ಕುಮಟಾ ಆಸುಪಾಸು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್‌

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದಾದರೂ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಈಗ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ ಬಲ ಬಂದಿದೆ. ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಈಗ ಆಂದೋಲನದ ರೂಪ ಪಡೆದಿದ್ದು, ಪ್ರಬಲ ಹೋರಾಟ ಮತ್ತು ಜನಾಭಿಪ್ರಾಯ ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಮಧ್ಯೆ ಉತ್ತರ … Continued

ಹುಬ್ಬಳ್ಳಿ: ತಾರಿಹಾಳ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಮೂವರು ಸಾವು

ಹುಬ್ಬಳ್ಳಿ:  ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರ ಸುಟ್ಟು ಗಾಯಗೊಂಡಿದ್ದವರಲ್ಲಿ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಲಘಟಗಿ ತಾಲೂಕು ಲಿಂಗನಕೊಪ್ಪ ಗ್ರಾಮದ ಮಾಳೇಶ ಹದನ್ನನವರ (25ವರ್ಷ),  ಹುಬ್ಬಳ್ಳಿ ತಾಲೂಕು ತಾರಿಹಾಳದ ವಿಜಯಲಕ್ಷ್ಮಿ ಯಚ್ಚಲಗಾರ (34 ವರ್ಷ), ಗೌರಮ್ಮ ವೀರಭದ್ರಯ್ಯ ಹಿರೇಮಠ (45 ವರ್ಷ) … Continued

ಜುಲೈ 26ರಿಂದ ಬೆಂಗಳೂರು-ಮೈಸೂರು-ಮಂಗಳೂರು ಹೆಚ್ಚುವರಿ ವಿಶೇಷ ರೈಲು ಸಂಚಾರ

ಮಂಗಳೂರು: ಬೆಂಗಳೂರು-ಮಂಗಳೂರು ಮಧ್ಯೆ ಮೈಸೂರು ಮಾರ್ಗವಾಗಿ ಜುಲೈ 26ರಿಂದ ಆಗಸ್ಟ್‌ 31ರ ವರೆಗೆ ವಿಶೇಷ ಹೆಚ್ಚುವರಿ ರೈಲು ಸಂಚರಿಸಲಿದೆ. ಇದು ವಾರದಲ್ಲಿ ಮೂರು ದಿನ ಹೆಚ್ಚುವರಿಯಾಗಿ ಸಂಚರಿಸಲಿದೆ ಎಂದು ತಿಳಿಸಲಾಗಿದೆ. ಬೆಂಗಳೂರಿಗೆ ತೆರಳುವ ಮಾರ್ಗದ ಘಟ್ಟದ ಪ್ರದೇಶಗಳಲ್ಲಿ ಭೂ ಕುಸಿತದ ಹಿನ್ನೆಲೆಯಲ್ಲಿ ಸಂಚಾರಕ್ಕೆ ತೊಂದತೆಯಾದ ಕಾರಣ ಹೆಚ್ಚುವರಿ ರೈಲು ಸಂಚಾರ ಆರಂಭಿಸಬೇಕು ಎಂಬ ಬೇಡಿಕೆಗೆ ರೈಲ್ವೆ … Continued

