ಸಿ.ಪಿ.ಯೋಗೇಶ್ವರ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ : ಲಾಠಿ ಪ್ರಹಾರ

ಚನ್ನಪಟ್ಟಣ: ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಅವರ ಕಾರಿನ ಮೇಲೆ ಮೊಟ್ಟೆ ಹಾಗೂ ಕಲ್ಲು ತೂರಾಟ ನಡೆಸಿದ ಘಟನೆನಂತರ ಬೊಂಬೆ ನಗರಿ ಚನ್ನಪಟ್ಟಣ ಉದ್ವಿಗ್ನಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ 50 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಗುದ್ದಲಿ ಪೂಜೆ ನೆರವೇರಿಸಲು ಬಿಜೆಪಿ … Continued

ಸಿಇಟಿ ಪರಿಷ್ಕೃತ ರ್‍ಯಾಂಕಿಂಗ್ ಬಿಡುಗಡೆ, ಮೊದಲ 500 ರ್‍ಯಾಂಕಿಂಗ್‌ನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದಂತೆ ಸಿಇಟಿ ರ್‍ಯಾಂಕಿಂಗ್‌ನ ಪರಿಷ್ಕೃತ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ಬಿಡುಗಡೆ ಮಾಡಿದ್ದು, ಜುಲೈ 30ರಂದು ಹೊರಡಿಸಿದ್ದ ರ್‍ಯಾಂಕಿಂಗ್ ಪಟ್ಟಿ ಮತ್ತು ಈಗಿನ ಪರಿಷ್ಕೃತ ಪಟ್ಟಿಯಲ್ಲಿ ಮೊದಲ 500 ರ್‍ಯಾಂಕಿಂಗ್‌ಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಹೋದ ವರ್ಷವೇ ದ್ವಿತೀಯ … Continued

ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರನಿಂದ ಪಾಲಿಕೆ ಮಹಿಳಾ ಸಿಬ್ಬಂದಿಗೆ ಬ್ಲಾಕ್ ಮೇಲ್: ಧರ್ಮದೇಟು

ತುಮಕೂರು: ಮಹಾನಗರ ಪಾಲಿಕೆ ಸಿಬ್ಬಂದಿಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪದ ಮೇರೆಗೆ ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ ಎಂಬವನಿಗೆ ಗೂಸಾ ನೀಡಿದ್ದಾರೆ. ಇದಲ್ಲದೇ ಮಾನವ ಹಕ್ಕುಗಳ ಕಾರ್ಯಕರ್ತರು ಎಂದು ಹೇಳಿಕೊಂಡು ಬಂದಿದ್ದ ಯುವತಿಯರಿಗೂ ಸಾರ್ವಜನಿಕರು ಥಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರದೀಪ ವಾರಪತ್ರಿಕೆಯೊಂದರ ಸಂಪಾದಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾನೆ. ಈತ ಸಬ್ಸಿಡಿ ಸಾಲ … Continued

ಕಾರ್ಯಕ್ರಮಕ್ಕೆ ಅಡ್ಡಿ, ಸಿ.ಪಿ. ಯೋಗೇಶ್ವರ ಕಾರಿನ ಮೇಲೆ ಕಲ್ಲು ತೂರಾಟ: ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

ರಾಮನಗರ: ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿದ್ದು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಮುಖ್ಯಮಂತ್ರಿಗಳ 50 ಕೋಟಿ ವಿಶೇಷ ಅನುದಾನದ ಅಡಿ ವಿವಿಧ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಗ್ರಾಮದಲ್ಲಿತ್ತು. ವಿಧಾನ ಪರಿಷತ್ ಸದಸ್ಯ … Continued

ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರಿಂದ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ವಿಧೇಯಕಕ್ಕೆ ಸೆಪ್ಟೆಂಬರ್‌ 28ರಂದು ರಾಜ್ಯಪಾಲರು ಅಂಕಿತ ಹಾಕಿದ್ದು, ಅದನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರಂದು ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ಕಳೆದ ವರ್ಷ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರಪಡೆಯಲಾಗಿತ್ತು. ಆದರೆ, ವಿಧಾನಪರಿಷತ್ತಿನಲ್ಲಿ ಅಂಗೀಕಾರ ಸಾಧ್ಯವಾಗಿರಲಿಲ್ಲ. ಇದೇ ಸೆಪ್ಟೆಂಬರ್‌ 17ರಂದು ಕೆಲವು ತಿದ್ದುಪಡಿಗಳೊಂದಿಗೆ ವಿಧಾನಪರಿಷತ್ತಿನಲ್ಲಿ ವಿಧೇಯಕ … Continued

