ರೂ. ದಂಡ

ಬೆಂಗಳೂರು: ಬೆಂಗಳೂರಿನಲ್ಲಿ ಆಗಸ್ಟ್ 15ರ ಬಳಿಕ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧಿಸಲಾಗಿದ್ದು, ಅನುಮತಿಯಿಲ್ಲದೆ ಯಾರಾದರೂ ಫ್ಲೆಕ್ಸ್, ಬ್ಯಾನರ್ ಹಾಕಿದಲ್ಲಿ 50,000 ರೂ. ದಂಡ ವಿಧಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾನರ್, ಫ್ಲೆಕ್ಸ್ ಯಾರದೇ ಆಗಿರಲಿ ಅದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಗಳನ್ನು … Continued

ಕಾಲೇಜು ವೀಡಿಯೊ ಪ್ರಕರಣ : ಉಡುಪಿಗೆ ಆಗಮಿಸಿದ ಸಿಐಡಿ ತಂಡ

ಉಡುಪಿ: ಕಾಲೇಜಿನ ಶಾಚಾಲಯದಲ್ಲಿ ವಿದ್ಯಾರ್ಥಿನಿಯ ವೀಡಿಯೊ ಮಾಡಿದ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಐಡಿ ತಂಡ ಉಡುಪಿಗೆ ಆಗಮಿಸಿದೆ. ರಾಜ್ಯ ಸರ್ಕಾರ ಸೋಮವಾರ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು. ಡಿವೈಎಸ್ ಪಿ ಅಂಜುಮಾಲ ನಾಯಕ್ ಅವರ ನೇತೃತ್ವದ ತಂಡ ಉಡುಪಿ ಜಿಲ್ಲಾ ಎಸ್‌ಪಿ ಕಚೇರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿದೆ. ಎಸ್ ಪಿ ಅಕ್ಷಯ ಮಚ್ಚೀಂದ್ರ ಹಾಗೂ … Continued