ಉರಿಗೌಡ, ನಂಜೇಗೌಡ ಸಿನೆಮಾ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

ಮಂಡ್ಯ : ಆದಿಚುಂಚನಗಿರಿ ನಿರ್ಮಲಾನಂದನಾಥ ಶ್ರೀಗಳನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಉರಿಗೌಡ ನಂಜೇಗೌಡ ಕುರಿತು ಸಿನಿಮಾ ನಿರ್ಮಾಣ ಮಾಡುವುದಿಲ್ಲ ಎಂದು ತೋಟಗಾರಿಕೆ ಸಚಿವ ಮುನಿರತ್ನ ಹೇಳಿದ್ದಾರೆ. ಉರಿಗೌಡ ನಂಜೇಗೌಡ ಕುರಿತು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದ ಸಚಿವ ಮುನಿರತ್ನ ಶ್ರೀಗಳ ಭೇಟಿ ಬಳಿಕ ಸಿನಿಮಾ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಮುನಿರತ್ನ, … Continued

ಇತಿಹಾಸ ತಿರುಚುವುದಲ್ಲಿ ಬಿಜೆಪಿ ಎತ್ತಿದ ಕೈ: ಈಗ ಒಕ್ಕಲಿಗರ ಇತಿಹಾಸ ತಿರುಚಲು ಹೊರಟಿದೆ-ಡಿಕೆ ಶಿವಕುಮಾರ ಕಿಡಿ

ಬೆಳಗಾವಿ : ಯುವ ಕ್ರಾಂತಿ ಸಮಾವೇಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಬೆಳಗಾವಿ ಕಾರ್ಯಕ್ರಮ ಆಯೋಜಿತಗೊಂಡಿದೆ. ಈ ಹಿನ್ನಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಂದಿನಂತೆ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಇತಿಹಾಸ ತಿರುಚುವಲ್ಲಿ ಬಿಜೆಪಿಯವರದು ಎತ್ತಿದ ಕೈ. ಬಸವಣ್ಣ, ಕುವೆಂಪು, ನಾರಾಯಣ ಗುರು, ಡಾ. … Continued

ಕೆ.ಆರ್.ಪುರಂ-ವೈಟ್ ಫೀಲ್ಡ್ ಮೆಟ್ರೋ ಮಾರ್ಗ: ಮಾರ್ಚ್‌ 25ರಂದು ಪ್ರಧಾನಿ ಮೋದಿಯಿಂದ ಉದ್ಘಾಟನೆ

ಬೆಂಗಳೂರು : ಬೆಂಗಳೂರಿನ ಕೆ.ಆರ್. ಪುರಂ-ವೈಟ್‌ಫೀಲ್ಡ್ ಮಧ್ಯದ ಮೆಟ್ರೋದ ನೇರಳೆ ಮಾರ್ಗದ ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25ರಂದು ಉದ್ಘಾಟಿಸಲಿದ್ದಾರೆ. ನಮ್ಮ ಮೆಟ್ರೋದ 13.71 ಕಿಮೀ ಮಾರ್ಗವು ಒಂದು ತಾಸು ಇದ್ದ ಪ್ರಯಾಣದ ಅವಧಿಯನ್ನು ಸುಮಾರಿ 25 ನಿಮಿಷಗಳ ವರೆಗೆ ಕಡಿಮೆ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ. ಪ್ರಯಾಣಿಕರು ವೈಟ್‌ಫೀಲ್ಡ್ ಮತ್ತು ಕೆಆರ್ ಪುರಂ … Continued

ಕೃಷಿ ಹೊಂಡದಲ್ಲಿ ಮುಳುಗಿ ಬಾಲಕರಿಬ್ಬರ ಸಾವು

ಬೆಳಗಾವಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಾದಗುಡ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಯಾದಗುಡ ಗ್ರಾಮದ ಯಮನಪ್ಪ ರೆಡ್ಡಿರಟ್ಟಿ (10), ಯಶು ಬಸಪ್ಪ (14) ಎಂದು ಗುರುತಿಸಲಾಗಿದೆ. ಕ್ರಿಕೆಟ್​ ಆಡಿದ ನಂತರ ಬಾಲಕರು ಕೃಷಿ ಹೊಂಡಕ್ಕೆ ಈಜಲು ತೆರಳಿದ್ದಾಗ ದುರಂತ ಘಟನೆ ನಡೆದಿದೆ … Continued

ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ

ಹುಬ್ಬಳ್ಳಿ: ಉಮಾಶಂಕರ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ 2021, ಮತ್ತು 2022 ನೇ ಸಾಲಿನ ಉಮಾಶಂಕರ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಶಸ್ತಿಗಾಗಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ಮೂರು ಸಾವಿರ ರೂ ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಒಳಗೊಂಡಿರುತ್ತದೆ. ಏಪ್ರಿಲ್ ನಂತರ ಬೆಳಗಾವಿಯಲ್ಲಿ ನಡೆಯುವ ಭಾವ ಸಂಗಮ ಸಮಾಗಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದವರೇ ಕಾರ್ಯಕ್ರಮದಲ್ಲಿ … Continued

ರಾಜ್ಯದಲ್ಲಿ ನಿಧಾನಗತಿಯಲ್ಲಿ ಏರುತ್ತಿರುವ ಕೊರೊನಾ, ಭಾನುವಾರ 78 ಮಂದಿಗೆ ಸೋಂಕು, ಓರ್ವ ಸಾವು

ಬೆಂಗಳೂರು: ದೇಶದಲ್ಲಿ ಕೋವಿಡ್-19 ಸಂಖ್ಯೆ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿಯೂ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು, ಭಾನುವಾರ ರಾಜ್ಯಾದ್ಯಂತ 78 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ, ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಳ್ಳಾರಿ, ಕೋಲಾರ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಮೂವರಿಗೆ, ಬೆಂಗಳೂರು ಗ್ರಾಮಾಂತರ, … Continued

ಚಿಂಚೋಳಿ : ಮಳೆಯಲ್ಲಿ ವಿದ್ಯುತ್ ತಗುಲಿ ತಾಯಿ, ಇಬ್ಬರು ಮಕ್ಕಳು ಸಾವು

ಕಲಬುರಗಿ: ಜಿಲ್ಲೆಯ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ವಿದ್ಯುತ್ ತಗುಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಈದುರ್ಘಟನೆಯಲ್ಲಿ ಮೃತಪಟ್ಟವರನ್ನು ಝರಣಮ್ಮ ಅಂಬಣ್ಣ ಬಸಗೊಂಡ (45), ಮಹೇಶ ಬಸಗೊಂಡ (20), ಸುರೇಶ ಬಸಗೊಂಡ (18) ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ 1ಗಂಟೆ ಸುಮಾರಿಗೆ ಗುಡುಗು ಮಿಂಚು ಸಹಿತ ಜೋರು ಮಳೆ ಸುರಿಯುತ್ತಿದ್ದಾಗ ವಿದ್ಯುತ್ … Continued

ಬಿಜೆಪಿಗೆ ಬೆಂಬಲ ಘೋಷಿಸಿದ ಮಾಜಿ ಸಂಸದ ಎಲ್.​ಆರ್. ಶಿವರಾಮೇಗೌಡ

ಬೆಂಗಳೂರು: ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ಈಗ ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ(LR Shivarame Gowda) ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಬೆಂಗಳೂರಿನ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಾಗಮಂಗಲಕ್ಕೆ ಬಿಜೆಪಿ ಅತ್ಯಗತ್ಯವಾಗಿ ಬೇಕು. ಬಿಜೆಪಿ ಪಕ್ಷ … Continued

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು:ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಶನಿವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ … Continued

ಮಾರ್ಚ್ 21ರ ಮುಷ್ಕರ ಹಿಂಪಡೆದ ಸಾರಿಗೆ ನಿಗಮದ ಸಿಬ್ಬಂದಿ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಶೇ.15 ರಷ್ಟು ವೇತನ ಹೆಚ್ಚಳ ಘೋಷಿಸಿದ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರೊಂದಿಗೆ ಸಭೆ ನಡೆಸಿದ ಜಂಟಿ ಕ್ರಿಯಾ ಸಮಿತಿಯು ಮುಷ್ಕರ ಹಿಂಪಡೆಯಲು ನಿರ್ಧರಿಸಿದೆ. 21ರಂದು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ … Continued