ಗಮನಿಸಿ.. ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ-ಎಪ್ರಿಲ್‌ 22ರಿಂದ ಪರೀಕ್ಷೆ ಆರಂಭ

ಬೆಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವಂತ ಜೆಇಇ ಮೇನ್‌ ಪರೀಕ್ಷೆ (JEE Main Exam) ಮೊದಲ ಸೆಷನ್ ಪರೀಕ್ಷೆ ವೇಳಾಪಟ್ಟಿ ರಾಜ್ಯದ ದ್ವಿತೀಯ ಪರೀಕ್ಷೆ ನಡೆಯುವ ದಿನಗಳಂದೇ ನಿಗದಿಯಾದ ಹಿನ್ನೆಲೆಯಲ್ಲಿ ರಾಜ್ಯದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಜೆಇಇ ಮೇನ್‌ ಪರೀಕ್ಷೆ (JEE Main Exam) ಮೊದಲ ಸೆಷನ್ ಪರೀಕ್ಷೆ 16-04-2022 ರಿಂದ … Continued

ಫಕೀರ ದಿಂಗಾಲೇಶ್ವರ ಸ್ವಾಮೀಜಿ ರಾಷ್ಟ್ರಮಟ್ಟದಲ್ಲಿ ಶಿರಹಟ್ಟಿ ಫಕೀರೇಶ್ವರ ಮಠದ ಕೀರ್ತಿ ಬೆಳಗಲಿ:ಎಚ್‌ ಕೆ ಪಾಟೀಲ

ಗದಗ: ಶಿರಹಟ್ಟಿ ಫಕೀರೇಶ್ವರ ಮಠದ ಪರಂಪರೆಯಲ್ಲಿ ಸಾಗಿ ಉತ್ತರೋತ್ತರ ಅಭಿವೃದ್ದಿ ಕಾರ್ಯಗಳ ಮೂಲಕ ಶ್ರೀಮಠದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ನಾಡಿನ ಜನತೆಯ ಚಿತ್ತ ಶ್ರೀಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರತ್ತ ನೆಟ್ಟಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಜಿಲ್ಲೆಯ ಶಿರಹಟ್ಟಿ ತಾಲೂಕು ಕೇಂದ್ರದ ಫಕೀರೇಶ್ವರ ಸಂಸ್ಥಾನಮಠಕ್ಕೆ ಬುಧವಾರ … Continued

ಮಾರ್ಚ್‌ 7ರಿಂದ ಮೂರು ದಿನ ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ, 10 ದೇಶಗಳ ಪಾಲ್ಗೊಳ್ಳುವಿಕೆ: ಸಚಿವ ಡಾ. ಅಶ್ವತ್ಥನಾರಾಯಣ

ಬೆಂಗಳೂರು: `ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರ ವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ … Continued

ಸ್ಕೂಟರಿಗೆ ಬಸ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು

ಉಡುಪಿ: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಮೃತಪಟ್ಟ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58)ಹಾಗೂ ಪುತ್ರಿ ಗಾಯತ್ರಿ ಪೈ (27) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಸ್ ನಲ್ಲಿ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ತನ್ನ ಸ್ಕೂಟರ್ ನಲ್ಲಿ ಬಸ್ ನಿಲ್ದಾಣಕ್ಕೆ ತಂದೆ … Continued

ಮೃತದೇಹ ಮರಳಿ ತರುವ ಬಗ್ಗೆ ಯಾರೂ ದೃಢಪಡಿಸುತ್ತಿಲ್ಲ:ಉಕ್ರೇನ್‌ನಲ್ಲಿ ಹತ್ಯೆಗೀಡಾದ ಹಾವೇರಿ ವಿದ್ಯಾರ್ಥಿಯ ಕುಟುಂಬ

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಶೆಲ್ ದಾಳಿಯಲ್ಲಿ ಸಾವಿಗೀಡಾದ ನವೀನ್ ಶೇಖರಪ್ಪ ಗ್ಯಾನಗೌಡರ್ ಅವರ ಕುಟುಂಬ ಸದಸ್ಯರು ಮೃತ ಯುವಕನ ದೇಹವನ್ನು ಆದಷ್ಟು ಬೇಗ ಭಾರತಕ್ಕೆ ತರುವ ಬಗ್ಗೆ ಎಂದು ಆಶಿಸುತ್ತಿದ್ದಾರೆ. ಶವವನ್ನು ಯಾವಾಗ ಭಾರತಕ್ಕೆ ಯಾವಾಗ ತರಲಾಗುವುದು ಎಂಬ ಬಗ್ಗೆ ಕುಟುಂಬ ಸದಸ್ಯರಿಗೆ ಇದುವರೆಗೆ ಅಧಿಕಾರಿಗಳಿಂದ ಯಾವುದೇ ನಿರ್ದಿಷ್ಟ ಮಾಹಿತಿ ಬಂದಿಲ್ಲ ಎಂದು ಅವರು ಹೇಳಿದ್ದಾರೆ. … Continued

