ಫ್ಯಾಶನ್‌ ಡಿಸೈನರ್‌ ಪ್ರಸಾದ ಬಿದ್ದಪ್ಪ ಮಗಳ ಜೊತೆ ಅಭಿಷೇಕ ಅಂಬರೀಶ ಮದುವೆ ನಿಶ್ಚಿತಾರ್ಥ

ರೆಬೆಲ್‌ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ ಅವರು ಶೀಘ್ರದಲ್ಲಿ ಸಪ್ತಪದಿ ತುಳಿಯಲಿದ್ದು, ಅವರ ಮದುವೆ ನಿಶ್ಚಿತಾರ್ಥವು ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಜೊತೆ ಇಂದು, ಭಾನುವಾರ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನಲ್ಲಿ ನಡೆಯಿತು. ಆಪ್ತರ ಸಮ್ಮುಖದಲ್ಲಿ ಅಭಿಷೇಕ್‌ ಅಂಬರೀಶ ಮತ್ತು ಅವಿವಾ ಬಿದ್ದಪ್ಪ ಜೊತೆ ಎಂಗೇಜ್‌ಮೆಂಟ್‌ ನಡೆದಿದ್ದು, ತಾಯಿ ಸುಮಲತಾ ಅಂಬರೀಶ, … Continued

ಶಿವಮೊಗ್ಗದಲ್ಲಿ ಲಾರಿ-ಕಾರು ನಡುವೆ ಡಿಕ್ಕಿ: ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಶಿವಮೊಗ್ಗ: ಇಂದು ಭಾನುವಾರ, ಬೆಳ್ಳಂಬೆಳಗ್ಗೆ ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದ ಬಳಿ ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಮೃತರನ್ನು ವಿವೇಕ (21), ಕಾರ್ತಿಕ (23) ಹಾಗೂ ಮೋಹನ (22) ಎಂದು ಗುರುತಿಸಲಾಗಿದೆ. ರುದ್ರೇಶ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ … Continued

ರಾಜ್ಯದ ದೇವಾಲಯಗಳಲ್ಲಿ ಸಲಾಂ ಆರತಿ, ದೀವಟಿಗೆ ಸಲಾಂ ಪೂಜಾ ಕಾರ್ಯಗಳ ಹೆಸರು ಬದಲಾವಣೆಗೆ ನಿರ್ಧಾರ: ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ “ದೀವಟಿಗೆ ಸಲಾಂ” “ಸಲಾಂ ಆರತಿ” ಹಾಗೂ “ಸಲಾಂ ಮಂಗಳಾರತಿ” ಪೂಜಾಕಾರ್ಯಗಳ ಹೆಸರನ್ನು ಬದಲಾಯಿಸಿ ನಮ್ಮ ಸಂಪ್ರದಾಯದ ಹೆಸರನ್ನು ಇಡುವ ಬಗ್ಗೆ ವಿಸ್ತ್ರತವಾಗಿ ಚರ್ಚಿಸಲಾಗಿದೆ. ಈ ಪೂಜಾಕಾರ್ಯಗಳ ಹೆಸರನ್ನು ಮಾತ್ರ ಸ್ಥಳೀಯ ಭಾಷೆಯ ಪದಗಳಿಗೆ ಬದಲಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಧಾರ್ಮಿಕ … Continued

ಭೀಕರ ಅಪಘಾತ: ಮಗು ಸೇರಿ ಮೂವರು ಸ್ಥಳದಲ್ಲೇ ಸಾವು

ಉಡುಪಿ: ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ಇಂದು(ಶನಿವಾರ) ಬೆಳಗ್ಗೆ ಖಾಸಗಿ ಬಸ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ವರ್ಷದ ಮಗು ಸೇರಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಪ್ರದೇಶದಲ್ಲಿ ಘಟನೆ ನಡೆದಿದ್ದು, ಶನಿವಾರ ಬೆಳಗ್ಗೆ 7 ರ ವೇಳೆಗೆ ಘಟನೆ … Continued

ಮಾಂಡೌಸ್‌ ಚಂಡಮಾರುತದ ಪ್ರಭಾವ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಥಂಡಿ ವಾತಾವರಣ ಸೃಷ್ಟಿ

ಬೆಂಗಳೂರು: ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಸುತ್ತಿರುವ ಮಾಂಡೌಸ್‌ ಚಂಡಮಾರುತ(Mandous cyclone)ದ ದುರ್ಬಲ ಪರಿಚಲನೆ ಕರ್ನಾಟಕದಲ್ಲಿಯೂ ಹಾದು ಹೋಗುತ್ತಿದ್ದು, ಕರ್ನಾಟಕದ ದಕ್ಷಿಣ ಒಳನಾಡನ್ನು ಪ್ರವೇಶಿಸಿದೆ. ಪರಿಣಾಮ, ಬೆಂಗಳೂರಿನಲ್ಲಿ ತುಂತುರು ಮಳೆ ಸುರಿಯಲಾರಂಭಿಸಿದೆ ಹಾಗೂ ರಾಜ್ಯಾದ್ಯಂತ ಥಂಡಿ ವಾತಾವರಣವನ್ನು ಸೃಷ್ಟಿಸಿದೆ. ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೆಯೂ ಆಗಲಿದ್ದು, ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಣೆ … Continued

