ಗುದನಾಳದಲ್ಲಿ 36 ಲಕ್ಷ ರೂ. ಮೌಲ್ಯದ ಚಿನ್ನ ಬಚ್ಚಿಟ್ಟು ಕಳ್ಳ ಸಾಗಣೆ

ಮಂಗಳೂರು: 36 ಲಕ್ಷ ರೂ. ಮೌಲ್ಯದ 706 ಗ್ರಾಂ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಶುಕ್ರವಾರ (ಮಾರ್ಚ್ 18) ಬಂಧಿಸಿದ್ದಾರೆ. ದುಬೈಯಿಂದ ಬಂದಿದ್ದ ವ್ಯಕ್ತಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಬಂದಿದ್ದ. ಆತನ ಬಳಿ 24 ಕ್ಯಾರೆಟ್ ನ 706 ಗ್ರಾಂ ಚಿನ್ನ ಪತ್ತೆಯಾಗಿದ್ದು, … Continued

ಅಸಾನಿ ಚಂಡ ಮಾರುತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ-ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಅಸಾನಿ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಅದರ ಪ್ರಭಾವದಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 20ರಂದು ಭಾರತದ ಕೆಲ ರಾಜ್ಯಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಮುಂದಿನ 5 ದಿನಗಳಲ್ಲಿ ಕೇರಳ, … Continued

ಶಿರಸಿ ಮಾರಿಕಾಂಬಾ ಜಾತ್ರೆ: ನಿನ್ನೆ ಗಾಳಿ ಮಳೆಗೆ ಜಾತ್ರೆಪೇಟೆ ಅಸ್ತವ್ಯಸ್ಥ…ಇಂದು ಕಾಲಿಡಲಾಗದಷ್ಟು ಜನ..!

ಶಿರಸಿ: ನಿನ್ನೆ, ಶುಕ್ರವಾರ ಗಾಳಿಮಳೆಯಿಂದ ಅಸ್ತವ್ಯಸ್ಥವಾಗಿದ್ದ ರಾಜ್ಯದ ಅತಿದೊಡ್ಡ ಜಾತ್ರೆಯಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ಜಾತ್ರೆಗೆ ಶನಿವಾರ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ದೇವಿ ದರ್ಶನಕ್ಕೆ ಭಾರೀ ಸರತಿ ಸಾಲು ನಿರ್ಮಾಣವಾಗಿತ್ತು.ಇಲ್ಲಿನ ಬಿಡಕಿ ಬೈಲಿನ ದೇವಿ ಗದ್ದುಗೆ ಬಳಿ ಬೆಳ್ಳಂಬೆಳಗ್ಗೆಯೇ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. … Continued

ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಕಲಿಸಲು ವಿರೋಧವಿಲ್ಲ: ಸಿದ್ದರಾಮಯ್ಯ

ಮಂಗಳೂರು: ಮಕ್ಕಳಿಗೆ ನೈತಿಕ ಶಿಕ್ಷಣ ನೀಡಲು ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಪರಿಚಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಕ್ರಮಕ್ಕೆ ನಮ್ಮ ಪಕ್ಷದ ವಿರೋಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದೊಗೆ ಮಾತನಾಡಿದ ಅವರು, ನಾನು ಭಗವದ್ಗೀತೆಯ ವಿರೋಧಿಯಲ್ಲ. ಶಾಲೆಗಳಲ್ಲಿ ಭಗವದ್ಗೀತೆ, ಖುರಾನ್ ಮತ್ತು … Continued

ಭಗವದ್ಗೀತೆ ಓದಿ ಭಯೋತ್ಪಾದಕರಾದ ಉದಾಹರಣೆ ಇಲ್ಲ: ಸಿ.ಟಿ. ರವಿ

ಚಿಕ್ಕಮಗಳೂರು : ಭಗವದ್ಗೀತೆ ಓದಿದವರು ಭಯೋತ್ಪಾದಕರಾಗಿಲ್ಲ, ಬದಲಾಗಿ ಜೀವನದಲ್ಲಿ ಸಾರ್ಥಕತೆ ಮೆರೆದಿದ್ದಾರೆ. ಈ ಗ್ರಂಥವು ಉತ್ತಮ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಕುರಿತು ಶನಿವಾರ ಪ್ರತಿಕ್ರಿಯಿಸಿದ ಅವರು, ಭಗವದ್ಗೀತೆ ಓದಿ ಭಯೋತ್ಪಾದಕರಾದ ಉದಾಹರಣೆ ಇಲ್ಲ ಎಂದು ತಿಳಿಸಿದರು. ಭಗವದ್ಗೀತೆ ಯಾರಿಗೂ … Continued