ಬಿಬಿಎಂಪಿ ಕಚೇರಿಗಳ ಮೇಲೆ ಮುಂದುವರಿದ ಎಸಿಬಿ ದಾಳಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆಯಲು ಬುಧವಾರವೂ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಿಬಿಎಂಪಿಯ ಹಲವು ಕಚೇರಿಗಳಿಗೆ ಮೇಲೆ ದಾಳಿ ಮುಂದುವರೆಸಿದ್ದಾರೆ. ಕೇಂದ್ರ ಕಚೇರಿ ಸೇರಿ ಇತರ ವಿಭಾಗಗಳಲ್ಲಿ ಎಸಿಬಿ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಯಲಹಂಕ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಎಂಟು ವಲಯಗಳಲ್ಲೂ ಎಸಿಬಿಯ 10 ತಂಡಗಳು … Continued

ಶಿವಲಿಂಗ ಶುದ್ಧೀಕರಣ ವಿಚಾರವಾಗಿ ಆಳಂದದಲ್ಲಿ ಕಲ್ಲು ತೂರಾಟ, ಲಾಠಿ ಚಾರ್ಜ್

ಕಲಬುರಗಿ: ಆಳಂದದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಶುದ್ಧೀಕರಣ ವಿಚಾರದ ಗದ್ದಲ ವಿಕೋಪಕ್ಕೆ ಹೋಗಿ ಪೊಲೀಸರು ಲಾಠಿಚಾರ್ಜ್‌ ಮಾಡಿದ ಘಟನೆ ನಡೆದಿದೆ. ಶಿವಲಿಂಗದ ಶುದ್ಧೀಕರಣಕ್ಕೆ ಹಿಂದೂಪರ ಸಂಘಟನೆಗಳು ಪಟ್ಟು ಹಿಡಿದಿದ್ದು, ಆಂದೋಲಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕಲಬುರಗಿಯಿಂದ ಆಳಂದ ಚಲೋಗೆ ಕರೆ ಕೊಟ್ಟಿದ್ದರು. ಆದರೆ ಇದಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಶಿವರಾತ್ರಿ … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 202 ಕೊರೊನಾ ಸೋಂಕು ಪತ್ತೆ

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 202 ಕೊರೊನಾ ಸೋಂಕುಗಳು ಪತ್ತೆಯಾಗಿವೆ. ಇದೇವೇಳೆ ರಾಜ್ಯದಲ್ಲಿ ಸೋಂಕಿಗೆ 7 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ೯೭೧ ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 4,847 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಮಂಗಳವಾರ 150 ಕೊರೊನಾ ಪ್ರಕರಣ ಪತ್ತೆಯಾಗಿವೆ … Continued

ರಷ್ಯಾದ ಶೆಲ್ ದಾಳಿಗೆ ಮೃತಪಟ್ಟ ಹಾವೇರಿ ವಿದ್ಯಾರ್ಥಿಯ ಕುಟುಂಬದ ಜೊತೆ ಪ್ರಧಾನಿ ಮೋದಿ ಮಾತು; ಸಿಎಂ ಬೊಮ್ಮಾಯಿ ಸಂತಾಪ

ಹಾವೇರಿ: ಉಕ್ರೇನ್‌ನ ಖಾರ್ಕಿವ್‌ನಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿಯ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಹೇಳಿದರು. ಖಾರ್ಕಿವ್ ಶೆಲ್ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿ ಮೃತಪಟ್ಟ ಸುದ್ದಿಯ ನಂತರ ಪ್ರಧಾನಿ ಮೋದಿ ನವೀನ್ ಕುಟುಂಬದೊಂದಿಗೆ ಮಾತನಾಡಿದ್ದಾರೆ. ಹಾವೇರಿ ಜಿಲ್ಲೆಯ ನವೀನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ನವೀನ್ ಜ್ಞಾನಗೌಡರ ನಿಧನಕ್ಕೆ ಸಂತಾಪ ಸೂಚಿಸಿದ … Continued

ತಾಳಗುಪ್ಪ: 36 ವರ್ಷ ಬದುಕಿ ದಾಖಲೆ ಮಾಡಿದ ಮಲೆನಾಡು ಗಿಡ್ಡ ಜಾತಿ ಹಸು ಸಾವು

ಸಾಗರ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಮೀಪದ ಮುಸುವಳ್ಳಿ ನಾರಾಯಣ ಭಟ್ಟ ಅವರ ಗೋಶಾಲೆಯ ಬರೋಬ್ಬರಿ 36 ವರ್ಷ ಬದುಕಿದ್ದ ಹಸು ಕೌಲೆ ಸೋಮವಾರ ಮೃತಪಟ್ಟಿದೆ. ಗೋವು ಇಷ್ಟು ವರ್ಷ ಬದುಕುವುದು ವಿರಳಾತಿವಿರಳ. ಸಾಮಾನ್ಯವಾಗಿ ಮಿಶ್ರ ತಳಿಯೂ ಸೇರಿದಂತೆ ಗೋವಿನ ಆಯಸ್ಸು 15ರಿಂದ 20 ವರ್ಷ. ದೇಸಿ ತಳಿಯಾದರೆ 20ರಿಂದ 25 ವರ್ಷ ಬದುಕುತ್ತದೆ ಎಂದು … Continued