ಬೀದರ : ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ

ಬೀದರ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೀದರ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿಂಬೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜೂನ್ 23ರ ಮಧ್ಯಾಹ್ನ ಮಕ್ಕಳು ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದರು. ಆದರೆ, ಸಂಜೆ 5 ಗಂಟೆಯ ವೇಳೆಗೆ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ, ಶಿಕ್ಷಕರು ಮಕ್ಕಳನ್ನು ಸ್ಥಳೀಯ … Continued

ಇಲೆಕ್ಟ್ರಿಕ್‌ ಕಾರು ತಯಾರಿಕಾ ಘಟಕ ಸ್ಥಾಪನೆ: ರಾಜ್ಯಕ್ಕೆ ಟೆಸ್ಲಾ ಕಂಪನಿ ಆಹ್ವಾನಿಸಿದ ಸಚಿವ ಎಂ.ಬಿ ಪಾಟೀಲ

ಬೆಂಗಳೂರು : ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವುದನ್ನು ಪರಿಗಣಿಸಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಟೆಸ್ಲಾ ಕಂಪನಿಯು ತನ್ನ ಉದ್ಯಮವನ್ನು … Continued

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ; ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಂಚಮಸಾಲಿ ಸಮುದಾಯವನ್ನು 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಜಯ ಮೃತ್ಯುಂಜಯ … Continued

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ –ಜೆಡಿಎಸ್ ಮೈತ್ರಿ ಸುಳಿವು ನೀಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ

ರಾಮನಗರ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಯಂತೆ ಹೆಚ್ಚು ಸ್ಥಾನಗಳನ್ನು ಗೆಲ್ಲಲು ರಾಜ್ಯದಲ್ಲಿ ಬಿಜೆಪಿಯು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹದ ಮಧ್ಯೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಈ ಬಗ್ಗೆ ಸುಳಿವು ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆಯಾಗಬಹುದು. ಜೆಡಿಎಸ್ ಜೊತೆ ಹೊಂದಾಣಿಕೆ ಆಗಬಹುದು. … Continued

ಗೃಹಲಕ್ಷ್ಮೀ ಯೋಜನೆಯನ್ನ ಸದ್ಯಕ್ಕೆ ನಾನೇ ತಡೆಹಿಡಿದಿದ್ದೇನೆ: ಇದಕ್ಕೆ ಕಾರಣ ನೀಡಿದ ಡಿಸಿಎಂ ಡಿಕೆ ಶಿವಕುಮಾರ

ಬೆಂಗಳೂರು: ಗೃಹಿಣಿಯರಿಗೆ 2 ಸಾವಿರ ರೂ. ನೆರವು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ಸದ್ಯಕ್ಕೆ ತಡೆ ಹಿಡಿದಿದ್ದೇನೆ. ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್‌ ಸಮಸ್ಯೆ … Continued

ಪ್ಲಾಸ್ಟಿಕ್ ಡಬ್ಬ ನುಂಗಿ ಹೆಣಗಾಡಿದ ನಾಗರಹಾವು : ಶಸ್ತ್ರಚಿಕಿತ್ಸೆ ನಡೆಸಿ ಡಬ್ಬ ಹೊರತೆಗೆದ ವೈದ್ಯರು; ಕಾಡಿಗೆ ಮರಳಿದ ಹಾವು

ಮಂಗಳೂರು: ಸುಣ್ಣದ ಪ್ಲಾಸ್ಟಿಕ್ ಡಬ್ಬವೊಂದನ್ನು ನುಂಗಿ ಸಂಕಟಪಡುತ್ತಿದ್ದ ನಾಗರಹಾವಿಗೆ ಮಂಗಳೂರಿನ ಯುವ ವೈದ್ಯರೊಬ್ಬರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಹಾವನ್ನು ರಕ್ಷಣೆ ಮಾಡಿದ್ದಾರೆ. ಬಂಟ್ವಾಳದ ವಗ್ಗದಲ್ಲಿರುವ ಸಾಲುಮರ ತಿಮ್ಮಕ್ಕ ಉದ್ಯಾನವನದ ಸಮೀಪದ ಕಾವಳಪಡೂರು ಗ್ರಾಪಂ ಉಪಾಧ್ಯಕ್ಷೆ ವಸಂತಿಯವರ ಮನೆ ಬಳಿ ಇದ್ದ ಬಿಲವೊಂದರಲ್ಲಿ ಸಿಲುಕಿ ಈ ನಾಗರಹಾವು ಹೊರಬರಲು ಹೆಣಗಾಡುತ್ತಿತ್ತು. ಮೂರುದಿನಗಳಿಂದ ಅದನ್ನು ಗಮನಿಸುತ್ತಿದ್ದ ಮನೆಯವರು ಜೂನ್ … Continued

ಮುಂಗಾರು ಮಳೆ ಕಸಿದುಕೊಂಡು ಹೋದ ಬಿಪೋರ್‌ ಜಾಯ್‌ ಚಂಡಮಾರುತ: ಕರ್ನಾಟಕಕ್ಕೆ ಶೇ.71ರಷ್ಟು ಮಳೆ ಕೊರತೆ, ರಾಜಸ್ಥಾನದಲ್ಲಿ 320%ರಷ್ಟು ಹೆಚ್ಚು ಮಳೆ

