ಯಲ್ಲಾಪುರ : ಚಾಕುವಿನಿಂದ ಇರಿದು ಮಹಿಳೆಯ ಕೊಲೆ

ಯಲ್ಲಾಪುರ: ವಿವಾಹಿತ ಮಹಿಳೆಯೊಬ್ಬರಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ  ಪಟ್ಟಣದ ಕಾಳಮ್ಮ ನಗರದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಹತ್ಯೆಯಾದ ಮಹಿಳೆಯನ್ನು ರಂಜಿತಾ ಮಲ್ಲಪ್ಪ ಬನ್ಸೋಡೆ (30) ಎಂದು ಗುರುತಿಸಲಾಗಿದ್ದು, ಆರೋಪಿ ರಫಿಕ್ ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ … Continued

ಕುಮಟಾ : ಜನವರಿ 4ರಂದು ಕೂಜಳ್ಳಿಯಲ್ಲಿ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ; ʼಷಡಕ್ಷರಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಪಂ. ಷಡಕ್ಷರಿ ಗವಾಯಿ ಅಕಾಡೆಮಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಹಾಗೂ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭವು ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜನವರಿ. 4ರಂದು ನಡೆಯಲಿದೆ. ಈ ಬಾರಿ ಖ್ಯಾತ ಕೊಳಲು ವಾದಕ ಮುಂಬೈನ ನಿತ್ಯಾನಂದ ಹಳದೀಪುರ … Continued

ಬಳ್ಳಾರಿ ಬ್ಯಾನರ್‌ ಗಲಾಟೆ ; ಎಸ್‌ಪಿ ಪವನ್ ನೆಜ್ಜೂರ ಅಮಾನತು

ಬಳ್ಳಾರಿ : ಬಳ್ಳಾರಿಯಲ್ಲಿ ನಡೆದ ಗಲಭೆಗೆ (Bellary Clash case) ಸಂಬಂಧಿಸಿ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿಲ್ಲ ಎಂಬ ಕಾರಣ ನೀಡಿ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಸಸ್ಪೆಂಡ್‌ ಮಾಡಲಾಗಿದೆ. ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಚಳಿ ಇನ್ನೂ ಮುಂದುವರಿಯುತ್ತದೆ. ಮುಂದಿನ 3 ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಶೀತ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯು ದಕ್ಷಿಣ … Continued

ಮುಂಡಗೋಡ | ಡಿಜಿಟಲ್ ಅರೆಸ್ಟ್ ; 1.61 ಕೋಟಿ ರೂ. ಕಳೆದುಕೊಂಡ ನಿವೃತ್ತ ಶಿಕ್ಷಕ…..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ 72 ವರ್ಷದ ನಿವೃತ್ತ ಟಿಬೆಟಿಯನ್‌ ಶಿಕ್ಷಕರೊಬ್ಬರು ಸೈಬರ್ ಅಪರಾಧಿಗಳ ಕುತಂತ್ರಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆನ್‌ಲೈನ್‌ ವಂಚಕರು ಅವರನ್ನು ಹೆದರಿಸಿ, “ಡಿಜಿಟಲ್ ಅರೆಸ್ಟ್” ಮಾಡಿ, ಅವರಿಂದ ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಮೋದ ಹೋದವರನ್ನು ಮುಂಡಗೋಡಿನ ಟಿಬೆಟಿಯನ್ ಕಾಲೋನಿ ನಿವಾಸಿ … Continued

‘ಸುಳ್ಳು ಹೇಳುತ್ತಲೇ ಇರುತ್ತಾರೆ….’: ಕಾಂಗ್ರೆಸ್ ಸರ್ಕಾರದ ಸಮೀಕ್ಷೆ ಮುಂದಿಟ್ಟು ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ‘ಮತ ಕಳ್ಳತನ’ದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರಿಗೆ ಈಗ ಸ್ವಪಕ್ಷದ ಸರ್ಕಾರವಿರುವ ಕರ್ನಾಟಕದಲ್ಲೇ ಇರಿಸುಮುರಿಸಾಗುವ ಸಮೀಕ್ಷೆ ಹೊರಬಿದ್ದಿದೆ. ರಾಜ್ಯ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಶೇ. 83ಕ್ಕೂ ಹೆಚ್ಚು ಜನ ಎವಿಎಂ ಮತಯಂತ್ರಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದು, ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ತೀವ್ರ … Continued

