ಕುಮಟಾ: ಮೂರು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದ ಸುಭಾಸ ರಸ್ತೆಯ ಜಾನು ಮಣಕಿಕರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ತ್ರಿವಳಿ ಮಕ್ಕಳು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆಯ ವೈದ್ಯರಾದ ಡಾ.ಪ್ರಶಾಂತ ಮಣಕಿಕರ್ ತಿಳಿಸಿದ್ದಾರೆ. ಜಾನು ಮಣಕಿಕರ ಆಸ್ಪತ್ರೆಯಲ್ಲಿ ಮಿರ್ಜಾನಿನ ಗೀತಾ ಆನಂದ ಪಟಗಾರ ಅವರು ಕೆಲ ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ರಾತ್ರಿ … Continued

ಕರ್ನಾಟಕಕ್ಕೆ ರಾಜಕೀಯ ವ್ಯವಹಾರಗಳ ಸಮಿತಿ ರಚನೆ ಮಾಡಿದ ಕಾಂಗ್ರೆಸ್‌, ಐವರು ಎಐಸಿಸಿ ಕಾರ್ಯದರ್ಶಿಗಳ ನೇಮಕ

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಮರಕ್ಕೆ ಸಿದ್ಧರಾಗುವ ಪ್ರಯತ್ನಗಳ ಭಾಗವಾಗಿ ಕಾಂಗ್ರೆಸ್ ಶನಿವಾರ ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿ ಪಕ್ಷದ ರಾಜ್ಯದ ಹಲವು ನಾಯಕರು ಇದ್ದಾರೆ. ಹಾಗೂ ಪಕ್ಷ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ. ಅವರೊಂದಿಗೆ ಐವರು ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು … Continued

ರಾಜ್ಯದ ಕರಾವಳಿಯಲ್ಲಿ ಎರಡು ದಿನ ಭಾರೀ ಮಳೆ ಮುನ್ಸೂಚನೆ : ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಈಗಾಗಲೇ ಭಾರೀ ಮಳೆಯಿಂದಾಗಿ ರಾಜ್ಯದ ಜನ ತತ್ತರಿಸಿದ್ದು, ಈ ಮಧ್ಯೆ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪರಿಣಾಮದಿಂದಾಗಿ ರಾಜ್ಯಾದ್ಯಂತ ಇನ್ನೂ ನಾಲ್ಕು ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ … Continued

ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳು, ಕಾಲೇಜುಗಳಿಗೆ ಏಕರೂಪದ ವೇಳಾಪಟ್ಟಿ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 2022-23ನೇ ಶೈಕ್ಷಣಿಕ ಸಾಲಿಗೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಏಕರೂಪದ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬರು ಇದನ್ನು ಅಳವಡಿಸಿಕೊಂಡು ಕಡ್ಡಾಯವಾಗಿ ಪಾಲನೆ ಮಾಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್‌ ಅಶ್ವತ್ಥನಾರಾಯಣ ಸೂಚಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, … Continued

ಗುಂಡ್ಯ ಸಮೀಪ ಆನೆ ಮರಿ ಶವ ಪತ್ತೆ, ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿರುವ ಶಂಕೆ

ಮಂಗಳೂರು : ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದ ಹತ್ತಿರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವ ಪತ್ತೆಯಾಗಿದೆ. ಸಕಲೇಶಪುರ ವಲಯ ಅರಣ್ಯ ಅರಣ್ಯ ವ್ಯಾಪ್ತಿಯ ಮಾರನಹಳ್ಳಿ ಶಾಖೆ ಕೆಂಪುಹೊಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಆನೆಮರಿ ಶವ ಪತ್ತೆಯಾಗಿದ್ದು, ಆನೆ ಮರಿಗೆ ಸುಮಾರು 5 ತಿಂಗಳು ವಯಸ್ಸಾಗಿರಬಹುದು ಎಂದು … Continued

