ಧರ್ಮಸ್ಥಳ ಪ್ರಕರಣ: ಶಿವಮೊಗ್ಗದ ಕಾರಾಗೃಹದಿಂದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ : ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು, ಗುರುವಾರ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾರೆ. ಚಿನ್ನಯ್ಯನಿಗೆ ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ ಚಿನ್ನಯ್ಯ‌ ಕೋರ್ಟ್​ ಆದೇಶದಂತೆ ವೈಯಕ್ತಿಕ ಬಾಂಡ್ ಹಾಗೂ ಇತರೆ ಅಂಶಗಳನ್ನು ಸಲ್ಲಿಸದ ಹಿನ್ನೆಲೆಯಲ್ಲಿ, ಜಾಮೀನು ನೀಡುವ ಪ್ರಕ್ರಿಯೆ … Continued

ಕಾರವಾರದಲ್ಲಿ ಜಿಪಿಎಸ್ ಟ್ರ್ಯಾಕರ್ ಹೊಂದಿರುವ ವಲಸೆ ಸೀಗಲ್ ಪತ್ತೆ…!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನೌಕಾ ನೆಲೆ ಐಎನ್‌ಎಸ್ ಕದಂಬ ಬಳಿ ಇರುವ ಕಾರವಾರ ಕಡಲ ತೀರದಲ್ಲಿ ಜಿಪಿಎಸ್ ಟ್ರ್ಯಾಕರ್ ಅಳವಡಿಸಲಾದ ವಲಸೆ ಸೀಗಲ್ ಹಕ್ಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.   ಜಿಪಿಎಸ್​ ಟ್ರ್ಯಾಕರ್​​ (China GPS tracker) ಹೊಂದಿರುವ ಸೀಗಲ್​ ಪಕ್ಷಿ (ಕಡಲ ಹಕ್ಕಿ) ಕದಂಬ ಮಂಗಳವಾರ ಕಾಣಿಸಿಕೊಂಡಿರುವುದು ನೌಕಾನೆಲೆ ಪ್ರದೇಶದ ಬಳಿಯೇ ಇದೆ. … Continued

ನಡು ರಸ್ತೆಯಲ್ಲೇ ವ್ಯಕ್ತಿಗೆ ಹೃದಯಾಘಾತ ; ಪತ್ನಿ ಅಂಗಲಾಚಿ ಬೇಡಿಕೊಂಡರೂ ನೆರವಿಗೆ ಬಾರದ ಜನ…!

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನಿಗೆ ನಡುರಸ್ತೆಯಲ್ಲೇ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಂತೆ ಆತನ ಪತ್ನಿ ಎಷ್ಟೇ ಅಂಗಲಾಚಿದರೂ ಯಾರೂ ನೆರವಿಗೆ ಬಾರದ ಅಮಾನವೀಯ ಘಟನೆ ನಡೆದಿದೆ ಎಂದು ವರದಿಯಾಗಿದೆ. ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಪತಿಯನ್ನು ಉಳಿಸಿಕೊಳ್ಳಲು ಪತ್ನಿ ಬೈಕ್ ಮೇಲೆ ಆಸ್ಪತ್ರೆಗಳಿಂದ ಆಸ್ಪತ್ರೆಗೆ ಅಲೆದಾಡಿದರೂ, ಸಕಾಲಕ್ಕೆ ಚಿಕಿತ್ಸೆ ಸಿಗದೆ ಯುವಕ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ದಕ್ಷಿಣ ಬೆಂಗಳೂರಿನ ಬಾಲಾಜಿ … Continued

ವರನಿಗೆ ಸಿಗದ ರಜೆ; ಉಡುಪಿಯಲ್ಲಿ ನಡೆಯಿತು ಆನ್‌ಲೈನ್‌ ನಿಶ್ಚಿತಾರ್ಥ….!

ಉಡುಪಿ : ವರನಿಗೆ ರಜೆ ಸಿಗದ ಹಿನ್ನೆಲೆಯಲ್ಲಿ ವಧು-ವರ ವಿಡಿಯೋ ಕಾಲ್ ಮೂಲಕ ಆನ್‌ಲೈನ್‌ನಲ್ಲೇ ನಿಶ್ಚಿತಾರ್ಥ (Online engagement) ಮಾಡಿಕೊಂಡ ವಿದ್ಯಮಾನ ಉಡುಪಿಯಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ನಿವಾಸಿ ಸುಹಾಸ್ ಹಾಗೂ ಉಡುಪಿ ಮೂಲದ ಮೇಘನಾ ಅವರು ಆನ್‌ಲೈನ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸೋಮವಾರ ಉಡುಪಿಯ ಖಾಸಗಿ ಕಲ್ಯಾಣ … Continued

ಭಟ್ಕಳ ತಹಶೀಲ್ದಾರ ಕಚೇರಿಗೆ ಬಾಂಬ್‌ ಬೆದರಿಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಹಶೀಲ್ದಾರ ಕಚೇರಿಗೆ ಮಂಗಳವಾರ ಬೆಳಗ್ಗೆ  ಬಾಂಬ್‌ ಸ್ಪೋಟವಾಗಲಿದೆ ಎಂದು ಬೆದರಿಕೆ ಕರೆ ಬಂದಿದ್ದು, ಕಚೇರಿ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. “ಗೈನಾ ರಮೇಶ್@ಔಟ್‌ಲುಕ್ ಡಾಟ್ ಕಾಂ” ([email protected]) ಎಂಬ ಇಮೇಲ್ ಐಡಿಯಿಂದ ಕಳುಹಿಸಲಾಗಿದೆ ಎಂದು ತಿಳಿದುಬಂದಿದ್ದು, ತಮಿಳರು ಹಾಗೂ ಪಾಕಿಸ್ತಾನಿಗಳ ಸೇಡು: ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿ ಪ್ರಬಲ ಬಾಂಬ್ … Continued

