ನಾಳೆಯಿಂದ ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ

ಬೆಂಗಳೂರು: ನಾಳೆಯಿಂದ (ಜೂನ್‌ 1) 15 ದಿನಗಳೊಳಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡಲು ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 1ರಿಂದ 15ರೊಳಗೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸಿದೆ. ಗ್ರೂಪ್ ಎ, ಬಿ, ಸಿ, ಡಿ ಅಧಿಕಾರಿಗಳು, ನೌಕರರಿಗೆ ಅನ್ವಯವಾಗುವಂತೆ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು … Continued

ಬೆಳಗಾವಿ ಜಿಲ್ಲಾ ವಿಭಜನೆಗೆ ನಾವು ಬದ್ಧ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ : ನಾವು ಬೆಳಗಾವಿ ಜಿಲ್ಲಾ ವಿಭಜನೆಗೆ ಬದ್ಧರಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳಗಾವಿ ವಿಭಜನೆಗೆ ನಾವು ಬದ್ಧರಿದ್ದೇವೆ. ಬೆಳಗಾವಿ ಜಿಲ್ಲೆ ದೊಡ್ಡದಿರುವುದರಿಂದ ವಿಭಜನೆ ಆಗಬೇಕು. ಜಿಲ್ಲಾ ವಿಭಜನೆ ಬಗ್ಗೆ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದರು. ಜಿಲ್ಲೆಯನ್ನು ಮೂರು … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ ಮಾಡಿದ ರಾಜ್ಯದ ನೂತನ ಸರ್ಕಾರ

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ. 4ರಷ್ಟು ಹೆಚ್ಚಿಸಿ ಆದೇಶಿಸಿದೆ. ಈ ಕುರಿತು ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರುಗಳಿಗೆ ಈ ವರ್ಷದ ಜನವರಿ 1ರಿಂದ ಜಾರಿಗೆ … Continued

ಶಾಸಕ ಡಾ. ಅಶ್ವತ್ಥ ನಾರಾಯಣಗೆ ರಿಲೀಫ್: ಅವರ ವಿರುದ್ಧದ ತನಿಖೆಗೆ 4 ವಾರ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : “ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು” ಎಂದು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಾಲ್ಕು ವಾರ ತನಿಖೆಗೆ ತಡೆ ನೀಡಿ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ. ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು … Continued

ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿಕೆ

ಬೆಂಗಳೂರು: ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಎಲ್ಲಾ ಮಹಿಳೆಯರೂ ಉಚಿತ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು, ಮಂಗಳವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರಿ ಬಸ್ಸು​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಸಾರಿಗೆ … Continued

ಮದುವೆಯಾಗಲು ನಿರಾಕರಿಸಿದ್ದ ಪ್ರಿಯಕರನನ್ನು ರೂಮಿಗೆ ಕರೆಯಿಸಿಕೊಂಡು ಬಿಸಿ ನೀರು ಎರಚಿದ ಮಹಿಳೆ

ಬೆಂಗಳೂರು: ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರಿಯತಮನ ಮೇಲೆ ಮಹಿಳೆಯೊಬ್ಬರು ಬಿಸಿ ನೀರು ಎರಚಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ವರದಿಯಾಗಿದೆ. ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ವರದಿಯಾಗಿದೆ. ಬೆಂಗಳೂರಿನಲ್ಲಿ ಕೆಲಸಕ್ಕೆ ಬಂದಿದ್ದ ಕಲಬುರಗಿ ಜಿಲ್ಲೆಯ ಭೀಮಾಶಂಕರ ಆರ್ಯ ಅವರಿಗೆ ಅಫ್ಜಲ್ಪುರದ ದೇಸಾಯಿ ಕಲ್ಲೂರಿನ  ಮಹಿಳೆ ಪರಿಚಯವಾಗಿದ್ದು, ಬಳಿಕ ಇಬ್ಬರ ಮಧ್ಯೆ ಪ್ರೀತಿ … Continued

ಕಾಂಗ್ರೆಸ್‌ನ ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ : ಜೂನ್‌ 1ರಂದು ಮಾರ್ಗಸೂಚಿ ಬಿಡುಗಡೆ ನಿರೀಕ್ಷೆ

ಬೆಂಗಳೂರು : ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ಧತೆ ನಡೆದಿದ್ದು, ಜೂನ್‌ 1ರಂದು ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಕ್ತಿಭವನದಲ್ಲಿ ಗ್ಯಾರಂಟಿ ಅನುಷ್ಠಾನ ಸಂಬಂಧ ಹಣಕಾಸು ಮತ್ತಿತರ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿ ಎರಡು ದಿನಗಳಲ್ಲಿ ಮಾರ್ಗಸೂಚಿ ಸಿದ್ಧಪಡಿಸಲು ಸೂಚನೆ ನೀಡಿದ್ದಾರೆ. ಐದು ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ಕನಿಷ್ಠ 50 … Continued

ತಿ.ನರಸೀಪುರ ಬಳಿ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರದ ಮೂಗೂರಿನ ಬಳಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬಳ್ಳಾರಿ ಮೂಲದ 10 ಜನರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ” ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ … Continued

“ನಾನು ನಿರೀಕ್ಷಿಸಿರಲಿಲ್ಲ…”: ನೂತನ ಸಂಸತ್ತಿನ ಉದ್ಘಾಟನೆಗೆ ಸಾಕ್ಷಿಯಾಗಿದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ನವದೆಹಲಿಯಲ್ಲಿ ಭಾನುವಾರ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಹೇಳಿದ್ದಾರೆ. 91 ವರ್ಷ ವಯಸ್ಸಿನ ದೇವೇಗೌಡ ಅವರು, ನಾನು ತನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ ಎಂದು ಹೇಳಿದ್ದಾರೆ. … Continued

ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಜೂನ್ 1ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇಂದು (ಮೇ 29, ಸೋಮವಾರ) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದರಡು ಕಡೆಗಳಲ್ಲಿ … Continued