ಮೇಲುಕೋಟೆ ರಾಜಗೋಪುರದಲ್ಲಿ ಬಾರ್ ಸೆಟ್: ತೆಲುಗು ಚಿತ್ರ ತಂಡದವರಿಂದ ಭಾವನೆಗೆ ಧಕ್ಕೆ, ಸ್ಥಳೀಯರ ಆಕ್ಷೇಪ

ಮಂಡ್ಯ: ಮೇಲುಕೋಟೆಯಲ್ಲಿ ಮತ್ತೆ ತೆಲುಗು ಚಿತ್ರತಂಡ ಎಡವಟ್ಟಿಗೆ ಆಕ್ಷೇಪ ವ್ಯಕ್ತವಾಗಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ವಿಶ್ವ ಪ್ರಸಿದ್ಧ ಮೇಲುಕೋಟೆಯ ರಾಜಗೋಪುರವನ್ನು ಬಾರ್ ರೀತಿಯಲ್ಲಿ ಪರಿವರ್ತಿಸಿ ಚಿತ್ರೀಕರಣ ನಡೆಸುತ್ತಿರುವುದಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ನಾಗ ಚೈತನ್ಯ ಅಭಿನಯದ 3 ನಾಟ್ 2 ಚಿತ್ರತಂಡ ಮೇಲುಕೋಟೆ ಪರಂಪರೆಗೆ ಧಕ್ಕೆಯಾಗುವಂತಹ ಸೆಟ್ ಹಾಕಿದೆ. ಅಲ್ಲಿ ವಿವಿಧ ಬ್ರ್ಯಾಂಡ್‌ಗಳ ಮದ್ಯದ ಬಾಟಲ್‌ಗಳಿಟ್ಟು … Continued

ಅಪ್ಪು ಕೊನೆಯ ಚಿತ್ರ ‘ಗಂಧದ ಗುಡಿʼ ಟ್ರೈಲರ್ ಅನ್ನು ಪ್ರಧಾನಿ ಮೋದಿ ಜೊತೆಗೆ ಹಂಚಿಕೊಂಡ ಪತ್ನಿ ಅಶ್ವಿನಿ ಪುನೀತ ರಾಜಕುಮಾರ್: ಉತ್ತರಿಸಿದ ಪ್ರಧಾನಿ

ಬೆಂಗಳೂರು: ಪವರ್ ಸ್ಟಾರ್’ ಪುನೀತ್ ರಾಜ್‌ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಟ್ರೇಲರ್ ಇಂದು, ಭಾನುವಾರ ಅಭಿಮಾನಿಗಳ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಬಿಡುಗಡೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೋಶಿಯಲ್ ಮೀಡಿಯಾದಲ್ಲಿ ‘ಗಂಧದಗುಡಿ’ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಟ್ವಿಟರ್ ಪೋಸ್ಟ್‌ನಲ್ಲಿ ಕಳೆದ ವರ್ಷ ನಿಧನರಾದ ಕನ್ನಡ … Continued

ಯುವಕರಿಬ್ಬರ ಹತ್ಯೆ ಪ್ರಕರಣ : ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಬೆಳಗಾವಿ: ಸುಳೇಬಾವಿ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಸಂದರ್ಭದಲ್ಲಿ ಇಬ್ಬರು ಯುವಕರು ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಡಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಆದೇಶಿಸಿದ್ದಾರೆ. ಮಾರಿಹಾಳ ಠಾಣೆಯ ಹೆಡ್‍ಕಾನ್‍ಸ್ಟೆಬಲ್ ಬಿ.ಎಸ್.ಬಳಗಣ್ಣವರ ಮತ್ತು ಪೊಲೀಸ್ ಸಿಬ್ಬಂದಿ ಎಸ್.ಆರ್.ತಳೇವಾಡೆ ಅಮಾನತುಗೊಂಡಿದ್ದಾರೆ ಅಕ್ಟೋಬರ್‌ 6ರಂದು ರಾತ್ರಿ ಮಾರಿಹಾಳ … Continued

ಜನತಾ ಮಿತ್ರ ಸಮಾರೋಪಕ್ಕೆ ಬಂದು ನನಗೆ ಹೋರಾಡುವ ಶಕ್ತಿ ಇದೆ, ಪ್ರವಾಸ ಮಾಡ್ತೇನೆ ಎಂದ ದೇವೇಗೌಡರು

ಬೆಂಗಳೂರು: ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆದ ಜನತಾ ಮಿತ್ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆರೋಗ್ಯ ಚೇತರಿಕೆ ಕಂಡ ಬಳಿಕ ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಿಸಿದ್ದಾರೆ. ಅನಾರೋಗ್ಯದ ಬಳಿಕ ಇದೇ ಮೊದಲ ಬಾರಿಗೆ ಇಂದು … Continued