ಮೇಘ ಸ್ಫೋಟದಿಂದ ಅಮರನಾಥ ಯಾತ್ರೆಯಲ್ಲಿ ದುರಂತ: ಬಂಟ್ವಾಳದ 30 ಜನರ ತಂಡ ಸುರಕ್ಷಿತ

ಮಂಗಳೂರು: ಅಮರನಾಥದಲ್ಲಿ ನಡೆದ ಮೇಘಸ್ಪೋಟದಲ್ಲಿ ೧೬ ಜನ ಮೃಯಪಟ್ಟು ೪೦ಕ್ಕೂ ಹೆಚ್ಚು ಜನ ನಾಪತ್ತೆಯಾದ ಘಟನೆಯ ನಂತರ ಕರ್ನಾಟಕ ಈಗ ಸಹಾಯವಾಣಿ ಆರಂಭಿಸಿದೆ. ಈಗ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಿಂದ ಯಾತ್ರೆ ಕೈಗೊಂಡ 30 ಮಂದಿಯ ತಂಡ ಅಮರನಾಥದಲ್ಲಿ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಬಂದಿದೆ. ಘಟನೆ ನಡೆದ ಬೆನ್ನಲ್ಲೇ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಲಘು ಭೂಕಂಪ

ಬೆಳಗಾವಿ :ಮಹಾರಾಷ್ಟ್ರದ ಸಾಂಗ್ಲಿ, ಸೊಲ್ಲಾಪುರ, ಕರ್ನಾಟಕದ ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಯ ಕೆಲವೆಡೆ ಶನಿವಾರ ನಸುಕಿನಲ್ಲೇ ಲಘು ಭೂಕಂಪ ಸಂಭವಿಸಿದೆ. ಆದರೆ ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟ ಆಗಿಲ್ಲ ಎಂದು ತಿಳಿದುಬಂದಿದೆ. ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮ ಹಾಗೂ ನೆರೆಯ ವಿಜಯಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 6.22 ರಿಂದ 6.23 ರ ಸುಮಾರಿಗೆ ಸುಮಾರು 10 ಸೆಕೆಂಡ್ … Continued

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ಬೆಳ್ಳಂಬೆಳಗ್ಗೆ ಮನೆಯಿಂದ ಹೊರಗೆ ಓಡಿದ ಜನ

ವಿಜಯಪುರ: ಶನಿವಾರ ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಇಂದು, ಶನಿವಾರ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳ್ಳಂಬೆಳಗ್ಗೆ ಭಾರೀ ಶಬ್ದದೊಂದಿಗೆ 4-5 ಸೆಕೆಂಡ್​ಗಳ‌ ಕಾಲ ಭೂಮಿ ಕಂಪಿಸಿದ್ದು, ಆಗಷ್ಟೇ ನಿದ್ದೆಯಿಂದ ಏಳುತ್ತಿದ್ದ ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಶನಿವಾರ ಬೆಳಿಗ್ಗೆ 6:22ಕ್ಕೆ ಕಾಲ ಭೂಮಿ ಕಂಪಿಸಿದೆ. ಜಯಪುರದ ನಗರದ ರೇಲ್ವೆ ಸ್ಟೇಷನ್ ಏರಿಯಾ, ಗೋಳಗುಮ್ಮ … Continued

ರಾಜ್ಯದಲ್ಲಿ ಮಳೆಗೆ 12 ಜನರು ಸಾವು: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಈವರೆಗೆ ರಾಜ್ಯದಲ್ಲಿ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿಗಳ ಜೊತೆ ಸಂವಾದ ನಡೆಸಿದ ಅವರು, ಈ ಮಾಹಿತಿ ನೀಡಿದ್ದಾರೆ. ರಾಜ್ಯದ ೧೩ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿಯಿದೆ. ಮಳೆಯಿಂದಾಗಿ ಈವರೆಗೆ 12 ಜನರು ಸಾವಿಗೀಡಾಗಿದ್ದಾರೆ ಹಾಗೂ 65 … Continued

ನಾಳೆಯೂ ಉತ್ತರ ಕನ್ನಡ ಜಿಲ್ಲೆ ಕೆಲ ತಾಲೂಕುಗಳ ಶಾಲಾ ಕಾಲೇಜಿಗೆ‌ ರಜೆ ಘೋಷಣೆ

ಕಾರವಾರ : ಭಾರೀ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕುಗಳಿಗೆ ನಾಳೆ, ಶನಿವಾರ (ಜುಲೈ 9) ಜಿಲ್ಲಾಡಳಿತ ರಜೆ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹಾಗೂ ಶಿರಸಿ, ಸಿದ್ದಾಪುರ ಮತ್ತು ಜೋಯಿಡಾ ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಹಾಗೂ ರಾಜ್ಯ ಪ್ರಕೃತಿ ವಿಕೋಪ ಕೇಂದ್ರವು ಜುಲೈ 09ರ ಬೆಳಿಗ್ಗೆ … Continued