ಕನಕಪುರ :ಕಾಡಾನೆ ದಾಳಿಗೆ ಅಕ್ಕ ಸ್ಥಳದಲ್ಲೇ ಸಾವು, ತಂಗಿಗೆ ಗಂಭೀರ ಗಾಯ

ರಾಮನಗರ: ಅಕ್ಕ-ತಂಗಿ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಅಕ್ಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಹಾಗೂ ತಂಗಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಕ್ಕ ಜಯಮ್ಮ (೫೦)ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತಂಗಿ ವೆಂಕಟಲಕ್ಷ್ಮಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದು ಕನಕಪುರ … Continued

ವೀಡಿಯೊ: 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿ ರಕ್ಷಣೆ ಮಾಡಿದ ಪೇಜಾವರ ಸ್ವಾಮೀಜಿ | ವೀಕ್ಷಿಸಿ

ಉಡುಪಿ ಮಠದ ಪೇಜಾವರ ಶ್ರೀಗಳು ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯ ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬೆಕ್ಕನ್ನು ರಕ್ಷಿಸಲು ಸ್ವತಃ ಸ್ವಾಮೀಜಿ ಬಾವಿಗೆ ಇಳಿದಿರುವುದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ನಗರದ ಹೊರವಲಯದಲ್ಲಿರುವ ಮುಚ್ಲಕೋಡು ದೇವಸ್ಥಾನಕ್ಕೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು (Pejawar Sri) ಭೇಟಿ ಮಾಡಿದ್ದರು. ಆಗ ಅಲ್ಲಿ … Continued

ಚಿಂಚೋಳಿ : ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಲಬುರಗಿ: ಇಂದು (ಜೂನ್ 18) ಅಪ್ಪಂದಿರ ದಿನವೇ ತಂದೆ ಇಬ್ಬರು ಮಕ್ಕಳನ್ನು ಹಗ್ಗದಿಂದ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿ ಗ್ರಾಮದಲ್ಲಿ ನಡೆದ ವರದಿಯಾಗಿದೆ. ಚಿಂಚೋಳಿ ತಾಲೂಕಿನ ಗಡಿ ಗ್ರಾಮ ಕುಂಚಾವರಂ ಬಳಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ … Continued

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22ರಂದು ಕರ್ನಾಟಕ ಬಂದ್‌ ಗೆ ಕರೆ

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಕೆಸಿಸಿ&ಐ) ರಾಜ್ಯದಲ್ಲಿ ವಿದ್ಯುತ್ ಶುಲ್ಕ ಹೆಚ್ಚಳ ವಿರೋಧಿಸಿ ಜೂನ್ 22 ರಂದು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದೆ. ಹೊಸ ವಿದ್ಯುತ್ ಶುಲ್ಕದ ಮೇಲಿನ ಪರಿಣಾಮದ ಬಗ್ಗೆ ಸರ್ಕಾರಕ್ಕೆ ತಿಳಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಲು ನಿರ್ಧರಿಸಲಾಗಿದೆ ಎಂದು ಒಕ್ಕೂಟ ತಿಳಿಸಿದೆ. ವಿದ್ಯುತ್ … Continued

ತೀರ್ಥಹಳ್ಳಿ : ತುಂಗಾ ನದಿಗೆ ಈಜಲು ತೆರಳಿದ್ದ ಇಬ್ಬರು ಉಪನ್ಯಾಸಕರು ನೀರುಪಾಲು

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯಲ್ಲಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಖಾಸಗಿ ಕಾಲೇಜಿನ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಈ ಘಟನೆ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ … Continued

ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭ : ಮೊಬೈಲ್‌ನಲ್ಲೂ ನೋಂದಣಿ ಸೌಲಭ್ಯ, ಇಲ್ಲಿದೆ ಲಿಂಕ್‌, 2 ದಾಖಲೆ ಅಗತ್ಯ

ಬೆಂಗಳೂರು: ರಾಜ್ಯ ಸರ್ಕಾರದ ಮಾಸಿಕ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಸೌಲಭ್ಯ ಕಲ್ಪಿಸುವ ‘ಗೃಹ ಜ್ಯೋತಿ’ ಯೋಜನೆಗೆ ಫಲಾನುಭವಿಗಳ ನೋಂದಣಿ ಇಂದಿನಿಂದ (ಜೂನ್‌ 18) ಆರಂಭವಾಗಲಿದೆ. ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ವಿಶೇಷವಾಗಿ ರೂಪಿಸಲಾಗಿರುವ ವೆಬ್‌ಪುಟಕ್ಕೆ ಲಾಗಿನ್‌ ಆಗಬೇಕು. ಆ ಪೋರ್ಟಲ್‌ನಲ್ಲಿ ಕೇಳಿರುವ ಮಾಹಿತಿಯನ್ನು ನೀಡುವ ಮೂಲಕ ಯೋಜನೆಗೆ ಹೆಸರು ನೋಂದಾಯಿಸಬಹುದು. … Continued

ಶಾಲಾ ಪಠ್ಯಪುಸ್ತಕ ಪರಿಷ್ಕರಿಸಿ ಅಧಿಕೃತ ಆದೇಶ : ಈ ಪದ್ಯಗಳು-ಗದ್ಯಗಳು ಬದಲು/ಮಾರ್ಪಾಡು

ಬೆಂಗಳೂರು: ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಹಾಗೂ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡಬೇಕಾದ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡ ಭಾಷಾ ಪುಸ್ತಕದಲ್ಲಿ 9 ಪಾಠ ಕೈ ಬಿಡಲಾಗಿದೆ. ಸಮಾಜ ವಿಜ್ಞಾನದಲ್ಲಿ 9 ಪಾಠಗಳಿಗೆ ಕೊಕ್ ನೀಡಲಾಗಿದೆ. 6ನೇ ತರಗತಿಯ ಪ್ರಥಮ … Continued

ಇಂದಿನ ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ ಸಾಕಾಗಿದೆ : ಸಂಸದ ಡಿ.ಕೆ.ಸುರೇಶ

ರಾಮನಗರ : ಮುಂಬರುವ ಲೋಕಸಭಾ ಚುನಾವಣೆಗೆ ನಿಲ್ಲುವ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಕಾರ್ಯಕರ್ತರು, ಮುಖಂಡರ ಸಲಹೆ ಪಡೆದ ನಂತರ ನಿರ್ಧಾರ ತೆಗೆದುಕೊಳ್ಳುತ್ತೇನೆ. ಯಾರೂ ಸೂಕ್ತ ಎಂದು ಅವರು ತೀರ್ಮಾನ ಮಾಡಿದರೆ ಅವರಿಗೆ ಬೆಂಬಲ ನೀಡುತ್ತೇನೆ. ರಾಜಕೀಯ ಸಾಕಾಗಿದೆ ಎಂದು ಸಂಸದ ಡಿ.ಕೆ. ಸುರೇಶ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ರಾಜಕೀಯ … Continued

ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ: ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪನೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನಸುಖ್‌ ಮಾಂಡವೀಯ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ಶನಿವಾರ ಪತ್ರ ಬರೆದಿರುವ ಅವರು,‌ “ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ … Continued