ಆಂಧ್ರಪ್ರದೇಶದಲ್ಲಿ ರಸ್ತೆ ಅಪಘಾತ: ಬೆಂಗಳೂರಿನ ಪಿಎಸ್‌‌ಐ, ಕಾನ್‌ಸ್ಟೆಬಲ್ ಸೇರಿ ಮೂವರ ಸಾವು

ಬೆಂಗಳೂರು: ಆಂಧ್ರಪ್ರದೇಶದ‌ ಚಿತ್ತೂರು- ತಿರುಪತಿ ರಸ್ತೆಯಲ್ಲಿ‌ ಭೀಕರ ಅಪಘಾತ‌ ಸಂಭವಿಸಿದ್ದು, ಬೆಂಗಳೂರಿನ ಶಿವಾಜಿನಗರ ಠಾಣೆ ಪಿಎಸ್‌ಐ, ಕಾನ್‌ಸ್ಟೆಬಲ್ ಹಾಗೂ ಕಾರಿನ ಚಾಲಕ ಮೃತಪಟ್ಟಿದ್ದಾರೆ. ಶಿವಾಜಿನಗರದ ಪಿಎಸ್‌ಐ ಆಗಿದ್ದ ಬಸವ ಕಲ್ಯಾಣದ ಅವಿನಾಶ್ (29), ಕಾನ್‌ಸ್ಟೆಬಲ್ ಅನಿಲ್​​ ಮುಲಿಕ್ ಮತ್ತು ಕಾರು ಚಾಲಕ ಮೃತಪಟ್ಟಿದ್ದಾರೆ. ಪ್ರೊಬೆಷನರಿ ಪಿಎಸ್‌ಐ ದೀಕ್ಷಿತ್​​​, ಕಾನ್ಸ್​ಟೇಬಲ್​​ ಶರಣಬಸವ ಎಂಬುವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ಕುಕನೂರು ಸಮೀಪ ಭೀಕರ ಅಪಘಾತ: ಸ್ಥಳದಲ್ಲೇ ಐವರ ಸಾವು

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿ ಶನಿವಾರ ರಾತ್ರಿ ಲಾರಿ ಹಾಗೂ ಸ್ಕಾರ್ಪಿಯೋ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶನಿವಾರ ರಾತ್ರಿ 10:30ರ ಸುಮಾರಿಗೆ ಲಾರಿಯೊಂದು ಸ್ಕಾರ್ಪಿಯೋ ಕಾರಿಗೆ ಡಿಕ್ಕಿ ಹೊಡೆದಿದೆ. ಸ್ಕಾರ್ಪಿಯೊ ವಾಹನದಲ್ಲಿ ಒಟ್ಟು ಒಂಬತ್ತು ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಕೊಪ್ಪಳದಲ್ಲಿ … Continued

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಇಬ್ಬರು ಬಾಲಕರ ಪೊಲೀಸ್‌ ಅಧಿಕಾರಿಗಳಾಗುವ ಕನಸನ್ನು ನನಸು ಮಾಡಿದ ಬೆಂಗಳೂರು ಪೊಲೀಸರು

ಬೆಂಗಳೂರು : ಬೆಂಗಳೂರಿನ ಈ ಚಿಕ್ಕ ಹುಡುಗರ ಪೊಲೀಸ್ ಅಧಿಕಾರಿಗಳಾಗುವ ಆಸೆಯನ್ನು ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಪೂರೈಸಿದ್ದಾರೆ. ಕೇರಳದ ಮೊಹಮ್ಮದ್ ಸಲ್ಮಾನ್ ಮತ್ತು ಬೆಂಗಳೂರಿನ ಮಿಥಿಲೇಶ್ ಎಂಬ ಬಾಲಕರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಅವರಿಗೆ ಪೊಲೀಸ್ ಅಧಿಕಾರಿಗಳಾಗುವ ಕನಸು ಇದೆ. ಅವರ ಆಶಯವನ್ನು ಹೃದಯ ಸ್ಪರ್ಶಿಸುವ ರೀತಿಯಲ್ಲಿಈಡೇರಿಸಲಾಯಿತು. ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಈ … Continued

ವಿಜಯೇಂದ್ರ ಸ್ಪರ್ಧೆ ವಿಚಾರ: ಬಿಜೆಪಿ ವರಿಷ್ಠರ ತೀರ್ಮಾನವೇ ಅಂತಿಮ ಎಂದ ಯಡಿಯೂರಪ್ಪ

ಬೆಂಗಳೂರು: ‘ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ನನ್ನ ಮಗ ಬಿ.ವೈ. ವಿಜಯೇಂದ್ರಗೆ ಬಿಟ್ಟು ಕೊಡುವುದಾಗಿ ಅಲ್ಲಿನ ಜನರ ಒತ್ತಾಯಕ್ಕೆ ಮಣಿದು ಶುಕ್ರವಾರ ಹೇಳಿಕೆ ನೀಡಿದ್ದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶನಿವಾರ ಹೇಳಿದ್ದಾರೆ. ಶನಿವಾರ ಮಾಧ್ಯದಮವರ ಜೊತೆ ಮಾತನಾಡಿದ ಅವರು, ಶುಕ್ರವಾರ ನಾನು ನೀಡಿದ ಹೇಳಿಕೆಯಿಂದ … Continued

