ನಾಯಕತ್ವದ ಬದಲಾವಣೆ ತಿಕ್ಕಾಟದ ಮಧ್ಯೆ ನಡೆದ ಸಿದ್ದರಾಮಯ್ಯ-ಶಿವಕುಮಾರ ʼಬ್ರೇಕ್‌ ಫಾಸ್ಟ್‌ʼ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಬಣದ ನಡುವೆ ತಿಕ್ಕಾಟ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಶನಿವಾರ ಬೆಳಿಗ್ಗೆ ಉಪಾಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ ಅವರು ಈ ಕುರಿತ ಫೋಟೋ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ … Continued

ದಿತ್ವಾ ಚಂಡಮಾರುತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಶ್ರೀಲಂಕಾದ ಕರಾವಳಿ ಮತ್ತು ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯ ಮೇಲಿರುವ ‘ದಿತ್ವಾ’ (Ditwah) ಚಂಡಮಾರುತವು ಈ ಚಂಡಮಾರುತವು ನವೆಂಬರ್ 30 ರ ಮುಂಜಾನೆ ವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು  ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಳಿಯ ನೈಋತ್ಯ ಬಂಗಾಳಕೊಲ್ಲಿಯನ್ನು ತಲುಪುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ನವೆಂಬರ್ 30 ರಂದು ಗುಡುಗು ಸಹಿತ ಮಳೆಯಾಗಲಿದೆ ಹಾಗೂ … Continued

ಹೈಕಮಾಂಡ್ ಸೂಚನೆ ಮೇರೆಗೆ ನಾಳೆ (ನ.29) ಬೆಳಿಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ..?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಆಂತರಿಕ ಕಲಹವನ್ನು ಕೊನೆಗೊಳಿಸಲು ಪಕ್ಷದ ಹೈಕಮಾಂಡ್ ಶುಕ್ರವಾರ ಮಧ್ಯಪ್ರವೇಶಿಸಿದ್ದು, ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸೂಚಿಸಿದೆ ಎಂದು ಸುದ್ದಿ ಹೊರಬಿದ್ದಿದೆ. ಹೈಕಮಾಂಡ್‌ನ ಸೂಚನೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ನವೆಂಬರ್‌ 29) ಉಪಾಹಾರಕ್ಕಾಗಿ … Continued

ವೀಡಿಯೊ…| ಉಡುಪಿಯಲ್ಲಿ ʼನವ ಸಂಕಲ್ಪʼದ ಮಂತ್ರ ಪಠಿಸಿದ ಪ್ರಧಾನಿ ಮೋದಿ

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷ ಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ 9 ಸಂಕಲ್ಪಗಳ ಬಗ್ಗೆ ಒತ್ತಿ ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನಂತರ ಪಾಲ್ಗೊಂಡಿದ್ದ ಜನರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಬೇಕು. ಇವು ವರ್ತಮಾನ ಮತ್ತು … Continued

ದಿತ್ವಾ ಚಂಡಮಾರುತ : ಕರ್ನಾಟಕದಲ್ಲಿಯೂ ಭಾರಿ ಮಳೆ ಸಾಧ್ಯತೆ

ನವದೆಹಲಿ: ಶ್ರೀಲಂಕಾದ ಕರಾವಳಿ ಮತ್ತು ಅದರ ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಸುಳಿಯುತ್ತಿರುವ ‘ದಿತ್ವಾ’ ಚಂಡಮಾರುತವು (Cyclonic Storm Ditwah) ಉತ್ತರ-ವಾಯುವ್ಯದ ಕಡೆಗೆ ಸಾಗುತ್ತಿದ್ದು, ನವೆಂಬರ್ 30ರ ಮುಂಜಾನೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಮತ್ತಷ್ಟು ಸಮೀಪಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿಯೂ ನಾಲ್ಕೈದು … Continued

ವೀಡಿಯೊ..: ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್‌ ಶೋ

ಉಡುಪಿ : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಪಾಲ್ಗೊಳ್ಳಲು ಅವರು (ನವೆಂಬರ್‌ 28) ಇಂದು, ಶುಕ್ರವಾರ ಉಡುಪಿಗೆ ಆಗಮಿಸಿದ್ದು, ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಜನರು ಮೋದಿಯವರಿಗೆ ಹೂ ಮಳೆ ಸುರಿಸುವ ಮೂಲಕ … Continued

‘ಮಾತು’ ಜಗತ್ತಿಗೆ ಒಳಿತಾಗದ ಹೊರತು ಅದು ʼಶಕ್ತಿʼಯಲ್ಲ; ಡಿಕೆಶಿ ಪೋಸ್ಟ್​​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವಿನ ಮುಖ್ಯಮಂತ್ರಿ ಹುದ್ದೆಯ ಪೈಪೋಟಿಯ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್‌ಗೆ ನೀಡಿದ ಜನಾದೇಶ ಕೇವಲ ‘ಒಂದು ಕ್ಷಣದ’ ಸಂಗತಿಯಲ್ಲ, ಬದಲಿಗೆ ಐದು ವರ್ಷಗಳ ಸಂಪೂರ್ಣ ಜವಾಬ್ದಾರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ‘ಎಕ್ಸ್’ (ಹಿಂದಿನ ಟ್ವಿಟರ್) … Continued

ಹೊನ್ನಾವರ | ಮುಳ್ಳೋಡು ಸಮೀಪ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ತಾಲೂಕಿನ ಮುಳ್ಳೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ 200 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. … Continued

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಎಕ್ಸ್ ಸಂದೇಶ ; ಹೈಕಮಾಂಡಿಗೆ ಸಿಎಂ ಹುದ್ದೆ ವಾಗ್ದಾನ ನೆನಪಿಸಿದರೇ ಡಿಕೆಶಿ?

ಬೆಂಗಳೂರು:ಕರ್ನಾಟಕದ ಕಾಂಗ್ರೆಸ್‌(Congress)ನಲ್ಲಿ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆಚರ್ಚೆ ತೀವ್ರಗೊಂಡಿರುವ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಗುರುವಾರ ನಿಗೂಢ ಹಾಗೂ ಮಾರ್ಮಿಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್‌ಗೆ ಸೂಕ್ಷ್ಮ ಸಂದೇಶವಾಗಿರಬಹುದು ಎಂದು ನೋಡಲಾಗುತ್ತಿದೆ. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಶಿವಕುಮಾರ ಅವರು, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ!. ವರ್ಡ್ ಪವರ್ ಈಸ್ ವರ್ಲ್ಡ್ … Continued

ಕಾರವಾರ : ಡಿಸೆಂಬರ್ 22 ರಿಂದ 7 ದಿನಗಳ ಕರಾವಳಿ ಉತ್ಸವ

ಕಾರವಾರ : ನಗರದ ರವೀಂದ್ರನಾಥ ಠಾಗೂರ್ ಕಡಲತೀರದಲ್ಲಿ ಡಿಸೆಂಬರ್ 22 ರಿಂದ 28 ರ ವರೆಗೆ 7 ದಿನಗಳ ಕಾಲ ಕರಾವಳಿ ಉತ್ಸವ ಆಯೋಜಿಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಡಿಸೆಂಬರ್ 22 ರಂದು ಮುಖ್ಯಮಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ವಿವಿಧ ಸಚಿವರು, ಜಿಲ್ಲೆಯ ಎಲ್ಲ … Continued