ನಾನು ಚಾಮುಂಡೇಶ್ವರಿ ಕ್ಷೇತದಲ್ಲಿ ಮತ್ತೆ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ಧರಾಮಯ್ಯ

ಮಂಡ್ಯ: ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡುವುದಿಲ್ಲ‌ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಭಾನುವಾರ ಮಂಡ್ಯದ ಮದ್ದೂರಿನಲ್ಲಿ ಮಾಧ್ಯಮದವರ ಮಾತನಾಡಿದ ಅವರು, ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲು ಹೇಳುತ್ತಿದ್ದಾರೆ. ಆದರೆ ನಾನು ಈವರೆಗೂ ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ. ಈ ಬಗ್ಗೆ ಯೋಚನೆ ಮಾಡಿ ತೀರ್ಮಾನ ಮಾಡಲಿದ್ದೇನೆ. ಆದರೆ ಚಾಮುಂಡೇಶ್ವರಿ … Continued

ಮೈಸೂರು ವಿವಿಯಿಂದ ಪುನೀತ ರಾಜಕುಮಾರಗೆ ಮರಣೋತ್ತರ ಗೌರವ ಡಾಕ್ಟರೇಟ್

ಮೈಸೂರು: ಕನ್ನಡದ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ. ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತಕುಮಾರ್ ಪ್ರಕಟಿಸಿದ್ದಾರೆ. ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿಶ್ವ ವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿಗೌರವ ಡಾಕ್ಟರೇಟ್ ನೀಡುವುದಾಗಿ ತಿಳಿಸಿದ್ದಾರೆ. ವಿಶೇಷವೆಂದರೆ 46 ವರ್ಷದ … Continued

ಇನ್ನೊಂದು ವಾರದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ

ಕಾರವಾರ: ರಾಜ್ಯಾದ್ಯಂತ ಶಾಲೆಗಳಲ್ಲಿ ತುಂಬಲು 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಇನ್ನೊಂದು ವಾರದಲ್ಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ 1886ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಾಡು ಮಾಸ್ಕೇರಿ ಗ್ರಾಮದ ಸರ್ಕಾರಿ ಪ್ರೌಢ … Continued

ಶಿರಸಿ: ಮುರೇಗಾರ ಜಲಪಾತದಲ್ಲಿ ಮುಳುಗಿ ವ್ಯಕ್ತಿ ಸಾವು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮುರೇಗಾರ ಜಲಪಾತದಲ್ಲಿ ವ್ಯಕ್ತಿಯೊಬ್ಬ ಮುಳುಗಿ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ. ತುಮಕೂರು ಮೂಲದ ನವೀನ ಕುಮಾರ್ (35) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಕೆಲವರೊಂದಿಗೆ ಪ್ರವಾಸಕ್ಕೆ ಬಂದಿದ್ದ ನವೀನ್ ಕುಮಾರ ಈಜಲು ತೆರಳಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ತುಮಕೂರು ನಗರದ ಆರೆಸ್ಸೆಸ್‌ ಜವಾಬ್ದಾರಿ ಇತ್ತು ಎನ್ನಲಾಗಿದೆ. … Continued

ಕಾಂಗ್ರೆಸ್ ಗೆ ಸಿ.ಎಂ. ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ಅವರು, ತಮ್ಮ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ. ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸಿಎಂ ಇಬ್ರಾಹಿಂ ಅಧಿಕೃತವಾಗಿ ಘೋಷಿಸಿದರು. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆ … Continued

ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಐವರ ದುರ್ಮರಣ

ಕಲಬುರಗಿ: ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಅಫಜಲಪುರ- ದುಧನಿ ನಡುವಿನ ಬಳೂರ್ಗಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲ್ ಗಾಣಗಾಪುರ ದತ್ತಾತ್ರೇಯ ದರ್ಶನ ಪಡೆದು ಮಹಾರಾಷ್ಟ್ರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರು ಅಹಮದ … Continued

ವಿಧಾನ ಪರಿಷತ್ ಚುನಾವಣೆ: ಮೂವರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಒಂದು ಕ್ಷೇತ್ರಕ್ಕೆ ಹೆಸರು ಪ್ರಕಟಿಸದ ಬಿಜೆಪಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂವರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ವಾಯವ್ಯ ಶಿಕ್ಷಕರ ಕ್ಷೇತ್ರ- ಅರುಣ್ ಶಹಾಪುರ (ಹಾಲಿ ಸದಸ್ಯ), ವಾಯವ್ಯ ಪದವೀಧರ ಕ್ಷೇತ್ರ – ಹನುಮಂತ ನಿರಾಣಿ (ಹಾಲಿ ಸದಸ್ಯ)ದಕ್ಷಿಣ ಪದವೀಧರ ಕ್ಷೇತ್ರ -ಎಂ.ವಿ.ರವಿಶಂಕರ್ ಅವರ ಹೆಸರನ್ನು ಬಿಡುಗಡೆ ಮಾಡಿದೆ. ಗೋ.ಮಧುಸೂದನ ಅವರಿಗೆ ಈ ಬಾರಿಯೂ ಟಿಕೆಟ್ ನೀಡಿಲ್ಲ. … Continued