ಹುಬ್ಬಳ್ಳಿ: ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; 10ಕ್ಕೂ ಹೆಚ್ಚು ಕಾರ್ಮಿಕರು ಗಂಭೀರ

ಹುಬ್ಬಳ್ಳಿ: ನಗರದ ಹೊರಬಲಯದ ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಫ್ಯಾಕ್ಟರಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ, ಹತ್ತಕ್ಕೂ ಹೆಚ್ಚು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಗಾಯಗೊಂಡ ಕಾರ್ಮಿಕರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದ್ದು, ಫ್ಯಾಕ್ಟರಿಯಲ್ಲಿ ಮತ್ತಷ್ಟು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದೆ. ಅಗ್ನಿ ಅವಘಡದಿಂದಾಗಿ ಒಂದು ಬೈಕ್‌ ಕೂಡ ಭಸ್ಮವಾಗಿದೆ ಎಂದು ಹೇಳಲಾಗಿದೆ. ಫ್ಯಾಕ್ಟರಿಯಲ್ಲಿ ಮತ್ತಷ್ಟು … Continued

ಡೀಮ್ಡ್‌ ಅರಣ್ಯ ಸಂರಕ್ಷಣಾ ಯೋಜನೆ ರೂಪಿಸಿ ಜಾರಿ ಮಾಡಲು ಪರಿಸರ ಸಂಘಟನೆಗಳು, ತಜ್ಞರು ಒತ್ತಾಯ: ಸಿಎಂಗೆ ವೃಕ್ಷ ಲಕ್ಷ ಆಂದೋಲನದ ಶಿಫಾರಸು ಸಲ್ಲಿಕೆ

ಶಿರಸಿ: ವೃಕ್ಷ ಲಕ್ಷ ಆಂದೋಲನ ತಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಡೀಮ್ಡ್‌ ಅರಣ್ಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲು ಶನಿವಾರ ಮನವಿ ಮಾಡಿದೆ. ಇದೇವೇಳೆ ಅರಣ್ಯ ಸಚಿವ ಉಮೇಶ ಕತ್ತಿ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಅರಣ್ಯ ಪರಿಸರ ಇಲಾಖೆಯ ಅಪರ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಹಾಗೂ ಕೇಂದ್ರ ಅರಣ್ಯ … Continued

ಬೇಡ್ತಿ–ವರದಾ ನದಿಗಳ ಜೋಡಣೆ ಯೋಜನೆ ಕೈಗೆತ್ತಿಕೊಂಡಿಲ್ಲ : ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಗೆ ಸರ್ಕಾರದ ಮಾಹಿತಿ

ಶಿರಸಿ : ಶಿರಸಿ : ಬೇಡ್ತಿ – ವರದಾ ನದಿಗಳ ಜೋಡಣೆ ಯೋಜನೆಯನ್ನು ಸರ್ಕಾರ ಜಾರಿಗೆ ಮುಂದಾಗಿಲ್ಲ. ಡಿಪಿಆರ್‌ಗೆ ಒಪ್ಪಿಗೆ ನೀಡಿಲ್ಲ. ಯೋಜನಾ ವರದಿಯನ್ನು ಕೇಂದ್ರಕ್ಕೆ ಕಳುಹಿಸಿಲ್ಲ, ಕೇಂದ್ರ ಸರ್ಕಾರ ಬೇಡ್ತಿ- ವರದಾ ಯೋಜನೆಗೆ ಅನುದಾನ ನೀಡಿಲ್ಲ ಎಂದು ರಾಜ್ಯ ಸರ್ಕಾರ ಬೇಡ್ತಿ – ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಗೆ ತಿಳಿಸಿದೆ. ಬೇಡ್ತಿ ಅಘನಾಶಿನಿ ಕೊಳ್ಳ … Continued