ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್‌ ಲ್ಯಾಂಡ್‌ ಆದ ಹೆಲಿಪ್ಯಾಡ್‌ ಬಳಿ ಆಕಸ್ಮಿಕ ಬೆಂಕಿ : ಕೆಲಕಾಲ ಆತಂಕ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿದ್ದ ಹೆಲಿಕಾಪ್ಟರ್‌ ಹಾರಾಟ ನಡೆಸುವ ಹೆಲಿಪ್ಯಾಡ್‌ ಬಳಿ ಕಾಣಿಸಿಕೊಂಡ ಬೆಂಕಿ ಕೆಲಕಾಲ ಆತಂಕ ಸೃಷ್ಟಿ ಮಾಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ. ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೋಗುವ ಸಲುವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಉಡುಪಿ ಜಿಲ್ಲೆಯ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್‌ಗೆ ಬಂದಿದ್ದರು. ಅಲ್ಲಿಂದ ಕೊಲ್ಲೂರಿಗೆ ಹೋಗಲು ಅಲ್ಲಿಂದ ನಿರ್ಗಮಿಸಿದ ಬಳಿಕ ಹೆಲಿಪ್ಯಾಡ್‌ … Continued

ಮುಸ್ಲಿಂ ಮೀಸಲಾತಿ ರದ್ದು: ಕರ್ನಾಟಕ ಸರ್ಕಾರದ ನಿಲುವು ತಪ್ಪು ಊಹೆಯಿಂದ ಕೂಡಿದೆ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಮುಸ್ಲಿಂ ಸಮುದಾಯಕ್ಕೆ ಹಿಂದುಳಿದ ವರ್ಗದ ಅಡಿ ಕಲ್ಪಿಸಿದ್ದ ಶೇ. 4 ರಷ್ಟು ಮೀಸಲಾತಿ ಹಿಂಪಡೆದಿರುವ ಹಿಂದಿನ ಸಕಾರಣದ ಕುರಿತು ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ಗುರುವಾರ ಪ್ರಶ್ನಿಸಿದೆ. ಅಂತಿಮ ವರದಿ ವರೆಗೂ ಕಾಯದೇ ಮಧ್ಯಂತರ ವರದಿ ಆಧರಿಸಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಆಯೋಗದ ಅಂತಿಮ ವರದಿ ಬರುವವರೆಗೂ ಸರ್ಕಾರ ಕಾಯಬಹುದಿತ್ತು ಎಂದು ನ್ಯಾಯಮೂರ್ತಿಗಳಾದ … Continued

ಮತ್ತೆ ಜೆಡಿಎಸ್‌ಗೆ ಮರಳಿದ ವೈ.ಎಸ್.ವಿ. ದತ್ತ : ಕಡೂರಿನಿಂದ ಸ್ಪರ್ಧೆ ಫಿಕ್ಸ್‌

ಚಿಕ್ಕಮಗಳೂರು : ಎರಡು ತಿಂಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ‌ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮರಳಿ ಜೆಡಿಎಸ್‌ಗೆ ಬಂದಿದ್ದಾರೆ. ಕಾಂಗ್ರೆಸ್ ನಿಂದ ಕಡೂರು ಕ್ಷೇತ್ರದಿಂದ ಸ್ಪರ್ಧೆ ನಡೆಸುವ ಇಂಗಿತದಿಂದ ಎರಡು ತಿಂಗಳ ಹಿಂದೆ ದತ್ತ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದರು. ಆದರೆ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ … Continued

ತುಮಕೂರು : ಬಿಜೆಪಿಗೆ ಮಾಜಿ ಸಚಿವ ಸೊಗಡು ಶಿವಣ್ಣ ರಾಜೀನಾಮೆ

ತುಮಕೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾದ ಬೆನ್ನಲ್ಲೆ ಟಿಕೆಟ್ ಸಿಗದೇ ಇದ್ದುದಕ್ಕೆ ಅಸಮಾಧಾನಗೊಂಡ ಮಾಜಿ ಸಚಿವ ಸೊಗಡು ಶಿವಣ್ಣ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಅವರಿಗೆ ಇಮೇಲ್ ಮೂಲಕ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ತುಮಕೂರು ನಗರ … Continued

