ಸೊರಬ: ಟಾಟಾ ಏಸ್ ಮರಕ್ಕೆ ಡಿಕ್ಕಿ ಹೊಡೆದು ಮೂವರು ಸಾವು

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ. ಮದುವೆ ಮುಗಿಸಿ ವಾಪಸ್‌ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತರನ್ನು ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ … Continued

ಹಿಜಾಬ್ ತೀರ್ಪು ನೀಡಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ: ಕರ್ನಾಟಕ ಎಫ್ಐಆರ್ ರದ್ದತಿ ಕೋರಿ ಸುಪ್ರೀಂಗೆ ಮೊರೆ

ನವದೆಹಲಿ: ಹಿಜಾಬ್ ಕುರಿತು ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಪ್ರಕರಣದ ಆರೋಪಿ ಚೆನ್ನೈ ನಿವಾಸಿ ರಹಮತುಲ್ಲಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್‌ ತಮಿಳುನಾಡಿನಲ್ಲಿ ದಾಖಲಾಗಿರುವುದರಿಂದ ಕರ್ನಾಟಕದಲ್ಲಿ ತನ್ನ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ ಅನ್ನು … Continued

ಅಮೆರಿಕದಿಂದ ಹಡಗಿನಲ್ಲಿ ಭಾರತಕ್ಕೆ ಬರುವಾಗ ತಮ್ಮೊಂದಿಗೆ ೭೫ ಸಾವಿರ ಪುಸ್ತಕಗಳನ್ನು ತಂದಿದ್ದರು ಮಹಾನ್‌ ಪುಸ್ತಕ ಪ್ರೇಮಿ, ಸಂವಿಧಾನಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌

(೧೪-೦೪-೨೦೨೨) ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ೧೩೧ನೇ ಜನ್ಮ ದಿನಾಚರಣೆಯಾಗಿದ್ದು, ಆ ನಿಮಿತ್ತ ನಿವೃತ್ತ ಗ್ರಂಥಪಾಲಕರಾದ ಬಿ.ಎಸ್‌.ಮಾಳವಾಡ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಕುರಿತು ಲೇಖನ ಬರೆದಿದ್ದಾರೆ.) ತಲಾ-ತಲಾಂತರದಿಂದ ಜಾತಿಯತೆ, ಅಸ್ಪೃಶ್ಯತೆಯ ಅವಮಾನ ಮತ್ತು ಹಸಿವಿನಿಂದ ಕಂಗಾಲಾಗಿದ್ದ ಶೋಷಿತ ವರ್ಗದ ಜನರ ಒಡಲಾಳದಲ್ಲಿ ಹುದುಗಿದ್ದ ಶಕ್ತಿ ಮತ್ತು ಸ್ವಾಭಿಮಾನವನ್ನು ಹೊರತರಲು ಹಗಲು-ರಾತ್ರಿ ದುಡಿದು ಅವರನ್ನು … Continued

ಸಂತೋಷ್ ಪಾಟೀಲ ಸಾವಿನಲ್ಲಿ ಕಾಂಗ್ರೆಸ್ ‘ಬೇನಾಮಿ ಅಧ್ಯಕ್ಷೆ’ಯ ಕೈವಾಡವಿದೆಯೇ : ಬಿಜೆಪಿ ಟ್ವೀಟ್

ಬೆಂಗಳೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಆತ್ಮಹತ್ಯೆಗೆ ಬಿಜೆಪಿ ಈಗ ಇದು ಕಾಂಗ್ರೆಸ್ ಪಕ್ಷದ “ಬೇನಾಮಿ ಅಧ್ಯಕ್ಷೆ” ಹಾಗೂ “ಮಹಾನಾಯಕ” ಸೃಷ್ಟಿಸಿದ “ಮಹಾಕೈವಾಡವೇ ಎಂದು ಪ್ರಶ್ನಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿಯ ರಾಜ್ಯ ಘಟಕ, ಕೇಂದ್ರದ ನಾಯಕರ, ಮಂತ್ರಿಗಳ, ಅಧಿಕಾರಿಗಳ ಬಳಿಗೆ ತೆರಳಿ ದೂರು ಸಲ್ಲಿಸುವಷ್ಟು ಧೈರ್ಯವಿದ್ದ ವ್ಯಕ್ತಿ ಆತ್ಮಹತ್ಯೆ … Continued

ಏಪ್ರಿಲ್‌ 17ರಂದು ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಇಬ್ರಾಹಿಂ ಅಧಿಕಾರ ಸ್ವೀಕಾರ

ರಾಮನಗರ: ಜೆಡಿಎಸ್‌ನ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ನೇಮಕಗೊಳ್ಳಲಿದ್ದಾರೆ ಎಂದು ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಪ್ರಕಟಿಸಿದ್ದಾರೆ. ಈ ಕುರಿತು ಮಂಗಳವಾರ ಮಾಹಿತಿ ನೀಡಿರುವ ದೇವೇಗೌಡ ಅವರು, ಏ.17ರಂದು ಒಳ್ಳೆಯ ದಿನವಾಗಿದ್ದು, ಅಂದು ಸಿ.ಎಂ. ಇಬ್ರಾಹಿಂ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಪರಿಶಿಷ್ಟ ಜಾತಿಗೆ … Continued