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ ; ಕಾಂಗ್ರೆಸ್ ಕಾರ್ಯಕರ್ತ ಸಾವು

ಬಳ್ಳಾರಿ: ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಆರಂಭವಾದ ಜಗಳ ಭೀಕರ ಸಂಘರ್ಷಕ್ಕೆ ತಿರುಗಿದ್ದು, ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಸದ್ಯ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕಾಗಿ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಬ್ಯಾನರ್ ಅಳವಡಿಸುತ್ತಿದ್ದರು. ಈ ವೇಳೆ ಶಾಸಕ ಜಿ. ಜನಾರ್ದನ … Continued

ಕರ್ನಾಟಕದ ಹೆಚ್ಚಿನ ಜನರಿಗೆ ಎವಿಎಂ ಮೇಲೆ ಅಪಾರ ವಿಶ್ವಾಸ ; ಹೊಸ ಸಮೀಕ್ಷೆಯಲ್ಲಿ ಅನೇಕ ಅಂಶಗಳು ಬಹಿರಂಗ

ಬೆಂಗಳೂರು: ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತವೆ ಹಾಗೂ ಇವಿಎಂ (EVM) ಯಂತ್ರಗಳು ನಿಖರವಾದ ಫಲಿತಾಂಶವನ್ನು ನೀಡುತ್ತವೆ ಎಂದು ಕರ್ನಾಟಕದ ಬಹುಪಾಲು ಮತದಾರರು ನಂಬಿದ್ದಾರೆ. ಕರ್ನಾಟಕ ಮೌಲ್ಯಮಾಪನ ಮತ್ತು ಉಸ್ತುವಾರಿ ಪ್ರಾಧಿಕಾರ (Karnataka Monitoring and Evaluation Authority (KMEA)) ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ ಈ ಕುತೂಹಲಕಾರಿ ಅಂಶಗಳು ಬಹಿರಂಗಗೊಂಡಿವೆ. ಆಗಸ್ಟ್ 2025 ರ … Continued

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 60ಕ್ಕೂ ಹೆಚ್ಚು ಐಪಿಎಸ್‌ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ

ಬೆಂಗಳೂರು : 2026 ಹೊಸ ವರ್ಷ ಆರಂಭದ ನಡುವೆಯೇ ಕರ್ನಾಟಕ ರಾಜ್ಯ ಸರ್ಕಾರ (Karnataka government) ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ (IPS Transfer) ಮಾಡಿದೆ. 60ಕ್ಕೂ ಹೆಚ್ಚು ಐಪಿಎಸ್‌ ಪೊಲೀಸ್‌ ಅಧಿಕಾರಿಗಳಿಗೆ ಬಡ್ತಿ ಹಾಗೂ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಸುಮಾರು 23 ಐಪಿಎಸ್​ ಅಧಿಕಾರಿಗಳಿಗೆ (IPS Officers) ಡಿಐಜಿಪಿ ಹುದ್ದೆಗೆ ಬಡ್ತಿ ನೀಡಿದ್ದು, … Continued

ಯಾಣ ಬಳಿ ಕಾಲೇಜು ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ : 10ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಪ್ರವಾಸೀ ತಾಣ ಯಾಣ ಸಮೀಪ  ಹಸೆಮನೆ ತಿರುವಿನ ಬಳಿ ಮಂಗಳವಾರ ಕಾಲೇಜು ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಯಾಣದತ್ತ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾವಣಗೆರೆಯ  ಪಿಯು ಕಾಲೇಜಿನ ವಿದ್ಯಾರ್ಥಿಗಳಿದ್ದ ಪ್ರವಾಸದ ಮತ್ತಿಘಟ್ಟಾ ದಾಟಿದ … Continued