ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ ಸಿಗಲಿದೆ: ಮಹಾರಾಷ್ಟ್ರ ಗಡಿ ವಿವಾದ ಕುರಿತು ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದೊಂದಿಗಿನ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ ಸಿಗಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗಡಿ ವಿವಾದದಿಂದ ಉಂಟಾದ ಉದ್ವಿಗ್ನತೆಯ ಬಗ್ಗೆ ಮಹಾರಾಷ್ಟ್ರ ಸರ್ಕಾರವನ್ನು ದೂಷಿಸಿದ ಬೊಮ್ಮಾಯಿ, ರಾಜ್ಯದ ಗಡಿ ಮತ್ತು ಅದರ ಜನರನ್ನು ರಕ್ಷಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದ … Continued

ಮತದಾರರ ಪಟ್ಟಿ ಪರಿಷ್ಕರಣೆ, ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ: ಅಧಿಕಾರಿ ಅಮಾನತು

ಧಾರವಾಡ: ಹುಬ್ಬಳ್ಳಿ- ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ -74 ರ ವ್ಯಾಪ್ತಿಯ ಧಾರವಾಡದ ಮತಗಟ್ಟೆ ಸಂಖ್ಯೆ 105 ರ ಮತಗಟ್ಟೆ ಮಟ್ಟದ ಅಧಿಕಾರಿ ಸಚಿನ್ ನಾಯ್ಕ ಅವರನ್ನು ಅಮಾನತು ಮಾಡಲಾಗಿದೆ. ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ಸೇವೆಯಿಂದ ಅಮಾನತು ಮಾಡಿ, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ … Continued

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಈ ವಿಚಾರವನ್ನು ಗೃಹ ಸಚಿವ ಅಮಿತ್ ಶಾ ಗಮನಕ್ಕೆ ತರುತ್ತೇನೆ-ದೇವೇಂದ್ರ ಫಡ್ನವೀಸ್

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಂಗಳವಾರ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ತಮ್ಮ ರಾಜ್ಯಗಳ ಗಡಿ ಭಾಗಗಳಲ್ಲಿ ಚಾಲ್ತಿಯಲ್ಲಿರುವ ಉದ್ವಿಗ್ನತೆಯ ಕುರಿತು ಚರ್ಚಿಸಿದರು. ಕರ್ನಾಟಕದ ಹಲವು ಭಾಗಗಳಲ್ಲಿ ಮಹಾರಾಷ್ಟ್ರದ ಬಸ್‌ಗಳ ಮೇಲೆ ನಡೆದ ದಾಳಿಯ ಬಗ್ಗೆ ಫಡ್ನವೀಸ್ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಿಂದ ಬರುವ ಎಲ್ಲಾ ಬಸ್‌ಗಳಿಗೆ ಭದ್ರತೆ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕರ್ನಾಟಕ ಸಿಎಂಗೆ ಎಚ್ಚರಿಕೆ ನೀಡಿದ ಶರದ್ ಪವಾರ್

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯಿಂದ ಕರ್ನಾಟಕ-ಮಹಾರಾಷ್ಟ್ರ ಗಡಿ ಗ್ರಾಮಗಳಲ್ಲಿ “ಭಯದ ವಾತಾವರಣ” ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ. ಮಂಗಳವಾರ ಮುಂಬೈನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳ ಮೇಲಿನ ದಾಳಿಯನ್ನು ಉಲ್ಲೇಖಿಸಿ ಬೊಮ್ಮಾಯಿ ಅವರನ್ನು ದೂಷಿಸಿದ ಪವಾರ್, ಎರಡೂ ರಾಜ್ಯಗಳ … Continued

ಸ್ಮರಣ ಶಕ್ತಿ: ಎರಡು ವರ್ಷದ ಅನಿಕೇತ್‌ ಭಟ್‌ಗೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌-2022 ಪ್ರಮಾಣಪತ್ರ

ಬೆಂಗಳೂರು: ಬುದ್ಧಿಮತ್ತೆ ಕಾರಣಕ್ಕೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅನಿಕೇತ್ ಭಟ್ ಎಂಬ ಎರಡು ವರ್ಷವೂ ಆಗದ ಪುಟ್ಟ ಬಾಲಕನಿಗೆ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌-2022 ಪ್ರಮಾಣ ಪತ್ರ ನೀಡಲಾಗಿದೆ. ಈತ ನವೆಂಬರ್ 15, 2022 ರಂದು ದೃಢಪಡಿಸಿದಂತೆ 1 ವರ್ಷ ಮತ್ತು 10 ತಿಂಗಳ ವಯಸ್ಸಿಗೆ 15 ಕಾಡು ಪ್ರಾಣಿಗಳು, 15 ಸಾಕು ಪ್ರಾಣಿಗಳು, … Continued

