ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ದಿನಾಂಕ ಪ್ರಕಟವಾಗಿದೆ. ಸಿಇಟಿ ಪರೀಕ್ಷೆಗಳು ಮೇ 20 ಮತ್ತು 21ರಂದು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಯು ಮೇ 22ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ … Continued

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಬಳಿ ಇಂದು, ಶುಕ್ರವಾರ (ಫೆ.24) ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಟ್ಕಳ:ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಭಟ್ಕಳ ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಎನ್ನುವ ಗ್ರಾಮದಲ್ಲಿ ಬರ್ಬರ ಹತ್ಯೆ ನಡೆದ ಘಟನೆ ಶುಕ್ರವಾರ ನಡೆದಿದೆ. ನಾಲ್ವರನ್ನು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ತಾಲೂಕಿನ ಹಾಡುವಳ್ಳಿ … Continued

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ: ಮೂರನೇ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷ ಈ ಬಾರಿ ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿದೆ. ಈ ಹಿಂದೆ ತಾವು ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ಮತ್ತು ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2 ಸಾವಿರ ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಇಂದು, ಶುಕ್ರವಾರ ಮತ್ತೆ ಮೂರು ಪ್ರಮುಖ ಘೋಷಣೆಗಳನ್ನು ಮಾಡಿದೆ. ಈ ಕುರಿತು … Continued

ವಿಧಾನಸಭೆಯಲ್ಲಿ ಯಡಿಯೂರಪ್ಪ ಮಾಡಿದ ಭಾಷಣ ನನಗೆ ಸ್ಫೂರ್ತಿದಾಯಕ : ಪ್ರಧಾನಿ ಮೋದಿ ಪ್ರಶಂಸೆ

ಬೆಂಗಳೂರು: ರಾಜ್ಯ ಬಜೆಟ್ ಮೇಲಿನ ಭಾಷಣ ಚರ್ಚೆ ವೇಳೆ ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾಡಿರುವ ವಿದಾಯ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, . ಯಡಿಯೂರಪ್ಪ ಅವರ ಭಾಷಣ ನನಗೆ ಸ್ಫೂರ್ತಿದಾಯಕ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಪಕ್ಷನಿಷ್ಠೆ ಕುರಿತು ಪ್ರಶಂಸೆ … Continued

ಕಡಬ: ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ

ಮಂಗಳೂರು : ಕಳೆದ ಸೋಮವಾರ ಬೆಳಿಗ್ಗೆ ಇಬ್ಬರನ್ನು ಸಾಯಿಸಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಕಾರ್ಯಾಚರಣೆ ತಂಡ ಗುರುವಾರ ಸಂಜೆ ವೇಳೆ ಯಶಸ್ವಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಭಾಗದಲ್ಲಿ ನಾಲ್ಕು ಕಾಡಾನೆಗಳಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ತಕ್ಷಣವೇ ಕಾರ್ಯಚರಣೆಗೆ ಇಳಿದ ತಂಡ ಸುಂಕದಕಟ್ಟೆ ಬಳಿಯ ಕೊಂಬಾರು ಗ್ರಾಮದ ಮಂಡೆಕರ ಅರಣ್ಯ ಪ್ರದೇಶದಲ್ಲಿ … Continued

ಭೀಕರ ರಸ್ತೆ ಅಪಘಾತ: ಬಾಲಕ ಸೇರಿ ಐವರು ಸ್ಥಳದಲ್ಲೇ ಸಾವು

ಧಾರವಾಡ: ಕಾರು- ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರ್‌ನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಮಂಜುನಾಥ ಮುದ್ದೋಜಿ ಇತ್ತೀಚೆಗೆ ಭಾರತೀಯ ಸೇನೆಗೆ ನೇಮಕಗೊಂಡಿದ್ದರು. ಅವರು ಹೈದ್ರಾಬಾದ್‌ಗೆ ತರಬೇತಿ ಕೇಂದ್ರಕ್ಕೆ … Continued

ಕಾರು-ಟ್ಯಾಂಕರ್ ಡಿಕ್ಕಿ: ಉತ್ತರ ಕನ್ನಡ ಜೆಡಿಎಸ್​ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಸೇರಿ ಮೂವರಿಗೆ ಗಂಭೀರ ಗಾಯ

ಕುಮಟಾ: ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಜೆಡಿಎಸ್‌ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಉತ್ತರಕನ್ನಡ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅವರ ಜೊತೆಗೆ ವಿ.ಎಂ.ಭಂಡಾರಿ ಹಾಗೂ ಪರಮೇಶ್ವರ ನಾಯ್ಕ ಎಂಬವರು ಕಾರಿನಲ್ಲಿದ್ದರು ಎಂದು … Continued

ರೋಹಿಣಿ ಸಿಂಧೂರಿ Vs ಡಿ.ರೂಪಾ : ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಡಿ. ರೂಪಾಗೆ ಕೋರ್ಟ್ ನಿರ್ಬಂಧ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ವಿಧಿಸಿದೆ. ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧ ಕೋರಿ ರೋಹಿಣಿ ಸಿಂಧೂರಿ ಅವರು ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ … Continued

ಸವಣೂರು : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ: ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಗೌಡ ಪಾಟೀಲ (54), ಪತ್ನಿ ಲಲಿತಾ ಪಾಟೀಲ (50) ಮತ್ತು ಮಗಳು ನೇತ್ರಾ (22) ಎಂದು ಗುರುತಿಸಲಾಗಿದೆ. ಹನುಮಂತಗೌಡ ಅವರು ತಮ್ಮ ಏಕೈಕ ಪುತ್ರಿ ನೇತ್ರಾ ಅವರನ್ನು 7 ತಿಂಗಳ … Continued

ಮಂಗಳೂರು ಪೊಲೀಸ್‌ ಆಯುಕ್ತ ಸೇರಿ 7 ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ 7 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಡಿಐಜಿ ರೈಲ್ವೆ ಹುದ್ದೆಗೆ ನಿಯೋಜಿಸಲಾಗಿದೆ. ಅವರ ಸ್ಥಾನಕ್ಕೆ ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರನ್ನು … Continued