ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ : ಸರ್ಕಾರದ ಕ್ರಮಕ್ಕೆ ಮುತಾಲಿಕ್‌ ತೀವ್ರ ವಿರೋಧ

ಬೆಳಗಾವಿ :ಸಾರ್ವಜನಿಕ ಗಣೇಶೋತ್ಸವವನ್ನು ರಾಜ್ಯ ಸರ್ಕಾರ ನಿರ್ಬಂಧಿಸಿ ಆದೇಶ ಹೊರಡಿಸಿರುವುದನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಈ ಆದೇಶವನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಆಗಸ್ಟ್ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಬಿಜೆಪಿ ಸರಕಾರದ ಈ ನಿರ್ಧಾರ ಧಿಕ್ಕಾರ ಹೇಳುತ್ತೇನೆ. ರಾಜ್ಯದ ಎಲ್ಲ … Continued

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ: ಎರಡನೇ ಪಟ್ಟಿ ಬಿಡುಗಡೆ ಮಾಡಿದ ಆಮ್‌ ಆದ್ಮಿ ಪಾರ್ಟಿ

ಹುಬ್ಬಳ್ಳಿ: ದೇಶದಲ್ಲಿ ಆಪ್ ಆದ್ಮಿ ಪಾರ್ಟಿ ವೇಗವಾಗಿ ಬೆಳೆಯುತ್ತಿರುವ ಪಕ್ಷ, ಹೀಗಾಗಿಯೇ ಕೇಂದ್ರದ ಸಚಿವರಾದ ಪ್ರಲ್ಹಾದ್ ಜೋಶಿ ಭಯಗೊಂಡು ಆಮ್‌ ಆದ್ಮಿ ಪಾರ್ಟಿ ಕುರಿತು ಹಾರಿಕೆ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಗೆ ಪಕ್ಷದಿಂದ ಮಹಾನಗರ ಚುನಾವಣೆ ಮೂಲಕ ಉತ್ತರ ನೀಡಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಹೇಳಿದ್ದಾರೆ. ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ವಾಯುಭಾರ ಕುಸಿತ; ಕರ್ನಾಟಕದ 8 ಜಿಲ್ಲೆಗಳಲ್ಲಿ 3 ದಿನ ಮಳೆ ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಬುಧವಾರದಿಂದ (ಆಗಸ್ಟ್‌ 18ರಿಂದ) ಅಧಿಕ ಮಳೆಯಾಗಲಿದೆ ಎಂದು ಅದು ತಿಳಿಸಿದೆ. ಕರ್ನಾಟಕದ ಕರಾವಳಿ ಜಿಲಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮತ್ತು ಮಲೆನಾಡಿನ … Continued

ಕೇಂದ್ರ ಸಚಿವರಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ: ಕೋವಿಡ್‌ ನಿಯಮ ಗಾಳಿಗೆ ತೂರಿದ ಬಿಜೆಪಿ ..!

ಯಾದಗಿರಿ: ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರ ಸ್ವಾಗತಕ್ಕೆ ಮುಗಿಬಿದ್ದಿದ್ದಲ್ಲದೆ ಅವರ ಸ್ವಾಗತಕ್ಕೆ ಬಂದೂಕಿನಿಂದ ಗುಂಡು ಹಾರಿಸಿ ಅತಿರೇಕದ ವರ್ತನೆ ತೋರಿದ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಸಚಿವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿರುವ ಕಾರಣ ಇದೀಗ ಎಫ್​ಐಆರ್ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Continued

ಹೊನ್ನಾವರ ಬಳಿ ಕಾರು-ಬೈಕ್‌ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಾಯ

ಹೊನ್ನಾವರ: ಉತತರ ಕನ್ನಡ ಜಿಲ್ಲೆ ಹೊನ್ನಾವರ ಕಾಲೇಜು ಸಮೀಪದ ಮೂರುಕಟ್ಟೆಯ ಬಳಿ ಬೈಕ್ ಮತ್ತು ಆಲ್ಟೊ ಕಾರ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟ ವರದಿಯಾಗಿದೆ. ರಸ್ತೆಯಲ್ಲಿದ್ದ ದನ ತಪ್ಪಿಸಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಾರುತಿ ಆಲ್ಟೊ ಕಾರ್ ಚಾಲಕ ದನ ತಪ್ಪಿಸಲು ಹೋದ ಸಂದರ್ಭದಲ್ಲಿ … Continued

ದಿಢೀರನೇ ದೆಹಲಿಗೆ ತೆರಳಿದ ಸಚಿವ ಆನಂದ್ ಸಿಂಗ್..!

