ಉತ್ತರ ಕನ್ನಡ ಜಿಲ್ಲೆ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

ಶಿರಸಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 2025 – 28ನೇ ಸಾಲಿಗಾಗಿ ರಾಜ್ಯ ಮತ್ತು ರಾಜ್ಯದ ಎಲ್ಲ ಜಿಲ್ಲೆಗಳ ಘಟಕಗಳ ಪದಾಧಿಕಾರಿ ಹುದ್ದೆಗಳಿಗೆ ಚುನಾವಣೆ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ಇತರ ಹುದ್ದೆಗಳಿಗೆ ನವೆಂಬರ 9 ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್‌ 13ರಂದು ಜಿಲ್ಲಾ ಪತ್ರಿಕಾ … Continued

ರೈಲಿಗೆ ತಲೆಕೊಟ್ಟು ಕಾರ್ಕಳ ಮಾಜಿ ಶಾಸಕರ ಪುತ್ರ ಆತ್ಮಹತ್ಯೆ

ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುದೀಪ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಿರ್ವಹಿಸುತ್ತಿದ್ದದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಕುಟುಂಬವು … Continued

ಶಾಸಕ ನಂಜೇಗೌಡ ಆಯ್ಕೆ ಅಸಿಂಧು ; ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ : ಮರು ಮತ ಎಣಿಕೆಗೆ ಆದೇಶ

ನವದೆಹಲಿ: ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕ ಕೆ ವೈ ನಂಜೇಗೌಡ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಹಾಗೂ ಮರು ಮತಎಣಿಕೆ ನಡೆಸುವಂತೆ ಸೂಚಿಸಿದೆ. ಆದರೆ ಮರು ಮತ ಎಣಿಕೆಯ ಫಲಿತಾಂಶವನ್ನು ಯಾವುದೇ ಕಾರಣಕ್ಕೂ ಪ್ರಕಟಿಸದೆ ಮುಚ್ಚಿದ ಲಕೋಟೆಯಲ್ಲಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಮುಂದಿನ ಮೂರು ದಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ. (ಅಕ್ಟೋಬರ್‌ 14ರಂದು ದಕ್ಷಿಣ ಹಾಗೂ ಉತ್ತರ ಒಳನಾಡಿನ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ … Continued

ಖ್ಯಾತ ಹಾಸ್ಯ ನಟ-ರಂಗಭೂಮಿ ಕಲಾವಿದ ರಾಜು ತಾಳಿಕೋಟಿ ಇನ್ನಿಲ್ಲ

ಧಾರವಾಡ : ಖ್ಯಾತ ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಅವರು ಇಂದು, ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಶೈನ್ ಶೆಟ್ಟಿ ಅಭಿನಯದ ಹೊಸ‌ ಚಿತ್ರದಲ್ಲಿ ನಟಿಸುತ್ತಿರುವ ಅವರು, ಕಳೆದ ಎರಡು‌‌ ದಿನಗಳಿಂದ ಉಡುಪಿ ಜಿಲ್ಲೆಯ ಹೆಬ್ರಿ ಬಳಿ  ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಭಾನುವಾರ ರಾತ್ರಿ 12 ಗಂಟೆ ಹೊತ್ತಿಗೆ ರಾಜು ತಾಳಿಕೋಟೆ … Continued

ವೀಡಿಯೊ..| ಬೆಂಗಳೂರಲ್ಲಿ ಬಸ್ ಓಡಿಸುವಾಗಲೇ ಚಾಲಕನಿಗೆ ಮೂರ್ಛೆ ; 9 ವಾಹನಗಳಿಗೆ ಬಸ್‌ ಡಿಕ್ಕಿ

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಚಾಲಕನಿಗೆ ಚಾಲನೆ ಮಾಡುವಾಗ ತೀವ್ರವಾದ  ಮೂರ್ಛೆ ರೋಗ (seizure) ಕಾಣಿಸಿಕೊಂಡ ಪರಿಣಾಮವಾಗಿ, ನಿಯಂತ್ರಣ ಕಳೆದುಕೊಂಡ ಬಸ್ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಒಂಬತ್ತು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಭೀಕರ ಅಪಘಾತವು ಶನಿವಾರ ಸಂಭವಿಸಿದ್ದು, ಈ ಘಟನೆಯಲ್ಲಿ ಮೂರು ಆಟೋರಿಕ್ಷಾಗಳು, … Continued

ದೇವೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಜೋಶಿ

ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ದೇವೇಗೌಡರು ಜೋಶಿ ಅವರೊಂದಿಗೆ ಲವಲವಿಕೆಯಿಂದ ಮಾತನಾಡಿದ್ದಾರೆ. ಹಿರಿಯ ರಾಜಕೀಯ ಮುತ್ಸದ್ದಿ ದೇವೇಗೌಡರು ಶೀಘ್ರವೇ ಚೇತರಿಸಿಕೊಂಡು ಉತ್ತಮ ಆರೋಗ್ಯವಂತರಾಗಿರಲಿ ಎಂದು ಜೋಶಿ ಹಾರೈಸಿದರು. … Continued

ಶಿರಸಿ : ಉತ್ತರ ಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಪಥ ಸಂಚಿಕೆ ಬಿಡುಗಡೆ

ಶಿರಸಿ: ಉತ್ತರಕನ್ನಡ ಜಿಲ್ಲಾ ಪತ್ರಿಕಾ ಮಂಡಳಿ 1974 ರಿಂದ ನಡೆದು ಬಂದ ದಾರಿಯ ಸಮಗ್ರವಾದ ಮಾಹಿತಿ ಇರುವ ಸುವರ್ಣ ಪಥ ಸ್ಮರಣ ಸಂಚಿಕೆಯನ್ನು ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಬಿಡುಗಡೆ ಮಾಡಲಾಯಿತು. ಜೀವ ಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಹಾಗೂ ಸ್ಕೊಡವೇಸ್ ಮುಖ್ಯ ಕಾರ್ಯನಿರ್ವಾಹಕರಾದ ಡಾ.ವೆಂಕಟೇಶ ನಾಯ್ಕ ಅವರು ಸುವರ್ಣ ಪಥ ಸ್ಮರಣ ಸಂಚಿಕೆಯನ್ನು … Continued

ಲವರ್ ಜೊತೆ ಓಡಿ ಹೋದ ಮಗಳು; ಊರಿಗೆ ‘ತಿಥಿ’ ಊಟ ಹಾಕಿಸಿದ ತಂದೆ

ಬೆಳಗಾವಿ : ಮಗಳು ಪ್ರೀತಿಸಿದಾತನೊಂದಿಗೆ ಓಡಿಹೋಗಿದ್ದರಿಂದ ಮನನೊಂದ ತಂದೆ ಊರಿಗೆ ಊಟ ಹಾಕಿಸಿ, ತಿಥಿ ಕಾರ್ಯ ನೆರವೇರಿಸಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಮ್ಮ ಇಚ್ಛೆಗೆ ವಿರುದ್ಧವಾಗಿ ಪ್ರಿಯಕರನ ಜತೆ ಓಡಿ ಹೋದ ಮಗಳ ತಿಥಿ ನಡೆಸಿದ ತಂದೆ ಊರವರಿಗೆಲ್ಲ ಊಟ ಹಾಕಿಸಿದ ವಿದ್ಯಮಾನ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ … Continued

ಹಾವೇರಿ | ನೀರು ಹಾಯಿಸಲು ಹೋದ ಸಹೋದರರ ಮೇಲೆ ಚಿರತೆ ದಾಳಿ ; ಓರ್ವ ಸಾವು

ಹಾವೇರಿ: ಜಮೀನಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ್ದು, ಓರ್ವ ಮೃತಪಟ್ಟು, ಇನ್ನೊಬ್ಬ ಗಾಯಗೊಂಡ ಘಟನೆ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಿರತೆ ದಾಳಿಯಿಂದ ಬೀರಪ್ಪ ಹನುಮಂತಪ್ಪ ಬಳಗಾವಿ(30) ಎಂಬವರು ಮೃತಟ್ಟಿದ್ದಾರೆ ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಸಹೋದರ ಗಣೇಶ ಬಳಗಾವಿ ಎಂಬವರು ಗಂಭೀರ ಗಾಯಗೊಂಡಿದ್ದಾರೆ. … Continued