ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಸ್ವಯಂ ಸೇವಕರ ನೇಮಕಕ್ಕೆ ಮಾರ್ಗಸೂಚಿ ಪ್ರಕಟ: ಮನೆ ಬಾಗಿಲಿಗೆ ಬರ್ತಾರಂತೆ ಈ ʼಪ್ರಜಾಪ್ರತಿನಿಧಿʼಗಳು

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಮೊಬೈಲ್‌ ಆ್ಯಪ್‌ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅದಕ್ಕೆ ನೆರವಾಗಲು ಪ್ರಜಾ ಪ್ರತಿನಿಧಿ (ಸಿಟಿಜನ್‌ ವಾಲೆಂಟೀರ್ಸ್) ನೇಮಕಕ್ಕೆ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ನಲ್ಲಿ ಅರ್ಜಿ ಸಲ್ಲಿಕೆ ಒತ್ತಡ ಕಡಿಮೆ ಮಾಡಲು ಮೊಬೈಲ್‌ ಆ್ಯಪ್‌ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅದಕ್ಕಾಗಿ ಗೌರವ … Continued

ಸಾರಿಗೆ ಇಲಾಖೆಯಲ್ಲಿ 4 ಸಾವಿರ ಬಸ್ ಖರೀದಿ, 13 ಸಾವಿರ ಸಿಬ್ಬಂದಿ ನೇಮಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (KSRTC) 4,000 ಬಸ್‌ಗಳನ್ನು ಖರೀದಿಸಲಾಗುವುದು ಮತ್ತು 13,000 ಚಾಲಕರು, ಕಂಡಕ್ಟರ್‌ಗಳು ಮತ್ತು ಮೆಕಾನಿಕ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿಯಿಂದ ಸ್ವಾಗತಿಸಿದ್ದು, ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ … Continued

ಮಂಗಳೂರಿನ ಶಮಾ ವಾಜಿದಗೆ ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್ನ್ಯಾಶನಲ್ ಯೂನಿವರ್ಸ್ ಪ್ರಶಸ್ತಿ

ಮಂಗಳೂರು: ಮಂಗಳೂರಿನ ಶಮಾ ವಾಜಿದ್ ಅವರು ಪ್ರತಿಷ್ಠಿತ ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್‌ನ್ಯಾಶನಲ್ ಯೂನಿವರ್ಸ್ -2023 ಪ್ರಶಸ್ತಿ ಗೆದ್ದಿದ್ದಾರೆ ಹಾಗೂ ಗ್ಲೋಬಲ್ ಮಿಸೆಸ್ ಯೂನಿವರ್ಸ್ ಸ್ಪರ್ಧೆಗೆ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ನವದೆಹಲಿಯಲ್ಲಿ ಗ್ಲೋಬಲ್ ಇಂಡಿಯಾ ಎಂಟರ್‌ಟೈನ್‌ಮೆಂಟ್‌ ಪ್ರೊಡಕ್ಷನ್ಸ್ ನಡೆಸಿದ ಸ್ಪರ್ಧೆಯಲ್ಲಿ ಮಂಗಳೂರಿನ ಶಮಾ ವಾಜಿದ್ ಈ ಪ್ರಶಸ್ತಿ ಗೆದ್ದಿದ್ದಾರೆ. ಗ್ಲೋಬಲ್ ಮಿಸೆಸ್ ಇಂಡಿಯಾ ಇಂಟರ್ನ್ಯಾಷನಲ್ ಯೂನಿವರ್ಸ್ … Continued

ಅಂಕೋಲಾ: ಹಿರಿಯ ಯಕ್ಷಗಾನ ಕಲಾವಿದ ವಿಠೋಬ ನಾಯಕ ನಿಧನ

ಅಂಕೋಲಾ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವಿಠೋಬ ನಾಯಕ ವಂದಿಗೆ (88) ಅವರು ಗುರುವಾರ ನಿಧನರಾಗಿದ್ದಾರೆ. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಸುಮಾರು 50 ವರ್ಷಗಳಿಗೂ ಹೆಚ್ಚಿನ ಕಾಲ ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಲವಾರು ಪಾತ್ರಗಳಿಗೆ ಜೀವಂತಿಕೆ ತುಂಬಿದ್ದರು. ಅವರು ತಮ್ಮ ಗಂಭೀರ ಪಾತ್ರನಿರ್ವಹಣೆ, … Continued

ಪ್ರಧಾನಿ ನರೇಂದ್ರ ಮೋದಿ ಮಾತು ಕೇಳಿದ್ದರೆ 5 ವರ್ಷ ನಾನೇ ಸಿಎಂ ಆಗಿರುತ್ತಿದ್ದೆ : ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್​​ ಅನ್ನು ಪದೇ ಪದೇ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸುವ ಮುನ್ನ ಒಂದು ವಿಚಾರ ತಿಳಿದುಕೊಳ್ಳಿ. ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ನಾನು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ … Continued

ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಸಂಜಯ ಶೆಟ್ಟಣ್ಣವರ ನೇಮಕ

ಬೆಂಗಳೂರು :ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಸಂಜಯ ಬಿ. ಶೆಟ್ಟಣ್ಣವರ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಸಂಜಯ ಶೆಟ್ಟೆಣ್ಣವರ ಅವರು ಸದ್ಯ ಬೆಂಗಳೂರಿನ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಳಗಾವಿಯರಾದ ಸಂಜಯ ಶೆಟ್ಟೆಣ್ಣವರ ಈ ಮೊದಲು ವಿಜಯಪುರ ಹಾಗೂ ಹಾವೇರಿ ಜಿಲ್ಲಾಧಿಕಾರಿಯಾಗಿ ಹಾಗೂ ಬೆಳಗಾವಿ ಕಾಡಾದಲ್ಲಿಯೂ ಆಡಳಿತಾಧಿಕಾರಿಯಾಗಿ … Continued

ವೀಡಿಯೊ…| ಬೆಂಗಳೂರು ಕಂಪನಿ ಮುಖ್ಯಸ್ಥರ ಜೋಡಿ ಕೊಲೆ : ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರಿನ ಏರೋನಿಕ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅವರ ಜೋಡಿ ಕೊಲೆ ಪ್ರಕರಣದ ಸಿಸಿಟಿವಿ ದೃಶ್ಯಗಳು ಗುರುವಾರ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ಈ ದೃಶ್ಯಾವಳಿಯು ಎರಡು ವಿಭಿನ್ನ ಕ್ಷಣಗಳನ್ನು ಸೆರೆಹಿಡಿದಿದೆ. ಕಂಪನಿಯ ಇಬ್ಬರು ಉನ್ನತಾಧಿಕಾರಿಗಳ ಹತ್ಯೆಯ ನಂತರ ಮೂವರು ಆರೋಪಿಗಳು ಸ್ಥಳದಿಂದ ಓಡಿಹೋಗುವುದು ವೀಡಿಯೊದಲ್ಲಿ ಕಂಡುಬರುತ್ತದೆ. ಜುಲೈ 11ರಂದು ಸಂಜೆ 4:14 ಕ್ಕೆ … Continued

ಅಕ್ರಮ ಗಣಿಗಾರಿಕೆ ಆರೋಪ : ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಅನುಮತಿ ಪಡೆಯದೆ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ರಾಜರಾಜೇಶ್ವರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ‌ದಾಖಲಿಸಲಾಗಿದೆ. ಯಲಹಂಕ ತಹಶೀಲ್ದಾರ ಅನಿಲ್ ಅರಳೋಕರ ಅವರ ದೂರಿನ ಹಿನ್ನೆಲೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ‌ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನುಮತಿ ಪಡೆಯದೆ ಅಕ್ರಮವಾಗಿ … Continued

ಎಎಪಿ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

ಬೆಂಗಳೂರು : ಕರ್ನಾಟಕದಲ್ಲಿ ನೆಲೆ ಕಂಡುಕೊಳ್ಳಲು ನಿರಂತರವಾಗಿ ಪ್ರಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷ (AAP)ಸಂಘಟನೆಯಲ್ಲಿ ಬಹಳಷ್ಟು ಬದಲಾವಣೆಗೆ ಮುಂದಾಗಿದೆ. ಲೋಕಸಭಾ ಚುನಾವಣೆಗೆ ಕೆಲವು ತಿಂಗಳುಗಳ ಮೊದಲು ಎಎಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚಲನಚಿತ್ರ ನಟ ಹಾಗೂ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಎಎಪಿ ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಮುಂದಿನ ಎರಡು ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳು ವಿಶ್ರಾಂತಿ ನೀಡಿದ್ದ ಮಳೆ ಮುಂದಿನ ಎರಡ್ಮೂರು ದಿನಗಳಲ್ಲಿ ಮಳೆ ಮತ್ತೆ ಚುರುಕು ಪಡೆಯಲಿದೆ ಎಂದು ಸೂಚನೆ ನೀಡಲಾಗಿದೆ. ಕರಾವಳಿ, ದಕ್ಷಿಣದ ಒಳನಾಡಿನಲ್ಲಿ ಬುಧವಾರ ಹಾಗೂ ಗುರುವಾರ ಗುಡುಗು ಸಹಿತ ಮಳೆಯಾಗುವ … Continued