ತನಗಿಂತ 20 ವರ್ಷ ಕಿರಿಯ ವಯಸ್ಸಿನ ಯುವತಿ ಮದುವೆಯಾಗಿ ಸುದ್ದಿಯಲ್ಲಿದ್ದ ಶಂಕರಣ್ಣ ಆತ್ಮಹತ್ಯೆ

ತುಮಕೂರು: ತನಗಿಂತ 20 ವರ್ಷ ಕಿರಿಯ ವಯಸ್ಸಿನ ಯುವತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಚೌಡನಕುಪ್ಪೆ ಗ್ರಾಮ ಸಮೀಪದ ಅಕ್ಕಿಮರಿಪಾಳ್ಯದ ಶಂಕರಣ್ಣ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಣಿಗಲ್​ ತಾಲೂಕಿನ ಚೌಡನಕುಪ್ಪೆ ಗ್ರಾಮದ ಹೊಲವೊಂದರಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2021ರ ಅಕ್ಟೋಬರ್​ನಲ್ಲಿ ಸಂತೆಮಾವತ್ತೂರು ಗ್ರಾಮದ ಮೇಘನಾ ಮತ್ತು ಅಕ್ಕಿಮರಿಪಾಳ್ಯದ ಶಂಕರಪ್ಪ ಅವರ ಮದುವೆ … Continued

ಅಕ್ರಮ ಆಸ್ತಿ ಪ್ರಕರಣ: ರವಿ ಚನ್ನಣ್ಣನವರ ವಿರುದ್ಧ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ನಲ್ಲಿ ವಕೀಲ ಜಗದೀಶ ಅರ್ಜಿ

ಬೆಂಗಳೂರು: ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಅಧೀಕ್ಷಕ ರವಿ ಡಿ. ಚನ್ನಣ್ಣನವರ ತಮ್ಮ ಪೋಷಕರು ಮತ್ತು ಸಂಬಂಧಿಕರ ಹೆಸರಿನಲ್ಲಿ ಅಕ್ರಮವಾಗಿ ಕೋಟ್ಯಂತರ ಮೌಲ್ಯದ ಆಸ್ತಿ ಸಂಪಾದಿಸಿರುವ ಬಗ್ಗೆ ದೂರು ದಾಖಲಿಸಿ, ತನಿಖೆ ನಡೆಸುವಂತೆ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಅಥವಾ ಜಾರಿ ನಿರ್ದೇಶನಾಲಯಕ್ಕೆ (ಇ ಡಿ) ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ … Continued

ಜಿಪಂ, ತಾಪಂ ಚುನಾವಣಾ ಮೀಸಲಾತಿ: ಮಾ.31ರಂದು ಸರ್ವ ಪಕ್ಷಗಳ ಸಭೆ

ಬೆಂಗಳೂರು: ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ರಾಜಕೀಯ ಮೀಸಲಾತಿ ನಿರಾಕರಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಬಗ್ಗೆ ಮಾರ್ಚ್‌ 31 ರಂದು ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಧಾನಸಭೆಗೆ ಸೋಮವಾರ ತಿಳಿಸಿದರು. … Continued

ಸಾರ್ವಜನಿಕ ಗೌರವ ಸ್ವೀಕರಿಸಿದ ಮಾರನೇ ದಿನ ಇಹಲೋಕ ತ್ಯಜಿಸಿದ ಭೂಷಣ್‌ ಡಾಕ್ಟರ್ ಖ್ಯಾತಿಯ ಡಾ. ಜಠಾರ

ಗೋಕರ್ಣ: ಹಿರಿಯ ವೈದ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಎಸ್.ವಿ ಜಠಾರ (93) ಭಾನುವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದಾಗಿ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ಮೃತರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗ ಇದೆ. ವೈದ್ಯಕೀಯ ರಾಜಕೀಯ, ಸಹಕಾರ, ಕೃಷಿ, ವೇದದಲ್ಲಿ ಸುದೀರ್ಘ ಅಧ್ಯಯನ ಹಾಗೂ ಸೇವೆ ಸಲ್ಲಿಸಿ … Continued

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 5 ಕರ್ನಾಟಕ ಪ್ರವಾಸ ರದ್ದು..?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ನಫ್ತಾಲಿ ಬೆನೆಟ್‌ರಾಜ್ಯ ಪ್ರವಾಸ ರದ್ದುಗೊಳಿಸಲಾಗಿದೆ ಎಂದು ಹೇಳಲಾಘಿದೆ. ಏಪ್ರಿಲ್ 5ರಂದು ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಬೇಕಿತ್ತು. ಆದರೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರ ಭಾರತದ ಪ್ರವಾಸ ರದ್ದುಗೊಂಡಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದುಗೊಂಡಿದೆ ಎಂದು … Continued

