ಮಲೆ ಮಹದೇಶ್ವರ ಬೆಟ್ಟದ ಒಂದೇ ಸ್ಥಳದಲ್ಲಿ ತಾಯಿ, 4 ಮರಿ ಹುಲಿಗಳು ಸಾವು ; ವಿಷ ಪ್ರಾಶನದ ಶಂಕೆ…!

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದ ಕೊಪ್ಪ ವಲಯದ ಮೀಣ್ಯಂನಲ್ಲಿ ಒಂದು ತಾಯಿ ಹುಲಿ ಹಾಗೂ ನಾಲ್ಕು ಮರಿಗಳು ಒಂದೇ ಸ್ಥಳದಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಐದು ಹುಲಿಗಳ ಮೃತದೇಹಗಳು ಕೇವಲ 50 ಅಡಿಗಳಷ್ಟು ಅಂತರಲ್ಲಿ ಪತ್ತೆಯಾಗಿದೆ. ಒಂದು ತಾಯಿ ಹುಲಿ ಮತ್ತು 4 ಮರಿ ಸೇರಿ ಐದು ಹುಲಿಗಳು … Continued

ಭೂ ಕುಸಿತ ; ಶಿರಾಡಿ ಘಾಟಿಯಲ್ಲಿ ಸಂಚಾರ ತಾತ್ಕಾಲಿಕ ಬಂದ್‌

ಹಾಸನ : ಮಳೆಯ ಅರ್ಭಟಕ್ಕೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ತಡರಾತ್ರಿ ಮರಗಳ ಸಮೇತ ರಸ್ತೆಗೆ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದಿದೆ. ಹೀಗಾಗಿ … Continued

ಭಾರಿ ಮಳೆ ಮುನ್ಸೂಚನೆ; ಉತ್ತರ ಕನ್ನಡ ಜಿಲ್ಲೆಯ 2 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.26) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಜೊಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ … Continued

ವೀಡಿಯೊ | ಕುಮಟಾ : ಸಮುದ್ರ ತೀರದಲ್ಲಿ ಬೃಹತ್‌ ತಿಮಿಂಗಿಲದ ಮೃತದೇಹ ಪತ್ತೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ವಕ್ಕನಳ್ಳಿ ಬಂದರಿನ ಸಮುದ್ರ ತೀರದಲ್ಲಿ ಬೃಹತ್‌ ಗಾತ್ರದ ತಿಮಿಂಗಿಲದ ಮೃತದೇಹ ಬುಧವಾರ ಪತ್ತೆಯಾಗಿದೆ. ಸುಮಾರು 40 ಅಡಿಗಳಷ್ಟು ಉದ್ದವಿರುವ ಈ ತಿಮಿಂಗಿಲವು ಸತ್ತು 10-15 ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ತಿಮಿಂಗಿಲದ ಮೃತದೇಹವು ಬುಧವಾರ (ಜೂನ್‌ 15) ಸಮುದ್ರ ತೀರಕ್ಕೆ ಬಂದು ಬಿದ್ದಿದ್ದರೂ ಅದು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, … Continued

ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ವಿದ್ಯುತ್‌ ಕಂಬ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕುಗಳಿಗೆ ಹೊಂದಿಕೊಂಡಿರುವ ಗಡಿ ಭಾಗದ ಬೆಡಸಗಾಂವನಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯಾವುದೇ ಅಪಾಯ ಸಂಭವಿಸಿದ ವರದಿಯಾಗಿಲ್ಲ. ರಾಮಾಪುರದಿಂದ ಹುಲೆಕಲ್‌ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್‌ ಕಂಬ ಮುರಿದು … Continued

ಯಲ್ಲಾಪುರ | ಅರೆಬೈಲ್‌ ಘಟ್ಟದ ಪ್ರಪಾತದ ಬಳಿ ಖಾಸಗಿ ಬಸ್ ಪಲ್ಟಿ

ಯಲ್ಲಾಪುರ : ಪ್ರಪಾತದ ಬಳಿ ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ ಘಟ್ಟದಲ್ಲಿ ಬುಧವಾರ  ಬೆಳಿಗ್ಗೆ  ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. … Continued

ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ಜೊಯಿಡಾ ಹಾಗೂ ದಾಂಡೇಲಿ ಈ ನಾಲ್ಕು ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ಭಾರಿ ಮಳೆ … Continued

ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

ಬೆಳಗಾವಿ : ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿ ಹೈಸ್ಕೂಲ್‌ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ‌ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ … Continued

ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಮುಂಬೈ: ಲಂಡನ್‌ನಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-130 ರ ವಿವಿಧ ಹಂತಗಳಲ್ಲಿ ಕನಿಷ್ಠ ಇಬ್ಬರು ಸಿಬ್ಬಂದಿ ಮತ್ತು ಐದು ಪ್ರಯಾಣಿಕರು ತಲೆತಿರುಗುವಿಕೆ ಮತ್ತು ವಾಕರಿಕೆ ಕಂಡುಬಂದಿದೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಇದರ ಹೊರತಾಗಿಯೂ, ಬೋಯಿಂಗ್ 777 ವಿಮಾನವು ತನ್ನ ಪ್ರಯಾಣವನ್ನು ಮುಂದುವರೆಸಿತು ಮತ್ತು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು, ಅಲ್ಲಿ ವೈದ್ಯಕೀಯ … Continued

ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಬೆಂಗಳೂರು : ಪದ್ಮಶ್ರೀ ಪುರಸ್ಕೃತ ಕವಿ, ವಿಧಾನ ಪರಿಷತ್‌ ಮಾಜಿ ಸದಸ್ಯ ದೊಡ್ಡರಂಗೇ ಗೌಡ ಅವರು ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ … Continued