`ಹಡಪದ ಅಭಿವೃದ್ಧಿ ನಿಗಮ’ ಸ್ಥಾಪಿಸಲು ರಾಜ್ಯ ಸರ್ಕಾರದ ಆದೇಶ

ಬೆಂಗಳೂರು : ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮ ಸಂಖ್ಯೆ 8(ಜಿ)ನಲ್ಲಿ ಬರುವ ಹಡಪದ ಜಾತಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಈಗ ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮ ಸ್ಥಾಪಿಸಲು ಸರ್ಕಾರ … Continued

ಮೇದರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದ ಆದೇಶ: 8 ಸಮುದಾಯಗಳಿಗೆ ಅನುಕೂಲ

ಬೆಂಗಳೂರು: ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯವಾಗಿರುವ ಮೇದರ , ಬಟ್ಟರ್, ಗೌರಿ, ಗೌರಿ ಮರಾಠ, ಗೌರಿಗ, ಮೇದರಿ, ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಯವರ ಕಚೇರಿ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ … Continued

ರೋಹಿಣಿ ಸಿಂಧೂರಿ-ಡಿ.ರೂಪಾ ಜಗಳ : ರೋಹಿಣಿ ಸಿಂಧೂರಿ, ಡಿ.ರೂಪಾ ಜೊತೆ ಮನೀಶ್‌ ಮೌದ್ಗಿಲ್‌ಗೂ ಎತ್ತಂಗಡಿ ಶಾಕ್‌ ನೀಡಿದ ಸರ್ಕಾರ

ಬೆಂಗಳೂರು; ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಮದ್ದೆರೆಯಲು ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ (ಎಂಡಿ) ರೂಪಾ ಮೌದ್ಗಿಲ್ ಮತ್ತು ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಆದೇಶ … Continued

ರೋಹಿಣಿ ಸಿಂಧೂರಿ, ಡಿ.ರೂಪಾಗೆ ಸರ್ಕಾರದಿಂದ ನೋಟಿಸ್‌, ಖಡಕ್‌ ಸೂಚನೆ

ಬೆಂಗಳೂರು: ಸಾಮಾಜಿಕ ಜಾಲತಾಣ ಮತ್ತು ಮಾಧ್ಯಗಳ ಮುಂದೆ ಜಗಳವಾಡಿ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿರುವ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ.ರೂಪಾ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಸರ್ಕಾರಿ ಅಧಿಕಾರಿಯ ವಿರುದ್ಧದ ಆರೋಪಕ್ಕೆ ಮಾಧ್ಯಮ ಬಳಕೆ ಮಾಡಬೇಡಿ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆಯಿದೆ ಎಂದು ಮಹಿಳಾ ಅಧಿಕಾರಿಗಳಿಗಿಬ್ಬರಿಗೂ ರಾಜ್ಯ … Continued

ಪರೇಶ್ ಮೇಸ್ತಾ ಸಾವಿನ ಪ್ರಕರಣ: 112 ಜನರ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆದ ಸರ್ಕಾರ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ ಮೇಸ್ತಾ ಸಾವಿನ ಬಳಿಕ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ಕುರಿತಂತೆ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರದ ಕ್ಯಾಬಿನೆಟ್‌ನಲ್ಲಿ ನಿರ್ಧರಿಸಲಾಗಿದೆ. ಈಗ ಶಿರಸಿಯ 112, ಹೊನ್ನಾವರದ ಒಬ್ಬರು ಮತ್ತು ಕುಮಟಾದ ಒಬ್ಬರ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯಲಿದೆ. ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ … Continued

ಸಾಹಿತಿ-ಯಕ್ಷಗಾನ ಕಲಾವಿದ ಅಂಬಾತನಯ ಮುದ್ರಾಡಿ ನಿಧನ

ಉಡುಪಿ: ಸಾಹಿತಿ, ಕವಿ, ನಾಟಕಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷಗಾನ ಅರ್ಥಧಾರಿಯಾಗಿದ್ದ ಅಪರೂಪದ ವ್ಯಕ್ತಿತ್ವದ ಅಂಬಾತನಯ ಮುದ್ರಾಡಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಮಂಗಳವಾರ ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಹಾಗೂ ಶಿಷ್ರು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. ಅಂಬಾತನಯ ಮುದ್ರಾಡಿ ಅವರು 1935ರ … Continued

ಕೇಂದ್ರ-ರಾಜ್ಯ ಸರ್ಕಾರಗಳ 74 ಅಧಿನಿಯಮಗಳ ಕನ್ನಡ ಆವೃತ್ತಿ ಲೋಕಾರ್ಪಣೆ

ಬೆಂಗಳೂರು : ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾಯ್ದೆ ಮತ್ತು ಕಾನೂನುಗಳು ಜನಸಾಮಾನ್ಯರಿಗೆ ಸ್ಥಳೀಯ ಭಾಷೆಯಲ್ಲಿ ಒದಗಿಸುವ ಮೂಲಕ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾದ 42 ಕೇಂದ್ರ ಅಧಿನಿಯಮಗಳು ಹಾಗೂ 32 ರಾಜ್ಯ ಅಧಿನಿಯಮಗಳ ಕನ್ನಡ ಆವೃತ್ತಿಗಳನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ (J.C.Madhuswamy) ಲೋಕಾರ್ಪಣೆ ಮಾಡಿದರು. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, … Continued

ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಹಾಗೂ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಹಾಗೂ ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮ ಸ್ಥಾಪಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ … Continued

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

ಮಂಗಳೂರು: ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲು ನಿನ್ನೆ, ಭಾನುವಾರ ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆ ನೋವು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು … Continued

ಕಾಂಗ್ರೆಸ್‌ ಸೇರಿದ ಬಿಜೆಪಿ ಮಾಜಿ ಶಾಸಕ ಕಿರಣಕುಮಾರ್, ಜೆಡಿಎಸ್‌ನ ಸಂದೇಶ ನಾಗರಾಜ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಮ್ಮುಖದಲ್ಲಿ ತುಮುಕೂರು ಜಿಲ್ಲೆಯ ಬಿಜೆಪಿಯ ಮಾಜಿ ಶಾಸಕ ಕಿರಣಕುಮಾರ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ ಮೈಸೂರಿನ ಸಂದೇಶ ನಾಗರಾಜ ಇಂದು, ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ತುಮಕೂರು ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕರಾದ ಎಚ್. ನಿಂಗಪ್ಪ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ … Continued