ಕಳೆದುಹೋದ ತನ್ನ ಲಗೇಜ್ ಮರಳಿ ಪಡೆಯಲು ಇಂಡಿಗೋ ವಿಮಾನಯಾನ ಸಂಸ್ಥೆ ವೆಬ್‌ಸೈಟ್‌ ಹ್ಯಾಕ್‌ ಮಾಡಿ ಹುಡುಕಿದ ಬೆಂಗಳೂರು ಟೆಕ್ಕಿ..!

ಬೆಂಗಳೂರು : ಇಂಡಿಗೋ ವಿಮಾನದಲ್ಲಿ ಪಾಟ್ನಾದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ನಾಪತ್ತೆಯಾಗಿದ್ದ ತಮ್ಮ ಲಗೇಜ್‌ ಪಡೆಯಲು ವಿಫಲವಾದ ನಂತರ ವೆಬ್ಸೈಟ್ ಅನ್ನೇ ಹ್ಯಾಕ್ ಮಾಡಿ ಹುಡುಕಿ ಲಗೇಜ್‌ ವಾಪಸ್‌ ಪಡೆದ ವಿದ್ಯಮಾನ ವರದಿಯಾಗಿದೆ.. ನಂದನಕುಮಾರ್ ಎಂಬ ಸಾಫ್ಟ್‌ವೇರ್ ಇಂಜಿನಿಯರ್ ಪಾಟ್ನಾದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಅವರ ವಸ್ತುಗಳು ಸಹ ಪ್ರಯಾಣಿಕರೊಬ್ಬರಿಗೆ ಬದಲಾಗಿತ್ತು. ಅದು ನಂದನಕುಮಾರ್ … Continued

ವಿಧಾನ ಪರಿಷತ್‌ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು, ಗುರುವಾರ ಬೆಳಿಗ್ಗೆ ವಿಧಾನಸೌಧದಲ್ಲಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕೊಠಡಿಗೆ ಆಗಮಿಸಿದ ಇಬ್ರಾಹಿಂ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ರಾಜೀನಾಮೆ … Continued

ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ: ಹವಾಮಾನ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಪಶ್ಚಿಮ ಭಾಗಗಳಲ್ಲಿ ಇಂದು, ಗುರುವಾರ ಮಳೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಗುರುವಾರ) ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ … Continued

ರೈತರು ಅನೇಕ ವರ್ಷಗಳಿಂದ ಉಳುಮೆ ಮಾಡುತ್ತಿರುವ ಭೂಮಿ ಅವರ ಹೆಸರಿಗೆ ನೀಡಲು ಸರ್ಕಾರದ ಚಿಂತನೆ: ಸಚಿವ ಅಶೋಕ

ಬೆಂಗಳೂರು: ಹಲವಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಭೂಮಿಯನ್ನು ಅವರ ಹೆಸರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನ ಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯ ಕೆ.ಹರೀಶಕುಮಾರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬ್ರಿಟಿಷರ ಕಾಲದಿಂದಲ್ಲೂ ರೈತರು ಈ ಭುಮಿಯಲ್ಲಿ ಉಳುಮೆ ಮಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ರೈತರಿಗೆ ಭೂಮಿ ನೀಡುವಂತೆ ಸೂಚನೆ … Continued

ಅಂಕೋಲಾ ಉದ್ಯಮಿ ಆರ್‌.ಎನ್. ನಾಯಕ್ ಹತ್ಯೆ ಪ್ರಕರಣ: ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಮಂದಿ ದೋಷಿಗಳು ಎಂದ ಬೆಳಗಾವಿ ಕೋಕಾ ನ್ಯಾಯಾಲಯ

ಬೆಳಗಾವಿ: ಒಂಬತ್ತು ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಉದ್ಯಮಿ ಆರ್‌ಎನ್ ನಾಯಕ್ ಹತ್ಯೆ ಪ್ರಕರಣದಲ್ಲಿ 2015 ರಲ್ಲಿ ಮೊರಾಕೊದಿಂದ ಹಸ್ತಾಂತರಿಸಲ್ಪಟ್ಟ ಕುಖ್ಯಾತ ದರೋಡೆಕೋರ ಬನ್ನಂಜೆ ರಾಜ ಮತ್ತು ಇತರ ಎಂಟು ಮಂದಿ ದೋಷಿಗಗಳು ಎಂದು ಬೆಳಗಾವಿಯ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಸಿಒಸಿಎ- ಕೋಕಾ) ವಿಶೇಷ ನ್ಯಾಯಾಲಯ ಬುಧವಾರ ತೀರ್ಪು … Continued

