ಆಸೆ ಇದು ರಜೋಗುಣ-ಭಯ, ಚಿಂತೆ, ದ್ವೇಷ, ಕ್ರೋಧ ಎಲ್ಲವೂ ಆಸೆಯ ಸುತ್ತಲೇ ಜನ್ಮ ತಳೆಯುತ್ತವೆ: : ರಾಘವೇಶ್ವರ ಶ್ರೀ

ಕುಮಟಾ: ಆಸೆಯ ಪಾಶದಿಂದ ಮುಕ್ತಿ ಪಡೆದರೆ ಮಾತ್ರ ಮನಃಶಾಂತಿ ಸಾಧ್ಯ. ಆಸೆಯ ಪಾಶದಿಂದ ಏನು ಅನಾಹುತವಾಗುತ್ತದೆ ಎನ್ನುವುದಕ್ಕೆ ರಾವಣನೇ ನಿದರ್ಶನ ಎಂದು ರಾಂಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೂರನೇ ದಿನದ ಪ್ರವಚನದಲ್ಲಿ … Continued

ಓದು ಎಂದು ಬುದ್ಧಿಮಾತು ಹೇಳಿದ್ದಕ್ಕೆ ನೇಣಿಗೆ ಶರಣಾದ ಪಿಯುಸಿ ವಿದ್ಯಾರ್ಥಿ

ಹಾವೇರಿ: ಓದು ಎಂದು ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ತಾಲೂಕಿನ ಗುತ್ತಲ ಸಮೀಪದ ಹೊಸಮೇಲ್ಮುರಿಯದಲ್ಲಿ ಎಂಬಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಫಕ್ಕಿರೇಶ ಅರಳಿ (18) ಎಂದು ಗುರುತಿಸಲಾಗಿದೆ. ಗುರುವಾರ ಪರೀಕ್ಷೆ ಬರೆದಿದ್ದ ಈತ ಆ ದಿನ ಓದದೇ ಕಾಲಹರಣ ಮಾಡುತ್ತಿದ್ದುದರಿಂದ ಓದುವಂತೆ ಪೋಷಕರು ಆತನಿಗೆ … Continued

ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ಉಡುಗೊರೆ ನೀಡಿದ ಆರೋಪ ಸತ್ಯಕ್ಕೆ ದೂರ: ಜಮೀರ್ ಸ್ಪಷ್ಟನೆ

ಬೆಂಗಳೂರು: ಹುಬ್ಬಳ್ಳಿ ಗಲಭೆಯಲ್ಲಿ ಕಲ್ಲು ತೂರಾಟ ನಡೆಸಿ ಬಂಧೀತ ಆರೋಪಿಗಳಿಗೆ 5 ಸಾವಿರ ರೂ. ನಗದು ಹಾಗೂ ರಂಜಾನ್ ಫುಡ್‌ಕಿಟ್ ನೀಡಿ ಸಹಾಯ ಮಾಡಿದ್ದಾರೆ ಎಂದು ತಮ್ಮ ಮೇಲೆ ಆರೋಪ ಕೇಳಿಬರುತ್ತಿದ್ದಂತೆ, ಶಾಸಕ ಜಮೀರ್ ಟ್ವೀಟ್ ಮೂಲಕ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮೇಲಿನ ಆರೋಪಗಳೆಲ್ಲ ಸುಳ್ಳು ಎಂದು ಹೇಳಿರುವ ಅವರು ಅದಕ್ಕೂ ನನಗೂ ಸಂಬಂಧವೇ … Continued

ಉಡುಪಿ: ಕರ್ತವ್ಯನಿರತ ಹೆಡ್‌ ಕಾನ್ಸ್‌ಟೇಬಲ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ

ಉಡುಪಿ: ಕರ್ತವ್ಯನಿರತ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಆದಿ ಉಡುಪಿ ಪ್ರೌಢಶಾಲೆ ಬಳಿ ಶುಕ್ರವಾರ (ಏಪ್ರಿಲ್‌ 29) ನಡೆದಿದೆ. ಮೃತ ಸಶಸ್ತ್ರ ಮೀಸಲು ಪಡೆಯ ಹೆಡ್‌ ಕಾನ್ಸ್‌ಟೇಬಲ್‌ ಅನ್ನು ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ. ಇವರು ಇಂದು,ಶುಕ್ರವಾರ ಆದಿಉಡುಪಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ಉತ್ತರ ಪತ್ರಿಕೆ ಕೊಠಡಿಯ ಭದ್ರತಾ ನಿರ್ವಹಣೆಯಲ್ಲಿ ರಾತ್ರಿ … Continued

ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ಶಾಸಕ ಜಮೀರ್‌ ಅಹಮ್ಮದ್‌ ಉಡುಗೊರೆ ನೀಡುತ್ತಿರುವುದೇಕೆ? – ಬಿಜೆಪಿ ಪ್ರಶ್ನೆ

ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಶಾಸಕ ಜಮೀರ್‌ ಉಡುಗೊರೆಗಳನ್ನು ನೀಡುತ್ತಿದ್ದಾರೆ. ಗಲಭೆ ನಡೆಸಿದ್ದಕ್ಕಾಗಿಯೇ ಈ ಉಡುಗೊರೆಯೇ ಎಂದು ಬಿಜೆಪಿ ಪ್ರಶ್ನಿಸಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕ, ” ಹುಬ್ಬಳ್ಳಿಯ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ನೇರವಾಗಿ ಗಲಭೆಯಲ್ಲಿ ಭಾಗಿಯಾಗಿರುವುದು ದೃಢ ಪಟ್ಟಿದೆ. ಹುಬ್ಬಳ್ಳಿ ಗಲಭೆಗೆ … Continued

ಪಿಎಸ್​ಐ ಹುದ್ದೆ ನೇಮಕಾತಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಪಿಎಸ್​ಐ ಹುದ್ದೆ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಕಟಿಸಿದ್ದಾರೆ. ಈ ಹಿಂದೆ ನಡೆದಿದ್ದ ಪಿಎಸ್‌ಐ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಶುಕ್ರವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಮಾಹಿತಿ … Continued

ಅಮಿತ್ ಶಾ ಕರ್ನಾಟಕ ಭೇಟಿ ಸಮಯದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ದೆಹಲಿಗೆ ತರಳುತ್ತಿದ್ದು, ದೆಹಲಿ ಪ್ರವಾಸದ ವೇಳೆ ಕೇಂದ್ರ ಸಚಿವರು ಹಾಗೂ ಪಕ್ಷದ ವರಿಷ್ಠರನ್ನು ಭೇಟಿ ಮಾಡುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇ 3ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಆಗ ಸಂಪುಟ ರಚನೆ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈಗಾಗಲೇ … Continued

ಪಿಎಸ್​ಐ ನೇಮಕಾತಿ ಪರೀಕ್ಷೆ ಹಗರಣ: 18 ದಿನದಿಂದ ತಲೆಮರೆಸಿಕೊಂಡಿದ್ದ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ

ಕಲಬುರಗಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ಹಾಗೂ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿವ್ಯ ಹಾಗರಗಿ ಕಳೆದ 18 ದಿನಗಳಿಂದ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದರು. ಪುಣೆಯ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಸಿಐಡಿ … Continued

ಕರ್ನಾಟಕದಲ್ಲಿ ಏರುತ್ತಿದೆ ಕೊರೊನಾ…ಹೊಸದಾಗಿ 154 ಜನರಿಗೆ ಸೋಂಕು, ಬೆಂಗಳೂರಲ್ಲಿ 142 ಪ್ರಕರಣ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು, ಗುರುವಾರ ಒಟ್ಟು 154 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಲ್ಲೇ 142 ಪ್ರಕರಣ ದಾಖಲಾಗಿವೆ ರಾಜ್ಯದ ಕೋವಿಡ್‌ ಪಾಸಿಟಿವಿಟಿ ದರ ಶೇ.1.49ಕ್ಕೆ ಏರಿಕೆ ಕಂಡರೆ ಬೆಂಗಳೂರಿನ ಪಾಸಿಟಿವಿಟಿ ರೇಟ್ ಶೇ.3 ದಾಟಿದೆ. ಇದೇವೇಳೆ ಒಟ್ಟು 116 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದ … Continued

ರಾಮ- ಸೀತೆಯರ ಪ್ರೀತಿ ಅಲೌಕಿಕ, ಧರ್ಮಸಮ್ಮತ : ರಾಘವೇಶ್ವರ ಸ್ವಾಮೀಜಿ

ಕುಮಟಾ: ರಾಮ- ಸೀತೆಯರ ಪ್ರೀತಿಯನ್ನು ಕ್ಷುದ್ರ ದೃಷ್ಟಿಯಿಂದ ನೋಡದೇ ಅದನ್ನು ಮೂಲ ಪ್ರಕೃತಿ ಮತ್ತು ಪರಮ ಪುರುಷನ ಪ್ರೀತಿಯಾಗಿ ಲೌಕಿಕ ದೃಷ್ಟಿಯಿಂದ ನೋಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ನಡೆಯುತ್ತಿರುವ ‘ರಾಮಸೇತು’ ರಾಮಕಥಾ ಸರಣಿಯ … Continued