ಕೆಎಸ್‌ಆರ್‌ಪಿ-ಐಆರ್‌ಬಿ ರಿಸರ್ವ್‌ ಸಬ್ ಇನ್ಸ್ ಪೆಕ್ಟರ್ ನೇಮಕ: ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯ ಮೀಸಲು ಪೊಲೀಸ್‌ ಪಡೆ (ಕೆಎಸ್‌ಆರ್‌ಪಿ-ಐಆರ್‌ಬಿಯಲ್ಲಿ ಖಾಲಿ ಇರುವ 70 ರಿಸರ್ವ್ ನ್‌ಇನ್ಸ್ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಲಿಖಿತ ಪರೀಕ್ಷೆಗಳನ್ನು ದಿನಾಂಕ ಡಿಸೆಂಬರ್‌ 18ರಂದು ಬೆಳಿಗ್ಗೆ 11 ರಿಂದ 12 ಗಂಟೆಗೆ ಪತ್ರಿಕೆ-1 (ಪ್ರಬಂಧ, ಭಾಷಾಂತರ ಬರಹ), ಮಧ್ಯಾಹ್ನ … Continued

ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಬಣ್ಣ ಎರಚಿದ ಶಿವಸೇನಾ ಕಾರ್ಯಕರ್ತರು

ಪುಣೆ : ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದದ ಮಧ್ಯೆ, ಪುಣೆಯ ಖಾಸಗಿ ಬಸ್ ಪಾರ್ಕಿಂಗ್‌ನಲ್ಲಿ ನಿಲ್ಲಿಸಲಾಗಿದ್ದ ಕರ್ನಾಟಕದ ನಂಬರ್ ಪ್ಲೇಟ್‌ಗಳ ಬಸ್‌ಗಳ ಮೇಲೆ ಮಂಗಳವಾರ ದಾಳಿ ನಡೆಸಿದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಹಲವಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಪುಣೆ ನಗರದ ಸ್ವರ್ಗೇಟ್ ಪ್ರದೇಶದಲ್ಲಿ ಶಿವಸೇನೆಯ ಕಾರ್ಯಕರ್ತರು ಖಾಸಗಿ ಬಸ್ ನಿಲ್ದಾಣಕ್ಕೆ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಉಲ್ಬಣ: ಮಹಾರಾಷ್ಟ್ರ ಟ್ರಕ್‌ಗಳ ಮೇಲೆ ಕಲ್ಲು ತೂರಾಟ

ಬೆಳಗಾವಿ: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಭುಗಿಲೆದ್ದಿದ್ದು, ಗಡಿ ತಗಾದೆ ಮಾಡುತ್ತಿರುವ ಮಹಾರಾಷ್ಟ್ರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದು, ಮಹಾರಾಷ್ಟ್ರ ನಂಬರ್‌ ಪ್ಲೇಟ್‌ ಇರುವ ವಾಹನಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ. ಮಹಾರಾಷ್ಟ್ರ ಗಡಿ ತಂಟೆ ತೆಗೆದ ಹಿನ್ನಲೆ … Continued

ಖರ್ಗೆ, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ಎಂಎಲ್‌ಸಿ ವಿಶ್ವನಾಥ: ಚರ್ಚೆಗೆ ಗ್ರಾಸವಾದ ಈ ನಡೆ

ಬೆಂಗಳೂರು: ವಿಧಾನಸಭೆ ಚುನಾವಣೆ ಬರುತ್ತಿದ್ದಂತೆ ಕೆಲವು ನಾಯಕರ ನಡೆ ಕುತೂಹಲಕ್ಕೆ ಕಾರಣವಾಗಿದೆ. ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಎರಡು ದಿನಗಳ ಇಬ್ಬರು ಘಟಾನುಘಟಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಭೇಟಿಯು ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್‌ … Continued

ಉದ್ಯಮಿ ಪುತ್ರ ನಾಪತ್ತೆ ಪ್ರಕರಣ ಭೇದಿಸಿದ ಪೊಲೀಸರು ​: ಕೊನೆಗೂ ಶವ ಪತ್ತೆ, ತಂದೆ ಸೇರಿ ನಾಲ್ವರ ಬಂಧನ, ಮಗನ ಕೊಲೆಗೆ ತಂದೆಯಿಂದಲೇ ಸುಪಾರಿ?!

ಹುಬ್ಬಳ್ಳಿ: ಮಗನ ವಿಪರೀತ ದುಶ್ಚಟ ಮತ್ತು ಕಿರುಕುಳಕ್ಕೆ ಬೇಸತ್ತು ತಂದೆಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆಂದು ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶವ ಕಲಘಟಗಿ ತಾಲೂಕಿನ ಕಾಡಿನಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೊಲೆಯಾದ ಕೇಶ್ವಾಪುರ ಕುಸುಗಲ್ಲ ರಸ್ತೆ ಅರಿಹಂತನಗರದ ಅಖಿಲ (26) ಎಂಬಾತನ ತಂದೆ, ಕಟ್ಟಡ … Continued