ನವದೆಹಲಿ: ನೀಡಿರುವ ಖಾತೆಗಾಗಿ ಮುನಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಬುಧವಾರ ರಾತ್ರಿ ದಿಢೀರನೇ ದೆಹಲಿಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಯಲ್ಲಾಪುರ ಪ್ರವಾಸದಲ್ಲಿದ್ದ ಸಚಿವ ಆನಂದ್ ಸಿಂಗ್ ದಿಢೀರನೇ ಗೋವಾ ಮೂಲಕ ಕಳೆದ ರಾತ್ರಿ ದೆಹಲಿಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಅವರು ಇಂದು (ಬುಧವಾರ) ದೆಹಲಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ … Continued

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೆಸರು ಶಿಫಾರಸು

ನವದೆಹಲಿ: ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ಮಹಿಳಾ ನ್ಯಾಯಮೂರ್ತಿ ಬಿ.ವಿ. ನಾಗರತ್ನ (Justice B.V. Nagarathna) ಅವರ ಹೆಸರನ್ನು ಹೆಸರನ್ನು ಶಿಫಾರಸು ಮಾಡಲಾಗಿದೆ. ಸುಪ್ರೀಂ ಕೋರ್ಟ್​​ನ ಮುಖ್ಯ ನ್ಯಾಯಾಧೀಶರಾದ ಚೀಫ್​ ಜಸ್ಟೀಸ್​ ಎನ್​ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್​ ಕೊಲಿಜಿಯಂ ಬಿ.ವಿ. ನಾಗರತ್ನ ಅವರ ಹೆಸರನ್ನು ಶಿಫಾರಸು ಮಾಡಿದೆ. ಜಸ್ಟೀಸ್​ ನಾಗರತ್ನ ಅವರ … Continued

ಕರ್ನಾಟಕದಲ್ಲಿ ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ

ಬೆಂಗಳೂರು: ಕೊರೊನಾ ಆತಂಕದ ನಡುವೆಯೇ ನಾಳೆಯಿಂದ (ಆಗಸ್ಟ್ 19) ದ್ವಿತೀಯ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷೆಗಾಗಿ ಪಿಯು ಮಂಡಳಿ​ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕೊರೊನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಶಿಕ್ಷಣ ಇಲಾಖೆಯು ತನ್ನ ಸಿದ್ಧತೆಗಳನ್ನು ಆರಂಭಿಸಿದ್ದು, ಖಾಸಗಿ ವಿದ್ಯಾರ್ಥಿಗಳಿಗೆ ಮತ್ತು ಜುಲೈನಲ್ಲಿ … Continued

ತುರ್ತು ವೈದ್ಯಕೀಯ ಅಗತ್ಯ,ಕುಟುಂಬದಲ್ಲಿ ಸಾವುಸಂಭವಿಸಿದರೆ ಜನರ ಪ್ರವೇಶಕ್ಕೆ ಅನುಮತಿ ನೀಡಲು ಕರ್ನಾಟಕ ಸರ್ಕಾರಕ್ಕೆ ಕೇರಳ ಹೈಕೋರ್ಟ್‌ ನಿರ್ದೇಶನ

ಕುಟುಂಬದಲ್ಲಿ ಸಾವು ಅಥವಾ ವೈದ್ಯಕೀಯ ಚಿಕಿತ್ಸೆ, ತಮ್ಮ ಹಕ್ಕುಗಳನ್ನು ಬೆಂಬಲಿಸುವ ಮತ್ತು ತುರ್ತು ಪರಿಸ್ಥಿತಿಯಲ್ಲಿರುವ ಜನರಿಗೆ ಕೇರಳದಿಂದ ಪ್ರವೇಶಿಸಲು ಅನುಮತಿ ನೀಡುವಂತೆ ಕೇರಳ ಹೈಕೋರ್ಟ್‌ ಮಂಗಳವಾರ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕಾಸರಗೋಡು ಮತ್ತು ಮಂಗಳೂರಿನ ಗಡಿಗಳನ್ನು ನಿರ್ಬಂಧಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ ಮಂಜೇಶ್ವರದ ಐಯುಎಂಎಲ್ ಶಾಸಕರಾದ ಎಕೆಎಂ ಅಶ್ರಫ್ ಅವರ ಎರಡು ಪಿಐಎಲ್ … Continued

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಆದ್ಯತೆ ನೀಡಿ; ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ‌ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಅವರು ಮಂಗಳವಾರ) ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ … Continued