ಕಾರವಾರ: ಮನೆ ಅಂಗಳಕ್ಕೆ ಬಂದ ಬೃಹತ್‌ ಕಾಳಿಂಗ ಸರ್ಪ ಹಿಡಿದು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ ಸಿಬ್ಬಂದಿ | ವೀಕ್ಷಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋಟೆಗಾಳಿ ಗ್ರಾಮದಲ್ಲಿ ಕಂಡುಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ. ಗೋಟೆಗಾಳಿಯ ವಾಸು ಪೆಡ್ನೇಕರ್ ಎಂಬವರ ಮನೆ ಬಳಿ ಈ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಬೃಹತ್ ಕಾಳಿಂಗ ಕಂಡು ಅತಂಕಗೊಂಡ ಅವರ ಮನೆಯವರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ … Continued

ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

ತುಮಕೂರು: ಅತೀ ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಢಿಕ್ಕಿ ಹೊಡೆದುಕೊಂಡು ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಗುರುವಾರ ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಮಲಾಪುರ ಮತ್ತಿಹಳ್ಳಿ ಗೇಟ್ ಬಿ ಎಚ್ ರಸ್ತೆಯಲ್ಲಿ ನಡೆದಿದೆ. ಗಾಯಗೊಂಡವರಿಗೆ ತಿಪಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಿದರೆಗುಡಿಯಿಂದ ತಿಪಟೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ತಿಪಟೂರಿನಿಂದ ಅರಸೀಕೆರೆ ಕಡೆಗೆ … Continued

ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ, ಮೂವರ ಸಾವು

ಮಂಗಳೂರು : ಕಾರ್ಮಿಕರು ಉಳಿದುಕೊಂಡ ಶೆಡ್ ಮೇಲೆ ಗುಡ್ಡ ಕುಸಿದು ಶೆಡ್‌ನೊಳಗೆ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಸಾವಿಗೀಡಾದ ಘಟನೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ನಡೆದಿದೆ. ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಬುಧವಾರ ಸಂಜೆ ಹೆನ್ರಿ ಕಾರ್ಲೊ ಅವರ ಮನೆಯ ಬಳಿಯ ಶೆಡ್ ನಲ್ಲಿ ಉಳಿದುಕೊಂಡು … Continued

ಎರಡು ಗುಂಪುಗಳ ನಡುವೆ ಘರ್ಷಣೆ, ಚಾಕು ಇರಿತ : ನಿಷೇಧಾಜ್ಞೆ ಜಾರಿ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ ಸಂಭವಿಸಿದ್ದು, ಚೂರಿಯಿಂದ ಇರಿಯಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದ್ದು ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅರುಣ ಹಾಗೂ ಲಕ್ಷ್ಮಣ ಎಂಬವರಿಗೆ ಚೂರಿಯಿಂದ ಇರಿಯಲಾಗಿದೆ ಎಂದು ಹೇಳಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಮನೂರಿ ಎಂಬವರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ … Continued

ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆಯಿಂದ ಮರಳುವಾಗ ನಿಡಸೋಸಿ ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತ

ಧಾರವಾಡ ಚಂದ್ರಶೇಖರ ಗುರೂಜಿಯ ಅಂತ್ಯಕ್ರಿಯೆ ಮುಗಿಸಿಕೊಂಡು ಶ್ರೀಮಠದತ್ತ ಹೊರಟಿದ್ದ ನಿಡಸೋಸಿಯ ಸಿದ್ದಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಅವರ ವಾಹನ ಧಾರವಾಡ ಸಮೀಪ ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಹತ್ಯೆಯಾದ ಚಂದ್ರಶೇಖರ ಗುರೂಜಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ದುರದುಂಡೇಶ್ವರ ಮಠದ ಸ್ವಾಮೀಜಿ ಅವರ ಕಾರು ಮರಳಿ ಬೆಳಗಾವಿಯತ್ತ … Continued

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುರುವಾರವೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ, ಮಂಗಳವಾರ (ಜುಲೈ 7) ಕೂಡ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಗುರುವಾರ ಭಾರೀ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಜುಲೈ 7 ರಂದು ಕೂಡ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದಾರೆ. ಎಲ್ಲ … Continued

ನಕಲಿ ದಾಖಲೆ ನೀಡಿ ನೌಕಾಪಡೆ ಅಧಿಕಾರಿ ಎಂದು ಕದಂಬ ನೌಕಾ ನೆಲೆಗೆ ನುಗ್ಗಲು ಯತ್ನಿಸಿದ ಯುವಕ..!

