ಸಂಚಾರ ನಿಯಮ ಉಲ್ಲಂಘನೆ: ರಾಜ್ಯದಲ್ಲಿ 3 ವರ್ಷದಲ್ಲಿ ಸಂಗ್ರಹಿಸಿದ ಹಣವೆಷ್ಟು ಗೊತ್ತಾ..?

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘನೆ ಪ್ರಕರಣಗಳಿಂದ ಕಳೆದ ಮೂರು ವರ್ಷದಲ್ಲಿ 660.97 ಕೋಟಿ ರೂ.ಗಳ ದಂಡ ಸಂಗ್ರಹಿಸಲಾಗಿದೆ…! ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ ಈ ಮಾಹಿತಿ ನೀಡಿದ್ದಾರೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಪ್ರಕರಣಗಳಿಂದ ಸಂಗ್ರಹಿಸಲಾದ … Continued

ಸದ್ಯದಲ್ಲೇ ಪುನೀತ್‌ ರಾಜಕುಮಾರಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

ಬೆಂಗಳೂರು: ಸದ್ಯದಲ್ಲೇ ಪುನೀತ್ ರಾಜ್‌ಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರ್.ಟಿ.ನಗರದ ತಮ್ಮ ನಿವಾಸದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡಿದೆ. ಸದ್ಯದಲ್ಲೇ ಕುಟುಂಬದ ಜೊತೆಗೆ ಚರ್ಚಿಸಿ ಕರ್ನಾಟಕ ರತ್ನ ಪ್ರಶಸ್ತಿ … Continued

ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆಗೆ ಅವಕಾಶವಿಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಿದ್ದರೆ ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಅನಗತ್ಯ ವಿವಾದ ಸೃಷ್ಟಿಸುವವರ ವಿರುದ್ಧ … Continued

ಕ್ಯಾಮರಾ ಮುಂದೆ ಮೂರು ನಾಗರ ಹಾವುಗಳೊಂದಿಗೆ ಯುವಕನ ಆಟ: ಸಿಟ್ಟಿಗೆದ್ದು ಕಚ್ಚಿದ ಹಾವು..!

ನಾಗರ ಹಾವಿನೊಂದಿಗ ಆಟವೆಂದರೆ ಜೀವವನ್ನು ಪಣಕ್ಕಿಡುವುದು ಎಂದು ಹೇಳುತ್ತಾರೆ. ಇಲ್ಲೊಬ್ಬ ಯುವಕ ಮೂರು ನಾಗರಹಾವಿನೊಂದಿಗೆ ಆಟವಾಡಿದ್ದಾನೆ. ಕೊನೆಗೆ ಒಂದು ಹಾವು ಆತನ ಕಾಲಿಗೆ ಕಚ್ಚಿಕೊಂಡಿರುವ ಭಯಾನಕ ವೀಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಯುವಕ ಮೂರು ನಾಗರ ಹಾವುಗಳ ಎದುರು ಕುಳಿತು ಆಟವಾಡಿದ ಯುವಕ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾಜ್ ಸಯೀದ್ … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ.. ವೇತನ ಆಯೋಗ ರಚನೆ; ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಆಯೋಗ ರಚನೆ ವೇತನ ಆಯೋಗ ರಚನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರಿ ನೌಕರರ ವೇತನಕ್ಕೆ ಸಮನಾಗಿ ರಾಜ್ಯ ಸರಕಾರಿ ನೌಕರರಿಗೆ ವೇತನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರಿ ನೌಕರರ ಸಮಾನ ವೇತನ ಆಯೋಗ ರಚನೆ ಮಾಡಲಾಗುತ್ತದೆ … Continued

ಅಪಘಾತಕ್ಕೀಡಾಗಿ ಹೊತ್ತಿ ಉರಿದ ಟಿಪ್ಪರ್, ಚಾಲಕ ಸಜೀವ ದಹನ

ಮಂಡ್ಯ : ಮದ್ದೂರು ಪಟ್ಟಣದಲ್ಲಿನ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಚಾಲಕನ ಸಮೇತ ಟಿಪ್ಪರ್​ ಲಾರಿ ಸುಟ್ಟು ಕರಕಲಾಗಿರುವ ಘಟನೆ ಗುರುವಾರ ಮಾ.17ರ ಬೆಳಿಗ್ಗೆ ನಡೆದಿದೆ. ಮದ್ದೂರು ಪಟ್ಟಣದ ಬೆಂಗಳೂರು – ಮೈಸೂರು ಎಲ್ಐಸಿ ಕಚೇರಿ ಮುಂಭಾಗ ಘಟನೆ ನಡೆದಿದ್ದು, ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಎಲ್‌ಐಸಿ ಕಚೇರಿ ಬಳಿ ಬರುತ್ತಿದ್ದಂತೆ ಪಂಚರ್ … Continued