ಕಳೆದ ವಾರ ಭಾರತದ ಉತ್ತರ ಪಶ್ಚಿಮ ಕರಾವಳಿಗೆ ಅಪ್ಪಳಿಸಿದ ಬಿಪೋರ್‌ ಜಾಯ್ ಚಂಡಮಾರುತವು ಗುಜರಾತ್ ಮತ್ತು ರಾಜಸ್ಥಾನದಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಿದೆ. ಆದರೆ ಇದೇವೇಳೆ ಕರ್ನಾಟಕದಂತಹ ರಾಜ್ಯಗಳಿಗೆ ಬರಬೇಕಿದ್ದ ಮಾನ್ಸೂನ್ ಮಳೆಯನ್ನು ಕಸಿದುಕೊಂಡು ಹೋಗಿದೆ ಹಾಗೂ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯ ಕೊರತೆ ಉಂಟುಮಾಡಿದೆ. ಅಲ್ಲದೆ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಉತ್ತರ … Continued

ಜೊಯಿಡಾ : ಕರಡಿ ವಿರುದ್ಧ ಹೋರಾಡಿ ಜೀವ ಉಳಿಸಿಕೊಂಡ ವೃದ್ಧ: ಕಣ್ಣುಗುಡ್ಡೆಗೆ ಗಂಭೀರ ಗಾಯವಾದರೂ 2 ಕಿಮೀ ನಡೆದು ಬಂದ..!

ಕಾರವಾರ: ೭೦ ವರ್ಷದ ವೃದ್ಧರೊಬ್ಬರ ಮೇಲೆ ಕರಡಿ ದಾಳಿ ಮಾಡಿದ್ದು, ಅವರು ಪವಾಡ ಸದೃಶರೀತಿಯಲ್ಲಿ ಪಾರಾಗಿ ಬಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ತಿಂಬಾಲಿ ಎಂಬ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕರಡಿ ದಾಳಿಯಿಂದ ವೃದ್ಧಿ ಕಣ್ಣುಗುಡ್ಡೆಗೆ ಬಲವಾದ ಏಟುಬಿದ್ದಿದ್ದರೂ  ವೃದ್ಧ 2 ಕಿಮೀ ನಡೆದುಕೊಂಡು ಬಂದಿದ್ದು, ನಂತರ ಆತನನ್ನು ಆಸ್ಪತ್ರೆಗೆ … Continued

ವಿದ್ಯುತ್ ದರ ಏರಿಕೆಗೆ ವಿರೋಧ: ರಾಜ್ಯದ ಹಲವೆಡೆ ವ್ಯಾಪಾರಿಗಳು, ಸಣ್ಣ ಕೈಗಾರಿಕೆಗಳ ಮಾಲೀಕರಿಂದ ಪ್ರತಿಭಟನೆ

ಬೆಂಗಳೂರು: ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ವ್ಯಾಪಾರಿಗಳು ಮತ್ತು ಸಣ್ಣ ಕೈಗಾರಿಕೆಗಳ ಮಾಲೀಕರು ಗುರುವಾರ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನಾ ರ‍್ಯಾಲಿಗಳನ್ನು ನಡೆಸಿದರು. ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ಬಂದ್‌ಗೆ ಕರೆ ನೀಡಿತ್ತು. ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬೆಳಗಾವಿ, ಗದಗ, ಬಳ್ಳಾರಿ ಹಾಗೂ ವಿಜಯನಗರ ಮೊದಲಾದ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಎಫ್​ಕೆಸಿಸಿಐ … Continued

2 ಬಲ್ಬ್‌‌ ಇರುವ ವೃದ್ಧೆ ಮನೆಗೆ ಬರೋಬ್ಬರಿ 1 ಲಕ್ಷ ರೂ. ಕರೆಂಟ್ ಬಿಲ್ ..!

ಕೊಪ್ಪಳ : ಗೃಹಜ್ಯೋತಿ ಯೋಜನೆ ಅಡಿಯಲ್ಲಿ 200 ಯುನಿಟ್‌ ವಿದ್ಯುತ್‌ ಉಚಿತವಾಗಿ ನೀಡಲಾಗುವುದು ಎಂದು ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದ ಹಲವೆಡೆ ಗ್ರಾಹರಕಿಗೆ ಹೆಚ್ಚಿನ ವಿದ್ಯುತ್‌ ಬಿಲ್‌ ಬರುತ್ತಿರುವ ಬಗ್ಗೆ ವರದಿಗಳಾಗುತ್ತಿವೆ. ಈಗ ಕೊಪ್ಪಳದಲ್ಲಿ ಶೆಡ್‌ನಲ್ಲಿ ವಾಸವಾಗಿರುವ ವೃದ್ಧೆಗೆ ಬರೋಬ್ಬರಿ 1ಲಕ್ಷ ರೂಪಾಯಿ ಬಿಲ್‌ ಬಂದಿದೆ…! ಬಿಲ್‌ ಕಂಡು ವೃದ್ಧೆ ಕಂಗಾಲಾಗಿದ್ದಾರೆ. ಕೊಪ್ಪಳದ ಭಾಗ್ಯನಗರದಲ್ಲಿ ಸಣ್ಣ … Continued