ಹಲಾಲ್ ಮಾಂಸದ ಬಗ್ಗೆ ಗಂಭೀರ ಆಕ್ಷೇಪಣಗಳ ಬಗ್ಗೆ ಪರಿಶೀಲಿಸಿ ನಂತರ ಸರ್ಕಾರದಿಂದ ಕ್ರಮ-ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹಲಾಲ್ ಮಾಂಸದ ಬಗ್ಗೆ ಗಂಭೀರ ಆಕ್ಷೇಪಣೆಗಳನ್ನು ರಾಜ್ಯ ಸರ್ಕಾರ ಪರಿಶೀಲಿಸಿ ನಂತರ ಕ್ರಮದ ಬಗ್ಗೆ ವಿಚಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಕೆಲವು ಬಲಪಂಥೀಯ ಗುಂಪುಗಳು ಅದನ್ನು ಬಹಿಷ್ಕರಿಸಲು ಕರೆ ನೀಡಿವೆ. ಮುಖ್ಯಮಂತ್ರಿಗಳು ತಮ್ಮ ಸರ್ಕಾರಕ್ಕೆ ಸಂಬಂಧಿಸಿದಂತೆ “ಬೆಳವಣಿಗೆಯ ರೆಕ್ಕೆಗಳು” ಮಾತ್ರ ಇವೆಯೇ ಹೊರತು ಬಲಪಂಥೀಯ ಅಥವಾ … Continued

ಕರ್ನಾಟಕದಲ್ಲಿ ಕಬ್ಬಿಣದ ಅದಿರು ರಫ್ತಿನ ಬಗ್ಗೆ ನಿಲುವು ಸ್ಪಷ್ಟಪಡಿಸಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಕರ್ನಾಟಕದಲ್ಲಿ ಹೊರತೆಗೆಯಲಾದ ಕಬ್ಬಿಣದ ಅದಿರನ್ನು ರಫ್ತು ಮಾಡುವ ಬಗ್ಗೆ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಈ ವಿಷಯದ ಬಗ್ಗೆ ಏಪ್ರಿಲ್ 8 ರೊಳಗೆ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಸೂಚಿಸಿದೆ. ಸುಪ್ರೀಂಕೋರ್ಟ್‌ … Continued

ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಸರ್ವಪಕ್ಷಗಳ ಸಭೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳಿಗೆ ಮೀಸಲಾತಿ ನೀಡುವ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಗೆ ತಿಳಿಸಿದರು. ಇಂದು, ಬುಧವಾರ ಕಾಂಗ್ರೆಸ್ ಶಾಸಕರಾದ ಪ್ರಿಯಾಂಕ್ ಖರ್ಗೆ, ಭೀಮಾ ನಾಯಕ್, ಅಜಯ್ ಧರ್ಮಸಿಂಗ್ ಮತ್ತಿತರರು ಧರಣಿ ನಡೆಸಿ ಪರಿಶಿಷ್ಟ ಪಂಗಡಕ್ಕೆ ಶೇ.7.5ರ ಮೀಸಲಾತಿ ನೀಡಬೇಕೆಂದು ಎಂದು … Continued

ಮುಸಲ್ಮಾನ ವರ್ತಕರಿಂದ ಪೇಜಾವರ ಶ್ರೀಗಳ ಭೇಟಿ; ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲು ಮನವಿ

ಉಡುಪಿ: ಉಡುಪಿಯಲ್ಲಿ ಜಾತ್ರೆಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಮಾಡದೆ ಅವಕಾಶ ನೀಡಬೇಕು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಮುಸಲ್ಮಾನ ವರ್ತಕರು ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯಿಂದ ಅಬೂಬಕ್ಕರ್ ಆತ್ರಾಡಿ ನೇತೃತ್ವದಲ್ಲಿ ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಮುಸ್ಲಿಂ ವರ್ತಕರು, ದೇವಸ್ಥಾನಗಳಲ್ಲಿ ಮುಸ್ಲಿಂ … Continued

ಮದುವೆ ಮನೆಯಲ್ಲಿ ಗುಂಡಿನ ಮಳೆಗೈದ ಮಾಜಿ ಸೈನಿಕ; ಸಂಬಂಧಿಕರು ದಂಗು, ಪ್ರಕರಣ ದಾಖಲು

ಚಿಕ್ಕೋಡಿ: ಮದುವೆ ಸಮಾರಂಭದಲ್ಲಿ ಮಾಜಿ ಸೈನಿಕನೊಬ ಗಾಳಿಯಲ್ಲಿ ಗುಂಡಿನ ಸುರಿಮಳೆಗೈದಿದ್ದಾರೆ. ಗುಂಡು ಹಾರಿಸಿರುವ ಮಾಜಿ ಯೋಧನ ವಿಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಆಯೋಜಿಸಿದ್ದ ಮದುವೆ ಸಮಾರಂಭದಲ್ಲಿ ಘಟನೆ ನಡೆದಿದ್ದು, ಮದುವೆಗೆ ಬಂದವರು ಒಂದು ಕ್ಷಣ ಕಂಗಾಲಾಗಿದ್ದಾರೆ. ರಫಿಕ್ ಅಹಮ್ಮದ ತಹಶೀಲ್ದಾರ ಎಂಬ ಮಾಜಿ ಯೋಧ ಗಾಲಿಯಲ್ಲಿ ಅನೇಕ ಬಾರಿ … Continued