ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ: ಸಿಎಂ ಬೊಮ್ಮಾಯಿ

ಬೆಳಗಾವಿ: ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು, ಶನಿವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ನಡೆದ ಪ್ರಕರಣದ ಬಗ್ಗೆ ಮಾತನಾಡಿದರು. ಕೆಲವರು ಕಾನೂನು ಬಾಹಿರವಾಗಿ ಪುಂಡಾಟಿಕೆ ಮಾಡಿದ್ದಾರೆ. ಕರ್ನಾಟಕದ ಕಾನೂನು ಸುವ್ಯವಸ್ಥೆ ನಮ್ಮ ಜವಾಬ್ದಾರಿ. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ತೆ … Continued

ಭಾರತದಿಂದ ದೂರ ಹೋದವರಲ್ಲಿಯೂ ಭಾರತೀಯತೆ ಸದಾ ಜಾಗೃತ : ರಘುನಂದನಜಿ

ಬೆಳಗಾವಿ : ಭಾರತೀಯರು ಅನೇಕ ಕಾರಣಗಳಿಂದ ಜಗತ್ತಿನ ಇತರ ದೇಶಗಳಿಗೆ ವಲಸೆ ಹೋಗುತ್ತಾರೆ. ಅಲ್ಲೇ ಉದ್ಯೋಗದಲ್ಲಿ ನಿರತರಾಗಿ ಆ ದೇಶದ ಪೌರತ್ವವನ್ನು ಪಡೆದುಕೊಳ್ಳುತ್ತಾರೆ. ಆದರೆ, ಅವರಲ್ಲಿ ಸದಾ ಭಾರತೀಯತೆ ಜಾಗೃತವಾಗಿರುತ್ತದೆ ಎಂದು ಪ್ರಜ್ಞಾ ಪ್ರವಾಹ ವೈಚಾರಿಕೆ ವೇದಿಕೆ, ದಕ್ಷಿಣ ಮಧ್ಯ ಕ್ಷೇತ್ರದ ಸಂಯೋಜಕ ರಘುನಂದನಜಿ ಅಭಿಪ್ರಾಯಪಟ್ಟರು. ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಂಡಿತ ದೀನದಯಾಳ ಉಪಾಧ್ಯಾಯ … Continued

ಬೆಳಗಾವಿ: 10 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಬೆಳಗಾವಿ :ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ವಿಶ್ವದ ಅತ್ಯಂತ ಬುದ್ಧಿವಂತ, ಮತ್ತು ಅತ್ಯಂತ ವಿಷಕಾರಿ ವಿಷ ಎಂದು ಪರಿಗಣಿಸಲಾಗಿದೆ. ಅಣೆಕಟ್ಟಿನ ಗೇಟ್‌ಗಳನ್ನು ಎಳೆಯುವ 25 ಅಡಿ ಎತ್ತರದ ಯಂತ್ರದಲ್ಲಿ ಹಾವು ಪತ್ತೆಯಾಗಿದ್ದು, ಹಾವುಗಳ ಸ್ನೇಹಿತ ಆನಂದ ಚಿಟ್ಟಿ ಅವರು ಅರಣ್ಯ ಇಲಾಖೆಯ ಸಹಾಯದಿಂದ ಹಾವನ್ನು ಹಿಡಿದು ಅದರ ನೈಸರ್ಗಿಕ ಆವಾಸಸ್ಥಾನಕ್ಕೆ ಬಿಟ್ಟಿದ್ದಾರೆ. ಬೆಳಗಾವಿ … Continued

ಬೆಳಗಾವಿ ಗಲಭೆ:27 ಜನರಿಗೆ ನ್ಯಾಯಾಂಗ ಬಂಧನ 

ಬೆಳಗಾವಿ : ನಗರದಲ್ಲಿ ಶುಕ್ರವಾರ ರಾತ್ರಿ ನಡೆಸಿದ ಗಲಭೆಗೆ ಸಂಬಂಧಿಸಿ ನ್ಯಾಯಾಲಯವು 27 ಜನರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಹಿಂಡಲಗಾ ಜೈಲಿಗೆ ಕಳಿಸಲಾಗಿದೆ. ಬೆಂಗಳೂರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ನಂತರ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನಕ್ಕೆ ಆಗಮಿಸಿದ್ದ ವಿವಿಧ ಸರ್ಕಾರಿ ವಾಹನಗಳು ಮತ್ತು ಪೊಲೀಸ್‌ … Continued

ಎಂಇಎಸ್ ಪುಂಡಾಟಿಕೆ; ಡಿಕೆಶಿ ಖಂಡನೆ

ಬೆಂಗಳೂರು:ಅನಗೊಳದಲ್ಲಿ ಸ್ವಾತಂತ್ರ್ಯ ವೀರ ಸೇನಾನಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಭಗ್ನ ಸೇರಿದಂತೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಗ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಎಂಇಎಸ್ ಕನ್ನಡದ್ರೋಹಿ, ನಾಡದ್ರೋಹಿ ಕೃತ್ಯವನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ. ಅದನ್ನು ನಾವು ಬಲವಾಘಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಬೆಳಗಾವಿ: ಎಂಇಎಸ್, ಶಿವಸೇನಾ ನಾಯಕರ ಬಂಧನ

