ಸರ್ಕಾರದ ವರ್ಗಾವಣೆ ದಂಧೆಯ ದಾಖಲೆ ಪೆನ್ ಡ್ರೈವ್ ನಲ್ಲಿದೆ : ಸಮಯ ಬಂದಾಗ ಬಿಡುಗಡೆ ಮಾಡ್ತೇನೆ ; ಮತ್ತೊಂದು ಬಾಂಬ್‌ ಸಿಡಿಸಿದ ಕುಮಾರಸ್ವಾಮಿ

ಬೆಂಗಳೂರು : ರಾಜ್ಯ ಸರ್ಕಾರದ ವರ್ಗಾವಣೆ ದಂಧೆ ದಾಖಲೆ ಇರುವ ಪೆನ್ ಡ್ರೈವ್ ನನ್ನ ಬಳಿ ಇದೆ. ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಇಂದು, ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವರ್ಗಾವಣೆ ದಂಧೆ ಮಾಡುತ್ತಿರುವ ಬಗ್ಗೆ ನನ್ನ ಬಳಿ … Continued

ಭಾರೀ ಮಳೆ: ಇಂದು ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ಕರಾವಳಿ ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ಬುಧವಾರ ಜುಲೈ 5 ರಂದು ರಜೆ ಘೋಷಿಸಲಾಗಿದೆ. ಬೆಂಗಳೂರಿನ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ  ಜುಲೈ 5 ರಂದು ಬೆಳಿಗ್ಗೆ 8:30 ಗಂಟೆ ವರೆಗೆ ಭಾರಿ ಮಳೆ ಬೀಳುವ ಮಾಹಿತಿ … Continued

ಭಾರೀ ಮಳೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಐದು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಕಾರವಳಿ ಭಾಗದಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಮತ್ತು … Continued

ಬೆಳಗಾವಿ: ಅಕ್ಕತಂಗೇರಹಾಳದಲ್ಲಿ ಜೋಡಿ ಕೊಲೆ

ಬೆಳಗಾವಿ : ಜಿಲ್ಲೆಯ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ ನಡೆದಿದೆ. ಕೊಲೆ ಆರೋಪಿ ಯಲ್ಲಪ್ಪ ಮಾಳಗಿ(45) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿ ರೇಣುಕಾ ಮಾಳಗಿ (40) ಹಾಗೂ ಮಲ್ಲಿಕಾರ್ಜುನ ಜಗದಾರ (36) ಹಾಗೂ ಹತ್ಯೆಗೀಡಾದವರು. ಕೊಲೆಗೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಆದರೆ ನಿಖರವಾದ ಕಾರಣ ತನಿಖೆ ನಂತರವೇ ಗೊತ್ತಾಗಲಿದೆ … Continued

ಈ ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್-ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ನಾಳೆ ಬೆಳಗ್ಗಿನವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಜುಲೈ 5ರ ಬೆಳಗ್ಗೆ 8:30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿನ್ನೆಯಿಂದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಇದು ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಬಹುದು ಎಂಬ … Continued

ಬಸ್‌ ಸೀಟಿಗಾಗಿ ಮಹಿಳೆಯರಿಬ್ಬರ ಕಿತ್ತಾಟ ; ಪೊಲೀಸರಿಂದ ಲಾಠಿ ಚಾರ್ಜ್…!

ಕೋಲಾರ : ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಿಸಿದ ಬಳಿಕ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ಗಲಾಟೆ-ಜಗಳ ನಡೆಯುತ್ತಿರುವುದು ವರದಿಯಾಗುತ್ತಿವೆ. ಆದರೆ, ಕೋಲಾರದಲ್ಲಿ ಸೀಟಿಗಾಗಿ ಮಹಿಳೆಯರು ಕಿತ್ತಾಡಿಕೊಂಡ ಘಟನೆಯಲ್ಲಿ ಪೊಲೀಸರು ಲಾಠಿ ಚಾರ್ಜ್‌ ಮಾಡುವ ಹಂತದ ವರೆಗೆ ಬಂದಿತ್ತು ಎಂದು ವರದಿಯಾಗಿದೆ. ಕೋಲಾರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಲಾಠಿ … Continued

ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆ ಐದು ತಾಲೂಕುಗಳ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 4ರ ಮಂಗಳವಾರ ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆ ಸುರಿಯುತ್ತಿರುವುದರಿಂದ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. ಉಳಿದ ತಾಲೂಕಿನಲ್ಲಿ ಮಳೆ … Continued

ಸುಪ್ರೀಂ ಕೋರ್ಟ್‌, ಹೈಕೋರ್ಟ್‌ ಮೂರು ಪೀಠಗಳಿಗೆ 15 ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ ನೇಮಕ

ಬೆಂಗಳೂರು: ಸುಪ್ರೀಂ ಕೋರ್ಟ್‌ಗೆ ಐವರು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳ (ಎಎಜಿ) ನೇಮಕಾತಿ ಸೇರಿದಂತೆ ಒಟ್ಟು 15 ಮಂದಿ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ರಾಜ್ಯ ಸರ್ಕಾರವು ಸೋಮವಾರ ಅಧಿಸೂಚನೆ ಪ್ರಕಟಿಸಿದೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠಕ್ಕೆ ಐವರು, ಕಲಬುರ್ಗಿ ಪೀಠಕ್ಕೆ ಮೂವರು ಮತ್ತು ಧಾರವಾಡ ಪೀಠಕ್ಕೆ ಇಬ್ಬರು ಹೆಚ್ಚುವರಿ ಅಡ್ವೊಕೇಟ್‌ … Continued

ಮುರುಘಾ ಮಠದ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ನ್ಯಾಯಾಧೀಶರ ನೇಮಿಸಿದ ಹೈಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠ ಮತ್ತು ವಿದ್ಯಾಪೀಠಕ್ಕೆ ಆಡಳಿತಾಧಿಕಾರಿಯನ್ನಾಗಿ ಚಿತ್ರದುರ್ಗ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರನ್ನು ತಾತ್ಕಾಲಿಕವಾಗಿ ನೇಮಕ ಮಾಡಿ ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ. ಚಿತ್ರದುರ್ಗದ ಎಚ್‌.ಏಕನಾಥಯ್ಯ ಅವರು ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ ಜಿ ಎಸ್‌ ಕಮಲ್‌ ಅವರ ನೇತೃತ್ವದ … Continued

ಬಿಟ್‌ ಕಾಯಿನ್‌ ಹಗರಣ: ಮರು ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ ಕಾಯಿನ್‌ ಹಗರಣಕ್ಕೆ ಮರುಜೀವ ನೀಡಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಡಾ. ಜಿ ಪರಮೇಶ್ವದ, “ನಾವು ಹಿಂದೆ ಬಿಜೆಪಿ ಸರ್ಕಾರದ ಬಿಟ್ ಕಾಯಿನ್ ವಿಚಾರದಲ್ಲಿ ಲಕ್ಷಾಂತರ ಕೋಟಿ ರೂಪಾಯಿಗಳ ಬಗ್ಗೆ ಮಾತನಾಡಿದ್ದೆವು. ಈಗ ಬಿಟ್‌ ಕಾಯಿನ್ … Continued