ತನ್ನ ಸಹೋದರನ ಮೇಲೆ ಹಲ್ಲೆ: ಹಿಜಾಬ್ ಪ್ರಕರಣದ ಅರ್ಜಿದಾರಳ ಆರೋಪ

ಉಡುಪಿ: ಹಿಜಾಬ್ ವಿವಾದ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯ ತಂದೆಗೆ ಸೇರಿದ ರೆಸ್ಟೋರೆಂಟ್ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಫೆಬ್ರವರಿ 21 ರ ಸೋಮವಾರ ರಾತ್ರಿ 9:30ರ ಸುಮಾರಿಗೆ ಮಲ್ಪೆಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಕಾಲೇಜು ವಿದ್ಯಾರ್ಥಿನಿಯರಲ್ಲಿ ಒಬ್ಬರಾದ ಶಿಫಾ ಅವರ ತಂದೆ ಹೈದರ್ … Continued

ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಆರೋಪಿಗಳಿಬ್ಬರ ಹೆಸರು ಬಹಿರಂಗ

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಇಬ್ಬರು ಪ್ರಮುಖ ಆರೋಪಿಗಳ ಹೆಸರು ಬಹಿರಂಗವಾಗಿದೆ. ಶಿವಮೊಗ್ಗದ ಬುದ್ಧನಗರದ ಖಾಸಿಫ್ (30) ಮತ್ತು ಜೆಪಿ‌ ನಗರದ ಸೈಯದ್ ನದೀಮ್ (20) ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆ ನಡೆದು 24 ಗಂಟೆಗಳ ಶಿವಮೊಗ್ಗ ಪೊಲೀಸರನ್ನೊಳಗೊಂಡ ವಿಶೇಷ ತಂಡ ಇವರನ್ನು ಬಂಧಿಸಿದೆ. ಒಳಗಾಗಿ ಇಬ್ಬರು ಆರೋಪಿಗಳನ್ನು … Continued

ಅನುದಾನಿತ ಪ್ರೌಢಶಾಲೆಗಳ 1924 ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ನಾಗೇಶ

ಬೆಂಗಳೂರು : ಶಿಕ್ಷಕ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ಅವರು ಸಂತೋಷದ ಸುದ್ದಿ ನೀಡಿದ್ದು, ಅನುದಾನಿತ ಪ್ರೌಢಶಾಲೆಗಳ 1924 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಕುರಿತು ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಚಿವರು ಅನುದಾನಿತ ಪ್ರೌಢಶಾಲೆಗಳ 1924 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ, ಆರ್ಥಿಕ … Continued

ಬಜರಂಗದಳ ಕಾರ್ಯಕರ್ತನ ಹತ್ಯೆ ನಂತರ ಶಿವಮೊಗ್ಗ ಉದ್ವಿಗ್ನ… ಪ್ರಮುಖಾಂಶಗಳು

ಶಿವಮೊಗ್ಗ: ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ 23 ವರ್ಷದ ಬಜರಂಗದಳ ಕಾರ್ಯಕರ್ತ ಹರ್ಷ ಎಂಬಾತನಿಗೆ ಮಾರಾಕಾಸ್ತ್ರಗಳಿಂದ ಇರಿದು ಕೊಲೆ ಮಾಡಲಾಗಿದೆ. ತೀವ್ರವಾಗಿ ಸೀಗೆಹಟ್ಟಿ ನಿವಾಸಿ ಹರ್ಷ ಅವರನ್ನು ಮೆಕ್‌ಗನ್‌ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕರ್ನಾಟಕ ಪೊಲೀಸರು ಭಾರತಿ ಕಾಲೋನಿ ಪ್ರದೇಶದಲ್ಲಿ ನಡೆದ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ಭಾರೀ ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 679 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಇದೇ ಸಮಯದಲ್ಲಿ 21 ಮಂದಿಮೃತಪಟ್ಟಿದ್ದಾರೆ ಹಾಗೂ 1,932 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ‌. 1.29 ಕ್ಕೆ ಇಳಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಪ್ರತಿಶತ ಸಂಖ್ಯೆ ಶೇ.3.09 ರಷ್ಟು ಇದೆ. … Continued

ಶಿವಮೊಗ್ಗ: ನಗರದ ಶಾಲಾ- ಕಾಲೇಜುಗಳಿಗೆ ಮಂಗಳವಾರವೂ ರಜೆ, ಮುಂದುವರಿದ ನಿಷೇಧಾಜ್ಞೆ

ಶಿವಮೊಗ್ಗ: ಶಿವಮೊಗ್ಗ ನಗರದ ಶಾಲಾ- ಕಾಲೇಜುಗಳಿಗೆ ನಾಳೆ (ಫೆಬ್ರವರಿ 22) ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಮಂಗಳವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಫೆಬ್ರವರಿ 23 ರ ಮುಂಜಾನೆ ವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದಲ್ಲಿ ಫೆಬ್ರವರಿ 23 ರ … Continued