ಅಧಿಕಾರಿಗಳನ್ನು ಅವರ ತವರು ಜಿಲ್ಲೆಗಳಿಗೆ ವರ್ಗಾಯಿಸುವಂತಿಲ್ಲ, ನಿಯೋಜಿಸುವಂತಿಲ್ಲ :2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರಕ್ರಿಯೆಗಳನ್ನು ಆರಂಭಿಸಿರುವ ಕೇಂದ್ರ ಚುನಾವಣಾ ಆಯೋಗ (ಇಸಿಐ) ಶುಕ್ರವಾರ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆಯ ಅವಧಿಯು 2023ರ ಮೇ 24 ರಂದು ಕೊನೆಗೊಳ್ಳಲಿದೆ. ಕೇಂದ್ರ ಚುನಾವಣಾ ಆಯೋಗವು ಅಧಿಕಾರಿಗಳ ವರ್ಗಾವಣೆ ಅಥವಾ ಪೋಸ್ಟಿಂಗ್ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದೆ. ಯಾವುದೇ ಸರ್ಕಾರಿ ಅಧಿಕಾರಿಗಳು ಚುನಾವಣೆಯೊಂದಿಗೆ … Continued

ಗಡಿ ವಿವಾದ: ಡಿ.14ರಂದು ಕರ್ನಾಟಕ, ಮಹಾರಾಷ್ಟ್ರ ಸಿಎಂಗಳನ್ನು ಭೇಟಿ ಮಾಡಲಿರುವ ಅಮಿತ್ ಶಾ; ಎನ್‌ಸಿಪಿ ನಾಯಕ

ನವದೆಹಲಿ: ಎರಡು ರಾಜ್ಯಗಳ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಎನ್‌ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಕೇಂದ್ರ ಗೃಹ ಸಚಿವ ಶಾ ಅವರನ್ನು ಭೇಟಿ ಮಾಡಿದ … Continued

ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ ಆಯೋಜನೆ ; ಮಹಾ ಸಿಎಂ ಶಿಂಧೆ, ಪವಾರ, ಠಾಕ್ರೆಗೆ ಅಹ್ವಾನ

ಬೆಳಗಾವಿ : ಬೆಳಗಾವಿಯಲ್ಲಿ ಡಿಸೆಂಬರ್ 19ರಿಂದ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ಆರಂಭವಾಗಲಿದೆ. ಪ್ರತಿ ವರ್ಷದಂತೆ ಇದಕ್ಕೆ ಪ್ರತಿಯಾಗಿ ಅಧಿವೇಶನ ಸಮಯದಲ್ಲೇ ಎಂಇಎಸ್ ಮಹಾಮೇಳಾವನ್ನು ಡಿಸೆಂಬರ್ 19 ರಂದು ಆಯೋಜಿಸಿದೆ. ಈ ವರ್ಷ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಎಂಇಎಸ್ ಈ ಬಾರಿ ಮಹಾಮೇಳಾವವನ್ನು ಜೋರಾಗಿ ನಡೆಸಲು ತಯಾರಿ ನಡೆಸುತ್ತಿದೆ. ಡಿಸೆಂಬರ್ 19 … Continued

ಮಂಗಳೂರು ಕಾಲೇಜಿನ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ 4 ವಿದ್ಯಾರ್ಥಿಗಳ ಅಮಾನತು

ಮಂಗಳೂರು: ಮಂಗಳೂರಿನ ಇಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಕಾಲೇಜ್ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ಹಾಡಿಗೆ ಡ್ಯಾನ್ಸ್ ಮಾಡುವಾಗ ಬುರ್ಖಾ ಧರಿಸಿ ಕಾಣಿಸಿಕೊಂಡಿದ್ದು, ನೃತ್ಯವು ಬುರ್ಖಾ ಮತ್ತು ಹಿಜಾಬ್ ಅನ್ನು ಅಣಕಿಸುತ್ತಿದೆ ಎಂಬ ಆರೋಪದ ನಂತರ ವಿವಾದಕ್ಕೆ ಕಾರಣವಾಗಿದೆ. ಘಟನೆ ಮಂಗಳೂರಿನ ವಾಮಂಜೂರು ಸೇಂಟ್‌ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಒಂದೇ ಸಮುದಾಯದವರಾಗಿದ್ದು, ನಾಲ್ವರು ವಿದ್ಯಾರ್ಥಿಗಳನ್ನು ಕಾಲೇಜು … Continued

ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಪುನರಾರಂಭ

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿವಿವಾದ ಉಲ್ಬಣಗೊಂಡಿದ್ದ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಬೆಳಗಾವಿ-ಮಹಾರಾಷ್ಟ್ರ ನಡುವಿನ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಮತ್ತೆ ಆರಂಭವಾಗಿದೆ. ಬೆಳಗಾವಿ-ಮಹಾರಾಷ್ಟ್ರ ನಡುವೆ ಬೆಳಗಾವಿಯಿಂದ 400ಕ್ಕೂ ಹೆಚ್ಚು ಬಸ್ ಸಂಚರಿಸುತ್ತಿದ್ದು, ರಾಜ್ಯದಿಂದ ಮಹಾರಾಷ್ಟ್ರದ ವಿವಿಧ ನಗರಗಳಿಗೆ ಬಸ್ ಸಂಚಾರ ಆರಂಭಗೊಂಡಿದೆ. ಬೆಳಗಾವಿ ಹಾಗೂ ಇತರ ಭಾಗಗಳಿಂದ ಮಹಾರಾಷ್ಟ್ರದ ಕೊಲ್ಲಾಪುರ, ನಾಸಿಕ, ಮುಂಬೈ, ಪುಣೆ … Continued