ಎಸ್‌ಎಸ್‌ಎಲ್‌ಸಿ:ಬೇರೆಯವರ ಪರವಾಗಿ ಪರೀಕ್ಷೆ ಬರೆಯಲು ಬಂದು ಸಿಕ್ಕಿಬಿದ್ದ 6 ನಕಲಿ ಅಭ್ಯರ್ಥಿಗಳು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್‌.ಡಿ. ಕಾಲೇಜು ಕೇಂದ್ರದಲ್ಲಿ ಪರೀಕ್ಷೆಗೆ ಕುಳಿತಿದ್ದ ವಿದ್ಯಾರ್ಥಿಗಳ ಪರವಾಗಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯಲು ಬಂದಿದ್ದ 6 ಮಂದಿಯನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಗೋಕಾಕ ತಾಲೂಕು ಗೋಡಗೇರಿಯ ರಾಹುಲ್ ಕಿಳ್ಳಿಕೇತರ, ಕೊಂಕಣಿವಾಡಿಯ ಭೀಮಶಿ ಹುಲಿಕುಂದ, ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಕೊಪ್ಪ ಎಸ್‍.ಕೆ. ಗ್ರಾಮದ ಕಾರ್ತಿಕ ಕುಂಬಾರ, ಚಿಕ್ಕಾಲಕೊಪ್ಪ … Continued

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮಗೆ ಐಟಿ ನೋಟಿಸ್..!

ಹಾಸನ: ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಮಾಹಿತಿ ಹೇಳಿದ್ದಾರೆ. ಹಾಸನದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್​.ಡಿ.ರೇವಣ್ಣ, ನಮ್ಮ ತಾಯಿಗೆ ಐಟಿ ಅಧಿಕಾರಿಗಳಿಂದ ನೋಟಿಸ್​ ಬಂದಿದೆ. . ಆಸ್ತಿ ವಿವರದ ಮಾಹಿತಿ ಕೋರಿದ್ದಾರೆ ಎಂದು ತಿಳಿಸಿದ್ದಾರೆ. ಒಬ್ಬ ಮಾಜಿ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ ; ವಿದ್ಯಾರ್ಥಿಗಳು-ಪೋಷಕರಿಗೆ ಕಚ್ಚಿದ ಜೇನು ನೊಣ

ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು, ಪಾಲಕರು, ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಜ್ಜೇಣು ದಾಳಿ ನಡೆಸಿದ ಘಟನೆ ಶಿವಮೊಗ್ಗ ನಗರದ ಬಿ.ಎಚ್.ರಸ್ತೆಯ ಮೇರಿ ಇಮ್ಯಾಕುಲೇಟ್ ಶಾಲೆಯಲ್ಲಿ ನಡೆದಿದೆ. ಆರು ವಿದ್ಯಾರ್ಥಿಗಳು ಹಾಗೂ 12 ಪೋಷಕರ ಮೇಲೆ ಜೇನು ಹುಳಗಳು ದಾಳಿ ನಡೆಸಿವೆ. ಸ್ಥಳಕ್ಕೆ ಬಂದ ವೈದ್ಯರ ತಂಡ, ಹೆಜ್ಜೇನಿಂದ ಕಡಿತಕ್ಕೊಳಗಾದ ಮಕ್ಕಳು ಮತ್ತು ಪರೀಕ್ಷಾ ಮೇಲ್ವಿಚಾರಕರಿಗೆ … Continued

ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ನವದೆಹಲಿ: ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಮತ್ತು ಕಾಲೇಜಿನಲ್ಲಿ ಹಿಜಾಬ್‌ಗೆ ಅನುಮತಿ ನೀಡುವ ಅಧಿಕಾರವನ್ನು ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ (ಸಿಡಿಸಿ) ಒದಗಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದ ರಾಜ್ಯ ಹೈಕೋರ್ಟ್‌ ತೀರ್ಪನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಭೂತ ಹಕ್ಕುಗಳನ್ನು ಪ್ರತಿಪಾದಿಸಿರುವ ಅಗತ್ಯ … Continued

ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಮೈಸೂರು: ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ‌‌ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ‌‌ ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದಿದ್ದರು. ವಿದ್ಯಾರ್ಥಿನಿಯನ್ನು ಟಿ.ನರಸೀಪುರದ ಸಾರ್ವಜನಿಕ … Continued