ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಏಪ್ರಿಲ್ 27ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿದೆ. ಪುನರಾವರ್ತಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಹೊರಡಿಸಿರುವ ಸುತ್ತೋಲೆಯಲ್ಲಿ, ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ … Continued

ರಾಜ್ಯದಲ್ಲಿ ನಿಧಾನವಾಗಿ ಏರುತ್ತಿದೆ ಕೊರೊನಾ ಸೋಂಕು

ಬೆಂಗಳೂರು: ಕೊರೊನಾ ಸಾಂಕ್ರಾಮಿಕ (Covid-19) ರೋಗ ರಾಜ್ಯದಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೇ 367 ಹೊಸ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು 2070 ಸಕ್ರಿಯ ಪ್ರಕರಣಗಳಿದ್ದು, ವಾರದ ಧನಾತ್ಮಕ ಪ್ರಮಾಣ ಪ್ರಮಾಣ 3.52ರಷ್ಟಿದೆ. ದೈನಂದಿನ ಧನಾತ್ಮಕ ಪ್ರಮಾಣ … Continued

ಲಂಚ ಪ್ರಕರಣ: ಮಾಡಾಳು ಪ್ರಶಾಂತಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್) ಟೆಂಡರ್ ಕಾರ್ಯಾದೇಶ ನೀಡಲು ಲಂಚ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಶಾಸಕ ಕೆ.ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಎಂ.ವಿ. ಪ್ರಶಾಂತ ಅವರಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿಯೂ … Continued

ಕರ್ನಾಟಕ ವಿಧಾನಸಭೆ ಚುನಾವಣೆ: 3,044 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧ; 5 ಕ್ಷೇತ್ರಗಳ ಪರಿಶೀಲನೆ ಬಾಕಿ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ 4989 ನಾಮಪತ್ರಗಳ ಪೈಕಿ 3044 ಅಭ್ಯರ್ಥಿಗಳ ನಾಮಪತ್ರ ಅಂಗೀಕೃತಗೊಂಡಿದೆ. ಆದರೆ ಇನ್ನು ಐದು ಕ್ಷೇತ್ರಗಳ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆಗೆ ಬಾಕಿ ಉಳಿದಿದೆ. ಚುನಾವಣಾ ‌ಆಯೋಗ ಶುಕ್ರವಾರ 3 ಗಂಟೆಯ ವರೆಗೆ ನಾಮಪತ್ರ ಪರಿಶೀಲನೆ ನಡೆಸಿತ್ತು. 4,989 ನಾಮಪತ್ರಗಳ ಪೈಕಿ 4,607 ಪುರುಷರು ಹಾಗೂ 381 ಮಹಿಳಾ ಅಭ್ಯರ್ಥಿಗಳು … Continued

ಹೊನ್ನಾವರ: ಬೋನಿಗೆ ಬಿದ್ದ ಅಪರೂಪದ ಕಪ್ಪು ಚಿರತೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರು ಗ್ರಾಮದ ಜಡ್ಡಿಗದ್ದೆಯಲ್ಲಿ ಆತಂಕಕ್ಕೆ ಕಾರಣವಾಗಿದ್ದ ಕಪ್ಪು ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಬಂಧಿಯಾಗಿದೆ. ಹೊನ್ನಾವರ ತಾಲೂಕಿನ ವಂದೂರು ಜಡ್ಡಿಗದ್ದೆ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಇದು ಮೇಯಲು ಹೋಗುವ ಆಕಳು ಹಾಗೂ ಮನೆಯಂಗಳದಲ್ಲಿನ ನಾಯಿಗಳನ್ನು ಹೊತ್ತೊಯ್ದಿತ್ತು ಎಂದು ಹೇಳಲಾಗಿದೆ. ಉಪಟಳ ನೀಡುತ್ತಿದ್ದ ಚಿರತೆ ರೆ ಹಿಡಿಯಲು … Continued

ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಇಲ್ಲ ಅನುಮತಿ : ಅರ್ಜಿ ವಜಾಗೊಳಿಸಿದ ಹೈಕೋರ್ಟ್​​

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್​ ನಾಯಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ತಾನು ಚುನಾವಣೆಗೆ ಸ್ಪರ್ಧಿಸಿದ್ದರಿಂದ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ವಿನಯ​ ಕುಲಕರ್ಣಿ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ 30 … Continued

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರಗೆ ಬಿಗ್‌ ರಿಲೀಫ್‌: ನಾಮಪತ್ರ ಅಂಗೀಕಾರ

ರಾಮನಗರ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ನಾಮಪತ್ರ ಅಂಗೀಕಾರವಾಗಿದೆ. ನಾಮಪತ್ರ ಪರಿಶೀಲನೆ ಇಂದು, ಶುಕ್ರವಾರ (ಏಪ್ರಿಲ್ 21) ನಡೆಯುತ್ತಿದ್ದು, ಭಾರೀ ಕುತೂಹಲ ಕೆರಳಿಸಿದ್ದ ಕನಕಪುರ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಚುನಾವಣಾಧಿಕಾರಿಗಳು ಅನುಮೋದಿಸಿದ್ದಾರೆ. ಅವರು … Continued

ಶ್ಯಾಂಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ: ರಾಘವೇಶ್ವರ ಶ್ರೀ, ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಆರೋಪ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಶ್ಯಾಮಪ್ರಸಾದ ಶಾಸ್ತ್ರೀ ಆತ್ಮಹತ್ಯೆಗೀಡಾಗಲು ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ರಾಘವೇಶ್ವರ ಶ್ರೀಗಳ ವಿರುದ್ಧ ಹಲವು ಪ್ರಕರಣಗಳು ಮುನ್ನಲೆಗೆ ಬಂದ ಸಂದರ್ಭದಲ್ಲೇ … Continued

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಶೇ. 74.64 ಮಂದಿ ಉತ್ತೀರ್ಣ, ಫಲಿತಾಂಶದಲ್ಲಿ ಕರಾವಳಿ ಜಿಲ್ಲೆಗಳ ಮೇಲುಗೈ

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು(ಏಪ್ರಿಲ್ 21) ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಫಲಿತಾಂಶ ಬಿಡುಗಡೆ ಮಾಡಿದ್ದು, ಶೇ. 74.64ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಹಾಗೂ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಕವಾಣಿಜ್ಯ ವಿಭಾಗದಲ್ಲಿ ಅನನ್ಯಾ … Continued

ಖಾನಾಪುರ: ವಾಹನ ಡಿಕ್ಕೆ ಹೊಡೆದು ಇಬ್ಬರು ಸಾವು, ಇಬ್ಬರಿಗೆ ಗಾಯ

ಬೆಳಗಾವಿ: ಗುರುವಾರ ಮಧ್ಯರಾತ್ರಿ ವಾಹನ ಹಾಯ್ದು ಇಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗೋದೊಳ್ಳಿ ಗ್ರಾಮದ ಬಳಿ ಸಂಭವಿಸಿದೆ. ಗೋಧೋಳಿ ಗ್ರಾಮದ ಮಹಾಬಲೇಶ್ವರ ಶಿಂಧೆ( 65), ಪುಂಡಲೀಕ ರೇಡೇಕಾರ (72 ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪುಂಡಲೀಕ ಅವರ ಹಿರಿಯ ಸಹೋದರ ಕೃಷ್ಣ ರೇಡೇಕರ (74) ಗಾಯಗೊಂಡು ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಜುನಾಥ … Continued