ಶಿರಸಿ ಜಾತ್ರಾ ವೈಭವ: ಗದ್ದುಗೆಯಲ್ಲಿ ವಿರಾಜಮಾನಳಾದ ಮಾರಿಕಾಂಬೆ … ವೀಕ್ಷಿಸಿ

ಶಿರಸಿ: ಕರ್ನಾಟಕದ ಅತಿದೊಡ್ಡ ಜಾತ್ರೆ ಎಂದು ಪ್ರಸಿದ್ದಿ ಪಡೆದಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಎರಡನೇ ದಿನವಾದ ಇಂದು ಲಕ್ಷಾಂತರ ಭಕ್ತರ ನಡುವೆ ಮಾರಿಕಾಂಬಾ ದೇವಿ ಮಾರಿಗುಡಿಯಿಂದ ರಥದಲ್ಲಿ ಗದ್ದುಗೆಗೆ ಬಂದು ವಿರಾಜಮಾನಳಾಗಿದ್ದಾಳೆ. ನೂರಾರು ವರ್ಷಗಳ ಇತಿಹಾಸವಿರುವ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆ ಎರಡು ವರ್ಷಕ್ಕೊಮ್ಮೆ ಒಂಬತ್ತು ದಿನಗಳ … Continued

ಲಾಡ್ಜ್​ನಲ್ಲಿ ಹೆಂಡ್ತಿ ಕಾಲನ್ನೇ ಕಡಿದ ಗಂಡ.. ನಂತ್ರ ಮಾಡಿದ ಬೃಹನ್ನಾಟಕ..!

ತುಮಕೂರು: ಲಾಡ್ಜ್​ನಲ್ಲಿ ರೂಂ ಮಾಡಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕಾಲನ್ನೇ ಕತ್ತರಿಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ನಂತರ ತನ್ನ ಹೊಟ್ಟೆಗೆ ತಾನೇ ಚಾಕುವಿನಿಂದ ಇರಿದುಕೊಂಡಿದ್ದಾನೆ ಎಂದು ಹೇಳಲಾಗಿದೆ. ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್​ನಲ್ಲಿ ಬುಧವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಗದಗ ಮೂಲದ ಬಾಬು (34) ಎಂಬಾತ ಪತ್ನಿಯ ಕಾಲು ಕತ್ತರಿಸಿದ್ದು, ಈಗ … Continued

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ನಿರಾಕರಣೆ: 9 ಮಂದಿ ಮನೆಗೆ ವಾಪಸ್

ಉಡುಪಿ: ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ಮಂದಿ ವಿದ್ಯಾರ್ಥಿನಿಯರಿಗೆ ಕಾಲೇಜು ಪರೀಕ್ಷೆಗೆ ಪ್ರವೇಶಿಸಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಒಂಬತ್ತು ವಿದ್ಯಾರ್ಥಿನಿಯರು ಮನೆಗೆ ಹಿಂತಿರುಗಿದ್ದಾರೆ ಎಂದು ವರದಿಯಾಗಿದೆ. ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿರಿಸಿ ತರಗತಿಗೆ ತೆರಳಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದ … Continued

ಹಿಜಾಬ್ ನಿಷೇಧ ಪ್ರಶ್ನಿಸಿದ ಮೇಲ್ಮನವಿಯ ತುರ್ತು ವಿಚಾರಣೆಗೆ ನಕಾರ, ಹೋಳಿ ನಂತರ ಪರಿಗಣನೆ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಗಳ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಬುಧವಾರ ನಿರಾಕರಿಸಿದೆ. ಇಂದು, ಬುಧವಾರ ಈ ವಿಷಯವನ್ನು ಪ್ರಸ್ತಾಪಿಸಿದ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರು, ” ಹಲವಾರು ಹುಡುಗಿಯರು ಕಾಲೇಜುಗಳಿಗೆ ಹಾಜರಾಗಬೇಕಾಗಿದೆ. ಹೀಗಾಗಿ ತುರ್ತು … Continued