ಕೈ ತಪ್ಪಿದ ಟಿಕೆಟ್​..: ಬಿಜೆಪಿಗೆ ರಾಜೀನಾಮೆ ಘೋಷಿಸಿದ ಶಾಸಕ ನೆಹರೂ ಓಲೇಕಾರ, ಸಿಎಂ ಬೊಮ್ಮಾಯಿ ವಿರುದ್ಧ ಕಿಡಿ

ಹಾವೇರಿ : ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್‌ ಸಿಗದ ಕಾರಣ ಹಾಲಿ ಶಾಸಕ ನೆಹರೂ ಓಲೇಕಾರ ಸಹ ಬೆಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೆಹರೂ ಓಲೇಕಾರ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಸುಮಾರು 1000 ಬೆಂಬಲಿಗರು ಕಾರ್ಯಕರ್ತರು ನನ್ನ ಜೊತೆ ರಾಜೀನಾಮೆ ನೀಡುತ್ತಾರೆ. ಜೆಡಿಎಸ್‌ನಿಂದ ಆಹ್ವಾನ ಬಂದಿದೆ. ಕಾರ್ಯಕರ್ತರ ಜೊತೆ … Continued

ರಾಜ್ಯದ ಕರಾವಳಿ ಭಾಗದಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚಳ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ

ಬೆಂಗಳೂರು: ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆ ಮತ್ತಷ್ಟು ತಾಪಮಾನದ ಬೇಗೆ ಎದುರಿಸಬೇಕಿದೆ. ರಾಜ್ಯದಲ್ಲಿ ತಾಪಮಾನ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ. ಅಂದರೆ ಕರಾವಳಿ ಜಿಲ್ಲೆಗಳಲ್ಲಿ ‘ಉಷ್ಣ ಅಲೆ’ ಗರಿಷ್ಠ … Continued

ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಬಿಜೆಪಿಗೆ ಗುಡ್‌ ಬೈ

 ಬೆಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಗೆ ಟಿಕೆಟ್​ ತಪ್ಪಿದ್ದಕ್ಕೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಎಂ.ಪಿ. ಕುಮಾರಸ್ವಾಮಿ ಅವರು ಮೂಡಿಗೆರೆಯಿಂದ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಅವರ ಬಗ್ಗೆ ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಮೀಸಲು ಕ್ಷೇತ್ರದ ಟಿಕೆಟ್‌ ಹಾಲಿ ಶಾಸಕ ಹಾಗೂ ಮೂರು ಬಾರಿ … Continued

ಕರ್ನಾಟಕ ಚುನಾವಣೆ 2023 : ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು, ಗುರುವಾರ (ಎಪ್ರಿಲ್‌ 13)ದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಎಪ್ರಿಲ್‌ 20 ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 5.24 ಕೋಟಿ ಮಂದಿ ಮತದಾನ ಮಾಡಲು ಅರ್ಹರಾಗಿದ್ದಾರೆ. ಎ.13 -ಚುನಾವಣಾ ಅಧಿಸೂಚನೆ ಮತ್ತು … Continued

ಕರ್ನಾಟಕ ಚುನಾವಣೆ 2023 : ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ನವದೆಹಲಿ:  ಮೇ 10ರಂದು ನಡೆಯಲಿರುವ ಕರ್ನಾಟಕದ ವಿಧಾನಸಬೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನೂ 12 ಅಭ್ಯರ್ಥಿಗಳ ಹೆಸರನ್ನು ಪಕ್ಷ ಬಿಡುಗಡೆ ಮಾಡಬೇಕಿದೆ. ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡ ನಾಗರಾಜ ಛಬ್ಬಿ ಅವರಿಗೆ ಕಲಘಟಗಿ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಬಿಜೆಪಿ ಮೊದಲ ಪಟ್ಟಿಯನ್ನು … Continued