ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ ; ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ತಿಕ್ಕಾಟ ಜೋರಾಗಿದ್ದು, ಇದರ ಮಧ್ಯೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಮಠ ಶ್ರೀಗಳು, ಸಂಕ್ರಾಂತಿ ನಂತರ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆ ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ … Continued

ರಾಮದುರ್ಗ: ಕಾಲುವೆಗೆ ಈಜಲು ಇಳಿದಿದ್ದ ಇಬ್ಬರು ಬಾಲಕರು ಸಾವು

ಬೆಳಗಾವಿ: ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹಣಮಂತ  ಹಗೇದ (10) ಹಾಗೂ ಬಸವರಾಜ ಸೋಮಣ್ಣವರ (10) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ತಂದೆಯ ಜೊತೆ ಕುರಿ ಕಾಯಲು ಹೋಗಿದ್ದ ಸಂದರ್ಭದಲ್ಲಿ ಕಾಲುವೆಯಲ್ಲಿ ಈಜಲು ತೆರಳಿದ್ದಾರೆ. ಎಷ್ಟುಹೊತ್ತು ಕಳೆದರೂ ಮಕ್ಕಳು ಬಾರದಿದ್ದಾಗ … Continued

ಹಿಂದೂಸ್ತಾನಿ ಗಾಯಕ ಅಶೋಕ ಹುಗ್ಗಣ್ಣವರ ನಿಧನ

ಹುಬ್ಬಳ್ಳಿ: ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ನಿವೃತ್ತ ಸಂಗೀತ ಪ್ರಾಧ್ಯಾಪಕರಾದ ಅಶೋಕ ಹುಗ್ಗಣ್ಣವರ (64) ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಮೂಲತಃ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದವರಾದ ಅಶೋಕ ಹುಗ್ಗಣ್ಣವರ ಅವರು, ಹೊನ್ನಾವರದ  ಎಸ್.ಡಿ.ಎಂ. ಕಾಲೇಜಿನಲ್ಲಿ ಸಂಗೀತ ಪ್ರಾಧ್ಯಾಪಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ 2021ರಲ್ಲಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯ ಬಳಿಕ ಅವರು ಹುಬ್ಬಳ್ಳಿಯಲ್ಲಿ … Continued

ಚಿತ್ರದುರ್ಗ : ಬಸ್‌ -ಕಂಟೇನರ್‌ ಲಾರಿ ಡಿಕ್ಕಿ ; ಬಸ್‌ ಹೊತ್ತಿ ಉರಿದು ಹಲವರು ಸಾವು

ಚಿತ್ರದುರ್ಗ :  ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಸಾವಿಗೀಡಾಗಿದ್ದಾರೆ ಹಾಗೂ ಹಲವರಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ 9 ಮಂದಿ ಸಜೀವ ದಹನವಾಗಿದ್ದು, ಮೃತರ ಗುರುತು ಪತ್ತೆ ಕಷ್ಟವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ … Continued

ಕರ್ನಾಟಕದ 4 ಪಟ್ಟಣ ಪಂಚಾಯತಗಳ ಚುನಾವಣೆ ಫಲಿತಾಂಶ | ಕಾಂಗ್ರೆಸ್ಸಿಗೆ ತೀವ್ರ ಮುಖಭಂಗ ; ಬಿಜೆಪಿಗೆ ಭರ್ಜರಿ ಜಯ

ಬೆಂಗಳೂರು :  ರಾಜ್ಯದ ನಾಲ್ಕು ಪಟ್ಟಣ ಪಂಚಾಯತಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್​​ಗೆ ಭಾರಿ ಮುಖಭಂಗವಾಗಿದೆ. ಎಲ್ಲ ನಾಲ್ಕೂ ಪಟ್ಟಣ ಪಂಚಾಯತಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಬಜಪೆ ಹಾಗೂ ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ, ಉತ್ತರ ಕನ್ನಡದ ಮಂಕಿ ಪಟ್ಟಣ ಪಂಚಾಯತ, ಬೆಂಗಳೂರು … Continued

ಹೊನ್ನಾವರ : ಮಂಕಿ ಪಟ್ಟಣ ಪಂಚಾಯತದ ಮೊದಲ ಚುನಾವಣೆ : ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್ಸಿಗೆ ಹಿನ್ನಡೆ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪಟ್ಟಣ ಪಂಚಾಯತ ಆಗಿ ಘೋಷಣೆಯಾದ ನಂತರ ಮಂಕಿಯಲ್ಲಿ ನಡೆದ ಮೊದಲ ಮಹತ್ವದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಭೂತಪೂರ್ವ ಗೆಲುವು ಸಾಧಿಸಿದ್ದು, ಆಡಳಿತದ ಚುಕ್ಕಾಣಿ ಹಿಡಿದಿದೆ. ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲೇ ಕಾಂಗ್ರೆಸ್ಸಿಗೆ ಹಿನ್ನಡೆಯಾಗಿದೆ. ಸಚಿವ ಮಂಕಾಳ ವೈದ್ಯರಿಗೆ ಸ್ವಕ್ಷೇತ್ರದಲ್ಲಿ  ಹಿನ್ನಡೆಯಾದರೆ,ಮಾಜಿ ಸಚಿವ … Continued