ಬೆಳಗಾವಿ : ಬೆಳಗಾವಿ ಮಹಾನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ನಗರದ ಶಿವಾಜಿ ಉದ್ಯಾನದಲ್ಲಿ ಉದ್ಯಾನಕ್ಕೆ ತೆರಳಿ ಶಿವಾಜಿ ಪ್ರತಿಮೆಗೆ ಪೂಜೆ ಸಲ್ಲಿಸುವುದಾಗಿ ಹೇಳಿದ್ದ ಎಂಇಎಸ್ ಹಾಗೂ ಶಿವಸೇನೆ ನಾಯಕರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಎಂಇಎಸ್ ಮಾಜಿ ಮೇಯರ್ ಶಿವಾಜಿ ಸುಂಟ್ಕರ್ ಹಾಗೂ ಶಿವಸೇನೆ ನಾಯಕಪ್ರಕಾಶ ಶಿರೋಳ್ಕರ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ನಿಷೇಧಾಜ್ಞೆ … Continued

ಸುಳಗಾದಲ್ಲಿ ಸಂಗೊಳ್ಳಿ ರಾಯಣ್ಣನ ಚಿತ್ರಕ್ಕೆ ಬಣ್ಣ ಎರಚಿದ ಕಿಡಿಗೇಡಿಗಳು

ಬೆಳಗಾವಿ:ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರಕ್ಕೆ ಅವಮಾನ ಮಾಡಲಾಗಿದೆ. ಗ್ರಾಮದ ಸಂಭಾಜಿ ಬೀದಿಯಲ್ಲಿ ನಡೆದ ಘಟನೆಯಿಂದ ಇದೀಗ ಅಲ್ಲಿ ಉದ್ವಿಗ್ನತೆ ಉಂಟಾಗಿದೆ. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಮಂಡಲದ ನಾಮಫಲಕದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಚಿತ್ರಕ್ಕೆ ಬಣ್ಣ ಎರಚಲಾಗಿದೆ. ಈ ಘಟನೆ ಇದೀಗ ಕನ್ನಡಿಗರು ಹಾಗೂ ಸಂಗೊಳ್ಳಿ ರಾಯಣ್ಣ ಅವರ … Continued

ಬೆಳಗಾವಿಯಲ್ಲಿ ಎಂಇಎಸ್‌ ಪುಂಡರ ಅಟ್ಟಹಾಸ: ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ: 144 ಸೆಕ್ಷನ್‌ ಜಾರಿ

ಬೆಳಗಾವಿ: ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ತಡರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ. ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಪಡಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟು ವಿಕೃತಿಗೊಳಿಸಿ ದುಷ್ಕೃತ್ಯವೆಸಗಿದ್ದಾರೆ. ಸ್ಥಳಕ್ಕೆ ಟೀಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ವಿವಿಧ ಸ್ಥಳಗಳಲ್ಲಿ ಕಲ್ಲು ತೂರಾಟ ಮತ್ತು … Continued

ಅತ್ಯಾಚಾರ ಕುರಿತ ರಮೇಶ್ ಕುಮಾರ್ ಹೇಳಿಕೆಗೆ ಪ್ರಿಯಾಂಕಾ ಗಾಂಧಿ, ಖರ್ಗೆ ಖಂಡನೆ

ನವದೆಹಲಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರ ಕುರಿತು ನೀಡಿದ ಹೇಳಿಕೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಮೇಶ್ ಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ‘ರಮೇಶ್​ಕುಮಾರ್ ಅವರು … Continued

ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನು ವಾಪಸ್ ಪಡೆಯುವೆವು: ಸಚಿವ ನಿರಾಣಿ

ಬೆಳಗಾವಿ: ಅನೇಕ ವರ್ಷಗಳು ಕಳೆದರೂ ಕೈಗಾರಿಕೆ ಪ್ರಾರಂಭ ಮಾಡದ 500ಕ್ಕೂ ಹೆಚ್ಚು ಕೈಗಾರಿಕೆಗಳ ಜಮೀನನ್ನು ವಾಪಸ್ ಪಡೆಯಲಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಶುಕ್ರವಾರ ವಿಧಾನಸಭೆಗೆ ತಿಳಿಸಿದರು. ಕಾಂಗ್ರೆಸ್ ಶಾಸಕ ಎನ್. ಎಚ್. ಶಿವಶಂಕರ ರೆಡ್ಡಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭೂಮಿ ಹಂಚಿಕೆಯಾಗಿ 5 ರಿಂದ 20 ವರ್ಷ … Continued