ಬಿಜೆಪಿ ಯುವ ಮುಖಂಡನ ಹತ್ಯೆ: ಇಂದು ದಕ್ಷಿಣ ಕನ್ನಡ ಮೂರು ತಾಲೂಕುಗಳಲ್ಲಿ ಬಂದ್‌ಗೆ ಕರೆ

ಪುತ್ತೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ(32) ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದು  ಸಂಘಟನೆಗಳು ಬುಧವಾರ ಸುಳ್ಯ, ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಕರೆ … Continued

ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬಿಜೆಪಿ ಯುವ ಮೋರ್ಚಾ ಮುಖಂಡನ ಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ಮಾಲಕನ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಯಲ್ಲಿ ಮೃತ ಘಟನೆ ಮಂಗಳವಾರ ನಡೆದಿದೆ. ಬೆಳ್ಳಾರೆ ಸಮೀಪದ ನೆಟ್ಟಾರು ನಿವಾಸಿ ಹಾಗೂ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ (29) ಎಂಬವರು ಮೃತಪಟ್ಟವರು. … Continued

ಒಂದನೇ ತರಗತಿ ದಾಖಲಾತಿಗೆ ಮಕ್ಕಳ ವಯೋಮಿತಿ ಹೆಚ್ಚಿಸಿ ಸರ್ಕಾರದ ಆದೇಶ

ಬೆಂಗಳೂರು: ಒಂದನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿಯನ್ನು ಸರ್ಕಾರ 5.5 ವರ್ಷಗಳ ಬದಲಾಗಿ ಜೂನ್ 1ಕ್ಕೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕೆಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕೃತ ಆದೇಶ ಹೊರಡಿಸಿದೆ. ಈ ಕುರಿತು ನಡಾವಳಿ ಹೊರಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ದಿನಾಂಕ 20-03-2020ರಂದು ಹೊರಡಿಸಿದ್ದಂತ ಆದೇಶವನ್ನು … Continued

ಬೆಳಗಾವಿ ಪೊಲೀಸರ ಕಾರ್ಯಾಚರಣೆ ; ಅಕ್ರಮ ಪಡಿತರ ಅಕ್ಕಿ ವಶ

ಬೆಳಗಾವಿ : ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ಪೊಲೀಸರು ದಾಳಿ ನಡೆಸಿ ಹುಂಚಾನಟ್ಟಿ ಮತ್ತು ಪೀರನವಾಡಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 31 ಟನ್ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ 7.21 ಲಕ್ಷ ರೂ.ಗಳು ಅಂದಾಜಿಸಲಾಗಿದೆ. ಶ್ರೀನಿವಾಸ ಹಾಂಡ ನೇತೃತ್ವದಲ್ಲಿ ಜೆ.ಬಿ. ಬಾಗೋಜಿಕೊಪ್ಪ (ಆಹಾರ ನಿರೀಕ್ಷಕರು) ಸೇರಿದಂತೆ ಇತರ ಸಿಬ್ಬಂದಿ ದಾಳಿ ನಡೆಸಿ … Continued

ಪಿಎಸ್‌ಐ ನೇಮಕಾತಿ ಹಗರಣದ ವಾಸನೆ ನನಗೆ ಮೊದಲೇ ಬಂದಿತ್ತು: ಭಾಸ್ಕರ್ ರಾವ್

ಉಡುಪಿ: ಪೊಲೀಸ್ ಇಲಾಖೆಯಲ್ಲಿದ್ದಾಗಲೇ ಪಿಎಸ್‌ಐ ಹಗರಣದ ವಾಸನೆ ಬಂದಿತ್ತು ಎಂದು ಮಾಜಿ ಎಡಿಜಿಪಿ ಹಾಗೂ ಆಪ್‌ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್‌ ಹೇಳಿದರು. ಮಂಗಳವಾರ ಆಪ್ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಅಮೃತ್‌ ಪೌಲ್‌ ಆಗಾಗ ಮುಖ್ಯಮಂತ್ರಿಗಳ ಮನೆಯ ಬಳಿ ಸುಳಿದಾಡುತ್ತಿರುವುದನ್ನು ಗಮನಿಸಿ ಈ ಬಗ್ಗೆ ಪ್ರಶ್ನಿಸಿದ್ದೆ … Continued

