ಸರ್ಕಾರಿ ವೈದ್ಯರಿಗೆ ಖಾಸಗಿ ಕ್ಲಿನಿಕ್ ನಡೆಸಲು ಅವಕಾಶದ ಬಗ್ಗೆ ಪುನರ್ ಪರಿಶೀಲನೆ: ಆರೋಗ್ಯ ಸಚಿವ ದಿನೇಶ ಗುಂಡೂರಾವ್

ಮೈಸೂರು : ಸರ್ಕಾರಿ ವೈದ್ಯರು ಕ್ಲಿನಿಕ್ ನಡೆಸಲು ನೀಡಿರುವ ಅವಕಾಶವನ್ನು ಪುನರ್ ಪರಿಶೀಲನೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಹಿಂದೆ ವೈದ್ಯರ ಕೊರತೆ ಇದ್ದ ಕಾರಣ ಸಾರ್ವಜನಿಕರಿಗೆ ಸೇವೆ ಸಿಗಲಿ ಎನ್ನುವ ಕಾರಣಕ್ಕೆ ವೈದ್ಯರು ಕ್ಲಿನಿಕ್ ನಡೆಸಲು ಸರ್ಕಾರವೇ ಅವಕಾಶ ನೀಡಿತ್ತು. ಸರ್ಕಾರಿ ವೈದ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ … Continued

ಧಾರವಾಡ- ಬೆಂಗಳೂರು ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಧಾರವಾಡ: ಧಾರವಾಡ ಹಾಗೂ ಬೆಂಗಳೂರಿನ ನಡುವೆ ಸಂಚರಿಸಲಿರುವ ವಂದೇ ಭಾರತ ರೈಲು ಸೇರಿದಂತೆ ಒಟ್ಟು 5 ವಂದೇ ಭಾರತ ಎಕ್ಸಪ್ರೆಸ್ ರೈಲುಗಳಿಗೆ ಪ್ರಧಾನಿ ಮೋದಿ ಭೋಪಾಲದಿಂದ ಇಂದು ಮಂಗಳವಾರ ವರ್ಚುವಲ್ ಆಗಿ ಚಾಲನೆ ನೀಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್​​ ಮೂಲಕ ಹಸಿರು ನಿಶಾನೆ ತೋರಿಸಿದರು. ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ, … Continued

ಸಿದ್ದರಾಮಯ್ಯ ಮೊಬೈಲ್ ಬಳಸುತ್ತಿಲ್ಲವಂತೆ : ಅದಕ್ಕೆ ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಯಾಕೆ ಮೊಬೈಲ್ ಉಪಯೋಗ ಮಾಡುತ್ತಿಲ್ಲ ಎಂಬ ವಿಷಯದ ಹಿಂದಿನ ಕಾರಣ ಬಹಿರಂಗ ಪಡಿಸಿದ್ದಾರೆ. ಬೆಂಗಳೂರಿನ ನೆಲಮಂಗಲದ ಕ್ಷೇಮವನದಲ್ಲಿ ಇಂದಿನಿಂದ ಆರಂಭವಾದ ನೂತನ ಶಾಸಕರ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಕಾರಣ ಬಹಿರಂಗಪಡಿಸಿದ್ದಾರೆ. ಅವರು ಅಲ್ಲಿ ನೂತನ ಶಾಸಕರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುವಾಗ ತಮ್ಮ ರಾಜಕೀಯ ಜೀವನದ … Continued

ಕರ್ನಾಟಕದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 670 ಹುದ್ದೆಗಳಿಗೆ ನೇರ ನೇಮಕಾತಿ: ಅರ್ಜಿ ಸಲ್ಲಿಕೆ ಆರಂಭ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examination Authority) ಖಾಲಿ ಇರುವ 670 ಹುದ್ದೆಗಳಿಗೆ ಹುದ್ದೆಗಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯದಲ್ಲಿನ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದ್ದು, . ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ … Continued

ಬಸ್‌ ನಿಲ್ಲಿಸಲಿಲ್ಲವೆಂದು ಕೋಪದಿಂದ ಬಸ್ಸಿಗೆ ಕಲ್ಲೆಸೆದ ಮಹಿಳೆಗೆ 5 ಸಾವಿರ ದಂಡ…!

ಕೊಪ್ಪಳ: ಕೊಪ್ಪಳದಿಂದ ಹೊಸಪೇಟೆಗೆ ಹೋಗುತ್ತಿದ್ದ ಬಸ್‌ಗಳು ತಾಲೂಕಿನ ಹೊಸ ಲಿಂಗಾಪುರ (ಹುಲಿಗಿ ಕ್ರಾಸ್‌) ಬಳಿ ನಿಲ್ಲಿಸದ ಕಾರಣ ರೊಚ್ಚಿಗೆದ್ದ ಮಹಿಳೆಯೊಬ್ಬರು ಸರ್ಕಾರಿ ಬಸ್‌ಗೆ ಕಲ್ಲು ತೂರಿದ್ದಾರೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಭಾನುವಾರ ಈ ಘಟನೆ ನಡೆದಿದ್ದು, ಬಸ್‌ನ ಚಾಲಕ ಕಂ ನಿರ್ವಾಹಕ ಮುಕ್ಕಣ್ಣ ಕುಕನೂರು ಅವರು ಕಲ್ಲು ಎಸೆದ ಮಹಿಳೆಯನ್ನು ಎಲ್ಲ ಪ್ರಯಾಣಿಕರ ಸಮೇತ … Continued

ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ

ಬೆಂಗಳೂರು: ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಬೆಂಗಳೂರಿನ (Bengaluru) ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ (ಜೂನ್‌ 26 ರಿಂದ 28) ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ಬೆಂಗಳೂರಿನ ನೆಲಮಂಗಲದಲ್ಲಿರುವ ಧರ್ಮಸ್ಥಳ ಕ್ಷೇಮವನದಲ್ಲಿ ಶಾಸಕರಿಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಈ ಬಾರಿ ವಿಧಾನಸಭೆಗೆ ಮೊದಲಬಾರಿ ಆಯ್ಕೆಯಾಗಿರುವ ಸುಮಾರು … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 30ರ ವರೆಗೆ ಭಾರೀ ಮಳೆ ಮುನ್ನೆಚ್ಚರಿಕೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ನಿಧಾನವಾಗಿ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂನ್ 30ರ ವರೆಗೆ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್(Yellow Alert)​ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಅಲ್ಲದೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, … Continued

ಮಳೆಗಾಗಿ ಹೂತಿದ್ದ ಶವಗಳ ಬಾಯಿಗೆ ನೀರು ಬಿಟ್ಟ ಗ್ರಾಮಸ್ಥರು…!

ವಿಜಯಪುರ: ಮಳೆಗಾಗಿ ಪ್ರಾರ್ಥಿಸಿ ನಾನಾ ರೀತಿಯ ಜನಪದ ಆಚರಣೆಗಳು ಗ್ರಾಮೀಣ ಪ್ರದೇಶಗಳಲ್ಲಿ ರೂಢಿಯಲ್ಲಿದೆ. ಆದರೆ, ಈ ಊರಿನಲ್ಲಿ ಸ್ಮಶಾನದಲ್ಲಿ ಹೂತಿರುವ ಶವಗಳ ಬಾಯಿಗೆ ನೀರುಣಿಸಿ ಮಳೆಗಾಗಿ ಪ್ರಾರ್ಥಿಸಿರುವ ವಿಚಿತ್ರ ವಿದ್ಯಮಾನ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ರಾಜ್ಯದಲ್ಲಿ ಈ ವರ್ಷ ಮುಂಗಾರು ದುರ್ಬಲವಾಗಿದ್ದು ನಿರೀಕ್ಷಿತ ಮಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಜೂನ್ ಮುಗಿಯುತ್ತಾ ಬಂದರೂ ಬಹುತೇಕ ಮಳೆಯೇ … Continued

ಕಲಬುರಗಿ: ರೈತರ ಜಮೀನಿನಲ್ಲಿ ಲ್ಯಾಂಡ್ ಆದ ತರಬೇತಿ ವಿಮಾನ

ಕಲಬುರಗಿ: ತರಬೇತಿ ನೀಡುತ್ತಿದ್ದ ವಿಮಾನವೊಂದು ಹಾರಾಟದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೈಲಟ್ ರೈತರ ಜಮೀನಿನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಷ (Emergency Landing) ಮಾಡಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ಪೇಟ್ ಸೀರೂರ್ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ … Continued

ಕಾರ್ಕಳ: ನೀರಿನ ಹೊಂಡಕ್ಕೆ ಹಾರಿದ್ದ ಪತ್ನಿ, ರಕ್ಷಿಸಲು ಹೋಗಿ ಪತ್ನಿಯೊಂದಿಗೆ ಪತಿಯೂ ಸಾವು

ಉಡುಪಿ : ನೀರಿನ ಹೊಂಡಕ್ಕೆ ಹಾರಿದ್ದ ಪತ್ನಿಯನ್ನು ರಕ್ಷಿಸಲು ತಾನೂ ನೀರಿನ ಹೊಂಡಕ್ಕೆ ಹಾರಿದ್ದ ಪತಿಯೂ ಪತ್ನಿಯೊಂದಿಗೆ ಸಾವಿಗೀಡಾದ ಘಟನೆ ರು ಸಾವನ್ನಪ್ಪಿದ ದಾರುಣ ಘಟನೆ ಜಿಲ್ಲೆಯ ಕಾರ್ಕಳದ ನಲ್ಲೂರು ಎಂಬಲ್ಲಿ ನಡೆದಿದೆ. ಮೃತರನ್ನು ಯಲ್ಲಾಪುರ ಉತ್ತರಕನ್ನಡ ಮೂಲದ ಎಮ್ಯಾನುವಲ್ ಸಿದ್ದಿ (36) ಮತ್ತು ಆತನ ಪತ್ನಿ ಯಶೋದಾ (27) ಎಂದು ಗುರುತಿಸಲಾಗಿದೆ. ಜಿಲ್ಲೆಯ ಕಾರ್ಕಳ … Continued