ಗದ್ದಲದ ನಡುವೆಯೇ ಕರ್ನಾಟಕ ಸ್ಟ್ಯಾಂಪ್ ( 2ನೇ ತಿದ್ದುಪಡಿ) ವಿಧೇಯಕ ಸೇರಿ ನಾಲ್ಕು ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ ನಡೆವೆಯೇ 2022 ನೇ ಸಾಲಿನ ಕರ್ನಾಟಕ ಸಿವಿಲ್‌ ಸೇವೆಗಳ ವಿಧೇಯಕ ಸೇರಿದಂತೆ ಒಟ್ಟು ನಾಲ್ಕು ವಿಧೇಯಕಗಳು ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರಗೊಂಡಿತು. ಕಾಂಗ್ರೆಸ್‌ ಧರಣಿ ಹಿನ್ನೆಲೆಯಲ್ಲಿ ವಿಧೇಯಕಗಳು ಯಾವುದೇ ಚರ್ಚೆಯಿಲ್ಲದೆ ಅಂಗೀಕಾರಗೊಂಡವು. 2022 ನೇ ಸಾಲಿನ ಕರ್ನಾಟಕ ಸ್ಟಾಂಪ್‌( ತಿದ್ದುಪಡಿ) ವಿಧೇಯಕ, 2022 ನೇ ಸಾಲಿನ … Continued

ಭಜರಂಗ ದಳದ ಕಾರ್ಯಕರ್ತನ ಹತ್ಯೆ: ಶಿವಮೊಗ್ಗದಲ್ಲಿ ಕಲ್ಲು ತೂರಾಟ, ಬೈಕ್‌ಗಳಿಗೆ ಬೆಂಕಿ

ಶಿವಮೊಗ್ಗ: ಭಾನುವಾರ ರಾತ್ರಿ ಹತ್ಯೆಯಾದ ಭಜರಂಗ ದಳದ ಕಾರ್ಯಕರ್ತ ಹರ್ಷ ಮೃತದೇಹದ ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೆಗ್ಗಾನ್ ಆಸ್ಪತ್ರೆಯಿಂದ ದೇಹವನ್ನು ಹಸ್ತಾಂತರಿಸಲಾಗಿದೆ. ಅವರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಹಲವೆಡೆ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದೆ. ಕೆಲವಡೆ ಬೈಕ್ ಗಳಿಗೆ ಬೆಂಕಿ ಹಚ್ಚಿಲಾಗಿದೆ ಹಾಗೂ ಕಲ್ಲು ತೂರಿ ಕಾರಿನ ಗಾಜುಗಳನ್ನು ಪುಡ ಮಾಡಲಾಗಿದೆ … Continued

ಅಪರೂಪದ ಮದುವೆ..ವರ ಮೂರೂವರೆ ಅಡಿ, ವಧು ಐದೂವರೆ ಅಡಿ..!

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ನೀಲಗುಂದ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಭಾನುವಾರ ಅಪರೂಪದ ಮದುವೆ ನಡೆಯಿತು. ಕುಬ್ಜ ಯುವಕ ಹಾಗೂ ಯುವತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವರನ ಎತ್ತರ ಮೂರುವರೆ ಅಡಿ ಇದ್ದರೆ, ವಧುವಿವಿನ ಎತ್ತರ 5 ಅಡಿ 3 ಇಂಚು ಎತ್ತರವಿದ್ದಾಳೆ. ಇಬ್ಬರ ಮನೆಯವರು ಈ ಮದುವೆಗೆ ಒಪ್ಪಿಗೆ ನೀಡಿ ಸಂಪ್ರದಾಯದಂತೆ ಗ್ರಾಮದ … Continued