ಸ್ನೇಹಿತರ ಜೊತೆ ಪಾರ್ಟಿ: ಪೊಲೀಸರು ಬಂದಿದ್ದಕ್ಕೆ ಹೆದರಿ ತಪ್ಪಿಸಿಕೊಳ್ಳುವಾಗ ಬಾಲ್ಕನಿಯಿಂದ ಬಿದ್ದು ಯುವತಿಗೆ ಗಾಯ

ಬೆಂಗಳೂರು: ನಗರದ ಬ್ರೂಕ್‌ಫೀಲ್ಡ್‌ನಲ್ಲಿರುವ ಹೋಟೆಲ್‌ವೊಂದರ ಬಾಲ್ಕನಿಯಿಂದ ಕೆಳಗೆ ಇಳಿಯಲು ಡ್ರೈನ್‌ಪೈಪ್ (ಕೊಳಾಯಿ) ಬಳಸಲು ಯತ್ನಿಸಿದ 21 ವರ್ಷದ ಯುವತಿಯೊಬ್ಬಳು ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ. ಪಾರ್ಟಿಯ ಗದ್ದಲದ ಕುರಿತು ದೂರು ಬಂದ ನಂತರ ಪೊಲೀಸರು ಹೋಟೆಲ್‌ಗೆ ಭೇಟಿ ನೀಡಿದ್ದರಿಂದ ಆತಂಕಗೊಂಡ ಯುವತಿ ತಪ್ಪಿಸಿಕೊಳ್ಳಲು ಈ ಪ್ರಯತ್ನ ಮಾಡಿದ್ದಳು ಎನ್ನಲಾಗಿದೆ. … Continued

ಕರ್ನಾಟಕದಲ್ಲಿ ತೀವ್ರಗೊಂಡ ಶೀತಗಾಳಿ: ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆ

ಬೆಂಗಳೂರು :  ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಶೀತಗಾಳಿಯಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳ ಜನ ತತ್ತರಿಸಿ ಹೋಗಿದ್ದಾರೆ. ಅದರಲ್ಲಿಯೂ ಉತ್ತರ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಧಾರವಾಡ, ವಿಜಯಪುರ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಇದು ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ … Continued

ಕಾಂಗ್ರೆಸ್​​​​​ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ಕರ್ನಾಟಕ ವಿಧಾನಸಭೆ ಹಿರಿಯ ಶಾಸಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಶಂಕಪ್ಪ ಅವರು ಸ್ಪರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 95 ನೇ ವಯಸ್ಸಿನ‌ ಶಾಮನೂರ ಶಿವಶಂಕರಪ್ಪ ಅವರು … Continued

ವಿಮಾನದಲ್ಲಿ ಅಮೆರಿಕನ್‌ ಮಹಿಳೆಯ ಪ್ರಾಣ ಉಳಿಸಿದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ

ಬೆಂಗಳೂರು: ವೃತ್ತಿಯಲ್ಲಿ ವೈದ್ಯರಾಗಿರುವ ಬೆಳಗಾವಿ ಜಿಲ್ಲೆಯ ಖಾನಾಪುರದ ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ ಅವರು ಗೋವಾ-ನವದೆಹಲಿ ವಿಮಾನ ಹಾರಾಟದ ವೇಳೆ ತೀವ್ರ ಅಸ್ವಸ್ಥೆಗೆ  ಒಳಗಾಗಿದ್ದ ಅಮೆರಿಕಾದ ಮಹಿಳಾ ಪ್ರಯಾಣಿಕರೊಬ್ಬರ ಜೀವವನ್ನು ಉಳಿಸಿದ್ದಾರೆ.  ಡಾ. ನಿಂಬಾಳ್ಕರ್ ಅವರು, ಭಾನುವಾರ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ “ವೋಟ್ ಚೋರಿ” ರ‍್ಯಾಲಿಯಲ್ಲಿ ಭಾಗವಹಿಸಲು ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ … Continued

ಕರ್ನಾಟಕದಲ್ಲಿ ಮುಂದುವರಿಯಲಿದೆ ವಿಪರೀತ ಚಳಿ

ಬೆಂಗಳೂರು : ಕರ್ನಾಟಕದಲ್ಲಿ ವಿಪರೀತ ಚಳಿ ಕಂಡುಬರುತ್ತಿದೆ. ವಿಜಯಪುರದಲ್ಲಿ ಶುಕ್ರವಾರ ರಾಜ್ಯದಲ್ಲೇ ಅತಿ ಕನಿಷ್ಠ ತಾಪಮಾನ 7 ಡಿಗ್ರಿ ಸೆ. ದಾಖಲಾಗಿದೆ. ಭಾನುವಾರ (ಡಿ.14) ಕೂಡ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ ಸೇರಿ … Continued