ಚಿಕ್ಕಮಗಳೂರು : ದತ್ತ ಪೀಠದಲ್ಲಿ ಡಿಸೆಂಬರ್ 6ರಿಂದ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ ಗಿರಿಯ ದತ್ತಾತ್ರೇಯ ಪೀಠದಲ್ಲಿ ಡಿಸೆಂಬರ್ 6ರಿಂದ ಮೂರು ದಿನಗಳ ಕಾಲ ದತ್ತಾತ್ರೇಯ ಜಯಂತಿ ಆಚರಿಸಲು ಹೈಕೋರ್ಟ್ ಬುಧವಾರ ಅನುಮತಿಸಿದೆ. ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ … Continued

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್‌ : 1.55 ಲಕ್ಷ ಹೊಸ ಪಡಿತರ ಕಾರ್ಡ್‌ ವಿತರಣೆಗೆ ಸರ್ಕಾರದ ಆದೇಶ

ಬೆಂಗಳೂರು: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹೊಸ ಆದ್ಯತಾ ಪಡಿತರ ಚೀಟಿ (BPL) ಕಾರ್ಡ್ ಹಂಚಿಕೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಹೊಸದಾಗಿ ಬಿಪಿಎಲ್ ಕಾರ್ಡ್ (BPL Card) ಹಂಚಿಕೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆದೇಶ ಹೊರಡಿಸಿದ್ದು, ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ಹೊಸದಾಗಿ 1,55,927 ಕಾರ್ಡ್ … Continued

ಶಾಲೆಯ ಶಾಕರ್: ‌ ಬೆಂಗಳೂರಿನ ವಿದ್ಯಾರ್ಥಿಗಳ ಬ್ಯಾಗ್ ದಿಢೀರ್ ತಪಾಸಣೆ ವೇಳೆ ಕಾಂಡೋಮ್, ಗರ್ಭನಿರೋಧಕಗಳು, ಮದ್ಯ ಪತ್ತೆ…!

ಬೆಂಗಳೂರು: ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಮೊಬೈಲ್ ಫೋನ್‌ಗಳ ತಪಾಸಣೆ ನಡೆಸಿದಾಗ ನಗರದ ಶಾಲೆಗಳ ಸಿಬ್ಬಂದಿ ವಿದ್ಯಾರ್ಥಿಗಳ ಪೋಷಕರನ್ನು ಬೆಚ್ಚಿಬೀಳಿಸುವ ಸಂಗತಿಗಳನ್ನು ಕಂಡುಹಿಡಿದಿದ್ದಾರೆ. ಮೊಬೈಲ್ ಫೋನ್‌ಗಳ ಜೊತೆಗೆ, ವಿದ್ಯಾರ್ಥಿಗಳು ತಮ್ಮ ಬ್ಯಾಗ್‌ಗಳಲ್ಲಿ ಕಾಂಡೋಮ್‌ಗಳು, ಗರ್ಭನಿರೋಧಕಗಳು, ಲೈಟರ್‌ಗಳು, ಸಿಗರೇಟ್‌ಗಳು, ವೈಟ್‌ನರ್‌ಗಳು ಮತ್ತು ಹೆಚ್ಚಿನ ಪ್ರಮಾಣದ ಹಣ ಇರುವುದನ್ನು ಪತ್ತೆ ಮಾಡಿದ್ದಾರೆ. ವಿದ್ಯಾರ್ಥಿಗಳು ಶಾಲೆಗೆ ಮೊಬೈಲ್ ತಂದಿರುವ ಬಗ್ಗೆ ಶಾಲಾ ಅಧಿಕಾರಿಗಳಿಗೆ … Continued

ಪಿಎಫ್‌ಐ ನಿಷೇಧ : ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌, ನಿಷೇಧ ಪ್ರಶ್ನಿಸಿದ್ದ ಅರ್ಜಿ ವಜಾ

ಬೆಂಗಳೂರು: ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲಿನ ನಿಷೇಧವನ್ನು ತಕ್ಷಣವೇ ಜಾರಿಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ. ಬೆಂಗಳೂರಿನ ನಿವಾಸಿ, ಪಿಎಫ್‌ಐ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ನಾಸಿರ್‌ ಅಲಿ ಸಲ್ಲಿಸಿದ್ದ ಅರ್ಜಿಯನ್ನು … Continued

ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪಗೆ ಕೊಲೆ ಬೆದರಿಕೆ

ಮೈಸೂರು: ಮೈಸೂರಿನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಯಾರೋ ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಗರದ ಜಯಲಕ್ಷ್ಮಿಪುರಂ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ರಂಗಾಯಣದಿಂದ ಟಿಪ್ಪು ನಿಜಕನಸುಗಳು ಎಂಬ ನಾಟಕ ರಚಿಸಿ, ನಿರ್ದೇಶನ ಮಾಡಿ ಇದೀಗ ಪ್ರದರ್ಶನಗೊಳ್ಳುತ್ತಿದೆ. ಈ ಪ್ರದರ್ಶನ ಆರಂಭವಾದಂದಿನಿಂದ ನನ್ನ ವಿರುದ್ಧ ಕೆಲವರು ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ದೂರು, ಇತ್ಯಾದಿ ಮಾಡುತ್ತಾ ಬಂದಿದ್ದಾರೆ. … Continued

