ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್​ ಹಿರಿಯ ನಾಯಕ ಸಿದ್ದರಾಮಯ್ಯ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೋಗಿದ್ದು, ಹೋರರೀಗಿಯಾಗಿಯೇ ಆಸ್ಪತ್ರೆಗೆ ಹೋಗಿದ್ದಾರೆ ಎಂದು ಹೇಳಲಾಗಿದೆ. ಅವರಿಗೆ ಪೈಲ್ಸ್‌ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದು, ಇಂದು … Continued

ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮಂಡ್ಯ: ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ವಿಷವುಣಿಸಿ ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ತಾಯಿ ಉಸ್ನಾ ಕೌಸರ್‌, ತನ್ನ ಮಕ್ಕಳಾದ ಹಾರಿಸ್‌(7), ಆಲಿಸಾ (4), ಫಾತಿಮಾ(2)ಗೆ ವಿಷವುಣಿಸಿ ಅವರು ಸಾವಿಗೀಡಾದ ನಂತರ ತಾನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವೃತ್ತಿಯಲ್ಲಿ ಕಾರ್ … Continued

ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜು ತೆರೆಯುವ ಪ್ರಸ್ತಾಪವಿಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗಾಗಿ 10 ಕಾಲೇಜುಗಳನ್ನು ತೆರೆಯಲು ಕರ್ನಾಟಕ ಸರ್ಕಾರವು ವಕ್ಫ್ ಮಂಡಳಿಗೆ ಒಪ್ಪಿಗೆ ನೀಡಿದೆ ಎಂಬ ವರದಿಗಳನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮ್ಮ ಆಡಳಿತದ ಯಾವುದೇ ಮಟ್ಟದಲ್ಲಿ ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಗುರುವಾರ ಹೇಳಿದ್ದಾರೆ. ಇದು ವಕ್ಫ್ ಮಂಡಳಿಯ ಅಧ್ಯಕ್ಷರ ವೈಯಕ್ತಿಕ ದೃಷ್ಟಿಕೋನವಾಗಿರಬಹುದು ಮತ್ತು ಅವರ ಸರ್ಕಾರದ … Continued

ಧಾರವಾಡ: ಜೆಎಸ್‌ಎಸ್ ಸಂಸ್ಥೆಯಲ್ಲಿ 45 ದಿನಗಳ ಉಚಿತ ತರಬೇತಿ

ಧಾರವಾಡ: ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆಎಸ್‌ಎಸ್ ಸಂಸ್ಥೆಯಲ್ಲಿ ಬಾಷ್ ಕಂಪನಿ ಸಹಯೋಗದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ ನಂತರ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳಿಗೆ ಸಂವಹನ ಕಲೆ, ಬೇಸಿಕ್ ಕಂಪ್ಯೂಟರ್, ಸ್ಪೋಕನ್ ಇಂಗೀಷ, ಜೀವನ ಕೌಶಲ್ಯ, ಸಂದರ್ಶನ ಕಲೆ ಇವುಗಳ ಬಗ್ಗೆ 45 ದಿನಗಳ ತರಬೇತಿ ನೀಡಲಾಗುತ್ತದೆ. ತರಬೇತಿ ನಂತರ ಬಾಷ್ ಕಂಪನಿಯ ಪ್ರಮಾಣ ಪತ್ರದೊಂದಿಗೆ ಸ್ಥಳೀಯವಾಗಿ ಲಭ್ಯವಿರುವ ಉದ್ಯೋಗ ಪಡೆಯಲು … Continued

ಜೀವ ಬೆದರಿಕೆ : ದೂರು ದಾಖಲಿಸಿದ ಪ್ರಮೋದ ಮುತಾಲಿಕ

ಧಾರವಾಡ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಅಪರಿಚತ ವ್ಯಕ್ತಯಿಂದ ಜೀವ ಬೆದರಿಕೆ ಸಂದೇಶವೊಂದು ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ಮೊಬೈಲ್ ನಂಬರ್‌ನಿಂದ ವಾಟ್ಸಪ್ ಬಂದ ವಾಯ್ಸ್ ಮೆಸೇಸ್‌ನಲ್ಲಿ ಆ ವ್ಯಕ್ತಿ ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಮುತಾಲಿಕ್‌ ಅವರು ಆ ವ್ಯಕ್ತಿಯ ಮೇಲೆ … Continued

