ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

ದಾವಣಗೆರೆ: ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ ತಿಳಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸುವ ಸಂಬಂಧಿಸಿದಂತೆ ಮದನಗೋಪಾಲ್ … Continued

ಕರ್ನಾಟಕದ ಎಲ್ಲ ದಿಕ್ಕುಗಳಲ್ಲೂ ಮೊಳಗಿದ ಕನ್ನಡ ಡಿಂಡಿಮ

ಬೆಂಗಳೂರು: ಕನ್ನಡ ನಾಡಿನ ದಶದಿಕ್ಕುಗಳಲ್ಲೂ ಇಂದು ಕನ್ನಡ ಗೀತಗಾಯನ ಮೊಳಗಿತು. ನಾಡಿನ ಶಕ್ತಿ ಕೇಂದ್ರ ವಿಧಾನಸೌಧ, ಜಿಲ್ಲೆ, ತಾಲ್ಲೂಕು ಕೇಂದ್ರಗಳು ಹಾಗೂ ಹಳ್ಳಿ – ಹಳ್ಳಿಗಳು ಸೇರಿದಂತೆ, ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ೫ ಲಕ್ಷ ಕಂಠಗಳಲ್ಲಿ ಕನ್ನಡ ಗೀತಗಾಯನ ಮೊಳಗಿತು. ಇಂದು ಕರ್ನಾಟಕದ ರಾಜಧಾನಿ ಬೆಂಗಳೂರಿನ ಆಡಳಿತ ಶಕ್ತಿಕೇಂದ್ರ ವಿಧಾನಸೌಧದ ಮುಂಭಾಗ ಹಿಂದೆಂದೂ ಕಂಡು ಕೇಳರಿಯದ … Continued

ಧಾರವಾಡ: ಡಿ.ಕೆ.ಶಿವಕುಮಾರ ಆಪ್ತನ ಮನೆ ಮೇಲೆ ಐಟಿ ದಾಳಿ

ಧಾರವಾಡ: ಕಾಂಗ್ರೆಸ್​ ನಾಯಕ ಡಿ.ಕೆ. ಶಿವಕುಮಾರ್ ಅವರ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು (ಗುರುವಾರ) ಬೆಳಿಗ್ಗೆ ಐಟಿ ದಾಳಿ ನಡೆಸಿದ್ದಾರೆ. ಧಾರವಾಡದ ದಾಸನಕೊಪ್ಪ ಸರ್ಕಲ್‌ನಲ್ಲಿ ಗುತ್ತಿಗೆದಾರ ಯು.ಬಿ. ಶೆಟ್ಟಿ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಗೋವಾದಿಂದ ಬಂದಿರುವ ಐವರು ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ. ಯು. ಬಿ. ಶೆಟ್ಟಿ … Continued

ಧಾರವಾಡ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂರು ದಿನಗಳ ಅಖಿಲ ಭಾರತೀಯ ಕಾರ್ಯಕಾರಿ ಆರಂಭ

ಧಾರವಾಡ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದ ಸಭೆಯು ಇಂದು ಧಾರವಾಡದಲ್ಲಿ (ಕರ್ನಾಟಕ) ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಭಾರತಮಾತೆಯ ಮೂರ್ತಿಗೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಆರಂಭವಾಯಿತು. ಪ್ರಾಂತ ಸಂಘಚಾಲಕರು, ಕಾರ್ಯವಾಹ, ಪ್ರಚಾರಕರು, ಅಖಿಲ ಭಾರತೀಯ ಕಾರ್ಯಕಾರಿಣಿ ಸದಸ್ಯರು ಮತ್ತು ಕೆಲವು ಸಂಘಟನೆಗಳ ಅಖಿಲ ಭಾರತ ಸಂಘಟನಾ … Continued