ಯಲ್ಲಾಪುರ: ಅರೆಬೈಲ್‌ ಘಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣ: ಮೂವರು ಅಂತಾರಾಜ್ಯ ಕಳ್ಳರ ಬಂಧನ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಂತಾರಾಜ್ಯ ದರೋಡೆಕೋರರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಸರಗೋಡಿನ ಸಿರಿಯಾದ ಮಹಮ್ಮದ್ ಕಬೀರ್ ಮೈನುದ್ದೀನ್, ಕೋಜಿಕೋಡಿನ ಸುಭಾಸ ರಾಧಾಕೃಷ್ಣನ್ ಹಾಗೂ ಪಾಲಕ್ಕಾಡಿನ ನಿವೇಶ ಅಪ್ಪು ವಿಜಯಕೃಷ್ಣನ್ ಬಂಧಿತ ಆರೋಪಿಗಳಾಗಿದ್ದಾರೆ. … Continued

ಕೆಎಸ್‌ಆರ್‌ಟಿಸಿ ನೂತನ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ : ಒಟ್ಟು ₹35,000 ಬಹುಮಾನ ಗೆಲ್ಲಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೂತನವಾಗಿ ಆರಂಭಿಸುತ್ತಿರುವ ವೋಲ್ವೊ ಮಲ್ಟಿಆಕ್ಸಲ್‌ ಸ್ಲೀಪರ್‌ ಬಸ್‌ ಮತ್ತು ಎಲೆಕ್ಟ್ರಿಕ್‌ ಬಸ್‌ಗಳಿಗೆ ಸೂಕ್ತ ಬ್ರಾಂಡ್‌ ನೇಮ್‌, ಟ್ಯಾಗ್‌ ಲೈನ್‌ ಹಾಗೂ ಗ್ರಾಫಿಕ್ಸ್‌ ವಿನ್ಯಾಸವನ್ನು ಸಾರ್ವಜನಿಕರಿಂದ ಆಹ್ವಾನಿಸಿದೆ. ಉತ್ತಮ ಟ್ಯಾಗ್‌ಲೈನ್‌ ನೊಂದಿಗೆ ಬ್ರಾಂಡ್‌ ಹೆಸರು ಸೂಚಿಸಿದರೆ ಪ್ರತಿ ಬಸ್‌ಗೆ 10 ಸಾವಿರ ರು., ಉತ್ತಮ ಗ್ರಾಫಿಕ್ಸ್‌ಗೆ 25 … Continued

ಖ್ಯಾತ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ ನಿಧನ

ಮಂಗಳೂರು: ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88 ವರ್ಷ) ಅವರು ಬುಧವಾರ ನಿಧನರಾಗಿದ್ದಾರೆ. ಯಕ್ಷಗಾನದ ತೆಂಕತಿಟ್ಟು ಶೈಲಿಯ ಖ್ಯಾತ ಕಲಾವಿದರಾಗಿದ್ದ ಇವರು ಧರ್ಮಸ್ಥಳ, ಸುರತ್ಕಲ್ ಮತ್ತು ಇರಾ ಸೋಮನಾಥೇಶ್ವರ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಾಯರ್ಕಾಡಿ … Continued

ಬೆಂಗಳೂರು: ಬೈಕ್ ಟ್ಯಾಕ್ಸಿ ಚಾಲಕ-ಆತನ ಸ್ನೇಹಿತನಿಂದ ಕೇರಳ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು: ಕಳೆದ ವಾರ ಶುಕ್ರವಾರ ಬೆಂಗಳೂರಿನಲ್ಲಿ 22 ವರ್ಷದ ಮಹಿಳೆಯೊಬ್ಬಳ ಮೇಲೆ ಬೈಕ್ ಟ್ಯಾಕ್ಸಿ ಚಾಲಕ ಮತ್ತು ಆತನ ಸಹಚರ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕೇರಳ ಮೂಲದ ಮಹಿಳೆ ಶುಕ್ರವಾರ ಮಧ್ಯರಾತ್ರಿ ತನ್ನ ಸ್ನೇಹಿತನ ಮನೆಗೆ ಬೈಕ್ ಟ್ಯಾಕ್ಸಿ … Continued

ರಕ್ಷಣಾ ಸಚಿವಾಲಯದಿಂದ ಧರ್ಮಸ್ಥಳ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆ

ಧರ್ಮಸ್ಥಳ: ಭಾರತದ ರಕ್ಷಣಾ ಸಚಿವಾಲಯದಿಂದ ಪುಣೆಯ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು. ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ. 1971ರ ಇಂಡೋ ಪಾಕ್ ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಟಿ-565 ಟ್ಯಾಂಕ್ ಬಳಕೆಯಾಗಿದೆ. 40 ಟನ್‌ಗಳಷ್ಟು ತೂಕ … Continued