ಶಾಸಕ ಜಮೀರ್ ಅಹ್ಮದ್ ವಿರುದ್ಧ ವಂಚನೆ, ಬೆದರಿಕೆ ಆರೋಪದ ಮೇಲೆ ಎಫ್​ಐಆರ್​​ ದಾಖಲು

ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ. ಜಮೀರ್ ಹಾಗೂ ಜಮೀರ್ ಅಹಮದ್ ಖಾನ್, ಅವರ ಸಹೋದರ ಮತ್ತು ಇತರರ ವಿರುದ್ಧ ವಂಚನೆ, ಅತಿಕ್ರಮಣ ಮತ್ತು ಬೆದರಿಕೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಏಳನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನಿರ್ದೇಶನದ ಮೇರೆಗೆ ಇಲ್ಲಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು … Continued

ಪುನೀತ್ ಸಾವಿನ ಆಘಾತ ಮಾಸುವ ಮುನ್ನವೇ ಪತ್ನಿ ಅಶ್ವಿನಿಗೆ ಮತ್ತೊಂದು ಆಘಾತ, ತಂದೆ ವಿಧಿವಶ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲುವಿಕೆಯಿಂದ ನೊಂದಿದ್ದ ಅಶ್ವಿನಿ ಅವರಿಗೆ ಈಗ ಮತ್ತೊಂದು ಆಘಾತ ಉಂಟಾಗಿದೆ. ಅಶ್ವಿನಿ ತಂದೆ ಭಾಗಮನೆ ರೇವನಾಥ್ (78) ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನ ಹೊಂದಿದ್ದಾರೆ. ಪುನೀತ್ ರಾಜ್​ಕುಮಾರ್​ ಅವರ ಮಾವ ಭಾಗಮನೆ ರೇವನಾಥ್​ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ … Continued

ಮೊಬೈಲ್ ಕೊಡಿಸಲಿಲ್ಲವೆಂದು ಸಾವಿನ ಹಾದಿ ಹಿಡಿದ ವಿದ್ಯಾರ್ಥಿ

ವಿಜಯನಗರ: ಮೊಬೈಲ್ ಕೊಡಿಸಿಲ್ಲ ಎಂದು ಮುನಿಸಿಕೊಂಡು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಘಟನೆ ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ತೊಲಹಳ್ಳಿ ಎಂಬ ಊರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬಡತನದ ಕಾರಣಕ್ಕೆ ಪೋಷಕರಿಗೆ ಮೊಬೈಲ್ ಕೊಡಿಸಲಾಗಿರಲಿಲ್ಲ. ಮಗನನ್ನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯನಗರದ ಕೊಟ್ಟೂರಿನ ಸನ್ನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ … Continued

ಸಿನಿಮಾದಲ್ಲಿ ನಟಿಸಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ..!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೊತ್ತ ಮೊದಲ ಬಾರಿಗೆ ಸಿನೆಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ತನುಜಾ ಎಂಬ ಚಿತ್ರಕ್ಕೆ ಬಣ್ಣ ಹಚ್ಚುವ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರೊ ಹೊಡೆದಿದ್ದಾರೆ. ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹುಡುಗಿ ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆ ತೋಡಿಕೊಂಡಿದ್ದಳು. ಆಗ ಪತ್ರಕರ್ತ ವಿಶ್ವೇಶ್ವರ ಭಟ್ … Continued