ಶಿವಮೊಗ್ಗದಲ್ಲಿ ಬಜರಂಗ ದಳ ಕಾರ್ಯಕರ್ತನ ಹತ್ಯೆ: ತನಿಖೆ ಬಳಿಕ ಎಲ್ಲವೂ ಗೊತ್ತಾಗಲಿದೆ-ಸಿಎಂ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಬಜರಂಗ ದಳ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದ್ದು, ತನಿಖೆಯ ನಂತರ ಎಲ್ಲವೂ ಹೊರಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಹರ್ಷ ಎಂಬ ಯುವಕನ ಹತ್ಯೆ ನಡೆದಿದ್ದು, ಇದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದರ ಕುರಿತು ಪ್ರಾಥಮಿಕ ಮಾಹಿತಿ … Continued

ಹಿಂದೂ ಸಂಘಟನೆ ಕಾರ್ಯಕರ್ತನ ಕೊಲೆ ಪ್ರಕರಣ: ಸುಳಿವು ಸಿಕ್ಕಿದೆ, ಶೀಘ್ರವೇ ಬಂಧಿಸ್ತೇವೆ-ಆರಗ ಜ್ಞಾನೇಂದ್ರ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ಸುಳಿವು ಸಿಕ್ಕಿದೆ. ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ಗಲಾಟೆಗೂ ಇದಕ್ಕೂ ಸಂಬಂಧ ಇದೆ ಎನಿಸುವುದಿಲ್ಲ. ಐವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ತಿಳಿದುಬಂದಿದೆ. ಏನು … Continued

ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತನ ಭೀಕರ ಹತ್ಯೆ, ಪರಿಸ್ಥಿತಿ ಉದ್ವಿಗ್ನ

ಶಿವಮೊಗ್ಗ: ನಗರದ ಸೀಗೆಹಟ್ಟಿಯಲ್ಲಿ ಹಿಂದೂ ಪರ ಸಂಘಟನೆಯ ಯುವಕನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾದ ಘಟನೆ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬಗ್ಗೆ ವರದಿಯಾಗಿದೆ. ಮೃತನನ್ನು ಹರ್ಷ (25) ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ 10ರ ಸುಮಾರಿಗೆ ಭಾರತಿ ಕಾಲೋನಿ ಬಳಿ … Continued

ಕರ್ನಾಟಕದಲ್ಲಿ ಮತ್ತಷ್ಟು ಇಳಿಕೆ ಕಂಡ ಕೊರೊನಾ ದೈನಂದಿನ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ದೈನಂದಿನ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು, ಭಾನುವಾರ 1,001 ಕೊರೊನಾ ಪ್ರಕರಣಗಳು (Corona ದಾಖಲಾಗಿದೆ. ಇದೇವೇಳೆ 1,780 ಜನರು ಗುಣಮುಖರಾಗಿದ್ದಾರೆ. ಹಾಗೂ ಸೋಂಕಿಗೆ 18 ಜನ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ . ರಾಜ್ಯದಲ್ಲಿ ಈಗ ಸಕ್ರಿಯ ಪ್ರಕರಣ12,634ಕ್ಕೆ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡಾ 1.42 ಇದೆ. … Continued

ಪಶ್ಚಿಮ ಘಟ್ಟದ ದುರ್ಗಮ ಶಿಖರಗಳಲ್ಲಿ ಒಂದನ್ನು ಏರಿದ ಸೀರೆಯುಟ್ಟ 62 ವರ್ಷದ ಮಹಿಳೆ..!