ಕಾರವಾರ: ನಕಲಿ ದಾಖಲೆ ನೀಡಿ ಕದಂಬ ನೌಕಾನೆಲೆಗೆ ನುಗ್ಗಲು ಯತ್ನಿಸಿದ ಯುವಕನೊಬ್ಬನನ್ನು ನೌಕಾಪಡೆ ಪೊಲೀಸರು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರ್ಗಾದ ಕದಂಬ ನೌಕಾನೆಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಂಧೀತನನ್ನು ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಕಿರಣ್ ಎಸ್.ಆರ್. ಎಂದು ಗುರುತಿಸಲಾಗಿದೆ. ತಾನು ನೌಕಾಪಡೆಯ ಪ್ರೊಬೆಷನರಿ ಸಬ್ ಲೆಫ್ಟಿನೆಂಟ್ ಆಫೀಸರ್ ಎಂದು ಪರಿಚಯಿಸಿಕೊಂಡು … Continued

ಹುಬ್ಬಳ್ಳಿ: ಸರಳ ವಾಸ್ತು ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ

ಹುಬ್ಬಳ್ಳಿ: ಇಲ್ಲಿನ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಬರ್ಬರವಾಗಿ ಹತ್ಯೆಯಾಗಿದ್ದ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಇಂದು, ಬುಧವಾರ ಅಪರಾಹ್ನದ ನಂತರ ಹುಬ್ಬಳ್ಳಿ ಬಳಿಯ ಸುಳ್ಳ ರಸ್ತೆಯಲ್ಲಿರುವ ಕೃಷಿಭೂಮಿಯಲ್ಲಿ ನೆರವೇರಿತು. ಕುಟುಂಬಸ್ಥರ ಸಮ್ಮುಖದಲ್ಲಿ 10ಕ್ಕೂ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಗುರೂಜಿ ಅಣ್ಣನ ಮಗ ಸಂಜಯ ಅಂತಿಮ ವಿಧಿವಿಧಾನ ನೆರವೇರಿಸಿದರು. ಗುರೂಜಿ 2ನೇ … Continued

ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲಾ ಶಾಲಾ- ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜುಲೈ 7ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯನೈಸರ್ಗಿಕ ವಿಪತ್ತು ನಿರ್ವಹಣಾ ಸಮಿತಿಯು ಮುನ್ಸೂಚನೆ ನೀಡಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 7ರಂದು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ. ಮಂಗಳವಾರ ಮತ್ತು ಬುಧವಾರವೂ ರಜೆ ನೀಡಲಾಗಿತ್ತು. ರಾಜ್ಯನೈಸರ್ಗಿಕ ವಿಪತ್ತು ನಿರ್ವಹಣಾ ಸಮಿತಿಯು ಮುನ್ಸೂಚನೆ ಜುಲೈ 7ರ ಬೆಳಿಗ್ಗೆ … Continued

ಪಿಯು ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ವೇತನ ಹೆಚ್ಚಳ

ಬೆಂಗಳೂರು: ಸರಕಾರಿ ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇವರ ಗೌರವ ಸಂಭಾವನೆಯನ್ನು ‘ಪರಿಷ್ಕರಣೆ’ ಮಾಡಲಾಗಿದ್ದು, 9,000 ರೂ.ಗಳಿಂದ 12,000 ರೂ.ಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 1,250ಕ್ಕೂ ಅಧಿಕ ಸರಕಾರಿ ಪದವಿಪೂರ್ವ ಕಾಲೇಜುಗಳಿದ್ದು, 3,267 ಅತಿಥಿ ಉಪನ್ಯಾಸಕರಿದ್ದಾರೆ. ಇದಲ್ಲದೆ ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು … Continued