ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್‌ ಹೈಕಮಾಂಡ್‌; ಒಟ್ಟು ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಇಲ್ಲಿದೆ

ನವದೆಹಲಿ: ಅಖಿಲ ಭಾರತೀಯ ಕಾಂಗ್ರೆಸ್‌ (ಎಐಸಿಸಿ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿದ್ದು, ಅದರ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯಕ್ಕೆ ಒಟ್ಟು 40 ಉಪಾಧ್ಯಕ್ಷರು, 109 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್‌ ಪಟ್ಟಿಯಲ್ಲಿ ಸಮತೋಲನ ಕಾಪಾಡಿಕೊಳ್ಳಲು ಪ್ರಯತ್ನಿಸಿದ್ದು ಹಿಂದುಳಿದ ವರ್ಗಗಳಿಗೆ ಹೆಚ್ಚು ಆದ್ಯತೆ ನೀಡಿದೆ. ಹಿಂದುಳಿದ … Continued

ಬೂಸ್ಟರ್ ಡೋಸ್‌ ಡ್ರೈವ್ ಆರಂಭವಾಗುವ ಒಂದು ದಿನದ ಮೊದಲು ಕೋವಿಡ್‌ ಲಸಿಕೆ ಪ್ರತಿ ಡೋಸ್‌ ಬೆಲೆ 225 ರೂ.ಗೆ ಇಳಿಸಿದ ಕೋವಿಶೀಲ್ಡ್, ಕೋವಾಕ್ಸಿನ್

ನವದೆಹಲಿ: ಕೋವಿಡ್ ಲಸಿಕೆ ಬೂಸ್ಟರ್ ಶಾಟ್‌ಗಳು ಎಲ್ಲ ಭಾರತೀಯ ವಯಸ್ಕರಿಗೆ ಲಭ್ಯವಾಗುವ ಒಂದು ದಿನದ ಮೊದಲು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಬೆಲೆಗಳನ್ನು ಅರ್ಧಕ್ಕಿಂತ ಹೆಚ್ಚು ಕಡಿತಗೊಳಿಸಲಾಗಿದೆ. ಎರಡೂ ಲಸಿಕೆ ಡೋಸ್‌ಗಳ ಬೆಲೆ ಈಗ 225 ರೂ.ಗಳಾಗಿರುತ್ತದೆ. ಕೋವಿಶೀಲ್ಡ್ ಅನ್ನು ₹ 600 ರಿಂದ ಕಡಿತಗೊಳಿಸಿದ್ದರೆ, ಕೋವಾಕ್ಸಿನ್ ಪ್ರತಿ ಡೋಸ್‌ಗೆ 1,200 ರೂ.ಗಳು ಕಡಿಮೆಯಾಗಿದೆ. … Continued

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ, 6 ಮಂದಿ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಲೈಂಕಿಕ ದೌರ್ಜನ್ಯವೆಸಗಿದ ಆರು ಮಂದಿ ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಬಾಲಕರನ್ನೂ ಸಹ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಮಾಡಿ ತನಿಖೆ ಮುಂದುವರೆಸಿದ್ದಾರೆ. ಸುಮಾರು 15 ವರ್ಷದ ಅಪ್ರಾಪ್ತ ಬಾಲಕಿ 25 ವರ್ಷದ ಯುವಕನನ್ನು ಪ್ರೀತಿಸುತ್ತಿದ್ದಳು. … Continued

ಕುಮಟಾ: ನಾಳೆ ಲಯನ್ಸ್ ರೇವಣಕರ್ ಕಣ್ಣಿನ ಆಸ್ಪತ್ರೆ ವಿಸ್ತೃತ ಕಟ್ಟಡ -ಆಧುನಿಕ ಸೌಲಭ್ಯಗಳ ಉದ್ಘಾಟನೆ, ಆರೋಗ್ಯ ಸಚಿವ ಡಾ.ಸುಧಾಕರ ಭಾಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಗ್ಗೋಣ ರಸ್ತೆ ವಿದ್ಯಾಗಿರಿಯಲ್ಲಿರುವ ಲಯನ್ಸ್ ರೇವಣಕರ ಚಾರಿಟೇಬಲ್ ಕಣ್ಣಿನ ಆಸ್ಪತ್ರೆ ವಿಸ್ತ್ರತ ಕಟ್ಟಡದ ಉದ್ಘಾಟನಾ ಸಮಾರಂಭ ಏಪ್ರಿಲ್‌ ೧೦ರಂದು ಸಂಜೆ ೪:೩೦ ಘಂಟೆಗೆ ನಡೆಯಲಿದ್ದು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ಹಾಗೂ ಲಯನ್ಸ್ ಅಂತರಾಷ್ಟ್ರೀಯದ ಮಾಜಿ ನಿರ್ದೇಶಕರಾದ ಕೆ. ವಂಶೀಧರ ಬಾಬು ಉದ್ಘಾಟಿಸಲಿದ್ದಾರೆ. ಕುಮಟಾದ … Continued

ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ :ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನಗಳು ಮಳೆಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು (ಶನಿವಾರ) ಮತ್ತು ನಾಳೆ (ಭಾನುವಾರ) ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏ.11ರವರೆಗೂ ಮಳೆ ಬೀಳುವ ಸಂಭವವಿದ್ದು, … Continued

ಕೋಲಾರ: ಮುಳಬಾಗಿಲಿನಲ್ಲಿ ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ, ಪೊಲೀಸರಿಂದ ಲಾಠಿ ಪ್ರಹಾರ