ವಿಧಾನಮಂಡಲದ ಕಲಾಪ ಸ್ಥಗಿತ ಕರ್ನಾಟಕದ ಜನತೆಗೆ ಮಾಡುತ್ತಿರುವ ಅನ್ಯಾಯ: ಹೊರಟ್ಟಿ

ಹುಬ್ಬಳ್ಳಿ: ಸತತ ಪ್ರತಿಭಟನೆ ಮೂಲಕ ವಿಧಾನಮಂಡಲದ ಕಲಾಪ ಸ್ಥಗಿತಗೊಳಿಸಿರುವುದು ಕರ್ನಾಟಕದ ಜನತೆಗೆ ಮಾಡುತ್ತಿರುವ ಅನ್ಯಾಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಶನಿವಾರ ಅಭಿಪ್ರಾಯಪಟ್ಟಿದ್ದಾರೆ. ಈ ಬೆಳವಣಿಗೆಯಿಂದ ನನಗೆ ವೈಯಕ್ತಿಕವಾಗಿ ನೋವಾಗಿದೆ. ಎರಡೂ ಕಡೆಯವರು ರಾಜಿ ಮಾಡಿಕೊಳ್ಳಲು ಸಿದ್ಧರಿಲ್ಲ, ಪೋಷಕರ ಜಗಳದಿಂದ ಕೂಸು ಬಡವಾಗುವಂತಾಗಿದೆ. ಒಬ್ಬ ನಾಗರಿಕನಾಗಿ, ನಾವು ಜನರನ್ನು ಅವಮಾನಿಸುತ್ತಿದ್ದೇವೆ ಅಥವಾ ದ್ರೋಹ … Continued

ಮಾಜಿ ಶಾಸಕ ಎಂ. ಜಿ. ಮುಳೆ ಮರಾಠಾ ನಿಗಮದ ಅಧ್ಯಕ್ಷ

ಬೆಂಗಳೂರು: ನವೆಂಬರ್ 2020ರಲ್ಲಿ ಸ್ಥಾಪನೆಯಾದ ಮರಾಠಾ ಅಭಿವೃದ್ಧಿ ನಿಗಮದ ಮೊದಲ ಅಧ್ಯಕ್ಷರಾಗಿ ಮಾಜಿ ಶಾಸಕ ಮಾರುತಿರಾವ್ ಮುಳೆ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೆಸರಿಸಿದ್ದಾರೆ. ಕರ್ನಾಟಕ ಮರಾಠಾ ವೆಲ್ಫೇರ್ ಅಸೋಸಿಯೇಷನ್ ​​ಆಯೋಜಿಸಿದ್ದ ಛತ್ರಪತಿ ಶಿವಾಜಿ ಅವರ 395ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ, ‘ನಿಗಮದ ಮುಖ್ಯಸ್ಥರಾಗಿ ಮಾರುತಿರಾವ್ ಮುಳೆ ಅವರನ್ನು ನೇಮಿಸಲು ನಿರ್ಧರಿಸಿದ್ದೇವೆ … Continued

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ನೇಮಕಾತಿಯಲ್ಲಿ ಅನ್ಯಾಯದ ದೂರು: ಪಿಎಸ್ಐ ನೇಮಕಾತಿಗೆ ತಡೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಗಳ ಮನವಿ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದೆ. ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ … Continued

ಕರ್ನಾಟಕದಲ್ಲಿ ಶನಿವಾರ ಮತ್ತಷ್ಟು ಇಳಿಕೆ ಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಶನಿವಾರ ಹೊಸದಾಗಿ 1,137 ಸೋಂಕು ದಾಖಲಾಗಿದೆ ಹಾಗೂ 20 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 39,35,585ಕ್ಕೆ ಏರಿಕೆಯಾಗಿದೆ ಹಾಗೂ ಸಾವಿನ ಸಂಖ್ಯೆ 39,777ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದೇವೇಳೆ ರಾಜ್ಯದಲ್ಲಿ 3,870 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ … Continued

ಹಿಜಾಬ್ ವಿವಾದ: ಹೊರಗಿನವರಿಂದ ಗೊಂದಲ ಸೃಷ್ಟಿ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಜಾಬ್ ವಿವಾದದ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಗೊಂದಲ ಸೃಷ್ಟಿಸಲು “ಹೊರಗಿನವರು” ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ. “ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ತುಂಬಾ ಸರಳವಾಗಿದೆ. ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ಹಾಗೆ ಮಾಡುವಾಗ ಹೊರಗಿನವರು ಭಾಗಿಯಾಗುತ್ತಿದ್ದಾರೆ. ಹೀಗಾಗಿಯೇ ಗೊಂದಲ ಸೃಷ್ಟಿಯಾಗಿದೆ’ ಎಂದು ಬೊಮ್ಮಾಯಿ ಹೇಳಿದರು. ಆದರೆ ಯಾರು ಎಂಬುದನ್ನು ಸ್ಪಷ್ಟವಾಗಿ … Continued