ಬೆಂಗಳೂರು : ಎಟಿಎಂಗಳಿಗೆ ತುಂಬಬೇಕಿದ್ದ ಸುಮಾರು 1.40 ಕೋಟಿ ರೂ. ಹಣದೊಂದಿಗೆ ಸಿಬ್ಬಂದಿಯೇ ಪರಾರಿ…!

ಬೆಂಗಳೂರು : ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ದರೋಡೆ ಪ್ರಕರಣದ ನೆನಪು ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ ಎಂದು ವರದಿಯಾಗಿದೆ. ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ಖಾಸಗಿ ನಗದು ನಿರ್ವಹಣಾ ಸಂಸ್ಥೆಯಾದ ಹಿಟಾಚಿ ಕಂಪನಿಯ ಸಿಬ್ಬಂದಿಯೇ ಹಣದೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾದ ಘಟನೆ … Continued

ಪೌರಾಯುಕ್ತೆಗೆ ಧಮ್ಕಿ ; ಕಾಂಗ್ರೆಸ್‌ ಮುಖಂಡ ರಾಜೀವ ಗೌಡ ಬಂಧನ

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತರಾದ ಅಮೃತಾ ಗೌಡ ಅವರಿಗೆ ಧಮ್ಕಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೇರಳದ ಗಡಿಯಲ್ಲಿ ರಾಜೀವ ಗೌಡ ಬಂಧನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಲ್ಟ್‌ ಸಿನೆಮಾದ ಬ್ಯಾನರ್ ತೆರವು ಸಂಬಂಧ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ … Continued

ಉಡುಪಿ : ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮಗುಚಿ ಇಬ್ಬರು ಸಾವು

ಉಡುಪಿ : ವಿಹಾರಕ್ಕೆಂದು ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ದೋಣಿ ಸಮುದ್ರದಲ್ಲಿ ಮಗುಚಿ ಇಬ್ಬರು ಸಾವಿಗೀಡಾದ ಘಟನೆ ಉಡುಪಿ ತಾಲೂಕಿನ ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶಂಕರಪ್ಪ (22) ಸಿಂಧು ( 23) ಎಂದು ಗುರುತಿಸಲಾಗಿದೆ. ಮತ್ತಿಬ್ಬರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಡಿಬೆಂಗ್ರೆ ಬಳಿಯ ಡೆಲ್ಟಾ ಬೀಚ್ ನಿಂದ ಪ್ರವಾಸಿ ಬೋಟ್ ನಲ್ಲಿ … Continued

ರೈಲು ಹತ್ತುವಾಗ ಸಣ್ಣ ಜಗಳಕ್ಕೆ ಕಾಲೇಜು ಪ್ರೊಫೆಸರ್‌ ಗೆ ಚಾಕುವಿನಿಂದ ಇರಿದು ಹತ್ಯೆ

  ಮುಂಬೈ: ಮುಂಬೈನ ರೈಲಿನಲ್ಲಿ  ಸಣ್ಣ ವಿಷಯಕ್ಕೆ ನಡೆದ ಜಗಳ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಮಾಲಾಡ್ ರೈಲ್ವೆ ನಿಲ್ದಾಣದಲ್ಲಿ ಕಾಲೇಜು ಪ್ರೊಫೆಸರ್ ಒಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸರು (GRP) 27 ವರ್ಷದ ಓಂಕಾರ ಶಿಂಧೆ ಎಂಬಾತನನ್ನು ಬಂಧಿಸಿದ್ದಾರೆ. ಹತ್ಯೆಗೀಡಾದವರನ್ನು ವಿಲೆ ಪಾರ್ಲೆಯ ಪ್ರಮುಖ ಕಾಲೇಜೊಂದರ ಪ್ರೊಫೆಸರ್ ಅವರನ್ನು ಅಲೋಕ ಸಿಂಗ್ … Continued