ಸಂತೋಷ್​ ಡೆತ್​ ನೋಟನ್ನೇ ಬರೆದಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ, ಸಾವಿನ ಬಗ್ಗೆ ತನಿಖೆಯಾಗಲಿ: ಸಚಿವ ಈಶ್ವರಪ್ಪ

ಶಿವಮೊಗ್ಗ: ವಾಟ್ಸಾಪ್ ಬರಹ ಡೆತ್ ನೋಟ್ ಅಲ್ಲ, ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ಇಂದು, ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಸಂತೋಷ್ ಅವರಿಗೆ ವರ್ಕ್ ಆರ್ಡರ್ ಕೊಟ್ಟಿಲ್ಲವೆಂದು ಸ್ಪಷ್ಟವಾಗಿಯೇ ಹೇಳಲಾಗಿದೆ. ಹೀಗಿದ್ದೂ ನನ್ನ … Continued

ವಿಜಯಪುರ: ಮಕ್ಕಳ  ಸಾಹಿತಿ ಶರಣಪ್ಪ ಕಂಚ್ಯಾಣಿ ವಿಧಿವಶ

ವಿಜಯಪುರ: ನಗರದ ನಿವೃತ್ತ ಶಿಕ್ಷಕ ಹಾಗೂ ಮಕ್ಕಳ ಹಿರಿಯ ಸಾಹಿತಿ ಶರಣಪ್ಪ ಕಂಚ್ಯಾಣಿ (92) ಬುಧವಾರ ವಿಧಿವಶರಾದರು. ಮೃತರು ನಿವೃತ್ತ ಪ್ರಾಚಾರ್ಯ ಅರವಿಂದ ಕಂಚ್ಯಾಣಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಸೇರಿದಂತೆ ಐವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು- ಬಳಗವನ್ನು ಅಗಲಿದ್ದಾರೆ. ಶರಣಪ್ಪ ಕಂಚ್ಯಾಣಿ ಅವರು ಮೂರು ದಿನಗಳ ಹಿಂದೆ … Continued

ಆರೋಪಿಗಳ ಬಂಧನವಾಗುವವರೆಗೂ ಮೃತದೇಹ ತೆಗೆಯಲು ಬಿಡುವುದಿಲ್ಲ: ಮೃತ ಸಂತೋಷ ಪಾಟೀಲ ಸಹೋದರ

ಉಡುಪಿ: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ಅನುಮಾನಸ್ಪಾದವಾಗಿ ಸಾವಗೀಡಾದ ಘಟನೆಗೆ ಸಂಬಂಧಿಸಿದ ಪಂಚನಾಮೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮೂವರು ಆರೋಪಿಗಳ ಬಂಧನ ಆಗುವವರೆಗೆ ಮೃತದೇಹವನ್ನು ತೆಗೆಯುವುದಿಲ್ಲ ಎಂದು ಸಂತೋಷ್ ಕುಟುಂಬಸ್ಥರು ಪಟ್ಟು ಹಿಡಿದ್ದಾರೆ. ಪಂಚನಾಮೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ಶಾಂಭವಿ ಲಾಡ್ಜ್ ನಿಂದ ಕುಟುಂಬಸ್ಥರು ಹೊರಬಂದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ, ಮೃತ ಸಂತೋಷ ಪಾಟೀಲ ಸಹೋದರ … Continued

ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಪಂಚನಾಮೆ ಪ್ರಕ್ರಿಯೆ ಆರಂಭ : ಐಜಿಪಿ

ಉಡುಪಿ: ಗುತ್ತೇದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ನೀಡಿದ ದೂರಿನ ಪ್ರಕಾರ ಕೆ.ಎಸ್. ಈಶ್ವರಪ್ಪ ಮತ್ತು ಇಬ್ಬರು ಆಪ್ತರ ಮೇಲೆ ಎಫ್ ಐಆರ್ ದಾಖಲು ಮಾಡಲಾಗಿದ್ದು, ಪಂಚನಾಮೆ ಪ್ರಕ್ರಿಯೆ ಆರಂಭವಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ದೇವ ಜ್ಯೋತಿ ರೇ ಹೇಳಿದ್ದಾರೆ. ಉಡುಪಿಯ ಶಾಂಭವಿ ಲಾಡ್ಜ್ ಗೆ ಬುಧವಾರ ಮತ್ತೆ ಭೇಟಿ ನೀಡಿ … Continued

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ: ಎಫ್‌ಐಆರ್‌ ಬೆನ್ನಲ್ಲೇ ಈಶ್ವರಪ್ಪಗೆ ಹೆಚ್ಚಿದ ಸಚಿವ ಸ್ಥಾನದ ತಲೆದಂಡದ ಭೀತಿ

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅವರ ಮೇಲೆ ಎಫ್‌ಐಆರ್‌ ದಾಖಲಾಗುತ್ತದ್ದಂತೆ ಅವರಿಗೆ ಈಗ ತಲೆದಂಡದ ತೂಗುಗತ್ತಿ ನೇತಾಡುತ್ತಿದೆ. ಅವರು ತಲೆದಂಡ ಆಗಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಬುಧವಾರ ಬೆಳಗ್ಗೆಯಷ್ಟೇ ಸಂತೋಷ … Continued