ಶಾಲಾ ಪ್ರವಾಸ ಕಾರ್ಯಕ್ರಮಕ್ಕೆ ಹಿಂದಿ ಮಾತನಾಡುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವಂತೆ ರಾಜ್ಯ, ಕೇಂದ್ರದಿಂದ ಯಾವುದೇ ನಿರ್ದೇಶನವಿಲ್ಲ: ಸಚಿವ ನಾಗೇಶ

ಬೆಂಗಳೂರು: ‘ಆಜಾದಿ ಕಾ ಅಮೃತ್ ಮಹೋತ್ಸವ’ ಪ್ರವಾಸಕ್ಕೆ ಹಿಂದಿ ಭಾಷಿಕ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡುವಂತೆ ರಾಜ್ಯ ಅಥವಾ ಕೇಂದ್ರ ಸರ್ಕಾರ ಯಾವುದೇ ನಿರ್ದೇಶನ ನೀಡಿಲ್ಲ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸ್ಪಷ್ಟಪಡಿಸಿದ್ದಾರೆ. ವಿವಾದಕ್ಕೆ ಕಾರಣವಾದ ಉಪನಿರ್ದೇಶಕ ಡಾ. ಪದವಿ ಪೂರ್ವ ಶಿಕ್ಷಣ ಇಲಾಖೆ (ಬೆಂಗಳೂರು ದಕ್ಷಿಣ) ಕಾಲೇಜುಗಳಿಗೆ ಇಂತಹ … Continued

ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಭರ್ಜರಿ ಗೆಲುವು

ಬೆಳಗಾವಿ: ವಾಯವ್ಯ ಪದವೀಧರ ಕ್ಷೇತ್ರದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಪ್ರತಿಸ್ಪರ್ಧಿಗಿಂತ 34,693 ಹೆಚ್ಚು ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ನಿರಾಣಿ 44,815 ಮತ ಪಡೆದರೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಸಂಕ ಅವರು 10,112 ಮತಗಳನ್ನಷ್ಟೇ ಪಡೆದರು.ಚುನಾವಣೆಯಲ್ಲಿ ಒಟ್ಟು 65,922 ಮತಗಳು ಚಲಾವಣೆಯಾಗಿದ್ದು, 9006 … Continued

ರಾಜ್ಯದಲ್ಲಿ ಏರುತ್ತಿರುವ ಕೊರೊನಾ ಸೋಂಕು : ಗುರುವಾರ 648 ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಇಂದು, ಗುರುವಾರ ರಾಜ್ಯದಲ್ಲಿ ಒಟ್ಟು 648 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಜೊತೆಗೆ ಒಂದು ಸಾವು ವರದಿಯಾಗಿದೆ. 532 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,997ಕ್ಕೆ ತಲುಪಿದೆ. ರಾಜ್ಯದ ಇಂದಿನ ಸಕಾರಾತ್ಮಕ ಶೇ. … Continued

ಪರಿಷತ್‌ ಚುನಾವಣೆ: ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವು

ಬೆಳಗಾವಿ : ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಬಿಜೆಪಿ ತೆಕ್ಕಯಿಂದ ಸ್ಥಾನವನ್ನು ಕಸಿದುಕೊಂಡಿದೆ. ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಬಿಜೆಪಿಯ ಅರುಣ ಶಹಾಪುರ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಪ್ರಕಾಶ ಹುಕ್ಕೇರಿ 11,460 ಪ್ರಥಮ ಪ್ರಾಶಸ್ತ್ಯ ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ‌ ಅಭ್ಯರ್ಥಿ ಅರುಣ … Continued

ಬಿಷಪ್ ವಿರುದ್ಧದ ಪೋಕ್ಸೋ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ರೆವರೆಂಡ್ ಪ್ರಸನ್ನ ಕುಮಾರ್ ಸ್ಯಾಮ್ಯುಯೆಲ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರಸನ್ನಕುಮಾರ್ ಸ್ಯಾಮ್ಯುಯೆಲ್ ಅವರು ಚರ್ಚ್ ಆಫ್ ಸೌತ್ ಇಂಡಿಯಾ (CSI) ಕರ್ನಾಟಕ ಸೆಂಟ್ರಲ್ ಡಯಾಸಿಸ್‌ನ ಬೆಂಗಳೂರು ಬಿಷಪ್. 2015ರಲ್ಲಿ ನಗರದ ಶಾಲೆಯೊಂದರ ಆವರಣದಲ್ಲಿ ಕೆಲ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ … Continued