ನಾನು, ರಮೇಶ ಜಾರಕಿಹೊಳಿ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ : ಊಹಾಪೋಹಗಳಿಗೆ ತೆರೆ ಎಳೆದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : 2023 ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಮತ್ತು ನನ್ನ ಶಾಸಕ ಸಹೋದರ ರಮೇಶ ಜಾರಕಿಹೊಳಿಯವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತೇವೆ ಎಂದು ಹೇಳುವ ಮೂಲಕ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ತಾಲೂಕಿನ ರಾಜಾಪುರ ಗ್ರಾಮದಲ್ಲಿ ಗುರುವಾರ ಸಂಜೆ ಅರಭಾವಿ ಮತ್ತು ಗೋಕಾಕ ಮತಕ್ಷೇತ್ರಗಳ ಹಾಲುಮತ ಕುರುಬ … Continued

ಬೆಂಗಳೂರು ನಗರದಲ್ಲಿ ಚಿರತೆ ಪ್ರತ್ಯಕ್ಷ : ಆತಂಕ

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ತುರಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿದೆ. ನಾಲ್ಕು ಚಿರತೆಗಳು ಓಡಾಡುತ್ತಿರುವುದು ಸಿಸಿಟಿವಿಗಳಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಬೋನ್ ಇಡುವ ಮೂಲಕ ಈ ಚಿರತೆಗಳನ್ನು ಸೆರೆಗೆ ಹಿಡಿಯಲು ಈಗ ಅರಣ್ಯ ಅಧಿಕಾರಿಗಳು … Continued

ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ : ಕರ್ನಾಟಕ ಸೇರಿ 3 ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಅಂಡಮಾನ್, ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ರೂಪುಗೊಳ್ಳುತ್ತಿರುವ ಹಿನ್ನಲೆಯಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಈಗಾಗಲೇ ಮೋಡ ಕವಿದ ವಾತಾವರಣವಿದ್ದು, ಡಿಸೆಂಬರ್ 5ರ ವರೆಗೆ … Continued

ಮಂಗಳೂರು ಬಾಂಬ್ ಸ್ಫೋಟ ಪ್ರಕರಣ ಅಧಿಕೃತವಾಗಿ ಎನ್​ಐಎಗೆ ಹಸ್ತಾಂತರ

ಮಂಗಳೂರು: ಮಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಎನ್‌ಐಎ ತನಿಖೆಗೆ ಹಸ್ತಾಂತರಿಸಿದೆ. ಈಗಾಗಲೇ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿ ಶಾರಿಕ್‌ ಹೇಳಿಕೆಯನ್ನು ವೀಡಿಯೋ ದಾಖಲೀಕರಣ ಮಾಡಿಕೊಂಡಿದ್ದಾರೆ. ಗುರುವಾರದಿಂದ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೆತ್ತಿಕೊಳ್ಳಲಿದ್ದು, ಶಾರಿಕ್‌ನಿಂದ ಪ್ರತ್ಯೇಕ ಹೇಳಿಕೆಯನ್ನು ಪಡೆದುಕೊಂಡು ದಾಖಲಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಹಿತಿ ಲಭ್ಯವಾಗಿದೆ. ತನಿಖೆಯ … Continued

ಬೆಳಗಾವಿ ಕಾಲೇಜಿನಲ್ಲಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್‌ ಮಾಡಿದ ವಿದ್ಯಾರ್ಥಿಗೆ ಥಳಿತ

ಬೆಳಗಾವಿ: ಬೆಳಗಾವಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಬೀಳ್ಕೊಡೆಗೆ ಕಾರ್ಯಕ್ರಮದ ವೇಳೆ ಕನ್ನಡ ಬಾವುಟ ಹಿಡಿದು ಡಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕನ್ನಡ ಬಾವುಟ ಹಿಡಿದು ವಿದ್ಯಾರ್ಥಿ ಡ್ಯಾನ್ಸ್​ ಮಾಡಿದ್ದಾನೆ. ಇದನ್ನು ಕಂಡ ಸಹಪಾಠಿಗಳು ಕನ್ನಡ ಬಾವುಟ ಪ್ರದರ್ಶಿಸಿದ ವಿದ್ಯಾರ್ಥಿಗೆ ಕೆಲ ಮರಾಠಿ ಭಾಷಿಕ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. … Continued