ಯಲ್ಲಾಪುರ : ಕಾನೂರು ಜಲಪಾತದಲ್ಲಿ ವಿದ್ಯಾರ್ಥಿ ನಾಪತ್ತೆ

ಯಲ್ಲಾಪುರ : ಜಲಪಾತ ನೋಡಲು ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಪಾತದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಧಾರವಾಡ ಮೂಲದ ಸುಹೇಲ್ ಸೈಯದ್ ಅಲಿ ಶೇಖ್ (21) ಎಂಬಾತ ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಳಿಯಾಳ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಸೋಹೇಲ್ ಸೇರಿ … Continued

ಬೆಂಗಳೂರು : ಬಸ್ ನಿಲ್ದಾಣದಲ್ಲಿ ಮಗಳ ಮುಂದೆಯೇ ಪತ್ನಿಗೆ 11 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ…!

ಬೆಂಗಳೂರು: ಬಸ್ ನಿಲ್ದಾಣದಲ್ಲಿ 32 ವರ್ಷದ ಮಹಿಳೆಯೊಬ್ಬಳನ್ನು ಆಕೆಯ ಪತಿ ತನ್ನ ಹದಿಹರೆಯದ ಮಗಳ ಮುಂದೆಯೇ ಇರಿದು ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ದಂಪತಿ ಕೇವಲ ಮೂರು ತಿಂಗಳ ಹಿಂದೆ ವಿವಾಹವಾಗಿದ್ದರು ಮತ್ತು ಇದು ಅವರಿಬ್ಬರಿಗೂ ಎರಡನೇ ವಿವಾಹವಾಗಿದೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೋಮವಾರ ಬೆಳಿಗ್ಗೆ ಬೆಂಗಳೂರಿನ ಸುಂಕದಕಟ್ಟೆ … Continued

ಕುಮಟಾ | ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ; ಸುಪ್ರಿಯಾ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ

ಕುಮಟಾ: ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದ ಉತ್ತರ ಕನ್ನಡ ಜಿಲ್ಲಾಮಟ್ಟದ ಸ್ಪರ್ಧೆಯು ಅಂಕೋಲಾದ ಶಟಗೇರಿಯ ಸತ್ಯಾಗ್ರಹ ಸ್ಮಾರಕ ವಿದ್ಯಾಲಯದ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಿತು. ಕುಮಟಾದ ಡಾ. ಎ.ವಿ. ಬಾಳಿಗಾ ಪದವಿ ಪೂರ್ವ ವಾಣಿಜ್ಯ ಮಹಾವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸುಪ್ರಿಯಾ ಗೌಡ 400 ಮೀ, 200 ಮೀ, ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀಟರ್ … Continued

ಶಿರಸಿ : ಮನೆಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಯುವತಿ ಸಾವು

ಶಿರಸಿ : ಎಲ್‌ಪಿಜಿ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಮಲಗಿದ್ದ ಯುವತಿಯೊಬ್ಬಳು ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುರ್ಕಿನಕೊಡ್ಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಶಿರಸಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ಓದುತ್ತಿದ್ದ ರಂಜನಾ ದೇವಾಡಿಗ ( 21 )ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ನಾಗಪ್ಪ ಹಾಗೂ ನಾಗವೇಣಿ ದೇವಾಡಿಗ … Continued

ಮಹೇಶ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು

ಮಂಗಳೂರು: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ತಿಮರೋಡಿ ವಿರುದ್ಧ ವಿವಿಧೆಡೆ 32 ಪ್ರಕರಣಗಳು ದಾಖಲಾಗಿದ್ದು, ಹೀಗಾಗಿ ಅವರನ್ನು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್‌ ಆದೇಶಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ … Continued

ವಾಯುಭಾರ ಕುಸಿತ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 29ರ ವರೆಗೆ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 29ರ ವರೆಗೆ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. … Continued

ಸಿನಿಮಾ ಟಿಕೆಟಿಗೆ ₹200 ದರ ನಿಗದಿ ; ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಧ್ಯಂತರ ತಡೆ ನೀಡಿದೆ. ಈ ಕುರಿತಾದ ಅರ್ಜಿಗಳ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ … Continued

ಬೆಳಗಾವಿ | ಗೋಮಾಂಸ ಸಾಗಾಟ: ಲಾರಿಗೆ ಬೆಂಕಿ ಹಚ್ಚಿದರು…

ಬೆಳಗಾವಿ : ಜಿಲ್ಲೆಯ ಕಾಗವಾಡ ತಾಲೂಕು ಐನಾಪುರದಲ್ಲಿ ಸೋಮವಾರ ರಾತ್ರಿ ಗೋಮಾಂಸ ಸಾಗಿಸುತ್ತಿದ್ದ ಆರೋಪದ ಮೇರೆಗೆ ಲಾರಿಗೆ ಬೆಂಕಿ ಹಚ್ಚಿದ ಘಟನೆ ಸೋಮವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ರಾಯಬಾಗ ತಾಲೂಕು ಕುಡಚಿಯಿಂದ ಹೈದರಾಬಾದಿಗೆ ಲಾರಿಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಐನಾಪುರದಲ್ಲಿ ಸೋಮವಾರ ರಾತ್ರಿ ಲಾರಿ ತಡೆ ಹಿಡಿದು, ಲಾರಿಗೆ ಬೆಂಕಿ ಹಚ್ಚಲಾಗಿದೆ. ನಂತರ … Continued

ಮುರುಡೇಶ್ವರ : ಪ್ರವಾಸಕ್ಕೆ ಬಂದಿದ್ದ ಬಾಲಕ ಸಮುದ್ರ ಪಾಲು

ಕಾರವಾರ : ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಕುಟುಂಬವೊಂದು ಸಮುದ್ರದಲ್ಲಿ ಇಳಿದಿದ್ದಾಗ ಬಾಲಕನೊಬ್ಬ ಕಡಲ ಅಲೆಗೆ ಸಿಲುಕಿ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಬಿದರಳ್ಳಿ ನಿವಾಸಿ ಕೃತಿಕ್ (8), ತಮ್ಮ ಕುಟುಂಬ ಸಮೇತ ಭೇಟಿ ನೀಡಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ … Continued

ಬೆಳಗಾವಿ : ಹಾಸ್ಟೆಲ್ ಕೊಠಡಿಯಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಹಾಸ್ಟೆಲಿನಲ್ಲಿಯೇ ಅತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಸದಾಶಿವನಗರದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಸುಮಿತ್ರಾ ಗೋಕಾಕ (19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದವಳು ಎಂದು ಗುರುತಿಸಲಾಗಿದೆ. ಈಕೆ ನರ್ಸಿಂಗ್‌ ಓದುತ್ತಿದ್ದಳು ಎನ್ನಲಾಗಿದೆ. ಬೆಳಿಗ್ಗೆ ಉಪಾಹಾರ ಸೇವಿಸಿದ ಬಳಿಕ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ … Continued