ಬೆಂಗಳೂರು: ಸೋಮವಾರದಿಂದ ಮತ್ತೆ ಒತ್ತುವರಿ ತೆರವು ಕಾರ್ಯಚರಣೆ

ಬೆಂಗಳೂರು: ದಸರಾ ಹಬ್ಬದ ಅಂಗವಾಗಿ ಬಿಡುವು ನೀಡಲಾಗಿದ್ದ ದೊಡ್ಡ ದೊಡ್ಡ ಕಟ್ಟಡಗಳ ಒತ್ತುವರಿ ತೆರವು ಕಾರ್ಯಚರಣೆ ಸೋಮವಾರದಿಂದ ಮತ್ತೆ ಆರಂಭವಾಗಲಿದೆ. ಈಗಾಗಲೇ ಒತ್ತುವರಿದಾರ ಪಟ್ಟಿ ಸಿದ್ದಪಡಿಸಿಕೊಂಡಿರುವ ಕಂದಾಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಸೋಮವಾರದಿಂದ ಒತ್ತುವರಿ ತೆರವು ಕಾರ್ಯಚರಣೆಯನ್ನು ಮತ್ತೆ ಆರಂಭಿಸಲು ನಿರ್ಧರಿಸಿದ್ದಾರೆ. ಮಳೆ ಬಂದಾಗ ಬಿಬಿಎಂಪಿ ವಿರುದ್ಧ ಹೇಳಿಕೆ ನೀಡುವ ಪ್ರತಿಷ್ಠಿತ ವ್ಯಕ್ತಿಗಳು ಹಾಗೂ … Continued

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇಂದು ಶನಿವಾರ ನಡೆದ ಸಂಪುಟ ಸಭೆಯಲ್ಲಿ ಮೀಸಲಾತಿ ಹೆಚ್ಚಳ ಮಾಡುವ ಕುರಿತು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮೀಸಲಾತಿ ಸಂಬಂಧ ಕಾನೂನಾತ್ಮಕ ವಿಚಾರಗಳ ಬಗ್ಗೆ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಇನ್ನೂ ನಿಂತಿಲ್ಲ. ರಾಜ್ಯದ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಸಮುದ್ರದ ಭಾಗದ ಆಂಧ್ರ ಪ್ರದೇಶದ ಉತ್ತರ ಕರಾವಳಿಯಲ್ಲಿ ಎದ್ದಿದ್ದ ಮೇಲ್ಮೈ ಸುಳಿಗಾಳಿಯು ದಕ್ಷಿಣ ಕರಾವಳಿಯತ್ತ ಸಾಗಿದೆ. ಅದು ಸಮುದ್ರ ಮಟ್ಟದಿಂದ ಸುಮಾರು 3.5ಕಿಲೋ ಮೀಟರ್ ಎತ್ತರದಲ್ಲಿದೆ. … Continued

ಟಿಪ್ಪು ಎಕ್ಸ್ ಪ್ರೆಸ್’ ರೈಲು ಹೆಸರು ಬದಲಿಸಿ ‘ಒಡೆಯರ್ ಎಕ್ಸ್‌ಪ್ರೆಸ್’ ಎಂದು ಮರುನಾಮಕರಣ

ಬೆಂಗಳೂರು: ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಮತ್ತು ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಕುವೆಂಪು ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ. ಅಕ್ಟೋಬರ್ 7 ರಂದು, ಅಧಿಸೂಚನೆಯಲ್ಲಿ, ಕೇಂದ್ರ ರೈಲ್ವೆ ಸಚಿವಾಲಯದ ಅಪೇಕ್ಷೆಯಂತೆ ರೈಲುಗಳ ಹೆಸರುಗಳನ್ನು ಬದಲಾವಣೆ ಮಾಡಲಾಗಿದೆ. ರೈಲು ಸಂಖ್ಯೆ 12613/12614 ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್‌ಪ್ರೆಸ್ ಅನ್ನು ಒಡೆಯರ್ ಎಕ್ಸ್‌ಪ್ರೆಸ್ ಮತ್ತು 16221/16222 ತಾಳಗುಪ್ಪ-ಮೈಸೂರು … Continued

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಸರ್ಕಾರ ಹೆಚ್ಚಳ ಮಾಡಿದೆ. ತುಟ್ಟಿಭತ್ಯೆಯನ್ನು ಶೇಕಡಾ 3.75 ರಷ್ಟು ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ಜುಲೈ 2022ರ ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 3.75 ರಷ್ಟು ಹೆಚ್ಚಿಸಲು ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ’ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟರ್‌ ಮೂಲಕ … Continued

ದಸರಾ ಮೆರವಣಿಗೆ ವೇಳೆ ಪಾರಂಪರಿಕ ಮದರಸಾದಲ್ಲಿ ಪೂಜೆ, 9 ಜನರ ವಿರುದ್ಧ ಪ್ರಕರಣ ದಾಖಲು

ಬೀದರ: ಪುರಾತತ್ವ ಇಲಾಖೆ ಸಂರಕ್ಷಣೆಯಲ್ಲಿರುವ ನಗರದ ಪಾರಂಪರಿಕ ಕಟ್ಟಡ (ಮದರಸಾ)ದಲ್ಲಿ ಹಿಂದೂಗಳು ಪೂಜೆ ನಡೆಸಿ, ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಪೊಲೀಸರು 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮಹಮ್ಮದ್ ಗವಾನ್ ಯುನಿವರ್ಸಿಟಿ ಮುಂದೆ ಪೊಲೀಸ್ ಭದ್ರತೆ ನೀಡಲಾಗಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ … Continued