ಕೋಲಾರ: ಶ್ರೀರಾಮ ಶೋಭಾಯಾತ್ರೆಯ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶುಕ್ರವಾರ ನಡೆದ ಬಗ್ಗೆ ವರದಿಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನವಮಿ ಅಂಗವಾಗಿ ಬೃಹತ್ ಹಿಂದೂ ಶೋಭಾಯಾತ್ರೆ ಮತ್ತು ಶ್ರೀರಾಮ ಪಟ್ಟಾಭಿಷೇಕ, ಶ್ರೀರಾಮ ಕಲ್ಯಾಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶೋಭಾಯಾತ್ರೆ ಹಾಗೂ ಬೃಹತ್ ಶ್ರೀರಾಮ ಮೂರ್ತಿ ಮೆರವಣಿಗೆ … Continued

ಸಿದ್ದರಾಮಯ್ಯ, ಕುಮಾರಸ್ವಾಮಿ, ಸಾಹಿತಿ ಕುಂವೀ ಸೇರಿ 61 ಜನರಿಗೆ ಕೊಲೆ ಬೆದರಿಕೆ ಪತ್ರ

ಹೊಸಪೇಟೆ(ವಿಜಯನಗರ): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ, ಸಾಹಿತಿ ಸಾಹಿತಿ ಕುಂ. ವೀರಭದ್ರಪ್ಪ ಸೇರಿದಂತೆ 61 ಮಂದಿಗೆ ಕೊಲೆ ಬೆದರಿಕೆ ಪತ್ರ ಬರೆಯಲಾಗಿದೆ. ಎರಡು ಪುಟಗಳ ಪತ್ರ ಬರೆದಿರುವ ಹೆಸರು ಮತ್ತು ವಿಳಾಸವಿಲ್ಲದ ‘ಸಹಿಷ್ಣು ಹಿಂದೂ’ ಹೆಸರಿನಲ್ಲಿ ’61ಕ್ಕೂ ಹೆಚ್ಚು ಮಂದಿ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು … Continued

ಮೇ ಮೊದಲ ವಾರದಲ್ಲಿ ಹುಬ್ಬಳ್ಳಿಯಿಂದ ಮಂಗಳೂರು, ಮೈಸೂರಿಗೆ  ವಿಮಾನ ಸೇವೆ ಆರಂಭ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ವಿಮಾನ ಸೇವೆ ಮೇ ತಿಂಗಳ ಮೊದಲ ವಾರದಲ್ಲಿ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಇಂಡಿಗೋ ಸಂಸ್ಥೆ ಮೇ 1ರಿಂದ ಮಂಗಳೂರಿಗೆ ವಿಮಾನ ಸಂಚಾರ ಆರಂಭಿಸಲಿದೆ ಹಾಗೂ ವಾರದಲ್ಲಿ 4 ದಿನ ಹುಬ್ಬಳ್ಳಿಯಿಂದ ಮಂಗಳೂರಿಗೆ ಸಂಚಾರ ಮಾಡಲಿದೆ. ಮತ್ತು ಮೇ 3ರಿಂದ ವಾರದಲ್ಲಿ 3 ದಿನ … Continued

ಮುಂಡಗೋಡ: ಕಾತೂರು ಬಳಿ ಉರುಳಿಗೆ ಸಿಲುಕಿ ಒದ್ದಾಡುತ್ತಿದ್ದ ದೈತ್ಯ ಕರಡಿ-ಭಾರೀ ಪ್ರಯತ್ನ ನಡೆಸಿ ರಕ್ಷಿಸಿದ ಅರಣ್ಯ ಸಿಬ್ಬಂದಿ..! ವೀಡಿಯೊ ವೀಕ್ಷಿಸಿ

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಗೋಡ ತಾಲೂಕಿನ ತಾಲೂಕಿನ ಕಾತೂರ ವಲಯದ, ಪಾಳಾ ಶಾಖೆಯ ಒರಲಗಿ ಕಾಡಿನಲ್ಲಿ ಉರುಳಿಗೆ ಸಿಕ್ಕು ಒದ್ದಾಡುತ್ತಿದ್ದ ಕರಡಿಯನ್ನು ಅರಣ್ಯ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಿಸಿದ್ದಾರೆ. ಬೆಟ್ಟದಲ್ಲಿ ಯಾರೋ ಹಾಕಿದ್ದ ಉರುಳಿಗೆ ಸಿಲುಕಿದ್ದ ದೈತ್ಯ ಕರಡಿ ಪ್ರಾಣ ರಕ್ಷಿಸಿಕೊಳ್ಳಲು ಒದ್ದಾಡುತ್ತಿದ್ದು, ಹಾಗೂ ಕೂಗಿಕೊಳ್ಳುತ್ತಿತ್ತು. ಕರಡಿ ಉರುಳಿಗೆ ಸಿಕ್ಕಿಬಿದ್ದಿದ್ದನ್ನು ಒರಲಗಿ ಅರಣ್ಯದಲ್ಲಿ … Continued

ಗದಗ : ಜಿಲ್ಲಾ ಕಾರಾಗೃಹದಲ್ಲಿ ಯುವಕ ಆತ್ಮಹತ್ಯೆ

ಗದಗ: ವಿಚಾರಣಾಧೀನ ಕೈದಿಯೊಬ್ಬ ಸಹ ಕೈದಿಯ ಟವೆಲ್ ಮೂಲಕ ಜೈಲು ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪೋಕ್ಸೊ ಪ್ರಕಣದಲ್ಲಿ ಜೈಲು ಸೇರಿದ್ದ ಗದಗ ತಾಲ್ಲೂಕಿನ ಅಡವಿ ಸೋಮಾಪುರ ಗ್ರಾಮದ ರಾಜು ಲಮಾಣಿ (19) ಗುರುವಾರ ರಾತ್ರಿ ಜಿಲ್ಲಾ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಖಾಸಗಿ ಕಾಲೇಜಿನಲ್ಲಿ … Continued