ಬೆಂಗಳೂರು: 2.68 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶ

ಬೆಂಗಳೂರು: ಇಲ್ಲಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಐದು ಮಂದಿಯನ್ನು ಬಂಧಿಸಿ ಅವರಿಂದ 2.68 ಕೋಟಿ ರೂ. ಮೌಲ್ಯದರಕ್ತಚಂದನದ ತುಂಡುಗಳು ಮತ್ತು ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ವಿನೋದ, ಲಕ್ಷ್ಮಯ್ಯ, ಸಂಜಯ್, ರಾಜು, ಕೃಷ್ಣ ಎಂದು ಗುರುತಿಸಲಾಗಿದ್ದು, ಅವರಿಂದ ಒಟ್ಟು 1693 ಕೆಜಿ ತೂಕದ ರಕ್ತಚಂದನದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿಯ … Continued

ಚಿಕ್ಕಮಗಳೂರು: ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ 14 ದಿನಗಳ ನಂತರ ಪ್ರತ್ಯಕ್ಷ !

ಚಿಕ್ಕಮಗಳೂರು:  ಭಾರೀ ಮಳೆಯಿಂದಾಗಿ ಜುಲೈ 12 ರಂದು ಚಿಕ್ಕಮಗಳೂರಿನ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರು 14 ದಿನಗಳ ಬಳಿಕ ಪ್ರತ್ಯಕ್ಷವಾಗಿದ್ದಾರೆ ಎಂದು ವರದಿಯಾಗಿದೆ. ಜುಲೈ 12 ರಂದು ಚಿಕ್ಕಮಗಳೂರಿನ ಉಂಡೇ ದಾಸರಹಳ್ಳಿ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಸುರೇಶ ಎಂಬವರು ಈಗ ಪ್ರತ್ಯಕ್ಷವಾಗಿದ್ದಾರೆ. ಚಿಂದಿ ಆಯುತ್ತಿದ್ದ ಸುರೇಶ ಅವರು ರಾಜಕಾಲುವೆಯಲ್ಲಿದ್ದ ಪ್ಲಾಸ್ಟಿಕ್‌ಗಳನ್ನು ಆಯಲು ಹೋದಾಗ ಕೊಚ್ಚಿ ಹೋಗಿದ್ದರು … Continued

ನೂತನ ಸಮಿತಿ ವರದಿ ಸಲ್ಲಿಸುವವರೆಗೆ ಕಸ್ತೂರಿರಂಗನ್ ಅಧಿಸೂಚನೆ ಜಾರಿ ಮಾಡುವುದಿಲ್ಲ ಎಂದು ಭರವಸೆ ನೀಡಿದ ಕೇಂದ್ರ ಸರಕಾರ: ಸಿಎಂ ಬೊಮ್ಮಾಯಿ

ನವದೆಹಲಿ: ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳ ಘೋಷಣೆಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿಯ ಅಧಿಸೂಚನೆಯನ್ನು ರಾಜ್ಯಗಳ ಕಳವಳಗಳನ್ನು ಪರಿಹರಿಸಲು ಇತ್ತೀಚೆಗೆ ರಚಿಸಲಾದ ಸಮಿತಿಯು ತನ್ನ ವರದಿಯನ್ನು ಸಲ್ಲಿಸುವವರೆಗೆ ಅದನ್ನು ಜಾರಿಗೊಳಿಸುವುದಿಲ್ಲ ಎಂದು ಕೇಂದ್ರವು ಭರವಸೆ ನೀಡಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದರು. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಮುಖ್ಯಮಂತ್ರಿ … Continued

ನಾಳೆಯಿಂದ ರಾಜ್ಯದ ಹಲವೆಡೆ ಮಳೆ ಆರ್ಭಟ ಹೆಚ್ಚಳದ ಮುನ್ಸೂಚನೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಕಡೆ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಜುಲೈ 27ರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ … Continued

ಪಕ್ಷದ ಲಕ್ಷ್ಮಣ ರೇಖೆ ದಾಟಬೇಡಿ: ಶಾಸಕ ಜಮೀರ್‌ಗೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ವರಿಷ್ಠರು

ಬೆಂಗಳೂರು : ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೆಡ್ಡು ಹೊಡೆದು ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಸೋಮವಾರ ಎಐಸಿಸಿ ಎಚ್ಚರಿಕೆ ನೀಡಿದೆ. ಮುಂದಿನ ಮುಖ್ಯಮಂತ್ರಿ ಹೇಳಿಕೆಗೆ ಸಂಬಂಧಿಸಿ ಜಮೀರ್ ಅಹಮದ್ ಗೆ ರಾಜ್ಯ ಉಸ್ತುವಾರಿ ಸುರ್ಜೆವಾಲ ಎಚ್ಚರಿಕೆ ಪತ್ರ … Continued