ಬೆಂಗಳೂರು: ವಯಸ್ಸು ಮಾನವನ ದೇಹವನ್ನು ನಿಧಾನಗೊಳಿಸುತ್ತದೆ ಎಂದು ಭಾವಿಸುವುದನ್ನು ಬೆಂಗಳೂರಿನ 62 ವರ್ಷದ ನಾಗರತ್ನಮ್ಮ ಸುಳ್ಳು ಎಂದು ಸಾಬೀತುಪಡಿಸಿದ್ದಾರೆ. ನಾಗರತ್ನಮ್ಮ ಅವರು ಪಶ್ಚಿಮ ಘಟ್ಟಗಳ ಕಠಿಣ ಶಿಖರಗಳಲ್ಲಿ ಒಂದನ್ನು ಏರಿದ್ದಾರೆ. ವಿಷ್ಣು ಅವರು Instagram ನಲ್ಲಿ ಹಂಚಿಕೊಂಡಿರುವ ವೀಡಿಯೊ, ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿರುವ ಅಗಸ್ತ್ಯ ಕೂಡಂ ಎಂದು ಕರೆಯಲ್ಪಡುವ ಶಿಖರದ ತುದಿಗೆ ನಾಗರತ್ನಮ್ಮ ಏರುತ್ತಿರುವುದನ್ನು ತೋರಿಸುತ್ತದೆ. … Continued

ಶಿರಸಿ: ಯಕ್ಷಗಾನ ಪ್ರಸಂಗಕರ್ತೃ ಡಿ.ಎಸ್. ಶ್ರೀಧರರಿಗೆ ಪಾರ್ತಿಸುಬ್ಬ ಪ್ರಶಸ್ತಿ-ಹಲವು ಸಾಧಕರಿಗೆ ಯಕ್ಷಸಿರಿ ಪ್ರಶಸ್ತಿ ಪ್ರದಾನ

ಶಿರಸಿ: ಇಲ್ಲಿನ ಟಿ.ಆರ್.ಸಿ. ಸಭಾಂಗಣದಲ್ಲಿ ರಾಜ್ಯ ಯಕ್ಷಗಾನ ಅಕಾಡೆಮಿಯು ಭಾನುವಾರ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಯಕ್ಷಗಾನ ಅಕಾಡೆಮಿಯ ಗೌರವ ಪ್ರಶಸ್ತಿ, ಯಕ್ಷ ಸಿರಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತೃ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ದರೇಮನೆಯ ನಿಟ್ಟೂರಿನ ಡಿ.ಎಸ್.ಶ್ರೀಧರ ಅವರು … Continued

ನಂದಿ ಬೆಟ್ಟದ ಬಳಿ ಬ್ರಹ್ಮಗಿರಿಯಲ್ಲಿ 300 ಅಡಿ ಪ್ರಪಾತಕ್ಕೆ ಬಿದ್ದ ಯುವಕ: ವಾಯುಸೇನೆ ಹೆಲಿಕಾಪ್ಟರಿನಿಂದ ರಕ್ಷಣೆ

ನಂದಿ ಬೆಟ್ಟದ ಪಕ್ಕದಲ್ಲಿ ಇರುವ ಬ್ರಹ್ಮ ಗಿರಿ ಬೆಟ್ಟಕ್ಕೆ ಟ್ರಕ್ಕಿಂಗ್ ಮಾಡಲು ಬಂದಿದ್ದ ಯುವಕನೊಬ್ಬ ಟ್ರೆಕ್ಕಿಂಗ್ ವೇಳೆ ಬೆಟ್ಟದ ಮೇಲಿಂದ ಕೆಳಗೆ ಬಿದ್ದಿದ್ದಜಾರಿ ಬಿದ್ದು ಅಪಾಯಕ್ಕೆ ಸಿಲುಕಿದ್ದ ಯುವಕನನ್ನು ವಾಯುಪಡೆಯ ಹೆಲಿಕ್ಯಾಪ್ಟರ್ ಬಳಸಿ ರಕ್ಷಣೆ ಮಾಡಲಾಗಿದೆ. ಸ್ನೇಹಿತರೊಂದಿಗೆ ಟ್ರೆಕ್ಕಿಂಗ್ ಗೆ ತೆರಳಿದ್ದ ವೇಳೆ ದುರ್ಗಮ ಪದೇಶಕ್ಕೆ ಜಾರಿ ಬಿದ್ದು ಅಪಾಯಕ್ಕೆ ಸಿಲುಕಿದ್ದ ದೆಹಲಿ ಮೂಲದ ಯುವಕ … Continued