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಕೊಲಿಜಿಯಂನಿಂದ ನ್ಯಾ. ಪಿ ಬಿ ವರಾಲೆ ಹೆಸರು ಶಿಫಾರಸು

ಬೆಂಗಳೂರು: ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಶಿಫಾರಸ್ಸು ಮಾಡಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್‌ ಅವರ ನೇತೃತ್ವದ ಕೊಲಿಜಿಯಂ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸೆ.28ರಂದು ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಸ್ತಾವವನ್ನು … Continued

ನಾಡಗೀತೆಗೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ದಾಟಿ, ಸಮಯ ನಿಗದಿಗೆ ಆಕ್ಷೇಪ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಹಾಡುವ ಧಾಟಿ ಮತ್ತು ಸಮಯ ಮಿತಿ ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ. ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಸೆಪ್ಟೆಂಬರ್‌ 25ರಂದು ಹೊರಡಿಸಿರುವ ಆದೇಶ … Continued

ಮಠ-ವಿದ್ಯಾಪೀಠದ ಚೆಕ್‌ಗಳಿಗೆ ಸಹಿ ಹಾಕಲು ಮುರುಘಾ ಶರಣರಿಗೆ ಅನುಮತಿ ನೀಡಿದ ಹೈಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ಮುರುಘ ರಾಜೇಂದ್ರ ಬೃಹನ್ಮಠ ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ವೇತನ ಪಾವತಿಸಲು ಮಠ ಮತ್ತು ವಿದ್ಯಾಪೀಠದ ಚೆಕ್‌ಗಳಿಗೆ ಸಹಿ ಹಾಕಲು ಈಗ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರಿಗೆ ಶುಕ್ರವಾರ ಹೈಕೋರ್ಟ್‌ ಅನುಮತಿ ನೀಡಿದೆ. ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಕಾಯ್ದೆಯಡಿ ಬಂಧಿತರಾಗಿರುವ ಆರೋಪಿ ಮುರುಘಾ ಶರಣರು ಸಲ್ಲಿಸಿದ್ದ … Continued

ಡಿಸೆಂಬರ್‌ 31ರ ಒಳಗಡೆ ಬಿಬಿಎಂಪಿ ಚುನಾವಣೆ ನಡೆಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗಡುವು

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಡಿಸೆಂಬರ್​ 31ರ ಒಳಗೆ ನಡೆಸುವಂತೆ ಹೈಕೋರ್ಟ್​ ಸರ್ಕಾರಕ್ಕೆ ನಿರ್ದೇಶಿಸಿದೆ. ಮೀಸಲಾತಿ ಸರಿಪಡಿಸಲು 16 ವಾರಗಳ ಕಾಲಾವಕಾಶ ಬೇಕು ಎಂದು ಮನವಿ ಮಾಡಿದ ಸರ್ಕಾರದ ವಿರುದ್ಧ ಗರಂ ಆದ ಹೈಕೋರ್ಟ್ ಇಷ್ಟು ಸಮಯ ಕೇಳಿದರೆ ತಕ್ಷಣ ಚುನಾವಣೆಗೆ ಆದೇಶಿಸಬೇಕಾದೀತು ಎಂದು ಚಾಟಿ ಬೀಸಿದೆ. ಬಿಬಿಎಂಪಿ ಮೀಸಲಾತಿ ವಿಚಾರವಾಗಿ … Continued

ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠವೂ ಸೇರಿ ರಾಜ್ಯದಲ್ಲಿರುವ ಎಲ್ಲ ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಕೋರಿಕೆಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಗುರುವಾರ ಇತ್ಯರ್ಥಪಡಿಸಿದೆ. ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ರಾಮಚಂದ್ರಾಪುರ ಮಠದ ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು … Continued