ಹಿಜಾಬ್ ವಿವಾದ: ಬೆಂಗಳೂರು ಶಾಲಾ- ಕಾಲೇಜುಗಳ ಬಳಿ ನಿಷೇಧಾಜ್ಞೆ ಮಾರ್ಚ್ 8ರ ವರೆಗೆ ವಿಸ್ತರಣೆ

ಬೆಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಎರಡು ವಾರಗಳ ಕಾಲ ಶಾಲಾ-ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಗುಂಪುಗೂಡುವುದು ಹಾಗೂ ಪ್ರತಿಭಟನೆ ನಡೆಸುವುದನ್ನು ನಿಷೇಧಿಸಿದ್ದಾರೆ. ಕಳೆದ ವಾರ ಕರ್ನಾಟಕವು ಈ ವಿಷಯದ ಬಗ್ಗೆ ಹಲವಾರು ಪ್ರದರ್ಶನಗಳನ್ನು ಕಂಡಿದ್ದರಿಂದ, ಕಳೆದ ಶುಕ್ರವಾರದವರೆಗೆ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ಸರ್ಕಾರವು ರಜೆ ಘೋಷಿಸಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು … Continued

ಅಗತ್ಯ ಧಾರ್ಮಿಕ ಆಚರಣೆ ಪರೀಕ್ಷೆಗೆ ಸಂಬಂಧಿಸಿದ ಶಬರಿಮಲೆ ತೀರ್ಪು ಈ ನೆಲದ ಕಾನೂನು: ಹೈಕೋರ್ಟ್‌ ಮುಂದೆ ಹೇಳಿದ  ರಾಜ್ಯ ಸರ್ಕಾರ

ಬೆಂಗಳೂರು: ಹಿಜಾಬ್‌ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಎಂದು ಅರ್ಜಿದಾರರು ವಾದಿಸುವ ಮೂಲಕ ಎಲ್ಲಾ ಮುಸ್ಲಿಮ್‌ ಮಹಿಳೆಯರನ್ನೂ ಒಂದು ನಿರ್ದಿಷ್ಟ ವಸ್ತ್ರ ಸಂಹಿತೆಗೆ ಸೀಮಿತಗೊಳಿಸುವ ದೃಷ್ಟಿ ಹೊಂದಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರವು ಸೋಮವಾರ ತಿಳಿಸಿದೆ. ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು … Continued

ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ- ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನಗರದಲ್ಲಿ ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆ ಹಂತದಲ್ಲಿರುವುದರಿಂದ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಇದುವರೆಗೆ ಮೂವರನ್ನು ಬಂಧಿಸಿದ್ದಾರೆ ಮತ್ತು ತನಿಖೆ ನಡೆಯುತ್ತಿದೆ. ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ಹಂತದ ತನಿಖೆಯಲ್ಲಿ ಐವರು ಕೊಲೆಗೆ ಕಾರಣರಾಗಿದ್ದಾರೆ. ಆದರೆ ಅವರ … Continued

ಹಿಜಾಬ್‌ ವಿವಾದದ ಮಧ್ಯೆ ರಾಹುಲ್ ಗಾಂಧಿ ಭೇಟಿ ಮಾಡಲಿರುವ ಕರ್ನಾಟಕದ ಕಾಂಗ್ರೆಸ್ ನಾಯಕರು

ಬೆಂಗಳೂರು: ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಸಚಿವ ಕೆ.ಎಸ್.ಈಶ್ವರಪ್ಪ ಅವರ ಕೆಂಪುಕೋಟೆಯಲ್ಲಿ ಕೇಸರಿ ಧ್ವಜದ ವಿವಾದಾತ್ಮಕ ಹೇಳಿಕೆಗೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ನಿಂದ ಗದ್ದಲ ನಡೆಯುತ್ತಿದೆ. ಆದರೆ ರಾಜ್ಯಾದ್ಯಂತ ನಡೆಯುತ್ತಿರುವ ರಾಜ್ಯಾದ್ಯಂತ ಹಿಜಾಬ್‌ ವಿವಾದದಲ್ಲಿ ಕಾಂಗ್ರೆಸ್‌ ಯಾವ ನಿಲುವು ತಳೆಯಬೇಕು ಎಂದು ಗೊಂದದಲ್ಲಿದೆ. ಇದರ ಮಧ್ಯೆಯೇ ಕಾಂಗ್ರೆಸ್‌ನ ಕೆಲ … Continued