ಕುಮಟಾದಲ್ಲಿ ದೂರವಾದ ಬಾಂಬ್‌ ಆತಂಕ ;ಜನತೆ ನಿಟ್ಟುಸಿರು

ಕಾರವಾರ : ಉತ್ತರ ಕನ್ನಡ ಜಿಲ್ಲೆ ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿ ಆವರಣದಲ್ಲಿ ಬಾಂಬ್ ಮಾದರಿ ವಸ್ತು ಪತ್ತೆಯಾದ ಬೆನ್ನಲ್ಲೇ ಮಂಗಳೂರಿನಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳದವರು ತಪಾಸಣೆ ನಡೆಸಿ ವಸ್ತುವನ್ನು ನಿಷ್ಕ್ರಿಯ ಗೊಳಿಸಿದ್ದಾರೆ‌. ಹಾಗೂ ಇದು ಬಾಂಬ್‌ ಅಲ್ಲ, ಅದೇ ಮಾದರಿಯಲ್ಲಿರುವ ವಸ್ತು ಎಂದು ತಿಳಿಸಿದ್ದಾರೆ. ನಗರದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು ಹಿಂಬದಿ … Continued

ಮಕ್ಕಳ ಕಲಿಕೆಗಾಗಿ ಪರ್ಯಾಯ ಶೈಕ್ಷಣಿಕ ವರ್ಷ ಕಾರ್ಯಕ್ರಮ

ಬೆಂಗಳೂರು: ರಾಜ್ಯದಲ್ಲಿ ಒಂದೂವರೆ ವರ್ಷದ ಬಳಿಕ ಪ್ರಾಾಥಮಿಕ ಶಾಲೆಗಳು ಆರಂಭವಾಗಿದ್ದು, 1 ರಿಂದ 5 ನೇ ತರಗತಿ ಮಕ್ಕಳಿಗೆ ಯಾವ ರೀತಿಯಲ್ಲಿ ಪಾಠ- ಪ್ರವಚನ ಮಾಡಬೇಕು ಎಂಬುದಕ್ಕಾಾಗಿ ‘ಪರ್ಯಾಯ ಶೈಕ್ಷಣಿಕ ವರ್ಷ’ ಎಂಬ ಕಾರ್ಯಕ್ರಮ ರೂಪಿಸಿದೆ. 1ರಿಂದ 5ನೇ ತರಗತಿ ಮಕ್ಕಳಿಗೆ ಒಂದೂವರೆ ವರ್ಷದಿಂದ ಭೌತಿಕ ತರಗತಿಗಳ ಕಲಿಕೆ ಸ್ಥಗಿತಗೊಂಡಿದ್ದರಿಂದ ಮಕ್ಕಳ ಮನಸ್ಥಿತಿ, ಕಲಿಕಾ ಮಟ್ಟ … Continued

ಕುಮಟಾ ಪಾಲಿಟೆಕ್ನಿಕ್‌ ಕಾಲೇಜ್‌ ಹಿಂಭಾಗದಲ್ಲಿ ಬಾಂಬ್‌ ಮಾದರಿ ವಸ್ತು ಪತ್ತೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾಲೇಜಿನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸಂಜೆಯ ವಾಯು ವಿಹಾರಕ್ಕೆ ಬಂದಿರುವ ಕೆಲವು ಜನರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು ನೋಡಲು ಬಾಂಬಿಗೆ ಇರುವ ಮಾದರಿಯಲ್ಲಿ … Continued

ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ತಲೆಯಂತೆ ಇರುವ ವಿಚಿತ್ರ ಮಗುವಿನ ಜನನ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ತಲೆಯನ್ನು ಹೋಲುವ ವಿಚಿತ್ರವಾದ ಮಗು ಜನಿಸಿದ್ದು, ಸದ್ಯ ತಾಯಿ ಸುರಕ್ಷಿತವಾಗಿದ್ದಾರೆ. ಮಗು ಸದ್ಯ ಜೀವಂತವಾಗಿದ್ದರೂ ಆರೋಗ್ಯ ಮುಂದೆ ಕ್ಷೀಣವಾಗಬಹುದು ಎಂದು ವೈದ್ಯರು ಹೇಳಿದ್ದಾರೆ ಎಂದು ವರದಿಯಾಗಿದೆ. ಅಂಕೋಲಾದ ಹೊನ್ನೆಕೇರಿ ಮೂಲದ ಮಹಿಳೆಯೊರ್ವರು ಹೊಟ್ಟೆ ನೋವಿನಿಂದ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಭಟ್ಕಳದಲ್ಲಿ ಸ್ಕ್ಯಾನಿಂಗ್ ಮಾಡಿದಾಗ … Continued

ಮಹಿಳೆಯ ಹೊಟ್ಟೆಯಲ್ಲಿತ್ತು 1.5 ಕೆಜಿ ಕೂದಲಿನ ಉಂಡೆ..!

ಮಡಿಕೇರಿ : ಮಹಿಳೆಯ ಹೊಟ್ಟೆಯಲ್ಲಿದ್ದ 1.5 ಕೆಜಿ ತೂಕದ ಕೂದಲಿನ ಉಂಡೆಯನ್ನು ವೈದ್ಯರು ಹೊರತೆಗೆದಿದ್ದಾರೆ. ಹೊಟ್ಟೆ ನೋವೆಂದು ಕೊಡಗಿನ ಮಡಿಕೇರಿಯಲ್ಲಿರುವ ಆಸ್ಪತ್ರೆಗೆ ಬಂದಿದ್ದ ಮಹಿಳೆಯನ್ನು ಪರಿಶೀಲಿಸಿದ ವೈದ್ಯರು ನಂತರ ಸ್ಕ್ಯಾನಿಂಗ್ ಮಾಡಿದ್ದಾರೆ. ಸ್ಕ್ಯಾನಿಂಗ್‌ನಲ್ಲಿ ಆಕೆಯ ಹೊಟ್ಟೆಯಲ್ಲಿ ದೊಡ್ಡ ಗಂಟೊಂದು ಇದೆ ಎಂಬುದು ಪತ್ತೆಯಾಯಿತು. ಹೊಟ್ಟೆಯಲ್ಲಿ ಯಾವುದೋ ಗಡ್ಡೆ ಬೆಳೆದಿರಬಹುದು ಎಂದು ವೈದ್ಯರು ಭಾವಿಸಿದ್ದರು. ಹೀಗಾಗಿ ಮಹಿಳೆಗೆ … Continued

ರೈಲ್ವೆ ನಕಲಿ ನೇಮಕಾತಿ ದಂಧೆಯಲ್ಲಿ 22 ಕೋಟಿ ರೂ. ವಂಚಿಸಿದವರ ಬಂಧನ

ಮೈಸೂರು: ರೈಲ್ವೆ ಇಲಾಖೆಯಲ್ಲಿ ನಕಲಿ ನೇಮಕಾತಿಯ ದೊಡ್ಡ ದಂಧೆ ನಡೆಸುತ್ತಿದ್ದ ಪ್ರಕರಣವನ್ನು ಮೈಸೂರು ವಿಭಾಗದ ರೈಲ್ವೆ ಸಂರಕ್ಷಣಾ ದಳವು ಭೇದಿಸಿದೆ. ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಇದು ಸುಮಾರು 400 ಅಭ್ಯರ್ಥಿಗಳಿಗೆ ಕೆಲಸದ ಆಮಿಷ ತೋರಿಸಿ 22 ಕೋಟಿ ರೂ. ವಂಚಿಸಿರುವ ಪ್ರಕರಣವಾಗಿದೆ. ಮೈಸೂರಿನ ಚಂದ್ರಗೌಡ ಎಸ್.ಪಾಟೀಲ್ ಬಿನ್ ಸೋಮನಗೌಡ ಹಾಗೂ ಗದಗದ ಶಿವಸ್ವಾಮಿ … Continued