ಜೈಲಿನಲ್ಲಿ ಶಶಿಕಲಾಗೆ ಅಕ್ರಮವಾಗಿ ಸೌಲಭ್ಯ: ಐಪಿಎಸ್ ಅಧಿಕಾರಿ ಡಿ.ರೂಪ ವಿರುದ್ಧ ಮಾಜಿ ಪೊಲೀಸ್‌ ಅಧಿಕಾರಿ ಹೂಡಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ನಿವೃತ್ತ ಡಿಜಿಪಿ ಎಚ್​​​​​​​​​​​.ಎನ್ ಸತ್ಯನಾರಾಯಣ ರಾವ್ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ, ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್​​​​​​​​​​​​​ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ರಾಜ್ಯ ಹೈಕೋರ್ಟ್ ರದ್ದುಗೊಳಿಸಿದೆ. ಓರ್ವ ಸರ್ಕಾರಿ ಅಧಿಕಾರಿಯು ಮತ್ತೊಬ್ಬ ಸರ್ಕಾರಿ ಅಧಿಕಾರಿಯ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸುವುದು ಮಾನನಷ್ಟ ಮೊಕದ್ದಮೆ ಪ್ರಕರಣದ ವ್ಯಾಪ್ತಿಗೆ … Continued

ನಾಳೆಯಿಂದ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ: ಅಕ್ರಮ ತಡೆಗೆ ವೀಡಿಯೋ ಚಿತ್ರೀಕರಣ, ಮಾಸ್ಕ್‌ ಧರಿಸುವುದು ಕಡ್ಡಾಯ…

 ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜೂನ್‌ 16 ಮತ್ತು 17ರಂದು ನಡೆಯುವ ಸಿಇಟಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಕಡಿವಾಣ ಹಾಕಲು ಪರೀಕ್ಷಾ ಪ್ರಕ್ರಿಯೆಯನ್ನು ಸಂಪೂರ್ಣ ವೀಡಿಯೋ ಚಿತ್ರೀಕರಣ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ ಹೇಳಿದ್ದಾರೆ. ನಾಳೆಯಿಂದ (ಜೂನ್‌ 16ರಿಂದ) ನಡೆಯುವ ಸಿಇಟಿ ಪರೀಕ್ಷೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ … Continued

11ನೇ ಮಹಡಿಯಿಂದ ಜಿಗಿದು ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವೈದ್ಯ ಆತ್ಮಹತ್ಯೆ

ಬೆಂಗಳೂರು: ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರೊಬ್ಬರು ವಸತಿ ಸಮುಚ್ಚಯದ 11ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವೈದ್ಯರನ್ನು ಡಾ. ಪೃಥ್ವಿರಾಜ  ರೆಡ್ಡಿ (31) ಎಂದು ಗುರುತಿಸಲಾಗಿದೆ. ಅವರು ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು ಹಾಗೂ ಇವರ ಪತ್ನಿಯೂ ವೈದ್ಯೆಯೇ ಆಗಿದ್ದಾರೆ … Continued

ರಾಷ್ಟ್ರಕವಿ ಕುವೆಂಪುಗೆ ಅವಮಾನ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ: ಶಿಕ್ಷಣ ಸಚಿವ ನಾಗೇಶ

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ್ದು ಸಿದ್ದರಾಮಯ್ಯ ಸರ್ಕಾರ. ಹೀಗಾಗಿ ಅವರು ಮೊದಲು ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಯಲಿ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ಜನರನ್ನು ದಾರಿ ತಪ್ಪಿಸಲು ಏನೇನೊ ಹೇಳುತ್ತಿದ್ದಾರೆ. ಶಿಕ್ಷಣದ ಕೇಸರೀಕರಣ ಎಂದರೆ ಏನೆಂದು ಅವರು ಮೊದಲು ಹೇಳಲಿ. ಅದರ ಬಗ್ಗೆ ಮಾತನಾಡಲು ನಾವು … Continued

ಗುಬ್ಬಿ: ಹಾಡಹಗಲೇ ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ ಬರ್ಬರ ಕೊಲೆ

ತುಮಕೂರು: ಹಾಡಹಗಲೇ ಮಚ್ಚು, ಲಾಂಗ್‌ನಿಂದ ಹಲ್ಲೆ ನಡೆಸಿ ದಲಿತ ಸಂಘರ್ಷ ಸಮಿತಿ ಮುಖಂಡ ನರಸಿಂಹಮೂರ್ತಿ (50) ಎಂಬುವರನ್ನು ಬರ್ಬರ ಕೊಲೆ ಮಾಡಿದ ಘಟನೆ ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ನಡೆದ ಬಗ್ಗೆ ವರದಿಯಾಗಿದೆ. ಗುಬ್ಬಿ ಪಟ್ಟಣದ ಬಿ.ಎಸ್‌.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗದ ಹೆದ್ದಾರಿ ಪಕ್ಕದಲ್ಲಿ ಕೊಲೆ ನಡೆದಿದೆ. ಹೆದ್ದಾರಿ ಪಕ್ಕದಲ್ಲೇ ಟೀ … Continued