ಕಾಂಗ್ರೆಸ್‌ನಲ್ಲಿ ಟ್ವೀಟ್‌ ವಾರ್‌: ಸಂಯಮಕ್ಕೆ ರಾಜ್ಯ ನಾಯಕರಿಗೆ ಸೂಚಿಸಿದ ಹೈಕಮಾಂಡ್‌

ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿದ ನಂತರ ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಜಾಲತಾಣಗಳ ಸಮರ ಆರಂಭವಾಗಿದೆ.ಎಚ್ಚೆತ್ತ ಪಕ್ಷದ ಕೇಂದ್ರ ನಾಯಕರು ಸಂಯಮ ಕಾಪಾಡಿಕೊಳ್ಳುವಂತೆ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರೇ ಚರ್ಚೆಯನ್ನು ಅಂತ್ಯಗೊಳಿಸುವಂತೆ ಎಲ್ಲರಿಗೂ ಸೂಚಿಸಿದ್ದಾರೆ. ಅದನ್ನು ಮುಂದುವರಿಸಿದರೆ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹಾನಿಯಾಗುತ್ತದೆ. … Continued

ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಾಗೇಶನ ಕಾಲಿಗೆ ಪೊಲೀಸರ ಗುಂಡೇಟು

ಬೆಂಗಳೂರು: ಯುವತಿ ಮೇಲೆ ಆಸಿಡ್‌ ಎರಚಿ ಪರಾಯಾಗಿದ್ದ ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಗೇಶನ ಕಾಲಿಗೆ ಪೊಲೀಸರು ಗುಂಡುಹಾರಿಸಿ ಮತ್ತೆ ಬಂಧಿಸಿದ ಘಟನೆ ನಡೆದಿದೆ. ಬೆಂಗಳೂರಿಗೆ ಕರೆ ತರುವಾಗ ಎಸ್ಕೇಪ್ ಆಗಲು ಯತ್ನಿಸಿದ್ದ ನಾಗನ ಕಾಲಿಗೆ ಪೊಲೀಸರು ಕೆಂಗೇರಿ ಬ್ರಿಡ್ಜ್ ಬಳಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಕರೆತರುವಾಗ ದಾರಿಯಲ್ಲಿ ಮೂತ್ರ … Continued

ಜನತಾ ಜಲಧಾರೆ: ಬೃಹತ್‌ ಸಮಾವೇಶದಲ್ಲಿ ಜೆಡಿಎಸ್‌ನಿಂದ ಚುನಾವಣಾ ಕಹಳೆ

ನೆಲಮಂಗಲ (ಬೆಂಗಳೂರು): ಮುಂದಿನ ಜೂನ್‌, ಜುಲೈ ತಿಂಗಳಿನಲ್ಲಿ ಮತ್ತೊಂದು ಸುತ್ತಿನ ರಥ ಯಾತ್ರೆ ಮಾಡುತ್ತೇನೆ. ಮೂರು ತಿಂಗಳ ಕಾಲ ಹಳ್ಳಿ ಹಳ್ಳಿಗಳಿಗೆ ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನಾಡಿನ ಜನತೆಯ ಹಿತವನ್ನು ದೃಷ್ಟಿಯಲ್ಲಿ ಪಂಚರತ್ನ ಯೋಜನೆಗಳನ್ನು ರೂಪಿಸಿ ಜನತೆಯ ಮುಂದೆ … Continued

ಬೆಂಗಳೂರು: ಯುವತಿ ಮೇಲೆ ಆಸಿಡ್‌ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶನನ್ನು ಕೊನೆಗೂ ಬಂಧಿಸಿದ ಪೊಲೀಸರು

ಬೆಂಗಳೂರು: ಯುವತಿಗೆ ಆಸಿಡ್ ಎರಚಿ ನಾಪತ್ತೆಯಾಗಿದ್ದ ಆರೋಪಿ ನಾಗೇಶನನ್ನು ಬರೋಬ್ಬರಿ ಮೂರು ವಾರಗಳ ನಂತರ ತಮಿಳುನಾಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಏ.28ರಂದು ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶ​ನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಆಶ್ರಮದಲ್ಲಿ ಕಾವಿ ಬಟ್ಟೆ ಧರಿಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶನನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. … Continued

ರಾಜ್ಯಸಭೆ, ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತು ನಾಳೆ, ಶುಕ್ರವಾರ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರುಮುಂದಿನ ತಿಂಗಳು … Continued

ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಅಸಾನಿ ಚಂಡಮಾರುತ ಕ್ಷೀಣವಾಗಿದ್ದರೂ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕಳೆದ ಎರಡು ವಾರಗಳಿಂದ ರಾಜ್ಯದ ಒಳನಾಡಿನಲ್ಲಿ ಬೀಳುತ್ತಿರುವ ಮಳೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕಳೆದ ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಬೀಳುತ್ತಿದ್ದು, ಮೋಡ ಮುಸುಕಿದ … Continued

ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಮೇ 19ರಂದು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022ರ ಪರೀಕ್ಷೆಗಳ ಫಲಿತಾಂಶಗಳನ್ನು ಮೇ 19ರಂದು ಪ್ರಕಟಿಸಲಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶವು ಕೆಎಸ್‌ಇಇಬಿ ಬೋರ್ಡ್ ಅಧಿಕೃತ ಮಾಹಿತಿ ಲಭ್ಯವಾಗಲಿದೆ. ಅದೇ ದಿ‌ನ ಶಾಲೆಗಳಲ್ಲಿ ಮತ್ತು ಇಲಾಖೆಯ … Continued

ಹರ್ಷ ಕೊಲೆ ಪ್ರಕರಣ : ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು: ಶಿವಮೊಗ್ಗದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಹತ್ತು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90 ರಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂಬ ರಾಷ್ಟ್ರೀಯ ತನಿಖಾ ದಳ ( ಎನ್‌ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ. ಬುಧವಾರ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಕೊಲೆ ಪ್ರಕರಣಕ್ಕೆ ಸಂಂಧಿಸಿದ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ … Continued

ಮಹಿಳೆ ಶವ ಬೈಕ್‌ನಲ್ಲಿ ಸಾಗಿಸುತ್ತಿದ್ದಾಗ ಅಪಘಾತ: ಕೊಲೆಯ ರಹಸ್ಯ ಬಯಲು

ಬೆಂಗಳೂರು: ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್‌ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದಾಗ ನಾಲ್ವರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಘಟನೆಯಲ್ಲಿ ನಾಗರಾಜು, ವಿನೋದ ಎಂಬವರು ಗಾಯಗೊಂಡಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಸ್ನೇಹಿತರ ಮನೆಯಲ್ಲಿ ತಲೆ ಮರೆಸಿಕೊಂಡಿದ್ದ ದುರ್ಗಾ ಆಕೆಯ ಪತಿ ರಘು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಭಿ ಎಂಬಾತನಿಗಾಗಿ … Continued

ಸಂಪುಟ ವಿಸ್ತರಣೆ: ಅಮಿತ್ ಶಾ ಭೇಟಿ ಮಾಡಿದ ಸಿಎಂ, ಯಾವಾಗ ಏನುಬೇಕಾದರೂ ಆಗಬಹುದು ಎಂದ ಬೊಮ್ಮಾಯಿ

ನವದೆಹಲಿ: ರಾಜ್ಯದ ಸಚಿವ ಸಂಪುಟದ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಜೊತೆ ಸಮಾಲೋಚನೆ ನಡೆಸಲಾಗಿದೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಏನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಮಿಕವಾಗಿ ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು, ಬುಧವಾರ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ … Continued