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಶಿರಸಿ: “ಇತ್ತೀಚಿನ ದಿನಗಳಲ್ಲಿ ಪತ್ರಕರ್ತರು ಎಂದು ಹೇಳಿಕೊಂಡು ಅಡ್ಡದಾರಿಯಲ್ಲಿ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಇಂತಹ ನಕಲಿ ಪತ್ರಕರ್ತರನ್ನು ಹೊರಹಾಕಿ, ಸಂಘವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಾಗಿರುವುದು ಇಂದಿನ ಅಗತ್ಯ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ​ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಟಿಆರ್‌ಸಿ ಸಭಾಭವನದಲ್ಲಿ ಭಾನುವಾರ ನಡೆದ ಉತ್ತರ ಕನ್ನಡ ಜಿಲ್ಲಾ … Continued

ಫಾರ್ಮಾಸಿಸ್ಟ್ ಆತ್ಮಹತ್ಯೆ ಪ್ರಕರಣ: ವೀಡಿಯೊ ವೈರಲ್ ಮಾಡಿದ ಮೂವರ ಬಂಧನ

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದಲ್ಲಿ ನಡೆದ ಫಾರ್ಮಾಸಿಸ್ಟ್ ರಾಜೀವ ಪಿಕ್ಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಮಾಡಿದ ಆರೋಪದ ಮೇಲೆ ಅಂಕೋಲಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆಎಂದು ವರದಿಯಾಗಿದೆ. ಕಾರವಾರ ತಾಲೂಕಿನ ವೈಲವಾಡ ಗ್ರಾಮದ ಸುಭಾಷ, ಹರಿಶ್ಚಂದ್ರ ಮತ್ತು ಅನಿಲ ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಕಾರವಾರದ … Continued

ಹುಬ್ಬಳ್ಳಿ | ಮನೆ ಹಂಚಿಕೆ ಸಮಾರಂಭ : ಕಟೌಟ್ ಕುಸಿದು ಬಿದ್ದು ಮೂವರಿಗೆ ಗಾಯ

ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಮೊದಲು ಬೃಹತ್ ಕಟೌಟ್ ಬಿದ್ದು ಮೂವರು ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿಯ ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಲುವೇದಿಕೆಯ ಪಕ್ಕದಲ್ಲೇ ಬೃಹತ್ ಕಟೌಟ್‌ಗಳನ್ನು ನಿಲ್ಲಿಸಲಾಗಿತ್ತು. ಈ ಕಟೌಟ್ ಗಾಳಿಗೆ ಸಿಲುಕಿ ನಿಯಂತ್ರಣ ತಪ್ಪಿ ಜನರ ಮೇಲೆ ಬಿದ್ದಿದೆ. ಕಟೌಟ್ … Continued

ಪೌರಾಯುಕ್ತೆಗೆ ನಿಂದಿಸಿ ಬೆದರಿಕೆ ; ರಾಜೀವ ಗೌಡ ಕಾಂಗ್ರೆಸ್ಸಿನಿಂದ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ. 2026 ಜನವರಿ 23ರಂದು ನಡೆದ ಕೆಪಿಸಿಸಿ … Continued

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ಬೆಂಗಳೂರು : ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶವನ್ನು ಶುಕ್ರವಾರ ರದ್ದುಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ (ಟ್ಯಾಕ್ಸಿ) ಬಳಸಲು ಅಗತ್ಯ ಷರತ್ತುಗಳನ್ನು ವಿಧಿಸಿ ಸರ್ಕಾರ ಅನುಮತಿ ನೀಡಬಹುದು ಎಂದು ಆದೇಶಿಸಿದೆ. ಮೋಟಾರು ವಾಹನಗಳ ಕಾಯಿದೆ 1988ರ ಅನ್ವಯ ಮಾರ್ಗಸೂಚಿ ಮತ್ತು … Continued

ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಅಸ್ತು

 ಬೆಂಗಳೂರು : ರಾಜ್ಯದ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯು ಮಹತ್ವದ ತೀರ್ಮಾನ ಕೈಗೊಂಡಿದೆ. ಈ ವಯೋಮಿತಿ … Continued