ಕಾರವಾರ: ಕಡಲತೀರದಲ್ಲಿ ಹೆಲಿಕಾಪ್ಟರ್ ಏರಿ ಸಂಭ್ರಮಪಟ್ಟ ಮಕ್ಕಳು…

ಕಾರವಾರ : ಕಾರವಳಿ ಉತ್ಸವದ ಸಂಭ್ರಮದ ನಡುವೆ ವಿಶೇಷ ಶಾಲೆಯ ಮಕ್ಕಳು ಇಂದು, ಬುಧವಾರ ಹೆಲಿಕಾಪ್ಟರ್ ಏರಿ ಅರಬ್ಬಿ ಸಮುದ್ರ, ಕಾಳಿ ನದಿ ಸಂಗಮ ಮತ್ತು ಕಾರವಾರದ ನಿಸರ್ಗ ಸೌಂದರ್ಯವನ್ನು ಆಕಾಶದಿಂದ ವೀಕ್ಷಿಸುವ ಮೂಲಕ ಸಂಭ್ರಮಿಸಿದರು. ಕರಾವಳಿ ಉತ್ಸವದ-2025 ರ ಅಂಗವಾಗಿ ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಖಾಸಗಿ ವಿಮಾನಯಾನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿರುವ ಐದು … Continued

ಬೆಂಗಳೂರು : ಪ್ರೇಮ ಪ್ರಸ್ತಾವನೆ ನಿರಾಕರಿಸಿದ ಯುವತಿ ಮೇಲೆ ನಡು ರಸ್ತೆಯಲ್ಲೇ ಹಲ್ಲೆ-ದೌರ್ಜನ್ಯ

ಬೆಂಗಳೂರು: ತನ್ನನ್ನು ಪ್ರೀತಿಸು ಎಂದು ಒತ್ತಡ ಹೇರಿದರೂ ಅದನ್ನು ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿ, ಕಿರುಕುಳ ನೀಡಿದ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಡಿಸೆಂಬರ್ 22ರಂದು ಮಧ್ಯಾಹ್ನ ಸುಮಾರು 3:20ರ ಸುಮಾರಿಗೆ ಉಲ್ಲಾಳ ಮುಖ್ಯರಸ್ತೆಯ ಜ್ಞಾನಜ್ಯೋತಿ ನಗರದ ಬಳಿಯ ಖಾಸಗಿ ಪಿಜಿ (PG) … Continued

ಜ.4ರಂದು ಕೂಜಳ್ಳಿಯಲ್ಲಿ ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ ; ಪಂ.ನಿತ್ಯಾನಂದ ಹಳದೀಪುರಗೆ ʼಷಡಕ್ಷರಿ ರಾಷ್ಟ್ರೀಯ ಪುರಸ್ಕಾರʼ ಪ್ರದಾನ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಪಂ. ಷಡಕ್ಷರಿ ಗವಾಯಿ ಅಕಾಡೆಮಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಹಾಗೂ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭವು ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜನವರಿ. 4ರಂದು ನಡೆಯಲಿದೆ. ಈ ಬಾರಿ ಖ್ಯಾತ ಕೊಳಲು ವಾದಕ ಮುಂಬೈನ ನಿತ್ಯಾನಂದ ಹಳದೀಪುರ … Continued

17ನೇ ಬೆಂಗಳೂರು ಚಲನಚಿತ್ರೋತ್ಸವ ; ರಾಯಭಾರಿಯಾಗಿ ನಟ ಪ್ರಕಾಶ ರಾಜ ನೇಮಕ

ಬೆಂಗಳೂರು : ಜನವರಿ 29ರಿಂದ ಫೆಬ್ರವರಿ 06ರವರೆಗೆ ಆಯೋಜಿಸಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ಅದರ ರಾಯಭಾರಿಯಾಗಿ ( (Brand Ambassador) ಹಿರಿಯ ಚಲನಚಿತ್ರ ನಟ ಪ್ರಕಾಶ ರಾಜ (Prakash Raj) ಅವರನ್ನು ನೇಮಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ … Continued