ವಸತಿ ಯೋಜನೆ ಆದಾಯ ಮಿತಿ ಹೆಚ್ಚಳಕ್ಕೆ ಕ್ರಮ: ಸಚಿವ ಸೋಮಣ್ಣ

ಬೆಂಗಳೂರು: ರಾಜ್ಯದ ವಸತಿ ಯೋಜನೆಗಳ ಫಲಾನುಭವಿಗಳಿಗೆ ನಿಗದಿಪಡಿಸಿರುವ ಆದಾಯದ ಮಿತಿಯನ್ನು ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ವಿಧಾನಸಭೆಯಲ್ಲಿ ಇಂದು, ಶುಕ್ರವಾರ ಹೇಳಿದರು. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ರಮೇಶ್ ಕುಮಾರ್ ಾವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ವಸತಿ ಯೋಜನೆಗಳಿಗೆ ಫಲಾನುಭವಿಗಳಾಗಲು ಪ್ರಸ್ತುತ 32 ಸಾವಿರ ರೂ.ಗಳ ವಾರ್ಷಿಕ ಆದಾಯ ನಿಗದಿ ಮಾಡಲಾಗಿದ್ದು, … Continued

ಬೆಂಗಳೂರಿನ ಸುತ್ತಮುತ್ತ 4 ಹೊಸ ಸ್ಯಾಟ್‌ಲೈಟ್‌ ಟೌನ್ಶಿಪ್‌, ಕರ್ನಾಟಕದಲ್ಲಿ 6 ಸಮಗ್ರ ನಗರಗಳ ನಿರ್ಮಾಣಕ್ಕೆ ಚಿಂತನೆ:ಸಿಎಂ ಬೊಮ್ಮಾಯಿ

ಬೆಂಗಳೂರು: ‘ಬೆಂಗಳೂರಿನ ಸುತ್ತಲೂ ನಾಲ್ಕು ಹೊಸ ಬೆಂಗಳೂರು’ ಮತ್ತು ಕರ್ನಾಟಕದಲ್ಲಿ ಆರು ಸಮಗ್ರ ಪಟ್ಟಣಗಳನ್ನು ನಿರ್ಮಿಸುವ ಕಲ್ಪನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಪ್ರಸ್ತಾಪಿಸಿದ್ದಾರೆ. 2040 ರಲ್ಲಿ ಬೆಂಗಳೂರಿನ ಜನಸಂಖ್ಯೆಯು ಈಗಿರುವ 1.3 ಕೋಟಿಯಿಂದ ಮೂರರಿಂದ ನಾಲ್ಕು ಕೋಟಿಗೆ ಏರುತ್ತದೆ ಎಂದು ಊಹಿಸಿದ ಬೊಮ್ಮಾಯಿ ನಗರವನ್ನು ಉಪಗ್ರಹಗಳಿಂದ ಸುತ್ತುವರಿದ ಗ್ರಹದಂತೆ ಅಭಿವೃದ್ಧಿಪಡಿಸಬೇಕು ಎಂದು ಅಭಿಪ್ರಾಯಪಟ್ಟರು. ನನ್ನ … Continued

ಬ್ರಿಟಿಷ್ ಕೌನ್ಸಿಲ್ ಜೊತೆ 3 ವರ್ಷಗಳ ಒಡಂಬಡಿಕೆಗೆ ಉನ್ನತ ಶಿಕ್ಷಣ ಇಲಾಖೆ ಅಂಕಿತ

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ತಂದುಕೊಡುವ ಮೂರು ವರ್ಷಗಳ ಒಡಂಬಡಿಕೆಗೆ ಕರ್ನಾಟಕ ಸರ್ಕಾರ ಮತ್ತು ಬ್ರಿಟಿಷ್ ಕೌನ್ಸಿಲ್ ಸಂಸ್ಥೆಗಳು ಶುಕ್ರವಾರ ಅಂಕಿತ ಹಾಕಿವೆ. ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಪರವಾಗಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್ ಮತ್ತು ಬ್ರಿಟಿಷ್ ಕೌನ್ಸಿಲ್ ಪರವಾಗಿ ಆ ಸಂಸ್ಥೆಯ ದಕ್ಷಿಣ … Continued