ರಾಜ್ಯದಲ್ಲಿಯೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಸಮರ್ಥನೆ

ಯಾದಗಿರಿ: ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಕೆ ಮಾಡುವುದರಿಂದ ಮಕ್ಕಳಲ್ಲಿ ನೈತಿಕತೆ ಪ್ರಜ್ಞೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಹ್ಯಾಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿರುವ ಬಗ್ಗೆ ನಮ್ಮ ಸಚಿವರು ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಇದು ಮಕ್ಕಳಲ್ಲಿ … Continued

ಖಾಸಗಿ ಬಸ್​ ಪಲ್ಟಿ: 5 ಮಂದಿ ಸಾವು, 25ಕ್ಕೂ ಹೆಚ್ಚು ಜನರಿಗೆ ಗಾಯ

ತುಮಕುರು: ಖಾಸಗಿ ಬಸ್ ಪಲ್ಟಿಯಾಗಿ 5 ಮಂದಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಳವಳ್ಳಿ ಕಟ್ಟೆ ಮೇಲೆ ನಡೆದಿದೆ. ಶನಿವಾರ ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಈ ಅಪಘಾತದಲ್ಲಿ5 ಮಂದಿ ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. … Continued

ಸಿದ್ದಾಪುರ: ಗಾಳಿ ರಭಸಕ್ಕೆ ಉರುಳಿದ ತೆಂಗಿನ ಮರ-ನಾಲ್ವರಿಗೆ ಗಾಯ

ಸಿದ್ದಾಪುರ: ಭಾರಿ ಗಾಳಿಯಿಂದಾಗಿ ಮನೆ ಮೇಲೆ ತೆಂಗಿನ ಮರ ಬಿದ್ದು ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಡಕೇರಿಯಲ್ಲಿ ಶುಕ್ರವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಮನೆಯ ಪಕ್ಕದಲ್ಲಿ ಅಡಿಕೆ ಸಸಿ ಬೆಳೆಸಲು ಪ್ಲಾಸ್ಟಿಕ್‌ ಕವರಿನಲ್ಲಿ ಮಣ್ಣು ತುಂಬುತ್ತಿರುವ ಸಮಯದಲ್ಲಿ ಜೋರಾಗಿ ಗಾಳಿ ಬೀಸಿದ್ದರಿಂದ ತೆಂಗಿನ ಮರ ಬಿದ್ದಿದೆ. ಮರ ಬಿದ್ದ … Continued

ಪುನೀತರಾಜಕುಮಾರಗೆ ಮರಣೋತ್ತರವಾಗಿ ಸಹಕಾರ ರತ್ನ ಪ್ರಶಸ್ತಿ ಘೋಷಣೆ

ಬೆಂಗಳೂರು: ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತರಾಜ್‍ಕುಮಾರ್‌ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ನಂತರ ಈಗ ಮರಣೋತ್ತರವಾಗಿ ಸಹಕಾರ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡುವ ಸಹಕಾರ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನಟ ಪುನೀತರಾಜ್‌ಕುಮಾರ್‌ ಅವರಿಗೆ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್. ಟಿ. ಸೋಮಶೇಖರ … Continued

ಗಾಳಿಮಳೆಗೆ ಶಿರಸಿ ಮಾರಿಕಾಂಬಾ ಜಾತ್ರೆ ಅಸ್ತವ್ಯಸ್ಥ: ಹಾರಿಬಿದ್ದ ಜಾತ್ರಾ ಚಪ್ಪರ-ಅಂಗಡಿಗಳ ತಗಡುಗಳು, ಅಮ್ಯೂಸ್‌ಸ್ಮೆಂಟ್‌ ಪಾರ್ಕ್‌ ಬಂದ್‌..ವೀಕ್ಷಿಸಿ

ಶಿರಸಿ :ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಭಾರೀ ಗಾಳಿ ಮಳೆಗೆ ನಗರದಲ್ಲಿ ನಡೆಯುತ್ತಿರುವ ರಾಜ್ಯದ ದೊಡ್ಡ ಜಾತ್ರೆ ಮಾರಿಕಾಂಬೆ ಜಾತ್ರೆ ಪೇಟೆ ಕೆಲ ಕಾಲ ಅಸ್ತವ್ಯಗೊಂಡ ಘಟನೆ ಶುಕ್ರವಾರ ಸಂಜೆ ನಡೆಯಿತು. ಯಾವುದೇ ಮುನ್ಸೂಚನೆ ಇಲ್ಲದೆ ದಿಢೀರ್‌ ಬಂದ ಗಾಳಿ ಮಳೆಗೆ ಆತಂಕಗಳಿಗೆ ಸಾಕ್ಷಿಯಾಯಿತು. ಶುಕ್ರವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಜಾತ್ರೆ … Continued